Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 1:7 - ಕನ್ನಡ ಸತ್ಯವೇದವು J.V. (BSI)

7 ಈತನು ನಮಗೋಸ್ಕರ ತನ್ನ ರಕ್ತವನ್ನು ಸುರಿಸಿದ್ದರಿಂದ ನಮ್ಮ ಅಪರಾಧಗಳು ಪರಿಹಾರವಾಗಿ ನಮಗೆ ಬಿಡುಗಡೆಯಾಯಿತು. ಇದು ದೇವರ ಕೃಪಾತಿಶಯವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೇಸುಕ್ರಿಸ್ತನು ನಮಗೋಸ್ಕರ ಸುರಿಸಿದ ರಕ್ತದ ಮೂಲಕ ನಮಗೆ ಆತನ ಕೃಪೆಯ ಐಶ್ವರ್ಯಕ್ಕನುಸಾರವಾಗಿ ಪಾಪ ಕ್ಷಮಾಪಣೆಯೆಂಬ ವಿಮೋಚನೆಯು ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7-8 ಯೇಸುಕ್ರಿಸ್ತರು ಸುರಿಸಿದ ರಕ್ತಧಾರೆಯ ಮೂಲಕ ನಮಗೆ ಪಾಪಕ್ಷಮೆ ದೊರಕಿತು; ವಿಮೋಚನೆಯೂ ಲಭಿಸಿತು. ಇದು ದೇವರ ಅನುಗ್ರಹದ ಶ್ರೀಮಂತಿಕೆಯೇ ಸರಿ. ಇದನ್ನು ನಮ್ಮ ಮೇಲೆ ಅವರು ಯಥೇಚ್ಛವಾಗಿ ಸುರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಕ್ರಿಸ್ತನ ರಕ್ತದ ಮೂಲಕವಾಗಿ ನಮಗೆ ಬಿಡುಗಡೆಯಾಯಿತು. ದೇವರ ಮಹಾ ಕೃಪೆಯಿಂದ ನಮ್ಮ ಪಾಪಗಳು ಕ್ಷಮಿಸಲ್ಪಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ದೇವರ ಕೃಪಾ ಐಶ್ವರ್ಯಕ್ಕೆ ಅನುಸಾರವಾಗಿ ಕ್ರಿಸ್ತನಲ್ಲಿ ನಮಗೆ ಅವರ ರಕ್ತದ ಮೂಲಕ ಪಾಪಗಳ ಕ್ಷಮಾಪಣೆಯಾಗಿ ವಿಮೋಚನೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಕಶ್ಯಾಕ್ ಮಟ್ಲ್ಯಾರ್, ಕ್ರಿಸ್ತಾಚ್ಯಾ ರಗ್ತಾಚ್ಯಾ ವೈನಾ ಅಮ್ಕಾ ಸುಟ್ಕಾ ಕರುನ್ ಹೊಲಾ, ತೆ ಕಾಯ್ ಮಟ್ಲ್ಯಾರ್, ಅಮ್ಚಿ ಪಾಪಾ ಮಾಪ್ ಹೊಲಾತ್ ದೆವಾಚಿ ಹಿ ಕುರ್ಪಾ ಲೈ ಮೊಟಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 1:7
67 ತಿಳಿವುಗಳ ಹೋಲಿಕೆ  

ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಮರಣದ ಕಂಬವನ್ನು ಏರಿದನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.


ಅವರು ನೀತಿವಂತರೆಂದು ನಿರ್ಣಯ ಹೊಂದುವದು ದೇವರ ಉಚಿತಾರ್ಥವಾದ ಕೃಪೆಯಿಂದಲೇ ಕ್ರಿಸ್ತಯೇಸುವಿನಿಂದಾದ ಪಾಪ ವಿಮೋಚನೆಯ ಮೂಲಕವಾಗಿ ಆಗುವದು.


ಆ ಕುಮಾರನಲ್ಲಿ ನಮ್ಮ ಪಾಪಗಳು ಪರಿಹಾರವಾಗಿ ನಮಗೆ ಬಿಡುಗಡೆಯಾಯಿತು.


ಧರ್ಮಶಾಸ್ತ್ರದ ಪ್ರಕಾರ ಸ್ವಲ್ಪಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು; ರಕ್ತಧಾರೆಯಿಲ್ಲದೆ ಪಾಪಪರಿಹಾರ ಉಂಟಾಗುವದಿಲ್ಲ.


ಇದು ನನ್ನ ರಕ್ತ, ಇದು ಒಡಂಬಡಿಕೆಯ ರಕ್ತ, ಇದು ಪಾಪಗಳ ಕ್ಷಮೆಗಾಗಿ ಬಹು ಜನರಿಗೋಸ್ಕರ ಸುರಿಸಲ್ಪಡುವ ರಕ್ತ.


ಅವರು ಹೊಸ ಹಾಡನ್ನು ಹಾಡುತ್ತಾ - ನೀನು ಸುರುಳಿಯನ್ನು ತೆಗೆದುಕೊಂಡು ಅದರ ಮುದ್ರೆಗಳನ್ನು ಒಡೆಯುವದಕ್ಕೆ ಯೋಗ್ಯನೇ; ನೀನು ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳವರಿಂದ ಮನುಷ್ಯರನ್ನು ದೇವರಿಗಾಗಿ ಕೊಂಡುಕೊಂಡಿ;


ಪ್ರಿಯರಾದ ಮಕ್ಕಳೇ, ಕ್ರಿಸ್ತನ ಹೆಸರಿನ ನಿವಿುತ್ತ ನಿಮ್ಮ ಪಾಪಗಳು ಕ್ಷವಿುಸಲ್ಪಟ್ಟಿರುವದರಿಂದ ನಿಮಗೆ ಬರೆಯುತ್ತೇನೆ.


ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿಯೊಂದು ಕೊರತೆಯನ್ನು ನೀಗಿಸುವನು.


ಮುಂದಣ ಯುಗಗಳಲ್ಲಿ ತೋರಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿರುವ ನಮ್ಮನ್ನು ಆತನೊಂದಿಗೆ ಎಬ್ಬಿಸಿ ಪರಲೋಕದಲ್ಲಿ ಆತನೊಂದಿಗೆ ಕೂಡ್ರಿಸಿದ್ದಾನೆ.


ನೀವು ಕ್ರಿಸ್ತ ಯೇಸುವಿನಲ್ಲಿರುವದು ಆತನಿಂದಲೇ. ಕ್ರಿಸ್ತ ಯೇಸು ನಮಗೆ ದೇವರ ಕಡೆಯಿಂದ ಜ್ಞಾನವೂ ನೀತಿ ಶುದ್ಧೀಕರಣ ವಿಮೋಚನೆಗಳಿಗೆ ಕಾರಣನೂ ಆದನು.


ಇಸ್ರಾಯೇಲೇ, ಯೆಹೋವನನ್ನು ಮುಂಗಾದಿರು; ಯೆಹೋವನು ಕೃಪಾಸಂಪನ್ನನು; ಪೂರ್ಣವಿಮೋಚನೆಯು ಆತನಿಂದಲೇ ದೊರಕುವದು.


ನೀವು ದೇವರಾತ್ಮನ ಮೂಲಕ ಆಂತರ್ಯದಲ್ಲಿ ವಿಶೇಷಬಲ ಹೊಂದಿದವರಾಗುವ ಹಾಗೆಯೂ


ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಾಗಿದೆಯಲ್ಲಾ; ಆತನು ಐಶ್ವರ್ಯವಂತನಾಗಿದ್ದು ತಾನು ಬಡತನದಲ್ಲಿ ಸೇರುವದರಿಂದ ನೀವು ಐಶ್ವರ್ಯವಂತರಾಗಬೇಕೆಂದು ನಿಮಗೋಸ್ಕರ ಬಡವನಾದನು.


ಆತನ ಅಪಾರವಾದ ದಯಾ ಸಹನ ದೀರ್ಘಶಾಂತಿಗಳನ್ನು ಅಸಡ್ಡೆಮಾಡುತ್ತೀಯಾ? ಮನಸ್ಸನ್ನು ಬೇರೆಮಾಡಿಕೊಳ್ಳುವದಕ್ಕೆ ದೇವರ ಉಪಕಾರವು ನಿನ್ನನ್ನು ಪ್ರೇರಿಸುತ್ತದೆಂಬದು ನಿನಗೆ ಗೊತ್ತಿಲ್ಲವೇ?


ನಿನಗೆ ಯಾವ ದೇವರು ಸಮಾನ? ನೀನು ನಿನ್ನ ಸ್ವಾಸ್ತ್ಯದವರಲ್ಲಿ ಉಳಿದವರ ಅಪರಾಧವನ್ನು ಕ್ಷವಿುಸುವವನೂ ಅವರ ದ್ರೋಹವನ್ನು ಲಕ್ಷಿಸದವನೂ ಆಗಿದ್ದೀ; ಹೌದು, ನಮ್ಮ ದೇವರು ನಿತ್ಯವೂ ಕೋಪಿಸುವವನಲ್ಲ, ಕರುಣೆಯೇ ಆತನಿಗೆ ಇಷ್ಟ.


ಆತನು ನಮ್ಮ ಪಾಪಗಳನ್ನು ನಿವಾರಣಮಾಡುವ ಯಜ್ಞವಾಗಿದ್ದಾನೆ; ನಮ್ಮ ಪಾಪಗಳನ್ನು ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳನ್ನು ಸಹ ನಿವಾರಣಮಾಡುತ್ತಾನೆ.


ಆತನು ನಮ್ಮನ್ನು ಸಕಲ ಅಧರ್ಮದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ಪೇತ್ರನು ಅವರಿಗೆ - ನಿಮ್ಮ ಪಾಪಗಳು ಪರಿಹಾರವಾಗುವದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನ ಮೇಲೆ ದೀಕ್ಷಾಸ್ನಾನಮಾಡಿಸಿಕೊಳ್ಳಿರಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ;


ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವದಕ್ಕೆ ಬರಲಿಲ್ಲ, ಸೇವೆಮಾಡುವದಕ್ಕೂ ಅನೇಕರನ್ನು ಬಿಡಿಸಿಕೊಳ್ಳುವದಕ್ಕಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕೂ ಬಂದನು ಎಂದು ಹೇಳಿದನು.


ಕರ್ತನಾದ ನಮ್ಮ ದೇವರು ಕರುಣಿಸುವವನೂ ಕ್ಷವಿುಸುವವನೂ ಆಗಿದ್ದಾನೆ; ನಾವು ಆತನಿಗೆ ತಿರುಗಿಬಿದ್ದೆವಲ್ಲಾ;


ದೇವರು ಒಂದು ವೇಳೆ ಆ ಮನುಷ್ಯನಿಗೆ ಮೆಚ್ಚಿ - ಈಡು ಸಿಕ್ಕಿತು, ಅಧೋಲೋಕಕ್ಕೆ ಇಳಿಯದಂತೆ ಇವನನ್ನು ರಕ್ಷಿಸು ಎಂದು ಅಪ್ಪಣೆಕೊಟ್ಟರೆ


ನಾವು ದೇವರನ್ನು ಪ್ರೀತಿಸಿದ್ದರಲ್ಲಿಯಲ್ಲ, ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪನಿವಾರಣಾರ್ಥವಾಗಿ ತನ್ನ ಮಗನನ್ನು ಕಳುಹಿಸಿಕೊಟ್ಟದರಲ್ಲಿಯೇ ಪ್ರೀತಿಯ ನಿಜ ಗುಣವು ತೋರಿ ಬರುತ್ತದೆ.


ದೇವರು ಸ್ವರಕ್ತದಿಂದ ಸಂಪಾದಿಸಿಕೊಂಡ ಸಭೆಯನ್ನು ಪರಿಪಾಲಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.


ಸ್ವಾಮೀ, ಕೇಳು! ಸ್ವಾಮೀ, ಕ್ಷವಿುಸು! ಸ್ವಾಮೀ, ಲಾಲಿಸು, ಕಾರ್ಯವನ್ನು ಸಾಧಿಸು! ತಡಮಾಡಬೇಡ! ನನ್ನ ದೇವರೇ, ನಿನ್ನ ಜನವೂ ಪಟ್ಟಣವೂ ನಿನ್ನ ಹೆಸರಿನವುಗಳಾದ ಕಾರಣ ನಿನ್ನ ಹೆಸರನ್ನು ಕಾಪಾಡಿಕೋ!


ನೆರೆಹೊರೆಯವರೂ ಅಣ್ಣತಮ್ಮಂದಿರೂ ಒಬ್ಬರಿಗೊಬ್ಬರು - ಯೆಹೋವನ ಜ್ಞಾನವನ್ನು ಪಡೆಯಿರಿ ಎಂದು ಇನ್ನು ಮೇಲೆ ಬೋಧಿಸಬೇಕಾಗಿರುವದಿಲ್ಲ; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ನನ್ನ ಜ್ಞಾನವನ್ನು ಪಡೆದಿರುವರು; ನಾನು ಅವರ ಅಪರಾಧವನ್ನು ಕ್ಷವಿುಸಿ ಅವರ ಪಾಪವನ್ನು ನನ್ನ ನೆನಪಿಗೆ ಎಂದಿಗೂ ತರುವದಿಲ್ಲ. ಇದು ಯೆಹೋವನ ನುಡಿ.


ಕರ್ತನೇ, ನೀನು ಒಳ್ಳೆಯವನೂ ಕ್ಷವಿುಸುವವನೂ ನಿನಗೆ ಮೊರೆಯಿಡುವವರೆಲ್ಲರಲ್ಲಿ ಕೃಪಾಪೂರ್ಣನೂ ಆಗಿದ್ದೀಯಲ್ಲಾ.


ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವದಕ್ಕಾಗಿ ಒಂದೇ ಸಾರಿ ಪಾಪನಿವಾರಣಕ್ಕೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧದಲ್ಲಿ ಕೊಲ್ಲಲ್ಪಟ್ಟನು, ಆತ್ಮಸಂಬಂಧದಲ್ಲಿ ತಿರಿಗಿ ಬದುಕುವವನಾದನು.


ನಾನು ಕ್ರಿಸ್ತನ ಅಪ್ರಮೇಯವಾದ ಐಶ್ವರ್ಯದ ವಿಷಯವಾದ ಶುಭಸಮಾಚಾರವನ್ನು ಅನ್ಯಜನರಿಗೆ ಪ್ರಸಿದ್ಧಿಪಡಿಸುವ ಹಾಗೆಯೂ ಸಮಸ್ತವನ್ನು ಸೃಷ್ಟಿಸಿದ ದೇವರಲ್ಲಿ ಆದಿಯಿಂದ ಮರೆಯಾಗಿದ್ದ ಮರ್ಮವು ಪ್ರಕಟವಾಗುವ ವಿಧ ಎಂಥದೆಂದು ತಿಳಿಸುವ ಹಾಗೆಯೂ ದೇವಜನರೊಳಗೆ ಅತ್ಯಲ್ಪನಾದ ನನಗೆ ಅನುಗ್ರಹಿಸೋಣವಾಯಿತು.


ಆತನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನು ಆತನ ಹೆಸರಿನ ಮೂಲಕವಾಗಿ ಪಾಪಪರಿಹಾರವನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿಗಳೆಲ್ಲರು ಸಾಕ್ಷಿಹೇಳಿದ್ದಾರೆ ಅಂದನು.


ನೀವು ಯಾರ ಪಾಪಗಳನ್ನು ಕ್ಷವಿುಸಿಬಿಡುತ್ತೀರೋ ಅವರಿಗೆ ಅವುಗಳ ಕ್ಷಮಾಪಣೆಯಾಗುತ್ತದೆ; ಯಾರ ಪಾಪಗಳನ್ನು ಕ್ಷವಿುಸದೆ ಉಳಿಸುತ್ತೀರೋ ಅವರಿಗೆ ಅವುಗಳು ಉಳಿಯುತ್ತವೆ ಅಂದನು.


ಮತ್ತು ಆತನು ಅವರಿಗೆ - ಇದು ನನ್ನ ರಕ್ತ, ಇದು ಒಡಂಬಡಿಕೆಯ ರಕ್ತ; ಇದು ಬಹು ಜನರಿಗೋಸ್ಕರ ಸುರಿಸಲ್ಪಡುವ ರಕ್ತ.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಖಡ್ಗವೇ, ನಾನು ನೇವಿುಸಿದ ಕುರುಬನೂ ನನ್ನ ಸಂಗಡಿಗನೂ ಆಗಿರುವವನಿಗೆ ವಿರುದ್ಧವಾಗಿ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.


ಆ ದಿನದಲ್ಲಿ ಪಾಪವನ್ನೂ ಅಶುಚಿಯನ್ನೂ ಪರಿಹರಿಸತಕ್ಕ ಒಂದು ಬುಗ್ಗೆಯು ದಾವೀದ ವಂಶದವರಿಗೂ ಯೆರೂಸಲೇವಿುನವರಿಗೂ ತೆರೆದಿರುವದು.


ನಾವು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಕೃಪೆಯಿಂದ ನೀತಿವಂತರೆಂದು ನಿರ್ಣಯಿಸಲ್ಪಟ್ಟು ನಿತ್ಯಜೀವದ ನಿರೀಕ್ಷೆಯನ್ನು ಪಡೆದು ಅದಕ್ಕೆ ಬಾಧ್ಯರಾಗುವಂತೆ ದೇವರು ಆತನ ಮೂಲಕ ಪವಿತ್ರಾತ್ಮನನ್ನು ನಮ್ಮ ಮೇಲೆ ಸಮೃದ್ಧಿಯಾಗಿ ಸುರಿಸಿದನು. ಇದು ನಂಬತಕ್ಕ ಮಾತಾಗಿದೆ;


ಆತನು ಎಲ್ಲರ ವಿಮೋಚನಾರ್ಥವಾಗಿ ತನ್ನನ್ನು ಒಪ್ಪಿಸಿಬಿಟ್ಟನು. ಇದೇ ತಕ್ಕ ಸಮಯಗಳಲ್ಲಿ ಹೇಳಬೇಕಾದ ಸಾಕ್ಷಿಯು.


ಅಪರಾಧಗಳನ್ನು ಮಾಡುವದರಿಂದಲೂ ಸುನ್ನತಿಯಿಲ್ಲದ ಶರೀರಭಾವದಿಂದಲೂ ಸತ್ತವರಾಗಿದ್ದ ನಿಮ್ಮನ್ನು ಸಹ ದೇವರು ಕ್ರಿಸ್ತನೊಂದಿಗೆ ಬದುಕಿಸಿದ್ದಾನೆ.


ಹೇಗಂದರೆ ನೀವೆಲ್ಲರು ಪ್ರೀತಿಯಿಂದ ಹೊಂದಿಕೆಯಾಗಿದ್ದು ಬುದ್ಧಿಪೂರ್ವಕ ನಿಶ್ಚಯವೆಂಬ ಭಾಗ್ಯವನ್ನು ಪಡೆದು ದೇವರು ತಿಳಿಸಿರುವ ಮರ್ಮವನ್ನು ಅಂದರೆ ತನ್ನಲ್ಲೇ ಜ್ಞಾನವಿದ್ಯಾಸಂಬಂಧವಾದ ನಿಕ್ಷೇಪಗಳನ್ನೆಲ್ಲಾ ಅಡಗಿಸಿಕೊಂಡಿರುವ ಕ್ರಿಸ್ತನನ್ನು ತಿಳುಕೊಂಡವರಾಗಿ ಹೃದಯದಲ್ಲಿ ದೃಢವಾಗಿರಬೇಕೆಂಬ ಕುತೂಹಲವು ನನಗುಂಟು.


ಅನ್ಯಜನಗಳ ವಿಷಯವಾದ ಈ ಮರ್ಮದ ಮಹಿಮಾತಿಶಯವು ಎಷ್ಟೆಂಬದನ್ನು ದೇವರು ತನ್ನ ಜನರಿಗೆ ತಿಳಿಸಲಿಕ್ಕೆ ಮನಸ್ಸು ಮಾಡಿಕೊಂಡನು. ಈ ಮರ್ಮವು ಏನಂದರೆ ಕ್ರಿಸ್ತನು ನಿಮ್ಮಲ್ಲಿದ್ದು ಪ್ರಭಾವದ ನಿರೀಕ್ಷೆಗೆ ಆಧಾರಭೂತನಾಗಿರುವದೇ.


ಆದರೆ ಕರುಣಾನಿಧಿಯಾಗಿರುವ ದೇವರು ನಮ್ಮ ಮೇಲೆ ಮಹಾ ಪ್ರೀತಿಯನ್ನಿಟ್ಟು


ಮತ್ತು ಪ್ರಭಾವ ಹೊಂದುವದಕ್ಕೆ ತಾನು ಮುಂದಾಗಿ ಸಿದ್ಧಮಾಡಿದ ಕರುಣಾಪಾತ್ರರಲ್ಲಿ ತನ್ನ ಮಹಿಮಾತಿಶಯವನ್ನು ತೋರ್ಪಡಿಸಿದ್ದಾನೆ.


ಆದದರಿಂದ ದೇವರು ನಿಮ್ಮ ಪಾಪಗಳನ್ನು ಅಳಿಸಿಬಿಡುವ ಹಾಗೆ ನೀವು ಪಶ್ಚಾತ್ತಾಪಪಟ್ಟು ಆತನ ಕಡೆಗೆ ತಿರುಗಿಕೊಳ್ಳಿರಿ. ತಿರುಗಿದರೆ ದೇವರ ಸನ್ನಿಧಾನದಿಂದ ವಿಶ್ರಾಂತಿಕಾಲಗಳು ಒದಗಿ


ಪಾಪಪರಿಹಾರಕ್ಕೋಸ್ಕರ ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಮಾತು ಯೆರೂಸಲೇಮು ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡುವದೆಂತಲೂ ಬರೆದದೆ.


ನಮ್ಮ ದೇವರು ಅತ್ಯಂತಕರುಣೆಯಿಂದ ದಯಪಾಲಿಸುವ ಪಾಪಪರಿಹಾರವೆಂಬ ರಕ್ಷಣೆಯ ತಿಳುವಳಿಕೆಯನ್ನು ಆತನ ಪ್ರಜೆಗೆ ಕೊಡುವವನಾಗಿಯೂ ಇರುವಿ. ಆ ಕರುಣೆಯಿಂದಲೇ ನಮಗೆ ಮೇಲಿನಿಂದ ಅರುಣೋದಯವು ಉಂಟಾಗಿ


[ನನ್ನ ಜನವೇ,] ನೀನು ಒಡಂಬಡಿಕೆ ಮಾಡಿಕೊಂಡಾಗ ಸುರಿಸಿದ ರಕ್ತವನ್ನು ನಾನು ಸ್ಮರಿಸಿ ಸೆರೆಯಾಗಿರುವ ನಿನ್ನವರನ್ನು ನೀರಿಲ್ಲದ ಆ ಬಾವಿಯೊಳಗಿಂದ ಬರಮಾಡುವೆನು.


ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿ ಬಿಡುತ್ತೇನೆ, ನಿನ್ನ ಪಾಪಗಳನ್ನು ನನ್ನ ನೆನಪಿನಲ್ಲಿಡೆನು.


ಸಾವಿರಾರು ತಲೆಗಳವರೆಗೂ ದಯೆತೋರಿಸುವವನು; ದೋಷಾಪರಾಧಪಾಪಗಳನ್ನು ಕ್ಷವಿುಸುವವನು; ಆದರೂ [ಅಪರಾಧಗಳನ್ನು] ಶಿಕ್ಷಿಸದೆ ಬಿಡದವನು; ತಂದೆಗಳ ದೋಷ ಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನು ಎಂಬದೇ.


ಸ್ತ್ರೀ ಸಹವಾಸದಿಂದ ಮಲಿನರಾಗದವರು ಇವರೇ; ಇವರು ಕನ್ಯೆಯರಂತೆ ನಿಷ್ಕಳಂಕರು. ಯಜ್ಞದ ಕುರಿಯಾದಾತನು ಎಲ್ಲಿ ಹೋದರೂ ಇವರು ಆತನ ಹಿಂದೆ ಹೋಗುವರು. ಇವರು ಮನುಷ್ಯರೊಳಗಿಂದ ಸ್ವಕೀಯ ಜನರಾಗಿ ಕೊಂಡುಕೊಳ್ಳಲ್ಪಟ್ಟು ದೇವರಿಗೂ ಯಜ್ಞದ ಕುರಿಯಾದಾತನಿಗೂ ಪ್ರಥಮಫಲದಂತಾದರು.


ಅವನು ಸಿಟ್ಟುಗೊಂಡು - ಯೆಹೋವಾ, ಲಾಲಿಸು, ನಾನು ಸ್ವದೇಶದಲ್ಲಿರುವಾಗಲೇ ಹೀಗಾಗುವದೆಂದು ಹೇಳಿದೆನಷ್ಟೆ; ನೀನು ದಯೆಯೂ ಕನಿಕರವೂ ದೀರ್ಘಶಾಂತಿಯೂ ಮಹಾಕೃಪೆಯೂ ಉಳ್ಳ ದೇವರು, ಮಾಡಬೇಕೆಂದಿದ್ದ ಕೇಡಿಗೆ ಮನಮರುಗುವವನು ಎಂದು ನಾನು ತಿಳಿದೇ ತಾರ್ಷೀಷಿಗೆ ಓಡಿ ಹೋಗಲು ತ್ವರೆಪಟ್ಟೆನು.


ನೀನು ಪಾಪವನ್ನು ಕ್ಷವಿುಸುವವನಾದ್ದರಿಂದ ಮನುಷ್ಯರ ಭಯಭಕ್ತಿಗೆ ನೀನೇ ಪಾತ್ರನು.


ನಮಗೆ ತಪ್ಪು ಮಾಡಿದವರನ್ನು ನಾವು ಕ್ಷವಿುಸಿದಂತೆ ನಮ್ಮ ತಪ್ಪುಗಳನ್ನು ಕ್ಷವಿುಸು.


ಈತನು ತನ್ನ ರಕ್ತವನ್ನು ಸುರಿಸಿ ನಂಬಿಕೆಯಿದ್ದವರಿಗಾಗಿ ಕೃಪಾಧಾರವಾಗಬೇಕೆಂದು ದೇವರು ಈತನನ್ನು ಮುಂದಿಟ್ಟನು.


ಆತನು ರಹಸ್ಯವಾದ ತನ್ನ ಸಂಕಲ್ಪವನ್ನು ನಮಗೆ ತಿಳಿಯಪಡಿಸುವದರ ಮೂಲಕ ವಿಶೇಷವಾದ ಜ್ಞಾನವನ್ನೂ ಬುದ್ಧಿಯನ್ನೂ ಕೊಟ್ಟು ಆ ಕೃಪೆಯನ್ನು ಇನ್ನೂ ಹೆಚ್ಚಾಗಿ ನಮಗೆ ತೋರಿಸಿದ್ದಾನೆ.


ದೇವರು ಸಂಪಾದಿಸಿಕೊಂಡ ಜನರಿಗೆ ವಿಮೋಚನೆಯಾಗುವದೆಂಬದಕ್ಕೆ ಪವಿತ್ರಾತ್ಮನು ನಮ್ಮ ಬಾಧ್ಯತೆಗೆ ಸಂಚಕಾರವಾಗಿದ್ದಾನೆ. ಆ ವಿಮೋಚನೆಯು ದೇವರ ಮಹಿಮೆಗೆ ಎಷ್ಟೋ ಪ್ರಖ್ಯಾತಿಯನ್ನು ಉಂಟುಮಾಡುವದು.


ಆತನು ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ ಆತನಿಂದ ಕರಿಸಿಕೊಂಡವರು ನಿರೀಕ್ಷಿಸುವ ಪದವಿ ಎಂಥದೆಂಬದನ್ನೂ ದೇವಜನರೆಂಬ ಆತನ ಸ್ವಾಸ್ಥ್ಯದ ಮಹಿಮಾತಿಶಯವು ಎಂಥದೆಂಬದನ್ನೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು