ಎಫೆಸದವರಿಗೆ 3:6 - ಕನ್ನಡ ಸತ್ಯವೇದವು J.V. (BSI)6 ಅದು ಯಾವದಂದರೆ, ಅನ್ಯಜನರು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿರುವವರಾಗಿ ಯೆಹೂದ್ಯರೊಂದಿಗೆ ಬಾಧ್ಯರೂ ಒಂದೇ ದೇಹದೊಳಗಣ ಅಂಗಗಳೂ ಅಬ್ರಹಾಮನಿಗುಂಟಾದ ವಾಗ್ದಾನದಲ್ಲಿ ಪಾಲುಗಾರರೂ ಆಗಿದ್ದಾರೆಂಬದೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅದು ಯಾವುದೆಂದರೆ, ಅನ್ಯಜನರು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ದೇವಜನರೊಂದಿಗೆ ಸಹಬಾಧ್ಯರೂ ಒಂದೇ ದೇಹದ ಅಂಗಗಳೂ, ವಾಗ್ದಾನದಲ್ಲಿ ಪಾಲುಗಾರರೂ ಆಗಿದ್ದಾರೆಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಶುಭಸಂದೇಶದ ಮೂಲಕ ಅನ್ಯಜನರೂ ಯೇಸುಕ್ರಿಸ್ತರಲ್ಲಿ ದೇವಜನರೊಡನೆ ಸಹಬಾಧ್ಯರು, ಹಕ್ಕುದಾರರು, ಒಂದೇ ಶರೀರದ ಅಂಗಗಳು, ಹಾಗೂ ದೇವರು ಮಾಡಿದ ವಾಗ್ದಾನದಲ್ಲಿ ಪಾಲುಗಾರರು ಇದೇ ಆ ರಹಸ್ಯ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಇದು ಆ ರಹಸ್ಯಸತ್ಯ: ಯೆಹೂದ್ಯರಲ್ಲದವರು ಸುವಾರ್ತೆಯ ಮೂಲಕ ಕ್ರಿಸ್ತಯೇಸುವಿನಲ್ಲಿ ಇರುವವರಾಗಿ ಯೆಹೂದ್ಯರೊಂದಿಗೆ ಬಾಧ್ಯರೂ ಒಂದೇ ದೇಹಕ್ಕೆ ಸೇರಿದವರೂ ಅಬ್ರಹಾಮನಿಗುಂಟಾದ ವಾಗ್ದಾನದಲ್ಲಿ ಪಾಲುಗಾರರೂ ಆಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಸುವಾರ್ತೆಯ ಮೂಲಕ ಯೆಹೂದ್ಯರಲ್ಲದವರೂ ಸಹ ಇಸ್ರಾಯೇಲರೊಂದಿಗೆ ವಾರಸುದಾರರೂ ಒಂದೇ ದೇಹದ ಅವಯವಗಳೂ ಕ್ರಿಸ್ತ ಯೇಸುವಿನಲ್ಲಿ ದೇವರ ವಾಗ್ದಾನದ ಸಹಪಾಲುಗಾರರೂ ಆಗಿರಬೇಕೆಂಬುದೇ ಈ ರಹಸ್ಯ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ತೊ ಗುಟ್ ಖಲೊ ಮಟ್ಲ್ಯಾರ್, ಬರ್‍ಯಾ ಖಬ್ರೆಚ್ಯಾ ವೈನಾ ಜುದೆವ್ ನ್ಹಯ್ ಹೊತ್ತಿ ಲೊಕಾ ದೆವಾಚ್ಯಾ ಆಶಿರ್ವಾದಾತ್ನಿ ಜುದೆವಾಂಚ್ಯಾ ವಾಂಗ್ಡಾ ದುಸ್ರಿ ಲೊಕಾ ದೆವಾಚ್ಯಾ ಬರ್‍ಯಾ ಖಬ್ರಿಯಾಂಚೆನ್ ಜೆಜುಕ್ರಿಸ್ತಾಕ್ಡೆ ರಾತಲೆ ಹೊವ್ನ್ ಜುದೆವಾಂಚ್ಯಾ ವಾಂಗ್ಡಾ ಹಕ್ಕ್ ಹೊತ್ತೆ ಎಕುಚ್ ಆಂಗಾಚಿ ಭಾಗಾ ಹೊವ್ನ್ ಅನಿ ಕ್ರಿಸ್ತಾ ಜೆಜುಚ್ಯಾ ದೆವಾನ್ ದಿಲ್ಲ್ಯಾ ಗೊಸ್ಟಿತ್ ವಾಟೊ ಘೆವ್ನ್ ಹಾತ್. ಅಧ್ಯಾಯವನ್ನು ನೋಡಿ |
ತಮಗೆ ದರ್ಶನಗಳಾದವೆಂದು ಕೊಚ್ಚಿಕೊಳ್ಳುತ್ತಾರೆ, ಮತ್ತು ಪ್ರಾಪಂಚಿಕ ಬುದ್ಧಿಯಿಂದ ನಿರಾಧಾರವಾಗಿ ಉಬ್ಬಿಕೊಂಡಿದ್ದಾರೆ, ಆದರೆ ಕ್ರಿಸ್ತನೆಂಬ ಶಿರಸ್ಸಿನ ಹೊಂದಿಕೆಯನ್ನು ಬಿಟ್ಟವರಾಗಿದ್ದಾರೆ. ಇಂಥವರು ನಿಮಗೆ ದೊರಕಿರುವ ಬಿರುದನ್ನು ಅಪಹರಿಸುವದಕ್ಕೆ ಅವಕಾಶಕೊಡಬೇಡಿರಿ. ಆ ಶಿರಸ್ಸಿನಿಂದಲೇ ದೇಹವೆಲ್ಲಾ ಕೀಲುನರಗಳ ಮೂಲಕ ಬೇಕಾದ ಸಹಾಯವನ್ನು ಹೊಂದಿ ಒಂದಾಗಿ ಕೂಡಿಸಲ್ಪಟ್ಟು ದೇವರು ಕೊಡುವ ವೃದ್ಧಿಯಿಂದ ಅಭಿವೃದ್ಧಿಯಾಗುತ್ತಾ ಬರುತ್ತದೆ.