Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 3:19 - ಕನ್ನಡ ಸತ್ಯವೇದವು J.V. (BSI)

19 ಜ್ಞಾನಕ್ಕೆ ಮೀರುವ ಕ್ರಿಸ್ತನ ಪ್ರೀತಿಯನ್ನು ತಿಳುಕೊಳ್ಳಲೂ ಪೂರ್ಣಶಕ್ತರಾಗಿದ್ದು ದೇವರ ಸಂಪೂರ್ಣತೆಯ ಮಟ್ಟಿಗೂ ಪರಿಪೂರ್ಣರಾಗುವ ಹಾಗೆ ನಿಮಗೆ ದಯಪಾಲಿಸಲಿ ಎಂದು ಆತನನ್ನು ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಬುದ್ಧಿಗಿಂತಲೂ ಮಿಗಿಲಾಗಿರುವ ಕ್ರಿಸ್ತನ ಪ್ರೀತಿಯನ್ನು ತಿಳಿದುಕೊಂಡು, ದೇವರ ಸಂಪೂರ್ಣತೆಯ ಮಟ್ಟಿಗೂ ಪರಿಪೂರ್ಣರಾಗುವ ಹಾಗೆ ದೇವರು ನಿಮಗೆ ದಯಪಾಲಿಸಲಿ ಎಂದು ಆತನನ್ನು ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಹೌದು, ಜ್ಞಾನವನ್ನು ಮೀರಿದ ಈ ಪ್ರೀತಿಯನ್ನು ಅರಿತುಕೊಳ್ಳಲು ಆಸಕ್ತರಾಗಬೇಕು, ದೇವರ ಪರಿಪೂರ್ಣತೆಯಿಂದ ತುಂಬಿದವರಾಗಬೇಕು ಎಂದು ನಾನು ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಕ್ರಿಸ್ತನ ಪ್ರೀತಿಯನ್ನು ಮನುಷ್ಯನು ಗ್ರಹಿಸಿಕೊಳ್ಳಲು ಸಾಧ್ಯವಿಲ್ಲ. ಆದರೆ ಆ ಪ್ರೀತಿಯನ್ನು ನೀವು ತಿಳಿದುಕೊಳ್ಳಶಕ್ತರಾಗಲೆಂದು ಪ್ರಾರ್ಥಿಸುತ್ತೇನೆ. ಆಗ ನೀವು ದೇವರ ಸಂಪೂರ್ಣತೆಯಿಂದ ತುಂಬಿದವರಾಗಲು ಸಾಧ್ಯವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಮತ್ತು ತಿಳುವಳಿಕೆಗೆ ಅಪಾರವಾದ ಕ್ರಿಸ್ತನ ಪ್ರೀತಿಯನ್ನು ನೀವು ತಿಳಿದುಕೊಂಡು ದೇವರ ಸರ್ವಸಂಪೂರ್ಣತೆಯಿಂದ ತುಂಬಿದವರಾಗಲಿ ಎಂದು ಅವರನ್ನು ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತೆ ಅಸೆ ಫುರಾ ಕಳ್ವುನ್ ಘೆವ್ಕ್ ಹೊಯ್ ನಸ್ಲ್ಯಾರ್ಬಿ ತೆಜೊ ಪ್ರೆಮ್ ತುಮ್ಕಾ ಕಳುಂದಿ ಅನಿ ಅಸೆ ತುಮ್ಕಾ ದೆವಾಚ್ಯಾ ಫುರಾ ಸ್ವಭಾವಾನ್ ಭರುಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 3:19
24 ತಿಳಿವುಗಳ ಹೋಲಿಕೆ  

ಸಭೆಯು ಆತನ ದೇಹವಾಗಿದೆ; ಎಲ್ಲವನ್ನೂ ಎಲ್ಲಾ ಸಂಬಂಧದಲ್ಲಿ ವ್ಯಾಪಿಸುವಾತನಿಂದ ಅದು ಪರಿಪೂರ್ಣತೆಯುಳ್ಳದ್ದಾಗಿದೆ.


ಕರ್ತನ ಚಿತ್ತದ ವಿಷಯವಾದ ತಿಳುವಳಿಕೆಯಿಂದ ತುಂಬಿಕೊಂಡು ಆತನಿಗೆ ಯೋಗ್ಯರಾಗಿ ನಡೆದು ಎಲ್ಲಾ ವಿಧದಲ್ಲಿ ಆತನನ್ನು ಸಂತೋಷಪಡಿಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯವೆಂಬ ಫಲವನ್ನು ಕೊಡುತ್ತಾ ದೇವಜ್ಞಾನದಿಂದ ಅಭಿವೃದ್ಧಿಯಾಗುತ್ತಿರಬೇಕೆಂತಲೂ


ಕ್ರಿಸ್ತನ ಪ್ರೀತಿಯು ನಮಗೆ ಒತ್ತಾಯಮಾಡುತ್ತದೆ; ಎಲ್ಲರಿಗೋಸ್ಕರ ಒಬ್ಬನು ಸತ್ತದ್ದರಿಂದ ಎಲ್ಲರೂ ಸತ್ತಂತಾಯಿತೆಂದು ನಿಶ್ಚಯಿಸಿಕೊಂಡೆವು.


ನಾವೆಲ್ಲರು ಆತನ ಪರಿಪೂರ್ಣತೆಯೊಳಗಿಂದ ಕೃಪೆಯ ಮೇಲೆ ಕೃಪೆಯನ್ನು ಹೊಂದಿದೆವು.


ಆಗ ಎಲ್ಲಾ ಗ್ರಹಿಕೆಯನ್ನು ಮೀರುವ ದೇವಶಾಂತಿಯು ನಿಮ್ಮ ಹೃದಯಗಳನ್ನೂ ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಯುವದು.


ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ; ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ; ಈಗ ಶರೀರದಲ್ಲಿರುವ ನಾನು ಜೀವಿಸುವದು ಹೇಗಂದರೆ ದೇವಕುಮಾರನ ಮೇಲಣ ನಂಬಿಕೆಯಲ್ಲಿಯೇ. ಆತನು ನನ್ನನ್ನು ಪ್ರೀತಿಸಿ ನನಗೋಸ್ಕರ ತನ್ನನ್ನು ಒಪ್ಪಿಸಿಬಿಟ್ಟನು.


ಕ್ರಿಸ್ತನು ನಿಮ್ಮನ್ನು ಪ್ರೀತಿಸಿ ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.


ನೀವು ದೇವರ ಪ್ರೀತಿಯಲ್ಲಿ ನೆಲೆಗೊಂಡು ನಿಂತು ಅದರ ಅಗಲ ಉದ್ದ ಎತ್ತರ ಆಳ ಎಷ್ಟೆಂಬದನ್ನು ದೇವಜನರೆಲ್ಲರೊಂದಿಗೆ ಗ್ರಹಿಸಲೂ


ನೀವು ಕೃಪೆಯಲ್ಲಿಯೂ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನದಲ್ಲಿಯೂ ಅಭಿವೃದ್ಧಿಯನ್ನು ಹೊಂದುತ್ತಾ ಇರ್ರಿ. ಆತನಿಗೆ ಈಗಲೂ ಸದಾಕಾಲವೂ ಸ್ತೋತ್ರ. ಆಮೆನ್.


ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವದೇ ನಿತ್ಯಜೀವವು.


ನೀತಿಗೆ ಹಸಿದು ಬಾಯಾರಿದವರು ಧನ್ಯರು; ಅವರಿಗೆ ತೃಪ್ತಿಯಾಗುವದು.


ಪುರುಷರೇ, ಕ್ರಿಸ್ತನು ಸಭೆಯನ್ನು ಪ್ರೀತಿಸಿದ ಪ್ರಕಾರವೇ ನಿಮ್ಮನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ.


ದೇವರೇ, ನನ್ನ ದೇವರೇ, ಆಗ ನಾನು ನಿನ್ನ ಯಜ್ಞವೇದಿಯ ಬಳಿಗೆ, ನನ್ನ ಆನಂದನಿಧಿಯಾಗಿರುವ ನಿನ್ನ ಹತ್ತಿರಕ್ಕೆ, ಸೇರಿ ಕಿನ್ನರಿಯನ್ನು ಬಾರಿಸುತ್ತಾ ನಿನ್ನನ್ನು ಕೊಂಡಾಡುವೆನು.


ನಿಮ್ಮೆಲ್ಲರ ವಿಷಯದಲ್ಲಿ ಈ ಅಭಿಪ್ರಾಯವುಳ್ಳವನಾಗಿರುವದು ನ್ಯಾಯವಾಗಿದೆ; ನಾನು ಬೇಡಿಬಿದ್ದಿರುವಾಗಲೂ ಸುವಾರ್ತೆಯ ವಿಷಯದಲ್ಲಿ ಉತ್ತರ ಹೇಳಿ ಸ್ಥಾಪಿಸುವಾಗಲೂ ನೀವೆಲ್ಲರೂ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು ನಿಮ್ಮನ್ನು ನನ್ನ ಹೃದಯದಲ್ಲಿಟ್ಟುಕೊಂಡಿದ್ದೇನೆ.


ನಾನಾದರೋ ನಿರಪರಾಧಿಯು; ನಿನ್ನ ಸಾನ್ನಿಧ್ಯವನ್ನು ಸೇರುವೆನು. ಎಚ್ಚತ್ತಾಗ ನಿನ್ನ ಸ್ವರೂಪದರ್ಶನದಿಂದ ತೃಪ್ತನಾಗಿರುವೆನು.


ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ ಸಂಕಟವೋ ಹಿಂಸೆಯೋ ಅನ್ನವಿಲ್ಲದಿರುವದೋ ವಸ್ತ್ರವಿಲ್ಲದಿರುವದೋ ಗಂಡಾಂತರವೋ ಖಡ್ಗವೋ?


ಮಹತ್ವಗಳಾಗಲಿ ಮೇಲಣ ಲೋಕವಾಗಲಿ ಕೆಳಗಣ ಲೋಕವಾಗಲಿ ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ತೋರಿಬಂದ ದೇವರ ಪ್ರೀತಿಯಿಂದ ಅಗಲಿಸಲಾರವೆಂದು ನನಗೆ ನಿಶ್ಚಯ ಉಂಟು.


ನೀವು ಆತನನ್ನು ಕಣ್ಣಾರೆ ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ. ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು ನಿಮ್ಮ ನಂಬಿಕೆಯ ಅಂತ್ಯಫಲವಾಗಿರುವ ಆತ್ಮರಕ್ಷಣೆಯನ್ನು ಹೊಂದುವವರಾಗಿ ಹೇಳಲಶಕ್ಯವಾದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು