ಎಫೆಸದವರಿಗೆ 2:14 - ಕನ್ನಡ ಸತ್ಯವೇದವು J.V. (BSI)14 ನಿಮ್ಮನ್ನೂ ನಮ್ಮನ್ನೂ ಒಂದು ಮಾಡಿದವನಾದ ಆತನೇ ನಮಗೆ ಸಮಾಧಾನಕರ್ತೃವಾಗಿದ್ದಾನೆ. ಆತನು ತನ್ನ ಶರೀರವನ್ನು ಸಮರ್ಪಿಸಿದ್ದರಲ್ಲಿ ವಿಧಿರೂಪವಾದ ಆಜ್ಞೆಗಳುಳ್ಳ ಧರ್ಮಶಾಸ್ತ್ರವನ್ನು ತೆಗೆದುಹಾಕಿ ಇದ್ದ ದ್ವೇಷವನ್ನು ಮುಗಿಸಿ ನಮ್ಮನ್ನು ಅಗಲಿಸಿದ ಅಡ್ಡಗೋಡೆಯನ್ನು ಕೆಡವಿಹಾಕಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಿಮ್ಮನ್ನು ಮತ್ತು ನಮ್ಮನ್ನು ಒಂದುಮಾಡಿದವನಾದ ಆತನೇ ನಮಗೆ ಶಾಂತಿದಾತನಾಗಿದ್ದಾನೆ. ಆತನು ವಿಧಿನಿಯಮಗಳಿಂದ ಕೂಡಿದ್ದ ಆಜ್ಞೆಗಳುಳ್ಳ ಧರ್ಮಶಾಸ್ತ್ರವನ್ನು ನಿರರ್ಥಕಗೊಳಿಸಿ, ನಮ್ಮನ್ನು ಅಗಲಿಸಿದ್ದ ಹಗೆತನವೆಂಬ ಅಡ್ಡಗೋಡೆಯನ್ನು ತನ್ನ ಶರೀರದಿಂದಲೇ ಕೆಡವಿಹಾಕಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಯೇಸುಕ್ರಿಸ್ತರೇ ನಮ್ಮ ಶಾಂತಿದಾತ. ನಿಮ್ಮನ್ನೂ ನಮ್ಮನ್ನೂ ಒಂದುಗೂಡಿಸಿದವರು ಅವರೇ. ನಮ್ಮೀರ್ವರನ್ನು ಪ್ರತ್ಯೇಕಿಸಿದ್ದ ಹಗೆತನವೆಂಬ ಅಡ್ಡಗೋಡೆಯನ್ನು ತಮ್ಮ ಶರೀರದಿಂದಲೇ ಕೆಡವಿಹಾಕಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಕ್ರಿಸ್ತನಿಂದ ಈಗ ನಮಗೆ ಸಮಾಧಾನ ದೊರೆತಿದೆ. ಕ್ರಿಸ್ತನು ಯೆಹೂದ್ಯರನ್ನೂ ಯೆಹೂದ್ಯರಲ್ಲದವರನ್ನೂ ಒಂದೇ ಜನಾಂಗವನ್ನಾಗಿ ಮಾಡಿದ್ದಾನೆ. ಯೆಹೂದ್ಯರೂ ಯೆಹೂದ್ಯರಲ್ಲದವರೂ ತಮ್ಮ ಮಧ್ಯೆ ಒಂದು ಅಡ್ಡಗೋಡೆಯಿದೆಯೋ ಎಂಬಂತೆ ಬೇರ್ಪಟ್ಟಿದ್ದರು. ಅವರು ಒಬ್ಬರನ್ನೊಬ್ಬರು ದ್ವೇಷಿಸಿದರು. ಆದರೆ ಕ್ರಿಸ್ತನು ತನ್ನ ದೇಹವನ್ನೇ ಅರ್ಪಿಸುವುದರ ಮೂಲಕ ದ್ವೇಷವೆಂಬ ಆ ಗೋಡೆಯನ್ನು ಕೆಡವಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಕ್ರಿಸ್ತ ಯೇಸು ತಾವೇ ನಮ್ಮ ಸಮಾಧಾನವಾಗಿದ್ದು, ಎರಡು ಗುಂಪಿನವರನ್ನು ಒಂದು ಮಾಡಿ, ಅಗಲಿಸಿದ ವೈರತ್ವದ ಅಡ್ಡಗೋಡೆಯನ್ನು ತಮ್ಮ ಶರೀರದ ಮೂಲಕ ಕೆಡವಿಹಾಕಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಕಶ್ಯಾಕ್ ಮಟ್ಲ್ಯಾರ್, ಕ್ರಿಸ್ತಾನ್ ಜುದೆವಾಕ್ನಿ ಅನಿ ಜುದೆವ್ ನ್ಹಯ್ ಅಸಲ್ಲ್ಯಾಕ್ನಿ ಎಕ್ ಕರುನ್ ಅಪ್ನಿಚ್ ಅಮ್ಚ್ಯಾ ಮದ್ದಿ ಸಮಾಧಾನ್ ಹಾನ್ಲ್ಯಾನ್ ಅಪ್ನಾಚ್ಯಾ ಸ್ವಂತ ಆಂಗಾನ್ ತೆಂಚ್ಯಾ ದೊಗಾಂಚ್ಯಾ ಮದ್ದಿ ಎಗ್ಳೆ ಕರುಕ್ ಮನುನ್ ಹೊತ್ತಿ ದುಶ್ಮನ್ಕಿಚಿ ಭಿತ್ತ್ ತೆನಿ ಫೊಡುನ್ ಟಾಕ್ಲ್ಯಾನ್. ಅಧ್ಯಾಯವನ್ನು ನೋಡಿ |
ಹಾಮಾನನು ಅರಸನಾದ ಅಹಷ್ವೇರೋಷನಿಗೆ - ನಿನ್ನ ರಾಜ್ಯದ ಎಲ್ಲಾ ಸಂಸ್ಥಾನಗಳಲ್ಲಿ ಒಂದು ಜನಾಂಗವಿರುತ್ತದೆ; ಅದು ಇತರ ಜನಾಂಗಗಳವರ ಮಧ್ಯದಲ್ಲಿ ಹರಡಿದ್ದರೂ ಅವರಿಂದ ಪ್ರತ್ಯೇಕವಾಗಿಯೇ ಇರುತ್ತದೆ. ಆ ಜನಾಂಗದವರ ನಿಯಮಗಳು ಇತರ ಎಲ್ಲಾ ಜನಾಂಗಗಳವರ ನಿಯಮಗಳಿಗೆ ಬೇರೆಯಾಗಿರುತ್ತವೆ. ಅರಸನ ನಿಯಮಗಳನ್ನಂತೂ ಅವರು ಅನುಸರಿಸುವದೇ ಇಲ್ಲ. ಅರಸನು ಅವರನ್ನು ಸುಮ್ಮನೆ ಬಿಡುವದು ಉಚಿತವಲ್ಲ.