ಎಫೆಸದವರಿಗೆ 4:13 - ಕನ್ನಡ ಸತ್ಯವೇದವು J.V. (BSI)13 ನಾವೆಲ್ಲರು ನಂಬಿಕೆಯಿಂದಲೂ ದೇವಕುಮಾರನ ವಿಷಯವಾದ ಜ್ಞಾನದಿಂದಲೂ ಉಂಟಾಗುವ ಐಕ್ಯವನ್ನು ಹೊಂದಿ ಪ್ರವೀಣತೆಗೆ ಬಂದವರಾಗಿ ಕ್ರಿಸ್ತನ ಪರಿಪೂರ್ಣತೆಯೆಂಬ ಪ್ರಮಾಣವನ್ನು ಮುಟ್ಟುವ ತನಕ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ದೇವಜನರನ್ನು ದೇವರ ಸೇವೆಗೆ ಸಿದ್ಧಗೊಳಿಸುವುದಕ್ಕೂ, ಕ್ರಿಸ್ತನ ದೇಹವೆಂಬ ಸಭೆಯು ಅಭಿವೃದ್ಧಿಯಾಗುವುದಕ್ಕೋಸ್ಕರವೂ ಆತನು ಇವರನ್ನು ನೇಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಹೀಗೆ ನಾವೆಲ್ಲರೂ ಒಂದೇ ವಿಶ್ವಾಸದಿಂದಲೂ ದೇವರ ಪುತ್ರನನ್ನು ಕುರಿತ ಜ್ಞಾನದಿಂದಲೂ ಐಕಮತ್ಯವನ್ನು ಮತ್ತು ಪರಿಪಕ್ವತೆಯನ್ನು ಪಡೆಯುತ್ತೇವೆ. ಜ್ಞಾನಾರ್ಜನೆಯನ್ನು ಪಡೆದವರಾಗಿ, ಕ್ರಿಸ್ತಯೇಸುವಿನ ಪರಿಪೂರ್ಣತೆಯ ಮಟ್ಟವನ್ನು ಮುಟ್ಟುತ್ತೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನಾವೆಲ್ಲರೂ ಒಂದೇ ನಂಬಿಕೆಯಿಂದಲೂ ದೇವಕುಮಾರನ ವಿಷಯವಾದ ಜ್ಞಾನದಿಂದಲೂ ಐಕ್ಯರಾಗುವತನಕ ಈ ಸೇವೆಯು ಮುಂದುವರಿಯಬೇಕು. ನಾವು ಪರಿಪೂರ್ಣರಾಗುವ ತನಕ ಅಂದರೆ ಕ್ರಿಸ್ತನ ಸರ್ವಸಂಪೂರ್ಣತೆಯನ್ನು ಮುಟ್ಟುವತನಕ ಬೆಳೆಯಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನಾವೆಲ್ಲರೂ ಕ್ರಿಸ್ತನ ಪರಿಪೂರ್ಣತೆಯ ಬೆಳವಣಿಗೆಯಲ್ಲಿ ವಿಶ್ವಾಸದಲ್ಲಿಯೂ ದೇವಪುತ್ರನ ತಿಳುವಳಿಕೆಯಲ್ಲಿ ಒಂದು ಮನಸ್ಸುಳ್ಳವರಾಗಿ ಪರಿಪಕ್ವತೆಯನ್ನು ಹೊಂದುವುದೇ ಆ ಉದ್ದೇಶವಾಗಿತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಅನಿ ಅಸೆ ಅಮ್ಚ್ಯಾ ವಿಶ್ವಾಸಾತ್ ಅನಿ ದೆವಾಚ್ಯಾ ಲೆಕಾಚ್ಯಾ ಶಾನೆಪಾನಾತ್ ಎಕಾಕ್ಡೆ ಗೊಳಾ ಹೊವ್ನ್ ಅಮಿ ಸಗ್ಳೆ ಎಕ್ ಹೊವ್ಚೆ, ಅಮಿ ವಾಡ್ವಳ್ಕಿ ಹೊಲ್ಲಿ ಲೊಕಾ ಹೊವ್ಚೆ ಅನಿ ಕ್ರಿಸ್ತಾಚ್ಯಾ ಸಗ್ಳ್ಯಾ ಸಂಪುರ್ನತೆಚ್ಯಾ ಹಂತಾಕ್ ಪಾವುಚೆ ಮನುನ್ ತೆನಿ ಅಸೆ ಕರ್ಲ್ಯಾನ್, ಅಧ್ಯಾಯವನ್ನು ನೋಡಿ |