Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 3:18 - ಕನ್ನಡ ಸತ್ಯವೇದವು J.V. (BSI)

18 ನೀವು ದೇವರ ಪ್ರೀತಿಯಲ್ಲಿ ನೆಲೆಗೊಂಡು ನಿಂತು ಅದರ ಅಗಲ ಉದ್ದ ಎತ್ತರ ಆಳ ಎಷ್ಟೆಂಬದನ್ನು ದೇವಜನರೆಲ್ಲರೊಂದಿಗೆ ಗ್ರಹಿಸಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನೀವು ದೇವರ ಪ್ರೀತಿಯಲ್ಲಿ ನೆಲೆಯಾಗಿ ನಿಂತು, ದೇವಜನರೆಲ್ಲರೊಂದಿಗೆ ಅದರ ಅಗಲ, ಉದ್ದ, ಎತ್ತರ, ಆಳ ಎಷ್ಟೆಂಬುದನ್ನು ಗ್ರಹಿಸುವುದಕ್ಕೆ ಶಕ್ತರಾಗುವಂತೆಯೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಹೀಗೆ ದೇವಜನರೆಲ್ಲರೊಡನೆ, ಕ್ರಿಸ್ತಯೇಸುವಿನ ಅಗಾಧ ಪ್ರೀತಿಯ ಉದ್ದ-ಅಗಲ, ಆಳ-ಎತ್ತರ ಎಷ್ಟೆಂಬುದನ್ನು ನೀವು ಗ್ರಹಿಸಿಕೊಳ್ಳುವಂತಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನೀವು ಮತ್ತು ದೇವರ ಪರಿಶುದ್ಧ ಜನರೆಲ್ಲರೂ ಕ್ರಿಸ್ತನ ಪ್ರೀತಿಯ ಮಹತ್ವವನ್ನು ಅರ್ಥಮಾಡಿಕೊಳ್ಳಲು ಬೇಕಾದ ಶಕ್ತಿಯನ್ನು ಹೊಂದಿದವರಾಗಿರಬೇಕೆಂದು ಪ್ರಾರ್ಥಿಸುತ್ತೇನೆ. ಕ್ರಿಸ್ತನ ಪ್ರೀತಿಯ ಉದ್ದಗಲಗಳನ್ನು ಮತ್ತು ಆಳ ಎತ್ತರಗಳನ್ನು ನೀವು ಅರ್ಥಮಾಡಿಕೊಳ್ಳಲೆಂದು ಪ್ರಾರ್ಥಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ದೇವರ ಪರಿಶುದ್ಧರೆಲ್ಲರೊಂದಿಗೆ ಅದರ ಅಗಲ, ಉದ್ದ, ಆಳ ಮತ್ತು ಎತ್ತರವನ್ನು ಪೂರ್ಣವಾಗಿ ಕ್ರಿಸ್ತನ ಪ್ರೀತಿಯನ್ನು ಅರಿಯುವುದಕ್ಕೆ ಶಕ್ತರಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಅಸೆ ತುಮ್ಕಾ ದೆವಾಚ್ಯಾ ಸಗ್ಳ್ಯಾ ಲೊಕಾಂಚ್ಯಾ ವಾಂಗ್ಡಾ ಕ್ರಿಸ್ತಾಚೊ ಪ್ರೆಮ್ ಕೆವ್ಡೊ ರುಂದ್, ಲಾಂಬ್, ಉಪ್ಪರ್ ಅನಿ ಖೊಲ್ ಮನುನ್ ಕಳ್ವುನ್ ಘೆತಲೊ ಬಳ್ ಗಾಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 3:18
28 ತಿಳಿವುಗಳ ಹೋಲಿಕೆ  

ಪ್ರಾಣವನ್ನೇ ಸ್ನೇಹಿತರಿಗೋಸ್ಕರ ಕೊಡುವ ಪ್ರೀತಿಗಿಂತ ಹೆಚ್ಚಿನ ಪ್ರೀತಿಯು ಯಾವದೂ ಇಲ್ಲ.


ಆದರೆ ಯೆಹೋವನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ದಯವು ಯುಗಯುಗಾಂತರಗಳವರೆಗೂ ಇರುತ್ತದೆ.


ಜ್ಞಾನಕ್ಕೆ ಮೀರುವ ಕ್ರಿಸ್ತನ ಪ್ರೀತಿಯನ್ನು ತಿಳುಕೊಳ್ಳಲೂ ಪೂರ್ಣಶಕ್ತರಾಗಿದ್ದು ದೇವರ ಸಂಪೂರ್ಣತೆಯ ಮಟ್ಟಿಗೂ ಪರಿಪೂರ್ಣರಾಗುವ ಹಾಗೆ ನಿಮಗೆ ದಯಪಾಲಿಸಲಿ ಎಂದು ಆತನನ್ನು ಬೇಡಿಕೊಳ್ಳುತ್ತೇನೆ.


ಭೂವಿುಯ ಮೇಲೆ ಆಕಾಶವು ಎಷ್ಟು ಉನ್ನತವೋ ನಿಮ್ಮ ಮಾರ್ಗಗಳಿಗಿಂತ ನನ್ನ ಮಾರ್ಗಗಳೂ ನಿಮ್ಮ ಆಲೋಚನೆಗಳಿಗಿಂತ ನನ್ನ ಆಲೋಚನೆಗಳೂ ಅಷ್ಟು ಉನ್ನತವಾಗಿವೆ.


ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ; ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ; ಈಗ ಶರೀರದಲ್ಲಿರುವ ನಾನು ಜೀವಿಸುವದು ಹೇಗಂದರೆ ದೇವಕುಮಾರನ ಮೇಲಣ ನಂಬಿಕೆಯಲ್ಲಿಯೇ. ಆತನು ನನ್ನನ್ನು ಪ್ರೀತಿಸಿ ನನಗೋಸ್ಕರ ತನ್ನನ್ನು ಒಪ್ಪಿಸಿಬಿಟ್ಟನು.


ಹೀಗಿರಲಾಗಿ ಕರ್ತನಾದ ಯೇಸುವಿನಲ್ಲಿ ನೀವು ಇಟ್ಟಿರುವ ನಂಬಿಕೆಯನ್ನು ಕುರಿತೂ ದೇವಜನರೆಲ್ಲರಿಗೆ ನೀವು ತೋರಿಸುವ ಪ್ರೀತಿಯನ್ನು ಕುರಿತೂ ಕೇಳಿ ನಾನು ನಿಮ್ಮ ನಿವಿುತ್ತವಾಗಿ ಎಡೆಬಿಡದೆ ದೇವರಿಗೆ ಸ್ತೋತ್ರಮಾಡುತ್ತೇನೆ.


ಯೆಹೋವನೇ, ನಿನ್ನ ಸೃಷ್ಟಿಯೆಲ್ಲವು ನಿನ್ನನ್ನು ಸ್ತುತಿಸುವದು; ನಿನ್ನ ಭಕ್ತರು ನಿನ್ನನ್ನು ಕೊಂಡಾಡುವರು.


ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕೂತುಕೊಂಡೆನು; ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ಸಿಂಹಾಸನದಲ್ಲಿ ಕೂತುಕೊಳ್ಳುವಂತೆ ಮಾಡುವೆನು.


ಅಬ್ರಹಾಮನಿಗೆ ಉಂಟಾದ ಆಶೀರ್ವಾದವು ಕ್ರಿಸ್ತ ಯೇಸುವಿನಲ್ಲಿ ಅನ್ಯಜನರಿಗೆ ಉಂಟಾಗುವಂತೆಯೂ ದೇವರು ವಾಗ್ದಾನಮಾಡಿದ ಆತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತೆಯೂ


ಇಂಥ ಜ್ಞಾನವು ನನಗೆ ಬಹು ಆಶ್ಚರ್ಯವಾಗಿದೆ; ಅದು ಉನ್ನತವಾದದ್ದು, ನನಗೆ ನಿಲುಕುವದಿಲ್ಲ.


ಅವರು ದೇವರಿಂದ ದೊರಕುವ ನೀತಿಯನ್ನರಿಯದೆ ಸ್ವನೀತಿಯನ್ನೇ ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.


ನಿನ್ನ ಯಾಜಕರು ನೀತಿಯೆಂಬ ವಸ್ತ್ರವನ್ನು ಹೊದ್ದುಕೊಳ್ಳಲಿ; ನಿನ್ನ ಭಕ್ತರು ಉತ್ಸಾಹಧ್ವನಿಮಾಡಲಿ.


ದೇವರಾದ ಯೆಹೋವನೇ, ಎದ್ದು ನಿನ್ನ ಪ್ರತಾಪಯುಕ್ತವಾದ ಮಂಜೂಷದೊಡನೆ ನಿನ್ನ ವಾಸಸ್ಥಾನದೊಳಗೆ ಸೇರೋಣವಾಗಲಿ. ದೇವರಾದ ಯೆಹೋವನೇ, ನಿನ್ನ ಯಾಜಕರು ರಕ್ಷಣೆಯೆಂಬ ವಸ್ತ್ರವನ್ನು ಹೊದ್ದುಕೊಳ್ಳಲಿ; ನಿನ್ನ ಭಕ್ತರು ಸೌಭಾಗ್ಯದಲ್ಲಿ ಹರ್ಷಿಸಲಿ.


ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥವು ಗಂಭೀರವಾದದ್ದೆಂಬದಕ್ಕೆ ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ; ಅದೇನಂದರೆ - ಆತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮ ಸಂಬಂಧವಾಗಿ ಆತನೇ ಎಂದು ಸ್ಥಾಪಿಸಲ್ಪಟ್ಟನು; ದೇವದೂತರಿಗೆ ಕಾಣಿಸಿಕೊಂಡನು; ಅನ್ಯಜನರಲ್ಲಿ ಪ್ರಸಿದ್ಧಿ ಮಾಡಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಪ್ರಭಾವಸ್ಥಾನದಲ್ಲಿ ಸೇರಿಸಲ್ಪಟ್ಟನು.


ದೇವಜನರೆಲ್ಲರೂ ನಿಮಗೆ ವಂದನೆ ಹೇಳುತ್ತಾರೆ.


ನೀವು ನನ್ನ ಗುಡ್ಡಗಳ ನಡುವಣ ಆ ಡೊಂಗರದೊಳಕ್ಕೆ ಓಡಿಹೋಗುವಿರಿ; ಏಕಂದರೆ ಆ ಡೊಂಗರವು ಆಚೆಲಿಗೆ ಮುಟ್ಟಿರುವದು; ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಭೂಕಂಪದ ಕಡೆಯಿಂದ ನೀವು ಓಡಿಹೋದಂತೆಯೇ ಓಡಿಹೋಗುವಿರಿ; ಆಗ ನನ್ನ ದೇವರಾದ ಯೆಹೋವನು ಸಮಸ್ತ ದೇವದೂತಸಮೇತ ಬರುವನು.


ಯೆಹೋವನು ತನ್ನ ಭಕ್ತರ ಮರಣವನ್ನು ಅಲ್ಪವೆಂದು ಎಣಿಸುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು