Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 4:17 - ಕನ್ನಡ ಸತ್ಯವೇದವು J.V. (BSI)

17 ಆದದರಿಂದ ಅನ್ಯಜನರು ನಡೆದುಕೊಳ್ಳುವ ಪ್ರಕಾರ ನೀವು ಇನ್ನು ಮೇಲೆ ನಡೆದುಕೊಳ್ಳಬಾರದೆಂದು ಕರ್ತನಲ್ಲಿರುವವನಾಗಿ ನಿಮಗೆ ಖಂಡಿತವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದ್ದರಿಂದ ನಾನು ಕರ್ತನಲ್ಲಿ ಹೇಳುವುದೇನಂದರೆ ಅನ್ಯಜನರು ನಡೆದುಕೊಳ್ಳುವ ಹಾಗೆ ನೀವು ಇನ್ನು ಮುಂದೆ ನಡೆದುಕೊಳ್ಳಬಾರದು. ಅವರು ನಿಷ್ಪ್ರಯೋಜನವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಪ್ರಭುವಿನ ಹೆಸರಿನಲ್ಲಿ ನಾನು ನಿಮಗೆ ಒತ್ತಿ ಹೇಳುತ್ತೇನೆ: ಇನ್ನು ಮುಂದೆ ನೀವು ಅನ್ಯಜನರಂತೆ ಜೀವಿಸುವುದನ್ನು ತ್ಯಜಿಸಿರಿ. ಅವರ ಆಲೋಚನೆಗಳು ಹುರುಳಿಲ್ಲದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಪ್ರಭುವಿಗೋಸ್ಕರ ನಾನು ನಿಮಗೆ ಇದನ್ನು ಹೇಳುತ್ತೇನೆ ಮತ್ತು ಎಚ್ಚರಿಸುತ್ತೇನೆ. ಅವಿಶ್ವಾಸಿಗಳಂತೆ ಇನ್ನು ಮೇಲೆ ಜೀವಿಸದಿರಿ. ಅವರ ಆಲೋಚನೆಗಳು ನಿಷ್ಪ್ರಯೋಜಕವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದ್ದರಿಂದ, ಯೆಹೂದ್ಯರಲ್ಲದವರು ವ್ಯರ್ಥ ಆಲೋಚನೆಯುಳ್ಳವರಾಗಿ ಬಾಳುವ ರೀತಿಯಲ್ಲಿ ನೀವು ಇನ್ನು ಮೇಲೆ ಬಾಳದಂತೆ, ಕರ್ತನಲ್ಲಿ ನಾನು ನಿಮಗೆ ಸಾಕ್ಷಿಕೊಟ್ಟು ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಅಸೆ ರಾತಾನಾ ವಿಶ್ವಾಸಾತ್ ನತ್ತ್ಯಾ ಅನಿ ಕಾಯ್ಬಿ ಫಾಯ್ದ್ಯಾಕ್ ಪಡಿನಸಲ್ಲಿ ಯವ್ಜನಿಯಾ ಕರ್ತಲ್ಯಾ ವಿಶ್ವಾಸಾತ್ ನತ್ತ್ಯಾ ಲೊಕಾಂಚ್ಯಾ ಸಾರ್ಕೆ ಅನಿ ಫಿಡೆ ಜಿವನ್ ಕರಚೆ ನ್ಹಯ್ ಮನುನ್ ಮಿಯಾ ಧನಿಯಾಚ್ಯಾ ನಾವಾನ್ ಮಿಯಾ ಮಾಗ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 4:17
35 ತಿಳಿವುಗಳ ಹೋಲಿಕೆ  

ಯಾಕಂದರೆ ದೇವರ ವಿಷಯವಾಗಿ ಅವರಿಗೆ ತಿಳುವಳಿಕೆಯಿದ್ದರೂ ಅವರು ಆತನನ್ನು ದೇವರೆಂದು ಘನಪಡಿಸಲಿಲ್ಲ; ಆತನ ಉಪಕಾರಗಳನ್ನು ನೆನಸಿ ಆತನನ್ನು ಸ್ತುತಿಸಲಿಲ್ಲ. ಅವರು ವಿಚಾರ ಮಾಡಿಮಾಡಿ ಫಲ ಕಾಣಲಿಲ್ಲ; ವಿವೇಕವಿಲ್ಲದ ಅವರ ಮನಸ್ಸು ಕತ್ತಲಾಯಿತು.


ತಪ್ಪಾದ ಮಾರ್ಗದಲ್ಲಿ ನಡೆಯುವವರ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಬಂಡುಬಂಡಾದ ದುರಾಶೆಗಳನ್ನು ಹುಟ್ಟಿಸಿ ಅವರನ್ನು ಮರುಳುಗೊಳಿಸುತ್ತಾರೆ.


ಯಾರಾದರೂ ರಂಜನೆಯಾದ ಮಾತುಗಳಿಂದ ನಿಮ್ಮನ್ನು ಮೋಸಗೊಳಿಸಿಯಾರೆಂಬ ಭಯ ನನಗಿರುವದರಿಂದ ಇದನ್ನು ಹೇಳಿದ್ದೇನೆ.


ನಿಮ್ಮ ಹಿರಿಯರು ಕಲಿಸಿಕೊಟ್ಟ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ಬೆಳ್ಳಿಬಂಗಾರ ಮೊದಲಾದ ನಶಿಸಿಹೋಗುವ ವಸ್ತುಗಳಿಂದಲ್ಲ,


ಯೆಹೂದ್ಯರಿಗೂ ಗ್ರೀಕರಿಗೂ ದೇವರ ಕಡೆಗೆ ತಿರುಗಬೇಕೆಂತಲೂ ನಮ್ಮ ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡಬೇಕೆಂತಲೂ ಖಂಡಿತವಾಗಿ ಬೋಧಿಸುವವನಾಗಿದ್ದೆನು; ಇದೆಲ್ಲಾ ನಿಮಗೇ ತಿಳಿದಿದೆ.


ಸೀಲನೂ ತಿಮೊಥೆಯನೂ ಮಕೆದೋನ್ಯದಿಂದ ಬಂದಾಗ ಪೌಲನು ದೇವರ ವಾಕ್ಯವನ್ನು ಬೋಧಿಸುವದರಲ್ಲಿ ಅತ್ಯಾಸಕ್ತಿಯುಳ್ಳವನಾಗಿ ಯೇಸುವೇ ಬರಬೇಕಾದ ಕ್ರಿಸ್ತನೆಂದು ಯೆಹೂದ್ಯರಿಗೆ ಖಂಡಿತವಾಗಿ ಸಾಕ್ಷಿ ಹೇಳಿದನು.


ಜನರೇ, ನೀವು ಮಾಡುವದು ಇದೇನು? ನಾವೂ ಮನುಷ್ಯರು, ನಿಮ್ಮಂಥ ಸ್ವಭಾವವುಳ್ಳವರು. ನೀವು ಈ ವ್ಯರ್ಥವಾದ ಕೆಲಸಗಳನ್ನು ಬಿಟ್ಟುಬಿಟ್ಟು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಾಣಮಾಡಿದ ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಬೇಕೆಂದು ಸುವಾರ್ತೆಯನ್ನು ನಿಮಗೆ ಸಾರಿಹೇಳುವವರಾಗಿದ್ದೇವೆ.


ಯೆಹೂದ್ಯರಲ್ಲಿ ಉಳಿದವರೇ, ಯೆಹೋವನು ನಿಮ್ಮನ್ನು ಕುರಿತು - ಐಗುಪ್ತಕ್ಕೆ ಹೋಗಬೇಡಿರಿ ಎಂದು ಅಪ್ಪಣೆಮಾಡಿದ್ದಾನೆ; ನಾನು ಈ ದಿವಸ [ಆ ಮಾತನ್ನು] ನಿಮಗೆ ಪ್ರಕಟಿಸಿದ್ದೇನೆ, ಚೆನ್ನಾಗಿ ತಿಳಿದಿರಲಿ.


ದೇವರ ಮುಂದೆ ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವದಕ್ಕೆ ಬರುವ ಕ್ರಿಸ್ತ ಯೇಸುವಿನ ಮುಂದೆ ಆತನ ಪ್ರತ್ಯಕ್ಷತೆಯ ಮೇಲೆಯೂ ಆತನ ರಾಜ್ಯದ ಮೇಲೆಯೂ ಆಣೆಯಿಟ್ಟು ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ -


ಸರ್ವಸೃಷ್ಟಿಗೆ ಜೀವಾಧಾರಕನಾದ ದೇವರ ಮುಂದೆಯೂ ಪೊಂತ್ಯ ಪಿಲಾತನ ಕಾಲದಲ್ಲಿ ಶ್ರೇಷ್ಠಪ್ರತಿಜ್ಞೆಯನ್ನು ತಾನೇ ಸಾಕ್ಷಿಯಾಗಿದ್ದು ಸ್ಥಾಪಿಸಿದ ಕ್ರಿಸ್ತ ಯೇಸುವಿನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ -


ನೀನು ವಿಚಾರಿಸುವದಕ್ಕೆ ಮೊದಲೇ ತಪ್ಪು ಹೊರಿಸದೆಯೂ ಪಕ್ಷಪಾತದಿಂದ ಏನೂ ಮಾಡದೆಯೂ ನಾನು ಹೇಳಿರುವ ಮಾತುಗಳ ಪ್ರಕಾರವೇ ನಡೆಯಬೇಕೆಂದು ದೇವರ ಮುಂದೆಯೂ ಕ್ರಿಸ್ತ ಯೇಸುವಿನ ಮುಂದೆಯೂ ಆಯಲ್ಪಟ್ಟಿರುವ ದೇವದೂತರ ಮುಂದೆಯೂ ಖಂಡಿತವಾಗಿ ಹೇಳುತ್ತೇನೆ.


ಧರ್ಮಪತ್ನಿಯನ್ನು ಸಂಪಾದಿಸಿಕೊಳ್ಳಲು ತಿಳಿಯಬೇಕು. ಈ ವಿಷಯದಲ್ಲಿ ಯಾರೂ ತನ್ನ ಸಹೋದರನನ್ನು ವಂಚಿಸಿ ಕೇಡುಮಾಡಬಾರದು. ನಾವು ಮುಂಚೆ ತಿಳಿಸಿ ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಮುಯ್ಯಿಗೆ ಮುಯ್ಯಿ ತೀರಿಸುವವನಾಗಿದ್ದಾನೆ.


ಕೆಲವರು ಅತಿ ವಿನಯದಲ್ಲಿಯೂ ದೇವದೂತರ ಪೂಜೆಯಲ್ಲಿಯೂ ಆಸಕ್ತರಾಗಿದ್ದಾರೆ,


ಯೇಸುವಿನಲ್ಲಿರುವ ಸತ್ಯೋಪದೇಶವು ಯಾವದಂದರೆ - ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೆ ಪೂರ್ವಸ್ವಭಾವವನ್ನು ತೆಗೆದುಹಾಕಿಬಿಡಬೇಕು; ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟುಹೋಗುವಂಥದು.


ಆತನು ಸಮಸ್ತವನ್ನೂ ಕ್ರಿಸ್ತನ ಪಾದಗಳ ಕೆಳಗೆ ಹಾಕಿದನು. ಇದಲ್ಲದೆ ಆತನನ್ನು ಎಲ್ಲಾದರ ಮೇಲೆ ಇರಿಸಿ ಸಭೆಗೆ ಶಿರಸ್ಸಾಗಿ ನೇವಿುಸಿದನು.


ಸುನ್ನತಿಮಾಡಿಸಿಕೊಳ್ಳುವ ಪ್ರತಿಯೊಬ್ಬನಿಗೆ - ನೀನು ಧರ್ಮಶಾಸ್ತ್ರದಲ್ಲಿ ಹೇಳಿರುವದನ್ನೆಲ್ಲಾ ಮಾಡುವ ಹಂಗಿನಲ್ಲಿದ್ದೀ ಎಂದು ತಿರಿಗಿ ಪ್ರಮಾಣವಾಗಿ ಹೇಳುತ್ತೇನೆ.


ನನ್ನ ತಾತ್ಪರ್ಯವೇನಂದರೆ, ದೇವರು ಮೊದಲು ಸ್ಥಿರಪಡಿಸಿದ ಒಡಂಬಡಿಕೆಯನ್ನು ನಾನೂರಮೂವತ್ತು ವರುಷಗಳ ಮೇಲೆ ಬಂದ ಧರ್ಮಶಾಸ್ತ್ರವು ರದ್ದುಮಾಡಿ ಆ ವಾಗ್ದಾನವನ್ನು ವ್ಯರ್ಥಮಾಡುವದಿಲ್ಲ.


ಆದರೆ ಸ್ವಲ್ಪವಾಗಿ ಬಿತ್ತುವವನು ಪೈರನ್ನು ಸ್ವಲ್ಪವಾಗಿ ಕೊಯ್ಯುವನು; ಹೆಚ್ಚಾಗಿ ಬಿತ್ತುವವನು ಹೆಚ್ಚಾಗಿ ಕೊಯ್ಯುವನು ಎಂದು ತಿಳುಕೊಳ್ಳಿರಿ.


ಸಹೋದರರೇ, ನಾನು ಹೇಳುವದೇನಂದರೆ - ರಕ್ತ ಮಾಂಸವು ದೇವರ ರಾಜ್ಯಕ್ಕೆ ಬಾಧ್ಯವಾಗಲಾರದು; ಲಯವಾಗುವ ವಸ್ತು ನಿರ್ಲಯಪದವಿಗೆ ಬಾಧ್ಯವಾಗುವದಿಲ್ಲ.


ನಿಮ್ಮೊಳಗೆ ಪ್ರತಿಯೊಬ್ಬನು - ನಾನು ಪೌಲನವನು, ಇಲ್ಲವೆ - ನಾನು ಅಪೊಲ್ಲೋಸನವನು, ಅಥವಾ - ನಾನು ಕೇಫನವನು, ಇಲ್ಲವೆ - ನಾನು ಕ್ರಿಸ್ತನವನು ಎಂದು ಹೇಳಿಕೊಳ್ಳುತ್ತಾನಂತೆ.


ಬೇರೆ ಅನೇಕವಾದ ಮಾತುಗಳಿಂದ ಅವನು ಖಂಡಿತವಾಗಿ ಸಾಕ್ಷಿನುಡಿದು - ವಕ್ರಬುದ್ಧಿಯುಳ್ಳ ಈ ಸಂತತಿಯವರಿಂದ ತಪ್ಪಿಸಿಕೊಳ್ಳಿರಿ ಎಂದು ಅವರನ್ನು ಎಚ್ಚರಿಸಿದನು.


ಆ ಕಾಲದಲ್ಲಿ ಜನರು ಸಬ್ಬತ್‍ದಿವಸ ಯೆಹೂದ ದೇಶದಲ್ಲಿ ತೊಟ್ಟಿಯೊಳಗೆ ದ್ರಾಕ್ಷೆತುಳಿಯುವದನ್ನೂ ಕಣದ ಕಾಳನ್ನು ಕೂಡಿಸಿ ಆ ಕಾಳು ದ್ರಾಕ್ಷಾರಸ ದ್ರಾಕ್ಷೆ ಅಂಜೂರದ ಹಣ್ಣು ಈ ಮುಂತಾದವುಗಳನ್ನು ಕತ್ತೆಗಳ ಮೇಲೆ ಹೇರಿಕೊಂಡು ಆ ದಿನದಲ್ಲೇ ಯೆರೂಸಲೇವಿುಗೆ ತರುವದನ್ನೂ ಕಂಡು ಅವರು ಆ ಆಹಾರಪದಾರ್ಥಗಳನ್ನು ಮಾರುವದಕ್ಕೆ ಬಂದಾಗ ಅವರನ್ನು ಗದರಿಸಿದೆನು.


ನನಗೆ ಐದು ಮಂದಿ ಅಣ್ಣತಮ್ಮಂದಿರಿದ್ದಾರೆ; ಅವರು ಸಹ ಈ ಯಾತನೆಯ ಸ್ಥಳಕ್ಕೆ ಬಂದಾರು; ಬಾರದಂತೆ ಅವನು ತಾನು ಕಂಡದ್ದನ್ನು ಅವರಿಗೆ ಚೆನ್ನಾಗಿ ಹೇಳಲಿ ಅಂದನು.


ಪುರುಷನಿಗೆ ಸ್ತ್ರೀಸಂಗದಿಂದ ವೀರ್ಯಸ್ಖಲನವಾದರೆ ಅವರಿಬ್ಬರೂ ಸ್ನಾನಮಾಡಿಕೊಳ್ಳಬೇಕು; ಅವರು ಸಾಯಂಕಾಲದವರೆಗೆ ಅಶುದ್ಧರಾಗಿರುವರು.


ಆದದರಿಂದ ನೀವು ಈಗ ನಾನು ನಿಮಗೆ ಹೇಳುವ ಆತನ ಮಾತುಗಳಿಗೆ ಕಿವಿಗೊಟ್ಟು ಆತನ ಆಜ್ಞಾವಿಧಿಗಳನ್ನು ಅನುಸರಿಸಬೇಕು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು