ಎಫೆಸದವರಿಗೆ 4:22 - ಕನ್ನಡ ಸತ್ಯವೇದವು J.V. (BSI)22 ಯೇಸುವಿನಲ್ಲಿರುವ ಸತ್ಯೋಪದೇಶವು ಯಾವದಂದರೆ - ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೆ ಪೂರ್ವಸ್ವಭಾವವನ್ನು ತೆಗೆದುಹಾಕಿಬಿಡಬೇಕು; ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟುಹೋಗುವಂಥದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಯೇಸುವಿನಲ್ಲಿರುವ ಸತ್ಯೋಪದೇಶವು ಯಾವುದೆಂದರೆ ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೇ ಪೂರ್ವಸ್ವಭಾವವನ್ನು ತೆಗೆದುಹಾಕಿಬಿಡಬೇಕು. ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟುಹೋಗುವಂಥದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಆದ್ದರಿಂದ ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೆ ಹಳೆಯ ಸ್ವಭಾವವನ್ನು ಕಿತ್ತೊಗೆಯಿರಿ; ಅದು ಕಾಮಾಭಿಲಾಷೆಯಿಂದ ಕಲುಷಿತವಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ನೀವು ನಿಮ್ಮ ಹಿಂದಿನ ಕೆಟ್ಟ ನಡತೆಯನ್ನು ಬಿಟ್ಟುಬಿಡಬೇಕೆಂಬುದನ್ನು ಅಂದರೆ ನಿಮ್ಮ ಹಳೆಯ ಸ್ವಭಾವವನ್ನು ತೊರೆದುಬಿಡಬೇಕೆಂಬುದನ್ನು ಕಲಿತುಕೊಂಡಿರಿ. ಜನರು ತಾವು ಮಾಡ ಬಯಸುವ ದುಷ್ಕೃತ್ಯಗಳಿಂದ ವಂಚಿತರಾಗಿರುವುದರಿಂದ ಆ ಹಳೆಯ ಸ್ವಭಾವವು ದಿನದಿಂದ ದಿನಕ್ಕೆ ಮತ್ತಷ್ಟು ಕೆಟ್ಟು ಹೋಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ನಿಮಗೆ ಉಪದೇಶಿಸಿದಂತೆ, ನೀವು ನಿಮ್ಮ ಹಿಂದಿನ ನಡತೆಯ ಪ್ರಕಾರ ಮೋಸಕರವಾದ ಆಶೆಗಳ ಅನುಸಾರವಾಗಿರುವ ಹಳೆಯ ಸ್ವಭಾವವನ್ನು ತೆಗೆದುಹಾಕಬೇಕು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ತಸೆ ಹೊವ್ನ್, ತುಮ್ಕಾ ಶಿಕ್ವಲ್ಲೆ ಕಾಯ್ ಮಟ್ಲ್ಯಾರ್, ತುಮಿ ತುಮ್ಚೆ ಅದ್ಲೊ ಬುರ್ಶೊ ಗುನ್ ಸೊಡುನ್ ದಿವ್ಚೆ ಮನುನ್ ಮಟ್ಲ್ಯಾರ್ ತುಮ್ಚೊ ಜನ್ನೊ ಸ್ವಬಾವ್ ಕಾಡುನ್ ಟಾಕುಚೆ ಮನ್ತಲೆ ಶಿಕುನ್ ಘೆಟ್ಲ್ಯಾಸಿ ಲೊಕಾ ಅಪ್ನಿ ಕರ್ತಲ್ಯಾ ಬುರ್ಶ್ಯಾ ಕಾಮಾಂಚ್ಯಾ ವೈನಾ ಪಸೆತ್ ಪಡಲ್ಯಾ ಸಾಟ್ನಿ ತೊ ಅದ್ಲೊ ಸ್ವಬಾವ್ ದಿಸ್ ಗೆಲೊಸೊ ಹಾಳ್ ಹೊಯ್ತ್ ಜಾತಾ. ಅಧ್ಯಾಯವನ್ನು ನೋಡಿ |