Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 3:2 - ಕನ್ನಡ ಸತ್ಯವೇದವು J.V. (BSI)

2-3 ನಿಮಗೋಸ್ಕರ ನಿರ್ವಹಿಸುವದಕ್ಕಾಗಿ ದೇವರು ನನಗೆ ಕೃಪೆಯಾಗಿ ಕೊಟ್ಟ ಕೆಲಸವನ್ನೂ ಇದುವರೆಗೆ ಗುಪ್ತವಾಗಿದ್ದ ಒಂದು ಸಂಗತಿ ದೈವಪ್ರಕಟನೆಯಿಂದ ನನಗೆ ತಿಳಿಸಲ್ಪಟ್ಟಿತೆಂಬದನ್ನೂ ನೀವು ಕೇಳಿದ್ದೀರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಿಮಗೋಸ್ಕರ ನಿರ್ವಹಿಸುವುದಕ್ಕಾಗಿ ದೇವರು ನನಗೆ ಕೃಪೆಯಾಗಿ ಕೊಟ್ಟ ಕಾರ್ಯಭಾರವನ್ನು ನೀವು ಕೇಳಿದ್ದೀರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ದೇವರು ತಮ್ಮ ಕೃಪಾತಿಶಯದ ಬಗ್ಗೆ ಸಾರುವ ಹೊಣೆಯನ್ನು ನಿಮ್ಮ ಸಲುವಾಗಿ ನನಗೆ ಕೊಟ್ಟಿರುತ್ತಾರೆಂಬುದನ್ನು ನೀವೇ ಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದೇವರು ತನ್ನ ಕೃಪೆಯ ಮೂಲಕ ನನಗೆ ಈ ಕೆಲಸವನ್ನು ಕೊಟ್ಟನೆಂಬುದು ನಿಮಗೆ ಖಂಡಿತವಾಗಿ ತಿಳಿದಿದೆ. ನಿಮಗೆ ಸಹಾಯ ಮಾಡುವುದಕ್ಕಾಗಿ ದೇವರು ಈ ಕೆಲಸವನ್ನು ನನಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಿಮಗೋಸ್ಕರವಾಗಿ ನನಗೆ ಕೊಡಲಾದ ದೇವರ ಕೃಪೆಯ ಕಾರ್ಯಭಾರವನ್ನು ನೀವು ಕೇಳಿದ್ದೀರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತುಮಿ ಖರೆಚ್ ಆಯ್ಕ್ಲ್ಯಾಸಿ ದೆವಾನ್ ಅಪ್ನಾಚ್ಯಾ ಕುರ್ಪೆನ್ ತುಮ್ಚ್ಯಾ ಬರ್‍ಯಾ ಸಾಟ್ನಿ ಹೆ ಕಾಮ್ ಮಾಕಾ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 3:2
27 ತಿಳಿವುಗಳ ಹೋಲಿಕೆ  

ಈ ಬೋಧೆ ಭಾಗ್ಯವಂತನಾದ ದೇವರ ಮಹಿಮೆಯನ್ನು ಪ್ರದರ್ಶಿಸುವ ಸುವಾರ್ತೆಗೆ ಅನುಸಾರವಾಗಿದೆ.


ಆ ಸುವಾರ್ತಾಭಿವೃದ್ಧಿಗೋಸ್ಕರ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ಉಪದೇಶಕನಾಗಿಯೂ ನೇವಿುಸಲ್ಪಟ್ಟೆನು.


ಆತನ ಹೆಸರಿನ ಪ್ರಸಿದ್ಧಿಗಾಗಿ ಎಲ್ಲಾ ಅನ್ಯಜನಗಳಲ್ಲಿ ನಂಬಿಕೆಯೆಂಬ ವಿಧೇಯತ್ವ ಉಂಟಾಗುವದಕ್ಕೋಸ್ಕರ ನಾವು ಆತನ ಮೂಲಕವಾಗಿ ಕೃಪೆಯನ್ನೂ ಅಪೊಸ್ತಲತನವನ್ನೂ ಹೊಂದಿದೆವು.


ಆದರೆ ಕ್ರಿಸ್ತನು ನಮ್ಮಲ್ಲಿ ಒಬ್ಬೊಬ್ಬನಿಗೆ ಅನುಗ್ರಹಿಸಿದ ಪ್ರಕಾರವೇ ಅವನವನಿಗೆ ಕೃಪಾವರವು ದೊರಕಿದೆ.


ಜನರು ನಮ್ಮನ್ನು ಕ್ರಿಸ್ತನ ಕೈಕೆಳಗಿನವರೆಂತಲೂ ದೇವರು ತಿಳಿಸಿರುವ ಸತ್ಯಾರ್ಥಗಳ ವಿಷಯದಲ್ಲಿ ಮನೆವಾರ್ತೆಯವರೆಂತಲೂ ಎಣಿಸಬೇಕು.


ಹಿಂದೆ ನಾನು ಯೆಹೂದ್ಯಮತದಲ್ಲಿದ್ದಾಗ ನನ್ನ ನಡತೆ ಎಂಥದೆಂದು ನೀವು ಕೇಳಿದ್ದೀರಷ್ಟೆ. ನಾನು ದೇವರ ಸಭೆಯನ್ನು ಅತ್ಯಂತವಾಗಿ ಹಿಂಸೆಪಡಿಸಿ ಹಾಳುಮಾಡುತ್ತಿದ್ದೆನು.


ಆತನು - ನೀನು ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುತ್ತೇನೆಂದು ಹೇಳಿದನು.


ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತಾಡಿ - ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪುಮಾಡಿಕೊಂಡದ್ದರಿಂದ ಇಗೋ, ನಾವು ನಿಮ್ಮನ್ನು ಬಿಟ್ಟು ಅನ್ಯಜನರ ಕಡೆಗೆ ಹೋಗುತ್ತೇವೆ.


ಇವರು ಕರ್ತನನ್ನು ಸೇವಿಸುತ್ತಾ ಉಪವಾಸ ಮಾಡುತ್ತಾ ಇದ್ದಾಗ ಪವಿತ್ರಾತ್ಮನು - ನಾನು ಬಾರ್ನಬ ಸೌಲರನ್ನು ಕರೆದ ಕೆಲಸಕ್ಕಾಗಿ ಅವರನ್ನು ಪ್ರತ್ಯೇಕಿಸಿರಿ ಎಂದು ಹೇಳಿದನು.


ಕರ್ತನು ಅವನಿಗೆ - ನೀನು ಹೋಗು; ಆ ಮನುಷ್ಯನು ಅನ್ಯಜನರಿಗೂ ಅರಸುಗಳಿಗೂ ಇಸ್ರಾಯೇಲ್ಯರಿಗೂ ನನ್ನ ಹೆಸರನ್ನು ತಿಳಿಸುವದಕ್ಕಾಗಿ ನಾನು ಆರಿಸಿಕೊಂಡ ಸಾಧನವಾಗಿದ್ದಾನೆ.


ಆ ಸಾಕ್ಷಿಯನ್ನು ಪ್ರಸಿದ್ಧಿಪಡಿಸುವದಕ್ಕಾಗಿಯೇ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ನಂಬಿಕೆಯಿಂದಲೂ ಸತ್ಯದಿಂದಲೂ ಅನ್ಯಜನರಿಗೆ ಬೋಧಿಸುವವನಾಗಿಯೂ ನೇವಿುಸಲ್ಪಟ್ಟೆನು. ನಾನು ಇಂಥವನೆಂಬದು ಸುಳ್ಳಲ್ಲ, ಸತ್ಯವೇ.


ಕಲ್ಪನಾಕಥೆಗಳಿಗೂ ಕೊನೆಮೊದಲಿಲ್ಲದ ವಂಶಾವಳಿಗಳಿಗೂ ಲಕ್ಷ್ಯಕೊಡಬಾರದೆಂತಲೂ ಆಜ್ಞಾಪಿಸಬೇಕೆಂಬದಾಗಿ ನಿನಗೆ ಖಂಡಿತವಾಗಿ ಹೇಳಿದ ಪ್ರಕಾರ ಈಗಲೂ ಹೇಳುತ್ತೇನೆ. ಅಂಥ ಕಥೆಗಳೂ ವಂಶಾವಳಿಗಳೂ ವಿವಾದಕ್ಕೆ ಆಸ್ಪದವಾಗಿವೆಯೇ ಹೊರತು ದೇವರು ನಿರ್ವಹಿಸುವ ಕೆಲಸಕ್ಕೆ ಅನುಕೂಲವಾಗಿಲ್ಲ; ಇದರಲ್ಲಿ ನಂಬಿಕೆಯೇ ಮುಖ್ಯವಾದದ್ದು.


ನೀವು ದೇವರ ಕೃಪೆಯನ್ನು ಕುರಿತು ಸತ್ಯಾರ್ಥವನ್ನು ಕೇಳಿ ತಿಳುಕೊಂಡ ದಿವಸದಿಂದ ಆ ಸುವಾರ್ತೆಯು ನಿಮ್ಮಲ್ಲಿ ಫಲಕೊಟ್ಟು ವೃದ್ಧಿಯಾಗುತ್ತಾ ಬಂದ ಪ್ರಕಾರ ಲೋಕದಲ್ಲೆಲ್ಲಾ ಹಬ್ಬಿ ಫಲಕೊಟ್ಟು ವೃದ್ಧಿಯಾಗುತ್ತಾ ಬರುತ್ತದೆ.


ಆತನನ್ನೇ ಕೇಳಿದಿರಲ್ಲಾ, ಆತನಲ್ಲಿಯೇ ಉಪದೇಶವನ್ನು ಹೊಂದಿದಿರಲ್ಲಾ.


ನಾನು ಕ್ರಿಸ್ತನ ಅಪ್ರಮೇಯವಾದ ಐಶ್ವರ್ಯದ ವಿಷಯವಾದ ಶುಭಸಮಾಚಾರವನ್ನು ಅನ್ಯಜನರಿಗೆ ಪ್ರಸಿದ್ಧಿಪಡಿಸುವ ಹಾಗೆಯೂ ಸಮಸ್ತವನ್ನು ಸೃಷ್ಟಿಸಿದ ದೇವರಲ್ಲಿ ಆದಿಯಿಂದ ಮರೆಯಾಗಿದ್ದ ಮರ್ಮವು ಪ್ರಕಟವಾಗುವ ವಿಧ ಎಂಥದೆಂದು ತಿಳಿಸುವ ಹಾಗೆಯೂ ದೇವಜನರೊಳಗೆ ಅತ್ಯಲ್ಪನಾದ ನನಗೆ ಅನುಗ್ರಹಿಸೋಣವಾಯಿತು.


ದೇವರು ನನಗೆ ಕೃಪೆಮಾಡಿದ ಸೇವೆಯನ್ನು ನಡಿಸಿ ನಿಮ್ಮಲ್ಲಿ ಒಬ್ಬೊಬ್ಬನಿಗೂ ಹೇಳುವದೇನಂದರೆ ಯಾರೂ ತನ್ನ ಯೋಗ್ಯತೆಗೆ ಮೀರಿ ತನ್ನನ್ನು ಭಾವಿಸಿಕೊಳ್ಳದೆ ದೇವರು ಒಬ್ಬೊಬ್ಬನಿಗೆ ಎಂಥೆಂಥ ವಿಶ್ವಾಸ ಬಲವನ್ನು ಕೊಟ್ಟನೋ ಅದಕ್ಕೆ ತಕ್ಕ ಹಾಗೆ ನ್ಯಾಯವಾದ ಅಭಿಪ್ರಾಯದಿಂದ ತನ್ನನ್ನು ಭಾವಿಸಿಕೊಳ್ಳಬೇಕು.


ಅನ್ಯಜನರಾಗಿರುವ ನಿಮ್ಮ ಸಂಗಡ ಮಾತಾಡುತ್ತೇನೆ. ನಾನು ಅನ್ಯಜನರಿಗೆ ಅಪೊಸ್ತಲನಾಗಿರಲಾಗಿ ನನ್ನ ಉದ್ಯೋಗವನ್ನು ಗಣ್ಯತೆಗೆ ತರುತ್ತೇನೆ.


ದೇವರು ತನ್ನ ಶಕ್ತಿಯ ಪ್ರಯೋಗದಲ್ಲಿ ನನಗೆ ಉಚಿತಾರ್ಥವಾಗಿ ಅನುಗ್ರಹಿಸಿದ ಕೆಲಸವನ್ನನುಸರಿಸಿ ನಾನು ಈ ಸುವಾರ್ತೆಗೆ ಸೇವಕನಾದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು