Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 3:20 - ಕನ್ನಡ ಸತ್ಯವೇದವು J.V. (BSI)

20 ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಶಕ್ತಿಯ ಪ್ರಕಾರ ನಾವು ಬೇಡುವದಕ್ಕಿಂತಲೂ ಯೋಚಿಸುವದಕ್ಕಿಂತಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಈ ಶಕ್ತಿಯ ಪ್ರಕಾರ ನಾವು ಬೇಡುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದ ದೇವರಿಗೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20-21 ನಮ್ಮಲ್ಲಿ ಕಾರ್ಯಸಾಧಿಸುವ ಹಾಗೂ ನಮ್ಮ ಆಶೆ-ಆಕಾಂಕ್ಷೆಗಿಂತಲೂ ಬೇಡಿಕೆ-ಕೋರಿಕೆಗಿಂತಲೂ ಅಧಿಕವಾದುದನ್ನು ಮಾಡಲು ದೇವರು ಶಕ್ತರು. ಅವರಿಗೆ ಧರ್ಮಸಭೆಯಲ್ಲೂ ಕ್ರಿಸ್ತಯೇಸುವಿನಲ್ಲೂ ಯುಗಯುಗಾಂತರಕ್ಕೂ ತಲತಲಾಂತರಕ್ಕೂ ಮಹಿಮೆ ಸಲ್ಲಲಿ! ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಮ್ಮಲ್ಲಿ ಕಾರ್ಯಮಾಡುತ್ತಿರುವ ತನ್ನ ಶಕ್ತಿಯಿಂದ ನಾವು ಕೇಳುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಎಷ್ಟೋ ಹೆಚ್ಚೆಚ್ಚಾಗಿ ದೇವರು ಮಾಡಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನಮ್ಮಲ್ಲಿ ಕಾರ್ಯಸಾಧಿಸುವ ತಮ್ಮ ಶಕ್ತಿಯ ಪ್ರಕಾರ ನಾವು ಬೇಡುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಅತ್ಯಧಿಕವಾಗಿಯೇ ಎಲ್ಲವನ್ನೂ ಮಾಡಲು ಶಕ್ತರಾದ ದೇವರಿಗೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಅಮ್ಚ್ಯಾ ಮದ್ದಿ ಕಾಮ್ ಕರ್ತಲ್ಯಾ ತೆಚ್ಯಾ ಬಳಾಕ್ ಲಾಗುನ್ ಅಮಿ ಕನ್ನಾಬಿ ಇಚಾರುಕ್ ಹೊಯ್ನಾ ಅನಿ ಚಿಂತುಕ್ ಹೊಯ್ನಾ ತೆಜ್ಯಾನ್ ಜಾಸ್ತಿಚೆ ಕರುಕ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 3:20
32 ತಿಳಿವುಗಳ ಹೋಲಿಕೆ  

ದೇವರು ಸಕಲವಿಧವಾದ ದಾನಗಳನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವದಕ್ಕೆ ಶಕ್ತನಾದ್ದರಿಂದ ನೀವು ಯಾವಾಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆಯುಳ್ಳವರಾಗಿ ಸಕಲಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರಬೇಕು.


ದೇವರನ್ನು ಘನಪಡಿಸುವವನಾಗಿ ಆತನು ತನ್ನ ವಾಗ್ದಾನವನ್ನು ನೆರವೇರಿಸುವದಕ್ಕೆ ಸಮರ್ಥನೆಂದು ಪೂರಾ ಭರವಸವಿಟ್ಟು ದೃಢನಂಬಿಕೆಯುಳ್ಳವನಾದನು.


ಇಗೋ, ನಾನು ಯೆಹೋವನು, ನರಪ್ರಾಣಿಗೆಲ್ಲಾ ದೇವರು; ನನಗೆ ಅಸಾಧ್ಯವಾದದ್ದುಂಟೋ?


ಎಡವಿಬೀಳದಂತೆ ನಿಮ್ಮನ್ನು ಕಾಪಾಡುವದಕ್ಕೂ ತನ್ನ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿ ಹರ್ಷದೊಡನೆ ನಿಲ್ಲಿಸುವದಕ್ಕೂ


ಆದರೆ ಬರೆದಿರುವ ಪ್ರಕಾರ - ದೇವರು ತನ್ನನ್ನು ಪ್ರೀತಿಸುವವರಿಗಾಗಿ ಸಿದ್ಧಮಾಡಿರುವಂಥದೆಲ್ಲವನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಅದರ ಭಾವನೆಯು ಮನುಷ್ಯನ ಹೃದಯದಲ್ಲಿ ಹುಟ್ಟಲಿಲ್ಲ.


ನಂಬುವವರಾದ ನಮ್ಮಲ್ಲಿ ಆತನು ಸಾಧಿಸುವ ಪರಾಕ್ರಮವು ಎಷ್ಟು ಅತಿಶಯವಾದದ್ದೆಂಬದನ್ನೂ ನೀವು ತಿಳುಕೊಳ್ಳುವಂತೆ ಅನುಗ್ರಹಿಸಲಿ.


ಎಲೈ, ಕರ್ತನಾದ ಯೆಹೋವನೇ! ಆಹಾ, ನೀನು ಭುಜವನ್ನೆತ್ತಿ ನಿನ್ನ ಮಹಾ ಶಕ್ತಿಯಿಂದ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದೀ; ಯಾವ ಕಾರ್ಯವೂ ನಿನಗೆ ಅಸಾಧ್ಯವಲ್ಲ.


ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.


ದೇವರು ತನ್ನ ಶಕ್ತಿಯ ಪ್ರಯೋಗದಲ್ಲಿ ನನಗೆ ಉಚಿತಾರ್ಥವಾಗಿ ಅನುಗ್ರಹಿಸಿದ ಕೆಲಸವನ್ನನುಸರಿಸಿ ನಾನು ಈ ಸುವಾರ್ತೆಗೆ ಸೇವಕನಾದೆನು.


ಅನಾದಿಯಾಗಿ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸಲ್ಪಟ್ಟಿದೆ. ಪ್ರಕಾಶಕ್ಕೆ ಬಂದಿರುವ ಈ ಮರ್ಮಕ್ಕೆ ಅನುಸಾರ ಅಂದರೆ ಯೇಸು ಕ್ರಿಸ್ತನ ವಿಷಯವಾದಂಥ ನಾನು ಸಾರುವಂಥ ಸುವಾರ್ತೆಗನುಸಾರ ನಿಮ್ಮನ್ನು ಸ್ಥಿರಪಡಿಸುವದಕ್ಕೆ ಶಕ್ತನಾಗಿರುವ


ಇದಲ್ಲದೆ ನೀನು ಕೇಳದಂಥದನ್ನೂ ನಿನಗೆ ಅನುಗ್ರಹಿಸಿದ್ದೇನೆ. ನಿನ್ನ ಜೀವಮಾನದಲ್ಲೆಲ್ಲಾ ಐಶ್ವರ್ಯದಲ್ಲಿಯೂ ಘನದಲ್ಲಿಯೂ ನಿನಗೆ ಸಮಾನನಾದ ಅರಸನು ಇನ್ನೊಬ್ಬನಿರುವದಿಲ್ಲ.


ಅಬ್ರಾಮನು ತೊಂಭತ್ತೊಂಭತ್ತು ವರುಷದವನಾದಾಗ ಯೆಹೋವನು ಅವನಿಗೆ ದರ್ಶನಕೊಟ್ಟು - ನಾನು ಸರ್ವಶಕ್ತನಾದ ದೇವರು; ನನಗೆ ನಡಕೊಂಡು ದೋಷವಿಲ್ಲದವನಾಗಿರು.


ಅರಸೇ, ನಾವು ಸೇವಿಸುವ ದೇವರಿಗೆ ಚಿತ್ತವಿದ್ದರೆ ಆತನು ಧಗಧಗನೆ ಉರಿಯುವ ಆವಿಗೆಯೊಳಗಿಂದ, ನಮ್ಮನ್ನು ಬಿಡಿಸಬಲ್ಲನು; ಹೇಗೂ ನಿನ್ನ ಕೈಯಿಂದ ನಮ್ಮನ್ನು ಬಿಡಿಸುವನು.


ನನ್ನಲ್ಲಿ ಕಾರ್ಯಸಾಧಿಸುವ ದೇವರ ಬಲವನ್ನು ಪ್ರಯೋಗಮಾಡಿ ಇದಕ್ಕೋಸ್ಕರವೇ ಹೋರಾಡುತ್ತೇನೆ, ಪ್ರಯಾಸಪಡುತ್ತೇನೆ.


ಅಮಚ್ಯನು ದೇವರ ಮನುಷ್ಯನನ್ನು - ಹಾಗಾದರೆ ನಾನು ಇಸ್ರಾಯೇಲ್ ಸೈನ್ಯಕ್ಕೋಸ್ಕರ ನೂರು ತಲಾಂತುಗಳನ್ನು ಕೊಟ್ಟ ವಿಷಯದಲ್ಲಿ ಮಾಡುವದೇನು ಎಂದು ಕೇಳಲು ಅವನು ಯೆಹೋವನು ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿನಗೆ ಕೊಡಬಲ್ಲನು ಅಂದನು.


ಕಳ್ಳನು ಕದ್ದುಕೊಳ್ಳುವದಕ್ಕೂ ಕೊಯ್ಯುವದಕ್ಕೂ ಹಾಳುಮಾಡುವದಕ್ಕೂ ಬರುತ್ತಾನೆ ಹೊರತು ಮತ್ತಾವದಕ್ಕೂ ಬರುವದಿಲ್ಲ; ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಅದು ಸಮೃದ್ಧಿಯಾಗಿ ಇರಬೇಕೆಂತಲೂ ಬಂದೆನು.


ಯೆಹೋವನು ಮೋಶೆಯ ಎದುರಾಗಿ ಹೋಗುತ್ತಾ ಪ್ರಕಟವಾಗಿ ಹೇಳಿದ್ದೇನಂದರೆ :- ಯೆಹೋವ, ಯೆಹೋವ ಕನಿಕರವೂ ದಯೆಯೂ ಉಳ್ಳ ದೇವರು; ದೀರ್ಫಶಾಂತನೂ ಪ್ರೀತಿಯೂ ನಂಬಿಕೆಯೂ ಉಳ್ಳವನು;


ನ್ಯಾಯವನ್ನು ವಿಧಿಸಿದ ನ್ಯಾಯಾಧಿಪತಿ ಒಬ್ಬನೇ; ಆತನೇ ಉಳಿಸುವದಕ್ಕೂ ನಾಶ ಮಾಡುವದಕ್ಕೂ ಶಕ್ತನು. ಹೀಗಿರುವಾಗ ನಿನ್ನ ನೆರೆಯವನ ವಿಷಯದಲ್ಲಿ ತೀರ್ಪು ಮಾಡುವದಕ್ಕೆ ನೀನು ಯಾರು?


ನಮ್ಮ ಕರ್ತನ ಕೃಪೆಯು ಅತ್ಯಧಿಕವಾಗಿದ್ದು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯನ್ನೂ ಪ್ರೀತಿಯನ್ನೂ ನನ್ನಲ್ಲಿ ಉಂಟುಮಾಡಿತು.


ದಾನಿಯೇಲನಿದ್ದ ಗವಿಯ ಸಮೀಪಕ್ಕೆ ಬಂದು ಅವನು ದುಃಖಧ್ವನಿಯಿಂದ ದಾನಿಯೇಲನನ್ನು ಕೂಗಿ - ದಾನಿಯೇಲನೇ, ಜೀವಸ್ವರೂಪನಾದ ದೇವರ ಸೇವಕನೇ, ನೀನು ನಿತ್ಯವೂ ಭಜಿಸುವ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಉದ್ಧರಿಸ ಶಕ್ತನಾದನೋ ಎಂದು ಕೇಳಲು


ತನ್ನ ಮಗನು ಸತ್ತರೂ ದೇವರು ಅವನನ್ನು ಬದುಕಿಸ ಸಮರ್ಥನಾಗಿದ್ದಾನೆಂದು ತಿಳುಕೊಂಡನು. ಮತ್ತು ಸತ್ತವರೊಳಗಿಂದಲೇ ಜೀವಿತನಾಗಿ ಬಂದವನಂತೆ ಅವನನ್ನು ಹೊಂದಿದನು.


ದುಷ್ಟನು ತನ್ನ ದುರ್ಮಾರ್ಗವನ್ನು ಬಿಡಲಿ, ಕೆಡುಕನು ತನ್ನ ದುರಾಲೋಚನೆಗಳನ್ನು ತ್ಯಜಿಸಲಿ; ಯೆಹೋವನ ಕಡೆಗೆ ತಿರುಗಿಕೊಂಡು ಬರಲಿ, ಆತನು ಅವನನ್ನು ಕರುಣಿಸುವನು; ನಮ್ಮ ದೇವರನ್ನು ಆಶ್ರಯಿಸಲಿ, ಆತನು ಮಹಾ ಕೃಪೆಯಿಂದ ಕ್ಷವಿುಸುವನು.


ಮತ್ತು ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ನಿತ್ಯ ರಾಜ್ಯದಲ್ಲಿ ಪ್ರವೇಶಿಸುವ ಹಾಗೆ ದೇವರು ನಿಮಗೆ ಧಾರಾಳವಾಗಿ ಅನುಗ್ರಹಿಸುವನು.


ಅದು ಸಮೃದ್ಧಿಯಾಗಿ ಹೂಬಿಟ್ಟು ಉತ್ಸಾಹ ಧ್ವನಿಮಾಡುವಷ್ಟು ಉಲ್ಲಾಸಿಸುವದು; ಲೆಬನೋನಿನ ಮಹಿಮೆಯೂ ಕರ್ಮೆಲಿನ ಮತ್ತು ಶಾರೋನಿನ ವೈಭವವೂ ಅದಕ್ಕೆ ದೊರೆಯುವವು; ಇವೆಲ್ಲಾ ಯೆಹೋವನ ಮಹಿಮೆಯನ್ನೂ ನಮ್ಮ ದೇವರ ವೈಭವವನ್ನೂ ಕಾಣುವವು.


ಅಬ್ರಹಾಮನು ನಮಗೆ ಮೂಲಪುರುಷನಲ್ಲವೇ ಎಂಬುವ ಆಲೋಚನೆಯನ್ನು ಬಿಡಿರಿ. ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದಲೂ ಮಕ್ಕಳನ್ನು ಹುಟ್ಟಿಸಬಲ್ಲನೆಂದು ನಿಮಗೆ ಹೇಳುತ್ತೇನೆ.


ಕರ್ತನೇ, ಯೆಹೋವನೇ, ಇದು ಸಾಲದೆಂದೆಣಿಸಿ ನಿನ್ನ ಸೇವಕನ ಬಹುದೂರಸಂತಾನದ ವಿಷಯದಲ್ಲಿಯೂ ವಾಗ್ದಾನಮಾಡಿದಿ. ಕರ್ತನೇ, ಯೆಹೋವನೇ, ನೀನು ನರಪ್ರಾಣಿಯನ್ನು ಹೀಗೆ ನಡಿಸಿದ್ದು ಆಶ್ಚರ್ಯ.


ಪ್ರಿಯಳೇ, ವಧುವೇ, ಇಗೋ ನನ್ನ ತೋಟದೊಳಗೆ ಬಂದೆನು, ನನ್ನ ರಕ್ತಬೋಳ ಸುಗಂಧದ್ರವ್ಯಗಳನ್ನು ತೆಗೆದೆನು, ನನ್ನ ಜೇನುಕೊಡವನ್ನೂ ಜೇನುತುಪ್ಪವನ್ನೂ ತಿಂದೆನು, ನನ್ನ ದ್ರಾಕ್ಷಾರಸವನ್ನೂ ಕ್ಷೀರವನ್ನೂ ಕುಡಿದೆನು. ವಿುತ್ರರೇ, ಊಟಮಾಡಿರಿ; ಪ್ರಿಯರೇ, ಕುಡಿಯಿರಿ, ಬೇಕಾದಷ್ಟು ಪಾನಮಾಡಿರಿ.


ನೀರು ತರಿಸಿಕೊಡುತ್ತೇನೆ; ನಿಮ್ಮ ಕಾಲುಗಳನ್ನು ತೊಳೆದುಕೊಂಡು ಮರದ ನೆರಳಿನಲ್ಲಿ ವಿಶ್ರವಿುಸಿಕೊಳ್ಳಿರಿ.


ಅರಸನಾದ ಸೊಲೊಮೋನನು ಶೆಬದ ರಾಣಿಯಿಂದ ತನಗೆ ದೊರಕಿದ ಬಹುಮಾನಕ್ಕೆ ಪ್ರತಿಯಾಗಿ ಆಕೆಗೆ ತಾನು ಕೊಟ್ಟ ವಸ್ತುಗಳನ್ನಲ್ಲದೆ ಆಕೆಯು ಕೇಳಿದವುಗಳನ್ನೆಲ್ಲಾ ಕೊಟ್ಟುಬಿಟ್ಟನು. ಅನಂತರ ಆಕೆಯು ತನ್ನ ಪರಿವಾರದವರೊಡನೆ ಸ್ವದೇಶಕ್ಕೆ ಹೊರಟುಹೋದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು