Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 3:7 - ಕನ್ನಡ ಸತ್ಯವೇದವು J.V. (BSI)

7 ದೇವರು ತನ್ನ ಶಕ್ತಿಯ ಪ್ರಯೋಗದಲ್ಲಿ ನನಗೆ ಉಚಿತಾರ್ಥವಾಗಿ ಅನುಗ್ರಹಿಸಿದ ಕೆಲಸವನ್ನನುಸರಿಸಿ ನಾನು ಈ ಸುವಾರ್ತೆಗೆ ಸೇವಕನಾದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದೇವರು ತನ್ನ ಶಕ್ತಿಯ ಪ್ರಯೋಗದ ಮೂಲಕ ನನಗೆ ಕೊಡಲ್ಪಟ್ಟ ಆತನ ಕೃಪಾದಾನಕ್ಕನುಸಾರವಾಗಿ ನಾನು ಈ ಸುವಾರ್ತೆಗೆ ಸೇವಕನಾದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಈ ಶುಭಸಂದೇಶಕ್ಕೆ ದಾಸನನ್ನಾಗಿ ದೇವರು ನನ್ನನ್ನು ನೇಮಿಸಿದ್ದಾರೆ. ತಮ್ಮ ಪ್ರಭಾವಮಯ ಶಕ್ತಿಯಿಂದ ಈ ವಿಶೇಷ ವರವನ್ನು ಉಚಿತವಾಗಿ ನನಗೆ ದಯಪಾಲಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ದೇವರು ನೀಡಿದ ವಿಶೇಷವಾದ ಕೃಪಾವರದಿಂದ ನಾನು ಸುವಾರ್ತೆಯನ್ನು ತಿಳಿಸಲು ಸೇವಕನಾದೆನು. ದೇವರು ತನ್ನ ಶಕ್ತಿಯನ್ನು ಪ್ರಯೋಗಿಸಿ ನನಗೆ ಆ ಕೃಪಾವರವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ದೇವರ ಶಕ್ತಿಯ ಕ್ರಿಯೆಯಿಂದ ನನಗೆ ಕೊಡಲಾದ ಅವರ ದೇವ ಕೃಪಾದಾನಕ್ಕೆ ಅನುಸಾರವಾಗಿ ನಾನು ಈ ಸುವಾರ್ತೆಗೆ ಸೇವಕನಾದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ದೆವಾಚ್ಯಾ ವಿಶೆಸ್‍ ದೆನ್ಯಾ ವೈನಾ ಮಾಕಾ ಬರ್‍ಯಾ ಖಬ್ರೆಚೊ ಸೆವಕ್ ಕರುನ್ ಹೊಲೆ, ಹೆ ತೆನಿ ಮಾಕಾ ಅಪ್ನಾಚ್ಯಾ ಕಾಮಾ ಕರ್ತಲ್ಯಾ ಬಳಾ ವೈನಾ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 3:7
22 ತಿಳಿವುಗಳ ಹೋಲಿಕೆ  

ನಂಬುವವರಾದ ನಮ್ಮಲ್ಲಿ ಆತನು ಸಾಧಿಸುವ ಪರಾಕ್ರಮವು ಎಷ್ಟು ಅತಿಶಯವಾದದ್ದೆಂಬದನ್ನೂ ನೀವು ತಿಳುಕೊಳ್ಳುವಂತೆ ಅನುಗ್ರಹಿಸಲಿ.


ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಶಕ್ತಿಯ ಪ್ರಕಾರ ನಾವು ಬೇಡುವದಕ್ಕಿಂತಲೂ ಯೋಚಿಸುವದಕ್ಕಿಂತಲೂ


ನಿಮಗೋಸ್ಕರ ನಿರ್ವಹಿಸುವದಕ್ಕಾಗಿ ದೇವರು ನನಗೆ ಕೃಪೆಯಾಗಿ ಕೊಟ್ಟ ಕೆಲಸವನ್ನೂ ಇದುವರೆಗೆ ಗುಪ್ತವಾಗಿದ್ದ ಒಂದು ಸಂಗತಿ ದೈವಪ್ರಕಟನೆಯಿಂದ ನನಗೆ ತಿಳಿಸಲ್ಪಟ್ಟಿತೆಂಬದನ್ನೂ ನೀವು ಕೇಳಿದ್ದೀರಲ್ಲಾ.


ಆತನು ಹೊಸ ಒಡಂಬಡಿಕೆಗೆ ಸೇವಕರಾಗಿರುವ ಸಾಮರ್ಥ್ಯವನ್ನು ನಮಗೆ ಅನುಗ್ರಹಿಸಿದ್ದಾನೆ. ಈ ಒಡಂಬಡಿಕೆಯು ಲಿಖಿತ ರೂಪವಾದದ್ದಾಗಿರದೆ ದೇವರಾತ್ಮ ಸಂಬಂಧವಾದದ್ದು ಆಗಿದೆ. ಲಿಖಿತರೂಪವಾದ ಒಡಂಬಡಿಕೆಯು ಮರಣವನ್ನುಂಟುಮಾಡುತ್ತದೆ; ದೇವರಾತ್ಮ ಸಂಬಂಧವಾದದ್ದು ಜೀವವನ್ನುಂಟುಮಾಡುತ್ತದೆ.


ನೀವು ತನ್ನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಯನ್ನು ನಿಮಗೆ ಅನುಗ್ರಹಿಸಲಿ. ಆತನು ಯೇಸು ಕ್ರಿಸ್ತನ ಮೂಲಕ ತನಗೆ ಸಮರ್ಪಕವಾದದ್ದನ್ನು ನಮ್ಮಲ್ಲಿ ನಡಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಸ್ತೋತ್ರ. ಆಮೆನ್.


ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನವ್ಮಿುಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ದೇವರ ವಾಕ್ಯವೆಂದೇ ತಿಳಿದು ಅಂಗೀಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ. ಅದು ನಿಜವಾಗಿ ದೇವರ ವಾಕ್ಯವೇ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.


ನನ್ನಲ್ಲಿ ಕಾರ್ಯಸಾಧಿಸುವ ದೇವರ ಬಲವನ್ನು ಪ್ರಯೋಗಮಾಡಿ ಇದಕ್ಕೋಸ್ಕರವೇ ಹೋರಾಡುತ್ತೇನೆ, ಪ್ರಯಾಸಪಡುತ್ತೇನೆ.


ಆದರೆ ನಾನು ಎಂಥವನಾಗಿದ್ದೇನೋ ದೇವರ ಕೃಪೆಯಿಂದಲೇ ಅಂಥವನಾಗಿದ್ದೇನೆ. ನನಗುಂಟಾದ ಆತನ ಕೃಪೆಯು ನಿಷ್ಫಲವಾಗಲಿಲ್ಲ; ನಾನು ಅವರೆಲ್ಲರಿಗಿಂತಲೂ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿರುವ ದೇವರ ಕೃಪೆಯೇ.


ಹಾಗಾದರೆ ಅಪೊಲ್ಲೋಸನು ಏನು? ಪೌಲನು ಏನು? ಅವರು ಸೇವಕರು; ಅವರ ಮುಖಾಂತರ ನೀವು ಕ್ರಿಸ್ತನನ್ನು ನಂಬುವವರಾದಿರಿ; ಕರ್ತನು ಒಬ್ಬೊಬ್ಬನಿಗೆ ದಯಪಾಲಿಸಿದ ಪ್ರಕಾರ ಅವರು ಸೇವೆಮಾಡುವವರಾಗಿದ್ದಾರೆ.


ಆತನ ಹೆಸರಿನ ಪ್ರಸಿದ್ಧಿಗಾಗಿ ಎಲ್ಲಾ ಅನ್ಯಜನಗಳಲ್ಲಿ ನಂಬಿಕೆಯೆಂಬ ವಿಧೇಯತ್ವ ಉಂಟಾಗುವದಕ್ಕೋಸ್ಕರ ನಾವು ಆತನ ಮೂಲಕವಾಗಿ ಕೃಪೆಯನ್ನೂ ಅಪೊಸ್ತಲತನವನ್ನೂ ಹೊಂದಿದೆವು.


ಆತನೇ ಶಿರಸ್ಸು; ದೇಹವೆಲ್ಲಾ ಆತನ ದೊರೆತನದಲ್ಲಿದ್ದು ತನ್ನಲ್ಲಿರುವ ಎಲ್ಲಾ ನರಗಳಿಂದ ಬಿಗಿಯಾಗಿ ಜೋಡಿಸಲ್ಪಟ್ಟು ಪ್ರತಿ ಅಂಗದಿಂದ ಅದರದರ ಶಕ್ತಿಯ ಪ್ರಕಾರ ಸಹಾಯ ಹೊಂದಿ ಪ್ರೀತಿಯಿಂದ ಐಕ್ಯವಾಗಿದ್ದು ಕ್ಷೇಮಾಭಿವೃದ್ಧಿಯನ್ನು ಹೊಂದುತ್ತದೆ.


ನಾನು ಕ್ರಿಸ್ತನ ಅಪ್ರಮೇಯವಾದ ಐಶ್ವರ್ಯದ ವಿಷಯವಾದ ಶುಭಸಮಾಚಾರವನ್ನು ಅನ್ಯಜನರಿಗೆ ಪ್ರಸಿದ್ಧಿಪಡಿಸುವ ಹಾಗೆಯೂ ಸಮಸ್ತವನ್ನು ಸೃಷ್ಟಿಸಿದ ದೇವರಲ್ಲಿ ಆದಿಯಿಂದ ಮರೆಯಾಗಿದ್ದ ಮರ್ಮವು ಪ್ರಕಟವಾಗುವ ವಿಧ ಎಂಥದೆಂದು ತಿಳಿಸುವ ಹಾಗೆಯೂ ದೇವಜನರೊಳಗೆ ಅತ್ಯಲ್ಪನಾದ ನನಗೆ ಅನುಗ್ರಹಿಸೋಣವಾಯಿತು.


ಸುನ್ನತಿಯಾದವರಿಗೆ ಸುವಾರ್ತೆಯನ್ನು ಸಾರುವ ಕೆಲಸವು ಹೇಗೆ ಪೇತ್ರನಿಗೆ ಕೊಡಲ್ಪಟ್ಟಿತೋ ಹಾಗೆಯೇ ಸುನ್ನತಿಯಿಲ್ಲದವರಿಗೆ ಅದನ್ನು ಸಾರುವ ಕೆಲಸವು ನನಗೆ ಕೊಟ್ಟಿರುವದನ್ನು


ಆದದರಿಂದ ನಾವು ದೇವರ ಕರುಣೆಯಿಂದ ಈ ಸೇವೆಯನ್ನು ಹೊಂದಿದವರಾಗಿರಲಾಗಿ ಧೈರ್ಯಗೆಟ್ಟು ಹಿಂದೆಗೆಯುವದಿಲ್ಲ.


ಹೌದು, ಇಂದಿನಿಂದ ನಾನೇ ಪರಮಾತ್ಮನು; ನನ್ನ ಕೈಯಿಂದ ಬಿಡಿಸಬಲ್ಲವರು ಯಾರೂ ಇಲ್ಲ; ನನ್ನ ಕೆಲಸಕ್ಕೆ ಯಾರು ಅಡ್ಡಬಂದಾರು? ಎಂಬದೇ ಯೆಹೋವನ ಮಾತು.


ಕರ್ತನು ಅವನಿಗೆ - ನೀನು ಹೋಗು; ಆ ಮನುಷ್ಯನು ಅನ್ಯಜನರಿಗೂ ಅರಸುಗಳಿಗೂ ಇಸ್ರಾಯೇಲ್ಯರಿಗೂ ನನ್ನ ಹೆಸರನ್ನು ತಿಳಿಸುವದಕ್ಕಾಗಿ ನಾನು ಆರಿಸಿಕೊಂಡ ಸಾಧನವಾಗಿದ್ದಾನೆ.


ದೇವರು ನನಗೆ ಕೃಪೆಮಾಡಿದ ಸೇವೆಯನ್ನು ನಡಿಸಿ ನಿಮ್ಮಲ್ಲಿ ಒಬ್ಬೊಬ್ಬನಿಗೂ ಹೇಳುವದೇನಂದರೆ ಯಾರೂ ತನ್ನ ಯೋಗ್ಯತೆಗೆ ಮೀರಿ ತನ್ನನ್ನು ಭಾವಿಸಿಕೊಳ್ಳದೆ ದೇವರು ಒಬ್ಬೊಬ್ಬನಿಗೆ ಎಂಥೆಂಥ ವಿಶ್ವಾಸ ಬಲವನ್ನು ಕೊಟ್ಟನೋ ಅದಕ್ಕೆ ತಕ್ಕ ಹಾಗೆ ನ್ಯಾಯವಾದ ಅಭಿಪ್ರಾಯದಿಂದ ತನ್ನನ್ನು ಭಾವಿಸಿಕೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು