Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 2:21 - ಕನ್ನಡ ಸತ್ಯವೇದವು J.V. (BSI)

21 ಯೇಸು ಕ್ರಿಸ್ತನೇ ಮುಖ್ಯವಾದ ಮೂಲೆಗಲ್ಲು; ಆತನಲ್ಲಿ ಕಟ್ಟಡದ ಎಲ್ಲಾ ಭಾಗಗಳು ಒಂದಕ್ಕೊಂದು ಹೊಂದಿಕೆಯಾಗಿ ಕಟ್ಟಡವು ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ಧ ದೇವಾಲಯವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆತನಲ್ಲಿ ಕಟ್ಟಡದ ಎಲ್ಲಾ ಭಾಗಗಳು ಒಂದಕ್ಕೊಂದು ಹೊಂದಿಕೆಯಾಗಿ, ಕಟ್ಟಡವು ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ಧ ದೇವಾಲಯವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಇಡೀ ಕಟ್ಟಡವು ಅವರನ್ನೇ ಆಧರಿಸಿ, ಎಲ್ಲಾ ಭಾಗಗಳು ಒಂದಕ್ಕೊಂದು ಹೊಂದಿಕೆಯಾಗಿ ನಿಂತು, ಪ್ರಭುವಿಗೆ ಅರ್ಪಿತವಾದ ದೇವಮಂದಿರ ಆಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಇಡೀ ಕಟ್ಟಡವು ಕ್ರಿಸ್ತನಲ್ಲಿ ಒಂದಾಗಿ ಸೇರಿಕೊಂಡಿದೆ. ಕ್ರಿಸ್ತನೇ ಅದನ್ನು ಬೆಳೆಯಿಸಿ ಪ್ರಭುವಿನಲ್ಲಿ ಪರಿಶುದ್ಧವಾದ ದೇವಾಲಯವನ್ನಾಗಿ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಕ್ರಿಸ್ತನಲ್ಲಿ ಕಟ್ಟಡವೆಲ್ಲವೂ ಒಂದಾಗಿ ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ಧ ದೇವಾಲಯವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಸಗ್ಳ್ಯಾ ಬಾಂದ್ಪಾಕ್ ಘಟ್ ಧರುನ್ಗೆವ್ನ್ ರಾತಲೊ ತೊಚ್ ಅನಿ ತೆ ಧನಿಯಾಕ್ ಒಪ್ಸುನ್ ದಿಲ್ಲೆ ಎಕ್ ಪವಿತ್ರ್ ಮಂದಿರ್ ಹೊವ್ನ್ ವಾಡ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 2:21
12 ತಿಳಿವುಗಳ ಹೋಲಿಕೆ  

ನಾವು ದೇವರ ಜೊತೆ ಕೆಲಸದವರು; ನೀವು ದೇವರ ಹೊಲವೂ ದೇವರ ಕಟ್ಟಡವೂ ಆಗಿದ್ದೀರಿ.


ದೇವರ ಮಂದಿರಕ್ಕೂ ವಿಗ್ರಹಗಳಿಗೂ ಒಪ್ಪಿಗೆ ಏನು? ನಾವು ಜೀವಸ್ವರೂಪನಾದ ದೇವರ ಮಂದಿರವಾಗಿದ್ದೇವಲ್ಲಾ. ಇದರ ಸಂಬಂಧವಾಗಿ ದೇವರು ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.


ದೇವಾಲಯವನ್ನು ಕಟ್ಟುತ್ತಿರುವಾಗ ಕಲ್ಲುಗಳನ್ನು ಕಲ್ಲುಗಣಿಯಲ್ಲಿಯೇ ಸಿದ್ಧಮಾಡಿಕೊಂಡು ಬಂದು ಕಟ್ಟಿದ್ದರಿಂದ ಕಟ್ಟುವ ದಿವಸಗಳಲ್ಲೆಲ್ಲಾ ಸುತ್ತಿಗೆ, ಉಳಿ ಮುಂತಾದ ಕಬ್ಬಿಣದ ಸಾಮಾನುಗಳ ಶಬ್ದವು ಕೇಳಿಸಲಿಲ್ಲ.


ಕೋಣೆಗಳ ಪ್ರಾಕಾರವನ್ನು ಮೂಡಲಲ್ಲಿ ಸೇರುವ ಕಡೆ ಗೋಡೆಯ ಪಕ್ಕದಲ್ಲೇ ಇರುವ ದಾರಿಯ ಕೊನೆಯಲ್ಲಿ ಒಂದು ಬಾಗಿಲಿತ್ತು.


ಯೆಹೋವನೇ, ನಿನ್ನ ಆಜ್ಞೆಗಳು ಬಹುಖಂಡಿತವಾಗಿವೆ; ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.


ತಮಗೆ ದರ್ಶನಗಳಾದವೆಂದು ಕೊಚ್ಚಿಕೊಳ್ಳುತ್ತಾರೆ, ಮತ್ತು ಪ್ರಾಪಂಚಿಕ ಬುದ್ಧಿಯಿಂದ ನಿರಾಧಾರವಾಗಿ ಉಬ್ಬಿಕೊಂಡಿದ್ದಾರೆ, ಆದರೆ ಕ್ರಿಸ್ತನೆಂಬ ಶಿರಸ್ಸಿನ ಹೊಂದಿಕೆಯನ್ನು ಬಿಟ್ಟವರಾಗಿದ್ದಾರೆ. ಇಂಥವರು ನಿಮಗೆ ದೊರಕಿರುವ ಬಿರುದನ್ನು ಅಪಹರಿಸುವದಕ್ಕೆ ಅವಕಾಶಕೊಡಬೇಡಿರಿ. ಆ ಶಿರಸ್ಸಿನಿಂದಲೇ ದೇಹವೆಲ್ಲಾ ಕೀಲುನರಗಳ ಮೂಲಕ ಬೇಕಾದ ಸಹಾಯವನ್ನು ಹೊಂದಿ ಒಂದಾಗಿ ಕೂಡಿಸಲ್ಪಟ್ಟು ದೇವರು ಕೊಡುವ ವೃದ್ಧಿಯಿಂದ ಅಭಿವೃದ್ಧಿಯಾಗುತ್ತಾ ಬರುತ್ತದೆ.


ಆದರೆ ಒಂದು ವೇಳೆ ನಾನು ತಡಮಾಡಿದರೂ ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಬೇಕೆಂದು ಈ ಸಂಗತಿಗಳನ್ನು ಬರೆದಿದ್ದೇನೆ. ಆ ಸಭೆಯು ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು