Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 2:16 - ಕನ್ನಡ ಸತ್ಯವೇದವು J.V. (BSI)

16 ಇದ್ದ ದ್ವೇಷವನ್ನು ತನ್ನ ಶಿಲುಬೆಯ ಮೇಲೆ ಕೊಂದು ಆ ಶಿಲುಬೆಯ ಮೂಲಕ ಉಭಯರನ್ನೂ ಒಂದೇ ದೇಹದಂತಾಗ ಮಾಡಿ ದೇವರೊಂದಿಗೆ ಸಮಾಧಾನಪಡಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಮ್ಮ ಮೇಲೆ ಇದ್ದ ಹಗೆತನವನ್ನು ತನ್ನ ಶಿಲುಬೆಯ ಮೇಲೆ ಇಲ್ಲವಾಗಿಸಿ, ಆ ಶಿಲುಬೆಯ ಮೂಲಕ ಉಭಯರನ್ನೂ ಒಂದೇ ಶರೀರವನ್ನಾಗಿ ಮಾಡಿ ದೇವರೊಂದಿಗೆ ಸಂಧಾನಪಡಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ತಮ್ಮ ಶಿಲುಬೆಯ ಮರಣದ ಮೂಲಕ ಹಗೆತನವನ್ನು ನಿರ್ಮೂಲಗೊಳಿಸಿ ಉಭಯತ್ರರನ್ನು ಒಂದೇ ದೇಹದಂತೆ ಮಾಡಿ ದೇವರೊಂದಿಗೆ ಸಂಧಾನಗೊಳಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಈ ಎರಡು ಜನಾಂಗಗಳ ನಡುವೆ ಇದ್ದ ದ್ವೇಷವನ್ನು ಕ್ರಿಸ್ತನು ಶಿಲುಬೆಯ ಮೂಲಕ ಕೊನೆಗೊಳಿಸಿದನು. ಈ ಜನಾಂಗಗಳು ಒಂದೇ ದೇಹವಾದ ಬಳಿಕ ಅವರನ್ನು ದೇವರ ಬಳಿಗೆ ನಡೆಸಬೇಕೆಂಬುದು ಕ್ರಿಸ್ತನ ಬಯಕೆಯಾಗಿತ್ತು. ಶಿಲುಬೆಯ ಮೇಲೆ ಪ್ರಾಣಕೊಡುವುದರ ಮೂಲಕ ಕ್ರಿಸ್ತನು ತನ್ನ ಈ ಬಯಕೆಯನ್ನು ಪೂರೈಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಶಿಲುಬೆಯ ಮರಣದ ಮೂಲಕ ಇವೆರಡೂ ಗುಂಪಿನವರಿಂದ ಒಂದೇ ದೇಹದವರನ್ನಾಗಿ ಮಾಡಿ ದೇವರೊಂದಿಗೆ ಸಂಧಾನಪಡಿಸಿ, ಇದ್ದ ವೈರತ್ವವನ್ನು ಇಲ್ಲದಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಅಪ್ನಾಚ್ಯಾ ಖುರ್ಸಾಚ್ಯಾ ಮರ್ನಾ ವೈನಾ ಕ್ರಿಸ್ತಾನ್ ತೆಂಚ್ಯಾ ಮದ್ದಿ ಹೊತ್ತಿ ದುಶ್ಮನ್ಕಿ ನಾಶ್ ಕರ್ಲ್ಯಾನ್ ಅನಿ ಖುರ್ಸಾಕ್ ಲಾಗುನ್ ತೆನಿ ದೊನ್ ರಿತಿಚ್ಯಾ ಲೊಕಾಕ್ನಿ ಎಕ್ ಆಂಗ್ ಸಾರ್ಕೆ ಕರ್ಲ್ಯಾನ್ ಅನಿ ತೆಂಕಾ ದೆವಾಕ್ಡೆ ಪರ್ತುನ್ ಹಾನ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 2:16
14 ತಿಳಿವುಗಳ ಹೋಲಿಕೆ  

ದೇವರಿಗೆ ವೈರಿಗಳಾಗಿದ್ದ ನಾವು ಆತನ ಮಗನ ಮರಣದ ಮೂಲಕ ಆತನೊಂದಿಗೆ ಸಮಾಧಾನವಾಗಿರಲಾಗಿ ಆತನ ಕೂಡ ಸಮಾಧಾನವಾದ ನಮಗೆ ಆ ಮಗನಿಗಿರುವ ಜೀವದಿಂದ ರಕ್ಷಣೆಯಾಗುವದು ಮತ್ತೂ ನಿಶ್ಚಯವಲ್ಲವೇ.


ಆತನು ನಮ್ಮ ಅಪರಾಧಗಳನ್ನೆಲ್ಲಾ ಕ್ಷವಿುಸಿ ನಮ್ಮ ಮೇಲೆ ದೋಷಾರೋಪಣೆಮಾಡಿದಂಥ ಆಜ್ಞಾರೂಪವಾಗಿದ್ದಂಥ ಪತ್ರವನ್ನು ಕೆಡಿಸಿ ಅದನ್ನು ಶಿಲುಬೆಗೆ ಜಡಿದು ಇಲ್ಲದಂತಾಗ ಮಾಡಿದನು.


ಆತನು ಸಮಾಧಾನಮಾಡುವವನಾಗಿ ಉಭಯರನ್ನೂ ತನ್ನಲ್ಲಿ ಒಬ್ಬ ನೂತನಪುರುಷನನ್ನಾಗಿ ನಿರ್ಮಿಸಿದ್ದಾನೆ;


ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ; ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ; ಈಗ ಶರೀರದಲ್ಲಿರುವ ನಾನು ಜೀವಿಸುವದು ಹೇಗಂದರೆ ದೇವಕುಮಾರನ ಮೇಲಣ ನಂಬಿಕೆಯಲ್ಲಿಯೇ. ಆತನು ನನ್ನನ್ನು ಪ್ರೀತಿಸಿ ನನಗೋಸ್ಕರ ತನ್ನನ್ನು ಒಪ್ಪಿಸಿಬಿಟ್ಟನು.


ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿವಿುತ್ತ ನಿರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು. ಏನಂದರೆ ಆತನು ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ ನರಭಾವದ ರೂಪದಲ್ಲಿ ಕಳುಹಿಸಿಕೊಟ್ಟು ನರಭಾವದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು.


ಯಾಕಂದರೆ ಶರೀರಭಾವದವುಗಳ ಮೇಲೆ ಮನಸ್ಸಿಡುವದು ದೇವರಿಗೆ ಶತ್ರುತ್ವವು; ಅಂಥ ಮನಸ್ಸು ದೇವರ ನಿಯಮಕ್ಕೆ ಒಳಪಡುವದೂ ಇಲ್ಲ, ಒಳಪಡುವದಕ್ಕಾಗುವದೂ ಇಲ್ಲ.


ಪಾಪಾಧೀನಸ್ವಭಾವವು ನಾಶವಾಗಿ ನಾವು ಇನ್ನೂ ಪಾಪದ ವಶದಲ್ಲಿರದಂತೆ ನಮ್ಮ ಪೂರ್ವಸ್ವಭಾವವು ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟಿತೆಂದು ತಿಳಿದಿದ್ದೇವೆ.


ರೊಟ್ಟಿಯು ಒಂದೇಯಾಗಿರುವದರಿಂದ ಅನೇಕರಾಗಿರುವ ನಾವು ಒಂದೇ ದೇಹದಂತಿದ್ದೇವೆ; ಯಾಕಂದರೆ ನಾವೆಲ್ಲರೂ ಆ ಒಂದೇ ರೊಟ್ಟಿಯಲ್ಲಿ ಪಾಲುತಕ್ಕೊಂಡು ತಿನ್ನುತ್ತೇವೆ.


ಅದು ಯಾವದಂದರೆ, ಅನ್ಯಜನರು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿರುವವರಾಗಿ ಯೆಹೂದ್ಯರೊಂದಿಗೆ ಬಾಧ್ಯರೂ ಒಂದೇ ದೇಹದೊಳಗಣ ಅಂಗಗಳೂ ಅಬ್ರಹಾಮನಿಗುಂಟಾದ ವಾಗ್ದಾನದಲ್ಲಿ ಪಾಲುಗಾರರೂ ಆಗಿದ್ದಾರೆಂಬದೇ.


ನೀವೆಲ್ಲರೂ ಒಂದೇ ದೇಹಕ್ಕೆ ಸೇರಿದವರು, ಒಬ್ಬನೇ ಆತ್ಮನನ್ನು ಹೊಂದಿದವರು,


ಕ್ರಿಸ್ತನಿಂದಾದ ಸಮಾಧಾನವು ನಿಮ್ಮ ಹೃದಯಗಳಲ್ಲಿ ಯಜಮಾನನಂತಿದ್ದು ತೀರ್ಪುಹೇಳಲಿ; ನೀವು ಒಂದೇ ದೇಹಕ್ಕೆ ಸೇರಿದವರಾದದರಿಂದ ಸಮಾಧಾನದಿಂದಿರುವದಕ್ಕಾಗಿ ಕರೆಯಲ್ಪಟ್ಟಿರಿ. ಇದಲ್ಲದೆ ಕೃತಜ್ಞತೆಯುಳ್ಳವರಾಗಿರ್ರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು