Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 4:14 - ಕನ್ನಡ ಸತ್ಯವೇದವು J.V. (BSI)

14 ನಾವು ಇನ್ನು ಮೇಲೆ ಕೂಸುಗಳಾಗಿರಬಾರದು; ದುರ್ಜನರ ವಂಚನೆಗೂ ದುರ್ಬೋಧಕರ ಕುಯುಕ್ತಿಗೂ ಒಳಬಿದ್ದು ನಾನಾ ಉಪದೇಶಗಳಿಂದ ಕಂಗೆಟ್ಟು ಗಾಳಿಯಿಂದ ಅತ್ತಿತ್ತ ನೂಕಿಸಿಕೊಂಡು ಹೋಗುವವರ ಹಾಗಿರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆದ್ದರಿಂದ ನಾವು ಇನ್ನು ಮೇಲೆ ಕೂಸುಗಳಾಗಿರದೇ, ದುರ್ಜನರ ವಂಚನೆಗಳಿಗೂ, ಕುಯುಕ್ತಿಗೂ ಒಳಬಿದ್ದು, ನಾನಾ ಉಪದೇಶಗಳಿಂದ ಕಂಗೆಟ್ಟು ಗಾಳಿಯಿಂದ ಅತ್ತಿತ್ತ ಓಲಾಡುವವರ ಹಾಗಿರದೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇನ್ನು ಮೇಲೆ ನಾವು ಸಣ್ಣ ಮಕ್ಕಳಂತೆ ದುರ್ಜನರ ವಂಚನೆಗೂ ದುರ್ಬೋಧಕರ ಕುಯುಕ್ತಿಗೂ ಒಳಪಟ್ಟು ಅತ್ತಿತ್ತ ಅಲೆದಾಡುವುದಿಲ್ಲ. ಗಾಳಿ ಬಂದಂತೆ ತೂರಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಾವು ಇನ್ನು ಮೇಲೆ ಕೂಸುಗಳಾಗಿರಬಾರದು. ಸಮುದ್ರದ ಅಲೆಗಳಿಂದ ಅತ್ತಿಂದಿತ್ತ ಚಲಿಸುವ ಹಡಗಿನಂತೆ ಚಂಚಲರಾಗಿರಬಾರದು. ನಮ್ಮನ್ನು ವಂಚಿಸುವುದಕ್ಕಾಗಿ ಜನರು ಹೇಳುವ ಯಾವುದೇ ಹೊಸ ಉಪದೇಶದಿಂದಾಗಲಿ ನಾವು ಚಂಚಲರಾಗಬಾರದು. ಜನರನ್ನು ಮೋಸಗೊಳಿಸಿ ಕೆಟ್ಟದಾರಿಗೆ ನಡೆಸಬೇಕೆಂಬ ಉದ್ದೇಶದಿಂದ ಆ ದುರ್ಬೋಧಕರು ನಾನಾ ಬಗೆಯ ಕುತಂತ್ರವನ್ನು ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ, ನಾವು ಚಿಕ್ಕಮಕ್ಕಳಂತೆ ಇರುವುದಿಲ್ಲ: ಮನುಷ್ಯರ ವಿವಿಧ ಬೋಧನೆಗಳಿಂದ ಗಾಳಿಯಿಂದ ತೂರಾಡಿಕೊಳ್ಳುವಂತಾಗುವುದಿಲ್ಲ. ಮನುಷ್ಯರ ಕುಯುಕ್ತಿಗೆ, ತಂತ್ರಕ್ಕೆ, ಒಳಸಂಚಿಗೆ ಒಳಗಾಗುವುದಿಲ್ಲ. ಅವರ ಪ್ರತಿಯೊಂದು ಬೋಧನೆಯ ಗಾಳಿಯಿಂದಲೂ ತೂರಾಡಿಕೊಂಡು ಅತ್ತಿತ್ತ ಅಲೆದಾಡುವ ಚಿಕ್ಕಮಕ್ಕಳಂತೆ ಇರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತಸೆ ರಾತಾನಾ ಅಮಿ ಅನಿ ಫಿಡೆ ಪೊರಾಂಚ್ಯಾ ಸಾರ್ಕೆ ಹೊವ್ಚೆ ನ್ಹಯ್ ಪಶ್ವುತಲ್ಯಾ ಲೊಕಾಂಚ್ಯಾ ಶಿಕಾಪಾಂಚ್ಯಾ ವಾರ್ಯ್ಯಾಕ್ ಹುಡುನ್ ಜಾತಲೆ ಹೊವ್ನ್ ರ್‍ಹಾವ್ಚೆ ನ್ಹಯ್, ತೆನಿ ಲೊಕಾಕ್ನಿ ಅಪ್ನಾಚ್ಯಾ ಚಾಲಾಕಿ ಪಾನಾತ್ ಅನಿ ಶಾನೆಪಾನಾನ್ ಚುಕ್ ವಾಟೆಕ್ ನ್ಹೆತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 4:14
44 ತಿಳಿವುಗಳ ಹೋಲಿಕೆ  

ನಾನಾವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಬೇಡಿರಿ. ದೇವರ ಕೃಪೆಯನ್ನು ಆತುಕೊಂಡು ಮನಸ್ಸನ್ನು ದೃಢಮಾಡಿಕೊಳ್ಳುವದು ಉತ್ತಮವೇ; ಭೋಜನಪದಾರ್ಥಗಳನ್ನು ವಿಶೇಷಿಸುವದರಿಂದ ಅದು ಆಗುವದಿಲ್ಲ. ಭೋಜನಪದಾರ್ಥಗಳನ್ನು ವಿಶೇಷಿಸಿ ನಡೆದವರು ಏನೂ ಪ್ರಯೋಜನ ಹೊಂದಲಿಲ್ಲ.


ಸಹೋದರರೇ, ಬುದ್ಧಿಯ ವಿಷಯದಲ್ಲಿ ಬಾಲಕರಾಗಿರಬೇಡಿರಿ; ಕೆಟ್ಟತನದ ವಿಷಯದಲ್ಲಿ ಶಿಶುಗಳಾಗಿಯೇ ಇದ್ದು ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಾಗಿರಬೇಕು.


ಪ್ರಿಯರೇ, ಅನೇಕ ಮಂದಿ ಸುಳ್ಳು ಪ್ರವಾದಿಗಳು ಲೋಕದೊಳಗೆ ಬಂದಿರುವದರಿಂದ ನೀವು ಆತ್ಮದ ಎಲ್ಲಾ ನುಡಿಗಳನ್ನು ನಂಬದೆ ಆಯಾ ನುಡಿಗಳು ದೇವರಿಂದ ಪ್ರೇರಿತವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.


ಆದರೆ ನಾವು ದೇವರ ವಾಕ್ಯವನ್ನು ಕಲಬೆರಿಕೆಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಉಪದೇಶ ಹೊಂದಿದವರಿಗೆ ತಕ್ಕ ಹಾಗೆ ಕ್ರಿಸ್ತನ ಅನ್ಯೋನ್ಯತೆಯಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತಾಡುತ್ತೇವೆ.


ಸ್ವಲ್ಪವೂ ಸಂದೇಹಪಡದೆ ನಂಬಿಕೆಯಿಟ್ಟು ಕೇಳಿಕೊಳ್ಳಬೇಕು. ಸಂದೇಹಪಡುವವನೋ ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ತೆರೆಯಂತೆ ಅಲೆಯುತ್ತಿರುವನು.


ಸೈತಾನನ ತಂತ್ರೋಪಾಯಗಳನ್ನು ನೀವು ಎದುರಿಸಿ ನಿಲ್ಲುವದಕ್ಕೆ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.


ಸುಳ್ಳುಕ್ರಿಸ್ತರೂ ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರಾದುಕೊಂಡವರನ್ನು ಸಹ ಮೋಸಗೊಳಿಸುವದಕ್ಕೋಸ್ಕರ ದೊಡ್ಡ ದೊಡ್ಡ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.


ಯಾಕಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸಲಾರದ ಕಾಲವು ಬರುತ್ತದೆ; ಅದರಲ್ಲಿ ಅವರು ತೀಟೇ ಕಿವಿಗಳುಳ್ಳವರಾಗಿ ತಮ್ಮ ದುರಾಶೆಗಳಿಗೆ ಅನುಕೂಲರಾದ ಅನೇಕ ಉಪದೇಶಕರನ್ನು ಇಟ್ಟುಕೊಳ್ಳುವರು.


ಇವರು ಸಮುದ್ರದೊಳಗಿರುವ ಗುಪ್ತವಾದ ಬಂಡೆಗಳಂತಿದ್ದು ನಿಮ್ಮ ಪ್ರೇಮಭೋಜನಗಳಲ್ಲಿ ಸೇರಿ ತಿಂದು ಕುಡಿಯುತ್ತಾರೆ; ನಿರ್ಭಯವಾಗಿ ಸ್ವಂತ ಹೊಟ್ಟೆಯನ್ನೇ ನೋಡಿಕೊಳ್ಳುವ ಕುರುಬರಾಗಿದ್ದಾರೆ. ಇವರು ಗಾಳಿಯಿಂದ ಹೊಡಿಸಿಕೊಂಡು ಹೋಗುವ ನೀರಿಲ್ಲದ ಮೇಘಗಳೂ, ಎಲೆಗಳುದುರಿ ಹಣ್ಣುಬಿಡದೆ ಒಣಗಿಹೋಗಿ ಬೇರು ಸಹಿತ ಕಿತ್ತುಬಿದ್ದ ಮರಗಳೂ,


ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ನಮಸ್ಕರಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರ ಜೊತೆಯಲ್ಲಿ ಸೆರೆಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಯಲ್ಲಿ ಹಾಕಲ್ಪಟ್ಟರು;


ಎಲೈ ಬುದ್ಧಿಯಿಲ್ಲದ ಗಲಾತ್ಯದವರೇ, ಯಾರು ನಿಮ್ಮನ್ನು ಮರುಳುಗೊಳಿಸಿದರು? ಯೇಸು ಕ್ರಿಸ್ತನು ಶಿಲುಬೆಗೆ ಹಾಕಿಸಿಕೊಂಡವನಾಗಿ ನಿಮ್ಮ ಕಣ್ಣೆದುರಿನಲ್ಲಿ ವರ್ಣಿಸಲ್ಪಟ್ಟನಲ್ಲವೇ.


ಬಹುಮಂದಿ ಸುಳ್ಳುಪ್ರವಾದಿಗಳು ಸಹ ಎದ್ದು ಅನೇಕರನ್ನು ಮೋಸಗೊಳಿಸುವರು.


ನಿಮ್ಮನ್ನು ಸನ್ಮಾರ್ಗದಿಂದ ತಪ್ಪಿಸಬೇಕೆಂದಿರುವವರ ವಿಷಯವಾಗಿ ಈ ಸಂಗತಿಗಳನ್ನು ನಿಮಗೆ ಬರೆದಿದ್ದೇನೆ.


ಆದರೆ ದುಷ್ಟರೂ ವಂಚಕರೂ ಇತರರನ್ನು ಮೋಸಮಾಡುತ್ತಾ ತಾವೇ ಮೋಸಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.


[ಇವರು ಹರಟಿಕೊಳ್ಳುವದೇನಂದರೆ] - ಇವನು ಯಾರಿಗೆ ಜ್ಞಾನವನ್ನು ಬೋಧಿಸುತ್ತಾನೆ? ಇವನು ಯಾರಿಗೆ ಯೆಹೋವನ ಮಾತನ್ನು ತಿಳಿಯಪಡಿಸುತ್ತಾನೆ? ಮೊಲೆ ಬಿಟ್ಟ ಕೂಸುಗಳಿಗೋ? ಎದೆಬಿಟ್ಟ ಮಕ್ಕಳಿಗೋ?


ನಾಚಿಕೆಯನ್ನು ಹುಟ್ಟಿಸುವ ಗುಪ್ತಕಾರ್ಯಗಳನ್ನು ನಾವು ಬಿಟ್ಟುಬಿಟ್ಟು ತಂತ್ರದಲ್ಲಿ ನಡೆಯದೆ ದೇವರ ವಾಕ್ಯವನ್ನು ಕೆಡಿಸದೆ ಸತ್ಯವನ್ನು ಪರಿಷ್ಕಾರವಾಗಿ ಬೋಧಿಸುತ್ತಾ ನಾವು ಸಜ್ಜನರೆಂದು ಪ್ರತಿಮನುಷ್ಯನ ಮನಸ್ಸು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನಡೆಯುತ್ತೇವೆ.


ಅವರು ಹೊರಟುಹೋಗುತ್ತಿರಲು ಯೇಸು ಯೋಹಾನನ ವಿಷಯವಾಗಿ ಆ ಜನರ ಗುಂಪುಗಳಿಗೆ ಹೇಳತೊಡಗಿದ್ದೇನಂದರೆ - ಏನು ನೋಡಬೇಕೆಂದು ಅಡವಿಗೆ ಹೋಗಿದ್ದಿರಿ? ಗಾಳಿಯಿಂದ ಅಲ್ಲಾಡುವ ದಂಟನ್ನೋ?


ನೀವು ಅಜ್ಞಾನಿಗಳಾಗಿದ್ದಾಗ ನಿಮಗೆ ಪ್ರೇರಣೆಯಾದ ಹಾಗೆ ಮೂಕ ವಿಗ್ರಹಗಳ ಬಳಿಗೆ ಹೋಗುತ್ತಿದ್ದಿರೆಂದು ಬಲ್ಲಿರಿ.


ನೀನು ಅವರ ಮಾತಿಗೆ ಒಡಂಬಡಬೇಡ; ಯಾಕಂದರೆ ನಾಲ್ವತ್ತಕ್ಕಿಂತ ಹೆಚ್ಚು ಮಂದಿ ತಾವು ಅವನನ್ನು ಕೊಲ್ಲುವ ತನಕ ಅನ್ನಪಾನವೇನೂ ಮುಟ್ಟುವದಿಲ್ಲವೆಂದು ಶಪಥವನ್ನು ಮಾಡಿಕೊಂಡು ಅವನಿಗೋಸ್ಕರ ಹೊಂಚುಹಾಕುತ್ತಾ ಇದ್ದಾರೆ. ಈಗ ಅವರು ನಿನ್ನ ಅಪ್ಪಣೆಯನ್ನು ಎದುರುನೋಡುತ್ತಾ ಸಿದ್ಧವಾಗಿದ್ದಾರೆ ಅಂದನು.


ಸದ್ಭಕ್ತರು ದೇಶದೊಳಗಿಂದ ನಾಶವಾಗಿದ್ದಾರೆ, ಜನರಲ್ಲಿ ಸತ್ಯವಂತರೇ ಇಲ್ಲ. ಸರ್ವರು ರಕ್ತಸುರಿಸಬೇಕೆಂದು ಹೊಂಚು ಹಾಕುತ್ತಾರೆ, ಒಬ್ಬರನ್ನೊಬ್ಬರು ಬಲೆಯೊಡ್ಡಿ ಬೇಟೆಯಾಡುತ್ತಾರೆ.


ಇಗೋ, ನನ್ನ ಜೀವಕ್ಕೆ ಹೊಂಚುಹಾಕುತ್ತಾರೆ; ಬಲಿಷ್ಠರು ನನಗೆ ವಿರೋಧವಾಗಿ ಗುಂಪು ಕೂಡಿದ್ದಾರೆ. ಯೆಹೋವನೇ, ನಾನು ನಿರ್ದೋಷಿಯೂ ನಿರಪರಾಧಿಯೂ ಅಲ್ಲವೇ!


ಗವಿಯಲ್ಲಿ ಅಡಗಿಕೊಂಡಿರುವ ಸಿಂಹದಂತೆ ಅವನು ಮರೆಯಾಗಿ ಹೊಂಚಿಕೊಂಡಿರುವನು. ಅವನು ಬಲೆಯೊಡ್ಡಿ ಕಾದಿದ್ದು ಕುಗ್ಗಿದವನನ್ನು ಹಿಡಿದು ಎಳೆದುಕೊಂಡು ಹೋಗುತ್ತಾನೆ.


ಅವರು ನಮ್ಮನ್ನು ಬಿಟ್ಟು ಹೊರಟುಹೋದರು, ಆದರೆ ಅವರು ನಮ್ಮವರಾಗಿರಲಿಲ್ಲ. ಅವರು ನಮ್ಮವರಾಗಿದ್ದರೆ ನಮ್ಮ ಜೊತೆಯಲ್ಲೇ ಇರುತ್ತಿದ್ದರು, ಆದರೆ ಅವರು ನಮ್ಮನ್ನು ಬಿಟ್ಟುಹೋದದರಿಂದ ಕ್ರೈಸ್ತರೆನಿಸಿಕೊಳ್ಳುವವರೆಲ್ಲರೂ ನಮ್ಮವರಲ್ಲವೆಂಬದು ಸ್ಪಷ್ಟವಾಗಿ ತೋರಬಂತು.


ತಪ್ಪಾದ ಮಾರ್ಗದಲ್ಲಿ ನಡೆಯುವವರ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಬಂಡುಬಂಡಾದ ದುರಾಶೆಗಳನ್ನು ಹುಟ್ಟಿಸಿ ಅವರನ್ನು ಮರುಳುಗೊಳಿಸುತ್ತಾರೆ.


ಹಡಗುಗಳನ್ನು ನೋಡಿರಿ. ಅವು ಬಹು ದೊಡ್ಡವು, ಬಲವಾದ ಗಾಳಿಯಿಂದ ಬಡಿಸಿಕೊಂಡು ಹೋಗುತ್ತವೆ. ಆದರೂ ನಡಿಸುವವನು ಬಹು ಸಣ್ಣ ಚುಕ್ಕಾಣಿಯಿಂದ ಅವುಗಳನ್ನು ತನ್ನ ಮನಸ್ಸಿಗೆ ಬಂದ ಕಡೆಗೆ ತಿರುಗಿಸುತ್ತಾನೆ.


ಅವನು ಹೊಸದಾಗಿ ಸಭೆಯಲ್ಲಿ ಸೇರಿದವನಾಗಿರಬಾರದು; ಅಂಥವನಾದರೆ ಉಬ್ಬಿಕೊಂಡು ಸೈತಾನನಿಗೆ ಪ್ರಾಪ್ತವಾದ ಶಿಕ್ಷಾವಿಧಿಗೆ ಒಳಗಾದಾನು.


ಆಸ್ಯಸೀಮೆಯಲ್ಲಿರುವವರೆಲ್ಲರೂ ನನ್ನನ್ನು ಕೈಬಿಟ್ಟರೆಂಬದನ್ನು ನೀನು ಬಲ್ಲೆ; ಅವರಲ್ಲಿ ಫುಗೇಲನೂ ಹೆರ್ಮೊಗೇನನೂ ಸೇರಿದ್ದಾರೆ.


ಯಾಕಂದರೆ ಇಹಲೋಕ ಜ್ಞಾನವು ದೇವರ ಮುಂದೆ ಹುಚ್ಚುತನವಾಗಿದೆ. ಆತನು ಜ್ಞಾನಿಗಳನ್ನು ಅವರ ತಂತ್ರಗಳಲ್ಲಿಯೇ ಹಿಡುಕೊಳ್ಳುತ್ತಾನೆಂತಲೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು