Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 4:12 - ಕನ್ನಡ ಸತ್ಯವೇದವು J.V. (BSI)

12 ದೇವಜನರನ್ನು ಯೋಗ್ಯಸ್ಥಿತಿಗೆ ತರುವ ಕೆಲಸಕ್ಕೋಸ್ಕರವೂ ಸಭೆಯ ಸೇವೆಗೋಸ್ಕರವೂ ಕ್ರಿಸ್ತನ ದೇಹವು ಅಭಿವೃದ್ಧಿಯಾಗುವದಕ್ಕೋಸ್ಕರವೂ ಆತನು ಇವರನ್ನು ಅನುಗ್ರಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಾವೆಲ್ಲರೂ ನಂಬಿಕೆಯಿಂದಲೂ ದೇವಕುಮಾರನ ವಿಷಯವಾದ ಜ್ಞಾನದಿಂದಲೂ ಉಂಟಾಗುವ ಐಕ್ಯತೆಯನ್ನು ಹೊಂದಿ, ಪರಿಪಕ್ವತೆಯನ್ನು ಪಡೆದು, ಕ್ರಿಸ್ತನ ಪರಿಪೂರ್ಣತೆಯ ಮಟ್ಟವನ್ನು ತಲುಪುವ ತನಕ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ದೇವಜನರನ್ನು ಪರಿಣಿತರನ್ನಾಗಿಸಿ ದೇವರ ಸೇವೆಗೆ ಸಿದ್ಧಗೊಳಿಸಲೆಂದು ಮತ್ತು ಯೇಸುಕ್ರಿಸ್ತರ ದೇಹವಾದ ಧರ್ಮಸಭೆ ಅಭಿವೃದ್ಧಿಹೊಂದಲೆಂದು ಈ ವರಗಳನ್ನು ಅವರಿಗೆ ನೀಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಸಭೆಯ ಸೇವೆಗೋಸ್ಕರ ದೇವರ ಪರಿಶುದ್ಧ ಜನರನ್ನು ಸಿದ್ಧಪಡಿಸುವುದಕ್ಕಾಗಿ ಆತನು ಅವರನ್ನು ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಕ್ರಿಸ್ತನ ದೇಹವನ್ನು ಕಟ್ಟುವುದಕ್ಕಾಗಿಯೂ ದೇವಜನರನ್ನು ಸೇವಾ ಕೆಲಸಕ್ಕಾಗಿ ಪರಿಣಿತರನ್ನಾಗಿ ಮಾಡುವುದಕ್ಕಾಗಿಯೂ ಕ್ರಿಸ್ತನು ಅವರನ್ನು ಕೊಟ್ಟ ಉದ್ದೇಶವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಹೆ ಸಗ್ಳೆ ತೆನಿ ಸೆವೆಚ್ಯಾ ಕಾಮಾ ಸಾಟ್ನಿ ದೆವಾಚ್ಯಾ ಲೊಕಾಕ್ನಿ ತಯಾರ್ ಕರುಕ್ ಮನುನ್ ಹೆಕಾ ಅಸೆ ಕರ್ಲ್ಯಾನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 4:12
45 ತಿಳಿವುಗಳ ಹೋಲಿಕೆ  

ಆತನೇ ಶಿರಸ್ಸು; ದೇಹವೆಲ್ಲಾ ಆತನ ದೊರೆತನದಲ್ಲಿದ್ದು ತನ್ನಲ್ಲಿರುವ ಎಲ್ಲಾ ನರಗಳಿಂದ ಬಿಗಿಯಾಗಿ ಜೋಡಿಸಲ್ಪಟ್ಟು ಪ್ರತಿ ಅಂಗದಿಂದ ಅದರದರ ಶಕ್ತಿಯ ಪ್ರಕಾರ ಸಹಾಯ ಹೊಂದಿ ಪ್ರೀತಿಯಿಂದ ಐಕ್ಯವಾಗಿದ್ದು ಕ್ಷೇಮಾಭಿವೃದ್ಧಿಯನ್ನು ಹೊಂದುತ್ತದೆ.


ನೀವು ಕ್ರಿಸ್ತನ ದೇಹವು, ಮತ್ತು ಒಬ್ಬೊಬ್ಬರಾಗಿ ಅದಕ್ಕೆ ಅಂಗಗಳಾಗಿದ್ದೀರಿ.


ನನ್ನ ಸಹೋದರರೇ, ನೀವಂತೂ ಒಳ್ಳೇತನದಿಂದ ಭರಿತರಾಗಿಯೂ ಸಕಲ ಜ್ಞಾನದಿಂದ ತುಂಬಿದವರಾಗಿಯೂ ಒಬ್ಬರಿಗೊಬ್ಬರು ಬುದ್ಧಿ ಹೇಳುವದಕ್ಕೆ ಶಕ್ತರಾಗಿಯೂ ಇದ್ದೀರೆಂದು ನಿಮ್ಮ ವಿಷಯದಲ್ಲಿ ನನಗೂ ಗೊತ್ತಿದೆ.


ಹಾಗಾದರೇನು, ಸಹೋದರರೇ? ನೀವು ಕೂಡಿ ಬಂದಿರುವಾಗ ಒಬ್ಬನು ಹಾಡುವದೂ, ಒಬ್ಬನು ಉಪದೇಶಮಾಡುವದೂ, ಒಬ್ಬನು ತನಗೆ ಪ್ರಕಟವಾದದ್ದನ್ನು ತಿಳಿಸುವದೂ, ಒಬ್ಬನು ವಾಣಿಯನ್ನಾಡುವದೂ, ಒಬ್ಬನು ಅದರ ಅರ್ಥವನ್ನು ಹೇಳುವದೂ ಉಂಟಷ್ಟೆ. ನೀವು ಏನೂ ನಡಿಸಿದರೂ ಭಕ್ತಿವೃದ್ಧಿಗಾಗಿಯೇ ನಡಿಸಿರಿ.


ಆದದರಿಂದ ನಾವು ಸಮಾಧಾನಕ್ಕೂ ಪರಸ್ಪರ ಭಕ್ತಿವೃದ್ಧಿಗೂ ಅನುಕೂಲವಾಗಿರುವವುಗಳನ್ನು ಸಾಧಿಸಿಕೊಳ್ಳೋಣ.


ಈ ಸುವಾರ್ತೆಯ ಸೇವೆಯು ನನಗೆ ಕೊಡಲ್ಪಟ್ಟಿತು. ನನಗೆ ಬಲವನ್ನು ದಯಪಾಲಿಸಿದವನು ನಮ್ಮ ಕರ್ತನಾದ ಯೇಸು ಕ್ರಿಸ್ತನೇ. ಮೊದಲು ದೂಷಕನೂ ಹಿಂಸಕನೂ ಬಲಾತ್ಕಾರಿಯೂ ಆಗಿದ್ದ ನನ್ನನ್ನು ಆತನು ನಂಬಿಗಸ್ತನೆಂದು ಎಣಿಸಿ ತನ್ನ ಸೇವೆಗೆ ನೇವಿುಸಿಕೊಂಡದ್ದಕ್ಕಾಗಿ ನಾನು ಆತನಿಗೆ ಸ್ತೋತ್ರ ಸಲ್ಲಿಸುತ್ತೇನೆ. ನಾನು ಅವಿಶ್ವಾಸಿಯಾಗಿ ತಿಳಿಯದೆ ಹಾಗೆ ಮಾಡಿದ್ದರಿಂದ ನನ್ನ ಮೇಲೆ ಕರುಣೆ ಉಂಟಾಯಿತು;


ಹಾಗೆಯೇ ನೀವೂ ಆತ್ಮಪ್ರೇರಿತವಾದ ನುಡಿಗಳನ್ನಾಡುವದಕ್ಕೆ ಅಪೇಕ್ಷಿಸುವವರಾಗಿರುವದರಿಂದ ಸಭೆಗೆ ಭಕ್ತಿವೃದ್ಧಿ ಉಂಟಾಗುವ ಹಾಗೆ ಅದಕ್ಕಿಂತಲೂ ಹೆಚ್ಚಾದದ್ದನ್ನು ಮಾಡುವದಕ್ಕೆ ಪ್ರಯತ್ನಿಸಿರಿ.


ನಿಮ್ಮ ಸಭಾನಾಯಕರ ಮಾತನ್ನು ಕೇಳಿರಿ, ಅವರಿಗೆ ಅಧೀನರಾಗಿರಿ. ಅವರು ಲೆಕ್ಕ ಒಪ್ಪಿಸಬೇಕಾದವರಾಗಿ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ವ್ಯಸನಪಡದೆ ಸಂತೋಷದಿಂದ ಇದನ್ನು ಮಾಡುವಂತೆ ನೋಡಿರಿ; ಅವರು ವ್ಯಸನದಿಂದಿರುವದು ನಿಮಗೆ ಪ್ರಯೋಜನಕರವಾದದ್ದಲ್ಲ.


ಆದದರಿಂದ ನಿರ್ಜೀವಕರ್ಮಗಳ ಮೇಲಣ ನಂಬಿಕೆಯನ್ನು ಬಿಟ್ಟುಬಿಟ್ಟು ದೇವರಲ್ಲಿಯೇ ನಂಬಿಕೆಯಿಡಬೇಕಾದದ್ದು,


ನಿಂದೆಗೆ ಅವಕಾಶಕೊಡದೆ ಎಲ್ಲಾ ಸಂಗತಿಗಳಲ್ಲಿ ದೇವರ ಸೇವಕರೆಂದು ನಮ್ಮನ್ನು ಸಮ್ಮತರಾಗ ಮಾಡಿಕೊಳ್ಳುತ್ತೇವೆ. ನಾವು ಸಂಕಟಗಳಲ್ಲಿಯೂ ಕೊರತೆಗಳಲ್ಲಿಯೂ ಇಕ್ಕಟ್ಟುಗಳಲ್ಲಿಯೂ ಪೆಟ್ಟುಗಳಲ್ಲಿಯೂ ಸೆರೆಮನೆಗಳಲ್ಲಿಯೂ


ಇದೆಲ್ಲಾ ದೇವರಿಂದಲೇ ಉಂಟಾದದ್ದು. ಆತನು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಮಾಧಾನಪಡಿಸಿಕೊಂಡು ಸಮಾಧಾನವಿಷಯವಾದ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ;


ಆದರೆ ನಿನ್ನ ನಂಬಿಕೆ ಕುಂದಿಹೋಗಬಾರದೆಂದು ನಾನು ನಿನ್ನ ವಿಷಯದಲ್ಲಿ ದೇವರಿಗೆ ವಿಜ್ಞಾಪನೆಮಾಡಿಕೊಂಡೆನು. ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ದೃಢಪಡಿಸು ಎಂದು ಹೇಳಿದನು.


ಆದರೆ ನೀನು ಎಲ್ಲಾ ವಿಷಯಗಳಲ್ಲಿ ಸ್ವಸ್ಥಚಿತ್ತನಾಗಿರು, ಶ್ರಮೆಯನ್ನು ತಾಳಿಕೋ, ಸೌವಾರ್ತಿಕನ ಕೆಲಸವನ್ನು ಮಾಡು, ನಿನಗೆ ನೇವಿುಸಿರುವ ಸೇವೆಯನ್ನು ಲೋಪವಿಲ್ಲದೆ ನಡಿಸು.


ಅರ್ಖಿಪ್ಪನಿಗೆ - ನೀನು ಕರ್ತನಿಂದ ಹೊಂದಿರುವ ಸೇವೆಯನ್ನು ನೆರವೇರಿಸುವದಕ್ಕೆ ಎಚ್ಚರವಾಗಿರಬೇಕೆಂದು ಹೇಳಿರಿ.


ನಾವು ಆತನನ್ನು ಪ್ರಸಿದ್ಧಿಪಡಿಸುವವರಾಗಿ ಸಕಲರಿಗೂ ಬುದ್ಧಿಹೇಳುತ್ತಾ ಸರ್ವರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ ದೇವರ ಮುಂದೆ ಎಲ್ಲರನ್ನು ಕ್ರಿಸ್ತನಲ್ಲಿ ಪ್ರವೀಣರನ್ನಾಗಿ ನಿಲ್ಲಿಸುವದಕ್ಕೆ ಪ್ರಯತ್ನಿಸುತ್ತಿದ್ದೇವೆ.


ಪೌಲನೆಂಬ ನಾನು ಈ ಸುವಾರ್ತೆಗೆ ಸೇವಕನಾದೆನು. ನಾನು ಈಗ ನಿಮಗೋಸ್ಕರ ಅನುಭವಿಸುತ್ತಿರುವ ಬಾಧೆಗಳಲ್ಲಿ ಸಂತೋಷಪಟ್ಟು ಕ್ರಿಸ್ತನ ಸಂಕಟಗಳೊಳಗೆ ಇನ್ನೂ ಉಳಿದದ್ದನ್ನು ಸಭೆಯೆಂಬ ಆತನ ದೇಹಕ್ಕೋಸ್ಕರ ನನ್ನ ಶರೀರದಲ್ಲಿ ಅನುಭವಿಸಿ ತೀರಿಸುತ್ತೇನೆ.


ಸಭೆಯು ಆತನ ದೇಹವಾಗಿದೆ; ಎಲ್ಲವನ್ನೂ ಎಲ್ಲಾ ಸಂಬಂಧದಲ್ಲಿ ವ್ಯಾಪಿಸುವಾತನಿಂದ ಅದು ಪರಿಪೂರ್ಣತೆಯುಳ್ಳದ್ದಾಗಿದೆ.


ನಾವು ಇಷ್ಟು ಹೊತ್ತು ನಿಮ್ಮ ಮುಂದೆ ಪ್ರತಿವಾದ ಮಾಡುವವರೆಂದು ನೆನಸುತ್ತೀರೋ? ನಿಮ್ಮ ಮುಂದೆಯಲ್ಲ, ದೇವರ ಸನ್ನಿಧಾನದಲ್ಲಿಯೇ ನಾವು ಕ್ರಿಸ್ತನಲ್ಲಿದ್ದು ಮಾತಾಡುವವರಾಗಿದ್ದೇವೆ. ಪ್ರಿಯರೇ, ನಾವು ಮಾತಾಡುವದೆಲ್ಲಾ ನಿಮ್ಮ ಭಕ್ತಿವೃದ್ಧಿಗೋಸ್ಕರವೇ ಆಗಿದೆ.


ಪ್ರಿಯರೇ, ಈ ವಾಗ್ದಾನಗಳು ನಮಗಿರುವದರಿಂದ ನಾವು ಶರೀರಾತ್ಮಗಳ ಕಲ್ಮಶವನ್ನು ತೊಲಗಿಸಿ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಿಂದ ಕೂಡಿದವರಾಗಿ ಪವಿತ್ರತ್ವವನ್ನು ಸಿದ್ಧಿಗೆ ತರುವದಕ್ಕೆ ಪ್ರಯತ್ನಿಸೋಣ.


ಆದದರಿಂದ ನಾವು ದೇವರ ಕರುಣೆಯಿಂದ ಈ ಸೇವೆಯನ್ನು ಹೊಂದಿದವರಾಗಿರಲಾಗಿ ಧೈರ್ಯಗೆಟ್ಟು ಹಿಂದೆಗೆಯುವದಿಲ್ಲ.


ಹೀಗಿದ್ದ ಮೇಲೆ ದೇವರಾತ್ಮಸಂಬಂಧವಾದ ಸೇವೆಯು ಎಷ್ಟೋ ಹೆಚ್ಚಾಗಿ ಪ್ರಭಾವವುಳ್ಳದ್ದಾಗಿರಬೇಕು.


ಯಾಕಂದರೆ ನಾನು ವಾಣಿಯನ್ನಾಡುತ್ತಾ ದೇವರನ್ನು ಪ್ರಾರ್ಥಿಸಿದರೆ ನನ್ನಾತ್ಮವು ಪ್ರಾರ್ಥಿಸುವದೇ ಹೊರತು ನನ್ನ ಬುದ್ಧಿ ನಿಷ್ಫಲವಾಗಿರುವದು.


ಇದಲ್ಲದೆ ನಿಮ್ಮ ಬಳಿಗೆ ಬರುವಾಗ ಕ್ರಿಸ್ತನಿಂದಾಗುವ ವರಗಳನ್ನು ಹೇರಳವಾಗಿ ತರುವೆನೆಂದು ಬಲ್ಲೆನು.


ನಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಹಿತವನ್ನೂ ಭಕ್ತಿವೃದ್ಧಿಯನ್ನೂ ಅಪೇಕ್ಷಿಸುವವನಾಗಿ ಅವನ ಸುಖವನ್ನು ನೋಡಿಕೊಳ್ಳಲಿ.


ಅದು ಸಭಾಸೇವೆಯ ರೂಪವಾಗಿದ್ದರೆ ಸಭಾಸೇವೆಯನ್ನು ಮಾಡುತ್ತಾ ಇರೋಣ.


ದೇವರು ಸ್ವರಕ್ತದಿಂದ ಸಂಪಾದಿಸಿಕೊಂಡ ಸಭೆಯನ್ನು ಪರಿಪಾಲಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.


ಆದರೆ ಪ್ರಾಣವನ್ನು ಉಳಿಸಿಕೊಳ್ಳುವದೇ ವಿಶೇಷವೆಂದು ನಾನು ಎಣಿಸುವದಿಲ್ಲ. ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಪ್ರಕಟಿಸಬೇಕೆಂಬದಾಗಿ ಕರ್ತನಾದ ಯೇಸುವಿನಿಂದ ನಾನು ಹೊಂದಿರುವ ಸೇವೆಯೆಂಬ ಓಟವನ್ನು ಕಡೆಗಾಣಿಸುವದೊಂದೇ ನನ್ನ ಅಪೇಕ್ಷೆ.


ಅವನು ಒಳ್ಳೆಯವನೂ ಪವಿತ್ರಾತ್ಮಭರಿತನೂ ನಂಬಿಕೆಯಿಂದ ತುಂಬಿದವನೂ ಆಗಿದ್ದನು. ಆದಕಾರಣ ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ನೋಡಿದಾಗ ಸಂತೋಷಪಟ್ಟು - ನೀವು ದೃಢಮನಸ್ಸಿನಿಂದ ಕರ್ತನಲ್ಲಿ ನೆಲೆಗೊಂಡಿರ್ರಿ ಎಂದು ಅವರೆಲ್ಲರಿಗೆ ಬುದ್ಧಿ ಹೇಳಿದನು.


ಹೀಗಿರಲಾಗಿ ಯೂದಾಯ ಗಲಿಲಾಯ ಸಮಾರ್ಯ ಸೀಮೆಗಳಲ್ಲಿದ್ದ ಸಭೆಯು ಸಮಾಧಾನ ಹೊಂದಿತು; ಮತ್ತು ಭಕ್ತಿಯಲ್ಲಿ ಬೆಳೆದು ಕರ್ತನ ಭಯದಲ್ಲಿ ನಡೆದು ಪವಿತ್ರಾತ್ಮನಿಂದ ಪ್ರೋತ್ಸಾಹವನ್ನು ಹೊಂದಿ ಹೆಚ್ಚುತ್ತಾ ಬಂತು.


ಯೂದನು ನಮ್ಮ ಲೆಕ್ಕದಲ್ಲಿ ಸೇರಿ ಈ ಸೇವೆಯಲ್ಲಿ ಪಾಲು ಹೊಂದಿದವನಾಗಿದ್ದನು.


ಮಾರ್ಕನನ್ನು ಸಂಗಡ ಕರಕೊಂಡು ಬಾ, ಅವನು ನನಗೆ ಸೇವೆಗಾಗಿ ಉಪಯುಕ್ತನಾಗಿದ್ದಾನೆ.


ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತೂ ಹೊರಡಬಾರದು; ಭಕ್ತಿಯನ್ನು ವೃದ್ಧಿಮಾಡುವಂಥ ಕಾಲೋಚಿತವಾದ ಮಾತು ಇದ್ದರೆ ಕೇಳುವವರ ಹಿತಕ್ಕಾಗಿ ಅದನ್ನು ಆಡಿರಿ.


ನೀವೆಲ್ಲರೂ ಒಂದೇ ದೇಹಕ್ಕೆ ಸೇರಿದವರು, ಒಬ್ಬನೇ ಆತ್ಮನನ್ನು ಹೊಂದಿದವರು,


ನಾವು ಬಲಹೀನರಾಗಿದ್ದರೂ ನೀವು ಬಲಿಷ್ಠರಾಗಿದ್ದ ಪಕ್ಷಕ್ಕೆ ಸಂತೋಷವಾಗಿದ್ದೇವೆ. ಇದಲ್ಲದೆ ನೀವು ಪೂರ್ಣಕ್ರಮಕ್ಕೆ ಬರಬೇಕೆಂದು ಪ್ರಾರ್ಥಿಸುತ್ತೇವೆ.


ಆದರೆ ಪ್ರತಿಯೊಬ್ಬನಲ್ಲಿ ತೋರಿಬರುವ ದೇವರಾತ್ಮನ ವರಗಳು ಸರ್ವರ ಪ್ರಯೋಜನಾರ್ಥವಾಗಿ ಕೊಡಲ್ಪಟ್ಟಿವೆ.


ಹಾಗೆಯೇ ನಾವೆಲ್ಲರು ಒಟ್ಟಾಗಿ ಕ್ರಿಸ್ತನಲ್ಲಿ ಒಂದೇ ದೇಹವಾಗಿದ್ದು ಒಬ್ಬೊಬ್ಬರಾಗಿ ಪರಸ್ಪರ ಅಂಗಗಳಾಗಿದ್ದೇವೆ.


ಕಡೇ ಮಾತೇನಂದರೆ ಸಹೋದರರೇ ಸಂತೋಷಪಡಿರಿ, ಕ್ರಮಪಡಿಸಿಕೊಳ್ಳಿರಿ; ಧೈರ್ಯವುಳ್ಳವರಾಗಿರಿ, ಒಂದೇ ಮನಸ್ಸುಳ್ಳವರಾಗಿರಿ, ಸಮಾಧಾನದಿಂದಿರಿ; ಆಗ ಪ್ರೀತಿಯನ್ನೂ ಶಾಂತಿಯನ್ನೂ ಕೊಡುವ ದೇವರು ನಿಮ್ಮ ಸಂಗಡ ಇರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು