Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 4:15 - ಕನ್ನಡ ಸತ್ಯವೇದವು J.V. (BSI)

15 ಪ್ರೀತಿಯಿಂದ ಸತ್ಯವನ್ನನುಸರಿಸುತ್ತಾ ಬೆಳೆದು ಎಲ್ಲಾ ವಿಷಯಗಳಲ್ಲಿಯೂ ಕ್ರಿಸ್ತನ ಐಕ್ಯವನ್ನು ಹೊಂದುತ್ತಾ ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಪ್ರೀತಿಯಲ್ಲಿ ಸತ್ಯವನ್ನು ಮಾತನಾಡುತ್ತಾ ಎಲ್ಲಾ ವಿಷಯಗಳಲ್ಲಿಯೂ ತಲೆಯಾಗಿರುವ ಕ್ರಿಸ್ತನಲ್ಲಿ ಬೆಳೆಯುವವರಾಗಿರೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಬದಲಾಗಿ, ಪ್ರೀತಿಯಿಂದ ಸತ್ಯವನ್ನೇ ನುಡಿಯುತ್ತೇವೆ. ಶಿರಸ್ಸಾದ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ಸರ್ವತೋಮುಖವಾಗಿ ಬೆಳೆಯುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಾವಾದರೊ ಸತ್ಯವನ್ನು ಪ್ರೀತಿಯಿಂದ ಹೇಳಬೇಕು; ಎಲ್ಲಾ ವಿಷಯಗಳಲ್ಲಿಯೂ ಬೆಳೆದು ಕ್ರಿಸ್ತನಂತಾಗಲು ಪ್ರಯತ್ನಿಸಬೇಕು. ಕ್ರಿಸ್ತನು ಶಿರಸ್ಸಾಗಿದ್ದಾನೆ ಮತ್ತು ನಾವು ದೇಹವಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದರೆ ಪ್ರೀತಿಯಲ್ಲಿ ಸತ್ಯವನ್ನು ಮಾತನಾಡುತ್ತಾ, ನಾವು ಎಲ್ಲಾ ವಿಷಯಗಳಲ್ಲಿಯೂ ಕ್ರಿಸ್ತನ ದೇಹದ ಪರಿಪಕ್ವತೆಯೆಡೆಗೆ ಅವರ ಶಿರಸತ್ವದಲ್ಲಿ ಬೆಳೆಯೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಹೆಚ್ಯಾ ಬದ್ಲಾಕ್ ಪ್ರೆಮಾನ್ ಭರಲ್ಲ್ಯಾ ಆತ್ಮ್ಯಾಕ್ ಖರೆ ಹೊತ್ತೆ ಬೊಲುನ್ ಟಕ್ಲೆ ಹೊವ್ನ್ ಹೊತ್ತ್ಯಾ ಕ್ರಿಸ್ತಾತ್ ಸಗ್ಳ್ಯಾ ವಾಟೆನಿ ವಾಡ್ವಳ್ಕಿ ಹೊವ್ಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 4:15
21 ತಿಳಿವುಗಳ ಹೋಲಿಕೆ  

ಪ್ರಿಯರಾದ ಮಕ್ಕಳೇ, ನಾವು ಬರೀಮಾತಿನಿಂದಾಗಲಿ ಬಾಯುಪಚಾರದಿಂದಾಗಲಿ ಪ್ರೀತಿಸುವವರಾಗಿರಬಾರದು; ನಿಮ್ಮ ಪ್ರೀತಿಯು ಕೃತ್ಯದಲ್ಲಿಯೂ ಸತ್ಯದಲ್ಲಿಯೂ ತೋರಬೇಕು.


ಆದಕಾರಣ ಸುಳ್ಳಾಡುವದನ್ನು ಬಿಟ್ಟುಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ; ಯಾಕಂದರೆ ನಾವು ಒಬ್ಬರಿಗೊಬ್ಬರು ಅಂಗಗಳಾಗಿದ್ದೇವಲ್ಲಾ.


ನೀವು ಮಾಡಬೇಕಾದ ಕಾರ್ಯಗಳು ಇವೇ - ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ನಿಜವನ್ನೇ ಆಡಲಿ; ನಿಮ್ಮ ಚಾವಡಿಗಳಲ್ಲಿ ಸತ್ಯವನ್ನೂ ಸಮಾಧಾನಪ್ರದನ್ಯಾಯವನ್ನೂ ಸ್ಥಾಪಿಸಿರಿ;


ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನ್ನೊಬ್ಬರು ಹೃದಯಪೂರ್ವಕವಾಗಿಯೂ ಯಥಾರ್ಥವಾಗಿಯೂ ಪ್ರೀತಿಸಿರಿ.


ನೀವು ಕೃಪೆಯಲ್ಲಿಯೂ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನದಲ್ಲಿಯೂ ಅಭಿವೃದ್ಧಿಯನ್ನು ಹೊಂದುತ್ತಾ ಇರ್ರಿ. ಆತನಿಗೆ ಈಗಲೂ ಸದಾಕಾಲವೂ ಸ್ತೋತ್ರ. ಆಮೆನ್.


ಯೇಸು ಕ್ರಿಸ್ತನೇ ಮುಖ್ಯವಾದ ಮೂಲೆಗಲ್ಲು; ಆತನಲ್ಲಿ ಕಟ್ಟಡದ ಎಲ್ಲಾ ಭಾಗಗಳು ಒಂದಕ್ಕೊಂದು ಹೊಂದಿಕೆಯಾಗಿ ಕಟ್ಟಡವು ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ಧ ದೇವಾಲಯವಾಗುತ್ತದೆ.


ಆತನು ಸಮಸ್ತವನ್ನೂ ಕ್ರಿಸ್ತನ ಪಾದಗಳ ಕೆಳಗೆ ಹಾಕಿದನು. ಇದಲ್ಲದೆ ಆತನನ್ನು ಎಲ್ಲಾದರ ಮೇಲೆ ಇರಿಸಿ ಸಭೆಗೆ ಶಿರಸ್ಸಾಗಿ ನೇವಿುಸಿದನು.


ಎಲ್ಲಾ ತರದ ನಿಂದೆಯನ್ನೂ ವಿಸರ್ಜಿಸಿ ಹಸುಮಕ್ಕಳಂತೆ ಪಾರಮಾರ್ಥಿಕವಾದ ಶುದ್ಧ ಹಾಲನ್ನು ಬಯಸಿರಿ; ಅದರಿಂದ ಬೆಳೆಯುತ್ತಾ ರಕ್ಷಣೆಯನ್ನು ಹೊಂದುವಿರಿ; ಕರ್ತನು ದಯಾಳುವೆಂದು ನೀವು ಅನುಭವದಿಂದ ತಿಳಿದುಕೊಂಡಿದ್ದೀರಲ್ಲವೋ?


ನಿಮ್ಮ ಪ್ರೀತಿಯು ನಿಷ್ಕಪಟವಾಗಿರಲಿ. ಕೆಟ್ಟತನಕ್ಕೆ ಹೇಸಿಕೊಂಡು ಒಳ್ಳೇದನ್ನು ಬಿಗಿಯಾಗಿ ಹಿಡಿದುಕೊಳ್ಳಿರಿ.


ಯೇಸು ತನ್ನ ಕಡೆಗೆ ಬರುವ ನತಾನಯೇಲನನ್ನು ಕಂಡು ಅವನ ವಿಷಯವಾಗಿ - ಇಗೋ ಇವನು ನಿಜವಾದ ಇಸ್ರಾಯೇಲನು; ಇವನಲ್ಲಿ ಕಪಟವಿಲ್ಲ ಅಂದನು.


ಕ್ರಿಸ್ತನು ಸಭೆಗೆ ತಲೆಯಾಗಿರುವ ಪ್ರಕಾರವೇ ಗಂಡನು ಹೆಂಡತಿಗೆ ತಲೆಯಾಗಿದ್ದಾನೆ. ಕ್ರಿಸ್ತನೋ ಸಭೆಯೆಂಬ ದೇಹಕ್ಕೆ ರಕ್ಷಕನಾಗಿದ್ದಾನೆ.


ನಾಚಿಕೆಯನ್ನು ಹುಟ್ಟಿಸುವ ಗುಪ್ತಕಾರ್ಯಗಳನ್ನು ನಾವು ಬಿಟ್ಟುಬಿಟ್ಟು ತಂತ್ರದಲ್ಲಿ ನಡೆಯದೆ ದೇವರ ವಾಕ್ಯವನ್ನು ಕೆಡಿಸದೆ ಸತ್ಯವನ್ನು ಪರಿಷ್ಕಾರವಾಗಿ ಬೋಧಿಸುತ್ತಾ ನಾವು ಸಜ್ಜನರೆಂದು ಪ್ರತಿಮನುಷ್ಯನ ಮನಸ್ಸು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನಡೆಯುತ್ತೇವೆ.


ಯೆಹೋವನು ಯಾವನ ಲೆಕ್ಕಕ್ಕೆ ಅಪರಾಧವನ್ನು ಎಣಿಸುವದಿಲ್ಲವೋ ಯಾವನ ಹೃದಯದಲ್ಲಿ ಕಪಟವಿರುವದಿಲ್ಲವೋ ಅವನು ಧನ್ಯನು.


ಆಕೆಯು ತಿರಿಗಿ ಅವನಿಗೆ - ನಿನ್ನನ್ನು ಪ್ರೀತಿಸುತ್ತೇನೆಂದು ನೀನು ನನಗೆ ಹೇಗೆ ಹೇಳಬಹುದು? ನಿನ್ನ ಮನಸ್ಸು ನನ್ನ ಮೇಲೆ ಇಲ್ಲವಲ್ಲಾ; ಮೂರುಸಾರಿ ನನ್ನನ್ನು ವಂಚಿಸಿದಿ. ನಿನಗೆ ಇಂಥ ಮಹಾಶಕ್ತಿ ಯಾವದರಿಂದ ಬಂದಿತೆಂಬದನ್ನು ನನಗೆ ತಿಳಿಸಲಿಲ್ಲ ಅಂದಳು.


ಇದನ್ನು ಆಜ್ಞಾರೂಪವಾಗಿ ಹೇಳದೆ ಇತರರ ಆಸಕ್ತಿಯನ್ನು ತೋರಿಸಿಕೊಟ್ಟು ನಿಮ್ಮ ಪ್ರೀತಿಯೂ ಯಥಾರ್ಥವಾದದ್ದೆಂಬದನ್ನು ಪರೀಕ್ಷೆಯಿಂದ ತಿಳಿದುಕೊಳ್ಳಬೇಕೆಂದು ಹೇಳುತ್ತೇನೆ.


ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ [ದೇವರ] ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ;


ಆದರೂ ಒಂದು ಸಂಗತಿಯನ್ನು ನೀವು ತಿಳಿಯಬೇಕೆಂದು ನನ್ನ ಇಷ್ಟ; ಅದೇನಂದರೆ ಪ್ರತಿ ಪುರುಷನಿಗೂ ಕ್ರಿಸ್ತನು ತಲೆ, ಸ್ತ್ರೀಗೆ ಪುರುಷನು ತಲೆ, ಕ್ರಿಸ್ತನಿಗೆ ದೇವರು ತಲೆ ಆಗಿದ್ದಾನೆ.


ಹೇಗಂದರೆ ನಾವು ಪ್ರೀತಿಯಲ್ಲಿ ನಡೆದು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ದೋಷವಿಲ್ಲದವರೂ ಆಗಿರಬೇಕೆಂದು ನಮ್ಮನ್ನು ಜಗದುತ್ಪತ್ತಿಗೆ ಮುಂಚೆ ಕ್ರಿಸ್ತನಲ್ಲಿ ಆರಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು