Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 3:8 - ಕನ್ನಡ ಸತ್ಯವೇದವು J.V. (BSI)

8-9 ನಾನು ಕ್ರಿಸ್ತನ ಅಪ್ರಮೇಯವಾದ ಐಶ್ವರ್ಯದ ವಿಷಯವಾದ ಶುಭಸಮಾಚಾರವನ್ನು ಅನ್ಯಜನರಿಗೆ ಪ್ರಸಿದ್ಧಿಪಡಿಸುವ ಹಾಗೆಯೂ ಸಮಸ್ತವನ್ನು ಸೃಷ್ಟಿಸಿದ ದೇವರಲ್ಲಿ ಆದಿಯಿಂದ ಮರೆಯಾಗಿದ್ದ ಮರ್ಮವು ಪ್ರಕಟವಾಗುವ ವಿಧ ಎಂಥದೆಂದು ತಿಳಿಸುವ ಹಾಗೆಯೂ ದೇವಜನರೊಳಗೆ ಅತ್ಯಲ್ಪನಾದ ನನಗೆ ಅನುಗ್ರಹಿಸೋಣವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಕ್ರಿಸ್ತನ ಅಗಮ್ಯವಾದ ಐಶ್ವರ್ಯದ ಸುವಾರ್ತೆಯನ್ನು ಅನ್ಯಜನರಿಗೆ ಸಾರುವ ಹಾಗೆಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ದೇವಜನರಲ್ಲೆಲ್ಲ ನಾನು ಅತ್ಯಲ್ಪನು. ಆದರೂ ಯೇಸುಕ್ರಿಸ್ತರ ಅಪರಿಮಿತ ಆಧ್ಯಾತ್ಮಿಕ ಸಿರಿಸಂಪತ್ತಿನ ಬಗ್ಗೆ ಅನ್ಯಜನರಿಗೆ ಪ್ರಬೋಧಿಸುವ ಸೌಭಾಗ್ಯ ನನ್ನದಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ದೇವಜನರಲ್ಲಿ ನಾನೇ ಅತ್ಯಲ್ಪನು. ಕ್ರಿಸ್ತನ ಐಶ್ವರ್ಯವನ್ನು ಕುರಿತಾದ ಸುವಾರ್ತೆಯನ್ನು ನಾನು ಯೆಹೂದ್ಯರಲ್ಲದವರಿಗೆ ತಿಳಿಸಬೇಕೆಂದು ದೇವರು ನನಗೆ ಈ ಕೃಪಾವರವನ್ನು ಕೊಟ್ಟನು. ಆ ಐಶ್ವರ್ಯವನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಾನು ಕರ್ತನ ಜನರೆಲ್ಲರಲ್ಲಿಯೂ ಅತ್ಯಲ್ಪನಾಗಿದ್ದೇನೆ. ಹಾಗಿದ್ದರೂ, ನನಗೆ ಈ ಕೃಪೆ ಕೊಡಲಾಯಿತು: ಏಕೆಂದರೆ, ನಾನು ಕ್ರಿಸ್ತನ ಅಪರಿಮಿತವಾದ ಐಶ್ವರ್ಯವನ್ನು ಯೆಹೂದ್ಯರಲ್ಲದವರಿಗೆ ಸಾರುವಂತೆಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ದೆವಾಚ್ಯಾ ಸಗ್ಳ್ಯಾ ಲೊಕಾತ್ನಿ ಮಿಯಾ ಸಗ್ಳ್ಯಾಕಿಂತಾ ಕನಿಸ್ಟ್ ಹೊಲ್ಯಾರ್ಬಿ ದೆವಾನ್ ಮಾಕಾ ಕ್ರಿಸ್ತಾಚಿ ಮೆಜುಕ್ ಹೊಯ್ನಾ ತವ್ಡಿ ಸಾವ್ಕಾರ್ಕಿಚ್ಯಾ ವಿಶಯಾತ್ಲಿ ಬರಿ ಖಬರ್ ಜುದೆವ್ ನ್ಹಯ್ ಹೊತ್ತ್ಯಾ ಲೊಕಾನಿಕ್ಡೆ ಘೆವ್ನ್ ಜಾತಲೊ ಅವಕಾಸ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 3:8
33 ತಿಳಿವುಗಳ ಹೋಲಿಕೆ  

ಅನ್ಯಜನಗಳ ವಿಷಯವಾದ ಈ ಮರ್ಮದ ಮಹಿಮಾತಿಶಯವು ಎಷ್ಟೆಂಬದನ್ನು ದೇವರು ತನ್ನ ಜನರಿಗೆ ತಿಳಿಸಲಿಕ್ಕೆ ಮನಸ್ಸು ಮಾಡಿಕೊಂಡನು. ಈ ಮರ್ಮವು ಏನಂದರೆ ಕ್ರಿಸ್ತನು ನಿಮ್ಮಲ್ಲಿದ್ದು ಪ್ರಭಾವದ ನಿರೀಕ್ಷೆಗೆ ಆಧಾರಭೂತನಾಗಿರುವದೇ.


ನಾನಂತೂ ಅಪೊಸ್ತಲರಲ್ಲಿ ಕನಿಷ್ಠನಷ್ಟೆ; ನಾನು ದೇವರ ಸಭೆಯನ್ನು ಹಿಂಸೆಪಡಿಸಿದ್ದರಿಂದ ಅಪೊಸ್ತಲನೆನಿಸಿಕೊಳ್ಳುವದಕ್ಕೆ ಯೋಗ್ಯನಲ್ಲ.


ನೀವು ದೇವರಾತ್ಮನ ಮೂಲಕ ಆಂತರ್ಯದಲ್ಲಿ ವಿಶೇಷಬಲ ಹೊಂದಿದವರಾಗುವ ಹಾಗೆಯೂ


ಮುಂದಣ ಯುಗಗಳಲ್ಲಿ ತೋರಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿರುವ ನಮ್ಮನ್ನು ಆತನೊಂದಿಗೆ ಎಬ್ಬಿಸಿ ಪರಲೋಕದಲ್ಲಿ ಆತನೊಂದಿಗೆ ಕೂಡ್ರಿಸಿದ್ದಾನೆ.


ಆ ಸಾಕ್ಷಿಯನ್ನು ಪ್ರಸಿದ್ಧಿಪಡಿಸುವದಕ್ಕಾಗಿಯೇ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ನಂಬಿಕೆಯಿಂದಲೂ ಸತ್ಯದಿಂದಲೂ ಅನ್ಯಜನರಿಗೆ ಬೋಧಿಸುವವನಾಗಿಯೂ ನೇವಿುಸಲ್ಪಟ್ಟೆನು. ನಾನು ಇಂಥವನೆಂಬದು ಸುಳ್ಳಲ್ಲ, ಸತ್ಯವೇ.


ತನ್ನ ಮಗನನ್ನು ನಾನು ಅನ್ಯಜನರಲ್ಲಿ ಪ್ರಸಿದ್ಧಿಪಡಿಸುವವನಾಗಬೇಕೆಂದು ಆತನನ್ನು ನನ್ನೊಳಗೆ ಪ್ರಕಟಿಸುವದಕ್ಕೆ ಇಚ್ಫೈಸಿದಾಗಲೇ ನಾನು ಮನುಷ್ಯರ ಆಲೋಚನೆಯನ್ನು ವಿಚಾರಿಸದೆ


ಆಹಾ, ದೇವರ ಐಶ್ವರ್ಯವೂ ಜ್ಞಾನವೂ ವಿವೇಕವೂ ಎಷ್ಟೋ ಅಗಾಧ! ಆತನ ತೀರ್ಮಾನಗಳು ಪರಿಶೋಧನೆಗೆ ಎಷ್ಟೋ ಅಗಮ್ಯ! ಆತನ ಮಾರ್ಗಗಳು ಕಂಡುಹಿಡಿಯುವದಕ್ಕೆ ಎಷ್ಟೋ ಅಸಾಧ್ಯ!


ಆತನ ಅಪಾರವಾದ ದಯಾ ಸಹನ ದೀರ್ಘಶಾಂತಿಗಳನ್ನು ಅಸಡ್ಡೆಮಾಡುತ್ತೀಯಾ? ಮನಸ್ಸನ್ನು ಬೇರೆಮಾಡಿಕೊಳ್ಳುವದಕ್ಕೆ ದೇವರ ಉಪಕಾರವು ನಿನ್ನನ್ನು ಪ್ರೇರಿಸುತ್ತದೆಂಬದು ನಿನಗೆ ಗೊತ್ತಿಲ್ಲವೇ?


ಆ ಸುವಾರ್ತಾಭಿವೃದ್ಧಿಗೋಸ್ಕರ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ಉಪದೇಶಕನಾಗಿಯೂ ನೇವಿುಸಲ್ಪಟ್ಟೆನು.


ಜ್ಞಾನಕ್ಕೆ ಮೀರುವ ಕ್ರಿಸ್ತನ ಪ್ರೀತಿಯನ್ನು ತಿಳುಕೊಳ್ಳಲೂ ಪೂರ್ಣಶಕ್ತರಾಗಿದ್ದು ದೇವರ ಸಂಪೂರ್ಣತೆಯ ಮಟ್ಟಿಗೂ ಪರಿಪೂರ್ಣರಾಗುವ ಹಾಗೆ ನಿಮಗೆ ದಯಪಾಲಿಸಲಿ ಎಂದು ಆತನನ್ನು ಬೇಡಿಕೊಳ್ಳುತ್ತೇನೆ.


ಆದರೆ ಬರೆದಿರುವ ಪ್ರಕಾರ - ದೇವರು ತನ್ನನ್ನು ಪ್ರೀತಿಸುವವರಿಗಾಗಿ ಸಿದ್ಧಮಾಡಿರುವಂಥದೆಲ್ಲವನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಅದರ ಭಾವನೆಯು ಮನುಷ್ಯನ ಹೃದಯದಲ್ಲಿ ಹುಟ್ಟಲಿಲ್ಲ.


ಕ್ರೈಸ್ತ ಸಹೋದರರು ಅಣ್ಣತಮ್ಮಂದಿರೆಂದು ಒಬ್ಬರನ್ನೊಬ್ಬರು ಪ್ರೀತಿಸಿರಿ. ಮಾನಮರ್ಯಾದೆಯನ್ನು ತೋರಿಸುವದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರಿ.


ಅಪೊಸ್ತಲರು ತಾವು ಆ ಹೆಸರಿನ ನಿವಿುತ್ತವಾಗಿ ಅವಮಾನ ಪಡುವದಕ್ಕೆ ಯೋಗ್ಯರೆನಿಸಿಕೊಂಡೆವೆಂದು ಸಂತೋಷಿಸುತ್ತಾ


ನೀನು ಐಶ್ವರ್ಯವಂತನಾಗುವಂತೆ ಬೆಂಕಿಯಲ್ಲಿ ಪುಟಾಹಾಕಿದ ಚಿನ್ನವನ್ನೂ, ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಹೊದ್ದುಕೊಳ್ಳುವದಕ್ಕಾಗಿ ಬಿಳೀವಸ್ತ್ರಗಳನ್ನೂ, ಕಣ್ಣುಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವದಕ್ಕಾಗಿ ಅಂಜನವನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಿನಗೆ ಬುದ್ಧಿ ಹೇಳುತ್ತೇನೆ.


ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂಬ ವಾಕ್ಯವು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ; ಆ ಪಾಪಿಗಳಲ್ಲಿ ನಾನೇ ಮುಖ್ಯನು.


ಕರ್ತನು ಅವನಿಗೆ - ನೀನು ಹೋಗು; ಆ ಮನುಷ್ಯನು ಅನ್ಯಜನರಿಗೂ ಅರಸುಗಳಿಗೂ ಇಸ್ರಾಯೇಲ್ಯರಿಗೂ ನನ್ನ ಹೆಸರನ್ನು ತಿಳಿಸುವದಕ್ಕಾಗಿ ನಾನು ಆರಿಸಿಕೊಂಡ ಸಾಧನವಾಗಿದ್ದಾನೆ.


ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿಯೊಂದು ಕೊರತೆಯನ್ನು ನೀಗಿಸುವನು.


ಸುನ್ನತಿಯಾದವರಿಗೆ ಸುವಾರ್ತೆಯನ್ನು ಸಾರುವ ಕೆಲಸವು ಹೇಗೆ ಪೇತ್ರನಿಗೆ ಕೊಡಲ್ಪಟ್ಟಿತೋ ಹಾಗೆಯೇ ಸುನ್ನತಿಯಿಲ್ಲದವರಿಗೆ ಅದನ್ನು ಸಾರುವ ಕೆಲಸವು ನನಗೆ ಕೊಟ್ಟಿರುವದನ್ನು


ಸದ್ಭಕ್ತರಿಗೋಸ್ಕರ ನೀನು ಇಟ್ಟುಕೊಂಡಿರುವ ಮೇಲೂ ಆಶ್ರಿತರಿಗೋಸ್ಕರ ನೀನು ಎಲ್ಲರ ಮುಂದೆ ಮಾಡಿದ ಉಪಕಾರಗಳೂ ಎಷ್ಟೋ ವಿಶೇಷವಾಗಿವೆ.


ಪಕ್ಷಪಾತದಿಂದಾಗಲಿ ಒಣಹೆಮ್ಮೆಯಿಂದಾಗಲಿ ಯಾವದನ್ನೂ ಮಾಡದೆ ಪ್ರತಿಯೊಬ್ಬನು ದೀನಭಾವದಿಂದ ಮತ್ತೊಬ್ಬರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ.


ನಿಮಗೋಸ್ಕರ ನಿರ್ವಹಿಸುವದಕ್ಕಾಗಿ ದೇವರು ನನಗೆ ಕೃಪೆಯಾಗಿ ಕೊಟ್ಟ ಕೆಲಸವನ್ನೂ ಇದುವರೆಗೆ ಗುಪ್ತವಾಗಿದ್ದ ಒಂದು ಸಂಗತಿ ದೈವಪ್ರಕಟನೆಯಿಂದ ನನಗೆ ತಿಳಿಸಲ್ಪಟ್ಟಿತೆಂಬದನ್ನೂ ನೀವು ಕೇಳಿದ್ದೀರಲ್ಲಾ.


ನೀವು ಕ್ರಿಸ್ತ ಯೇಸುವಿನಲ್ಲಿರುವದು ಆತನಿಂದಲೇ. ಕ್ರಿಸ್ತ ಯೇಸು ನಮಗೆ ದೇವರ ಕಡೆಯಿಂದ ಜ್ಞಾನವೂ ನೀತಿ ಶುದ್ಧೀಕರಣ ವಿಮೋಚನೆಗಳಿಗೆ ಕಾರಣನೂ ಆದನು.


ನಾವೆಲ್ಲರು ಆತನ ಪರಿಪೂರ್ಣತೆಯೊಳಗಿಂದ ಕೃಪೆಯ ಮೇಲೆ ಕೃಪೆಯನ್ನು ಹೊಂದಿದೆವು.


ಅನಂತರ ಅರಸನಾದ ದಾವೀದನು ಹೋಗಿ ಯೆಹೋವನ ಸನ್ನಿಧಿಯಲ್ಲಿ ಕೂತುಕೊಂಡು - ದೇವರೇ, ಯೆಹೋವನೇ, ನನ್ನಂಥವನಿಗೆ ನೀನು ಈ ಪದವಿಯನ್ನು ಅನುಗ್ರಹಿಸಿದಿಯೇ! ನಾನೆಷ್ಟರವನು! ನನ್ನ ಮನೆ ಎಷ್ಟರದು! ದೇವರೇ,


ಹೀಗಿರುವದರಿಂದ ಅನ್ಯಜನರಾಗಿರುವ ನಿಮ್ಮ ನಿವಿುತ್ತ ಕ್ರಿಸ್ತ ಯೇಸುವಿನ ಸೆರೆಯವನಾದ ಪೌಲನೆಂಬ ನಾನು ನಿಮಗೋಸ್ಕರ ಪ್ರಾರ್ಥಿಸುತ್ತೇನೆ.


ಬಳಿಕ ಆ ಆಳು - ಅಯ್ಯಾ, ನೀನು ಅಪ್ಪಣೆಕೊಟ್ಟಂತೆ ಮಾಡಿದ್ದಾಯಿತು; ಆದರೂ ಇನ್ನೂ ಸ್ಥಳವದೆ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು