Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 4:24 - ಕನ್ನಡ ಸತ್ಯವೇದವು J.V. (BSI)

24 ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ಸತ್ಯಾನುಗುಣವಾದ ನೀತಿಯುಳ್ಳದ್ದಾಗಿಯೂ ದೇವಭಯವುಳ್ಳದ್ದಾಗಿಯೂ ನಿರ್ಮಿಸಲ್ಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ಸತ್ಯಕ್ಕನುಗುಣವಾಗಿ ನೀತಿಯುಳ್ಳದ್ದಾಗಿಯೂ, ಪರಿಶುದ್ಧತೆಯುಳ್ಳದ್ದಾಗಿಯೂ ನಿರ್ಮಿಸಲ್ಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ. ಇದು ದೇವರ ಅನುರೂಪದಲ್ಲಿ ನಿರ್ಮಿತವಾದ ಸ್ವಭಾವ; ದೇವರೊಂದಿಗೆ ಸತ್ಸಂಬಂಧವುಳ್ಳ ಹಾಗೂ ನೈಜವಾದ ಪಾವನ ಸ್ವಭಾವ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ಸತ್ಯವಾದ ನೀತಿಯುಳ್ಳದಾಗಿಯೂ ಪರಿಶುದ್ಧವಾಗಿಯೂ ನಿರ್ಮಿಸಲ್ಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಸತ್ಯವಾದ ನೀತಿಯಲ್ಲಿಯೂ ಪರಿಶುದ್ಧತೆಯಲ್ಲಿಯೂ ದೇವರ ಹೋಲಿಕೆಯ ಪ್ರಕಾರವಾಗಿರಲು ಸೃಷ್ಟಿಸಲಾದ ಹೊಸ ಸ್ವಭಾವವನ್ನು ಧರಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಅನಿ ತುಮ್ಕಾಚ್ ತುಮಿ ನ್ಹವ್ಯಾ ಸ್ವಭಾವಾನ್ ನೆಸುನ್ ಘೆವಾ, ತೊ ಸ್ವಬಾವ್ ದೆವಾಚ್ಯಾ ರುಪಾಕ್ ಖರಿ ನಿತ್ ಹೊವ್ನ್ ಪವಿತ್ರ್ ಹೊವ್ನ್ ತಯಾರ್ ಕರಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 4:24
30 ತಿಳಿವುಗಳ ಹೋಲಿಕೆ  

ಹೀಗಿರಲಾಗಿ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನಸೃಷ್ಟಿಯಾದನು. ಇಗೋ, ಪೂರ್ವಸ್ಥಿತಿ ಹೋಗಿ ಎಲ್ಲಾ ನೂತನವಾಯಿತು.


ನಾವು ಆತನ ನಿರ್ಮಾಣ; ಸತ್ಕಾರ್ಯಗಳನ್ನು ಮಾಡುವದಕ್ಕಾಗಿಯೇ ಕ್ರಿಸ್ತ ಯೇಸುವಿನಲ್ಲಿ ಸೃಷ್ಟಿಸಲ್ಪಟ್ಟೆವು. ನಾವು ಸತ್ಕಾರ್ಯಗಳನ್ನು ನಡಿಸುವವರಾಗಿ ಬದುಕಬೇಕೆಂದು ದೇವರು ನಮ್ಮನ್ನು ಮೊದಲೇ ನೇವಿುಸಿದನು.


ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.


ಸೈತಾನನ ತಂತ್ರೋಪಾಯಗಳನ್ನು ನೀವು ಎದುರಿಸಿ ನಿಲ್ಲುವದಕ್ಕೆ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.


ಹೀಗಿರಲಾಗಿ ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗಿ ಆತನೊಂದಿಗೆ ಹೂಣಲ್ಪಟ್ಟೆವು. ಆದದರಿಂದ ಕ್ರಿಸ್ತನು ಸತ್ತು ತಂದೆಯ ಮಹಿಮೆಯಿಂದ ಜೀವಿತನಾಗಿ ಎಬ್ಬಿಸಲ್ಪಟ್ಟಂತೆಯೇ ನಾವು ಕೂಡ ಜೀವದಿಂದೆದ್ದು ಹೊಸಬರಾಗಿ ನಡಕೊಳ್ಳಬೇಕು.


ನಾವೆಲ್ಲರೂ ಮುಸುಕುತೆಗೆದಿರುವ ಮುಖದಿಂದ ಕರ್ತನ ಪ್ರಭಾವವನ್ನು ದರ್ಪಣದಲ್ಲಿ ಕಾಣಿಸುತ್ತದೋ ಎಂಬಂತೆ ದೃಷ್ಟಿಸುವವರಾಗಿದ್ದು ಪ್ರಭಾವದಿಂದ ಅಧಿಕಪ್ರಭಾವಕ್ಕೆ ಹೋಗುತ್ತಾ ಆ ಪ್ರಭಾವದ ಸಾರೂಪ್ಯವುಳ್ಳವರೇ ಆಗುತ್ತೇವೆ; ಇದು ದೇವರಾತ್ಮನಾಗಿರುವ ಕರ್ತನ ಕೆಲಸಕ್ಕನುಸಾರವಾದದ್ದೇ.


ಆದದರಿಂದ ನಾವು ಧೈರ್ಯಗೆಡುವದಿಲ್ಲ. ನಮ್ಮ ದೇಹವು ನಾಶವಾಗುತ್ತಾ ಇದ್ದರೂ ನಮ್ಮ ಆಂತರ್ಯವು ದಿನೇದಿನೇ ಹೊಸದಾಗುತ್ತಾ ಬರುತ್ತದೆ.


ಇರುಳು ಬಹಳ ಮಟ್ಟಿಗೆ ಕಳೆಯಿತು; ಹಗಲು ಸಮೀಪವಾಯಿತು. ಕತ್ತಲೆಗೆ ಅನುಗುಣವಾದ ಕೃತ್ಯಗಳನ್ನು ಬಿಟ್ಟು ಬೆಳಕಿಗೆ ಅನುಗುಣವಾದ ಆಯುಧಗಳನ್ನು ಧರಿಸಿಕೊಳ್ಳೋಣ.


ಆತನು ನಮ್ಮನ್ನು ಸಕಲ ಅಧರ್ಮದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ಎಲ್ಲಾ ತರದ ನಿಂದೆಯನ್ನೂ ವಿಸರ್ಜಿಸಿ ಹಸುಮಕ್ಕಳಂತೆ ಪಾರಮಾರ್ಥಿಕವಾದ ಶುದ್ಧ ಹಾಲನ್ನು ಬಯಸಿರಿ; ಅದರಿಂದ ಬೆಳೆಯುತ್ತಾ ರಕ್ಷಣೆಯನ್ನು ಹೊಂದುವಿರಿ; ಕರ್ತನು ದಯಾಳುವೆಂದು ನೀವು ಅನುಭವದಿಂದ ತಿಳಿದುಕೊಂಡಿದ್ದೀರಲ್ಲವೋ?


ಯಾಕಂದರೆ ದೇವರು ತನ್ನ ಮಗನಿಗೆ ಅನೇಕ ಮಂದಿ ಸಹೋದರರಿದ್ದು ಅವರಲ್ಲಿ ಆತನೇ ಹಿರಿಯನಾಗಿರಬೇಕೆಂದು ಉದ್ದೇಶಿಸಿ ತಾನು ಯಾರನ್ನು ತನ್ನವರೆಂದು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವದಕ್ಕೆ ಮೊದಲೇ ನೇವಿುಸಿದನು.


ಇವರನ್ನು ಸತ್ಯದಲ್ಲಿ ಸೇರಿಸಿ ಪ್ರತಿಷ್ಠೆ ಪಡಿಸು; ನಿನ್ನ ವಾಕ್ಯವೇ ಸತ್ಯವು.


ಸುನ್ನತಿಯಾಗುವದರಲ್ಲಿ ಏನೂ ಇಲ್ಲ, ಸುನ್ನತಿಯಾಗದೆ ಇರುವದರಲ್ಲಿಯೂ ಏನೂ ಇಲ್ಲ; ಹೊಸ ಸೃಷ್ಟಿಯೇ ಬೇಕು.


ಹೇಗಂದರೆ ಕ್ರಿಸ್ತನಲ್ಲಿ ಸೇರುವದಕ್ಕೆ ದೀಕ್ಷಾಸ್ನಾನಮಾಡಿಸಿಕೊಂಡಿರುವ ನೀವೆಲ್ಲರು ಕ್ರಿಸ್ತನನ್ನು ಧರಿಸಿಕೊಂಡಿರಿ.


ಚೀಯೋನೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ನಿನ್ನ ಪ್ರತಾಪವನ್ನು ಧರಿಸಿಕೋ! ಯೆರೂಸಲೇಮೇ, ಪರಿಶುದ್ಧ ಪಟ್ಟಣವೇ, ನಿನ್ನ ಚಂದದ ಉಡುಪನ್ನು ಹಾಕಿಕೋ! ಇಂದಿನಿಂದ ಅಶುದ್ಧರೂ ಸುನ್ನತಿಯಿಲ್ಲದವರೂ ನಿನ್ನೊಳಗೆ ಪ್ರವೇಶಮಾಡರು.


ಲಯವಾಗುವ ಈ ದೇಹವು ನಿರ್ಲಯತ್ವವನ್ನು ಧರಿಸಿಕೊಳ್ಳುವದೂ ಮರಣಾಧೀನವಾಗಿರುವ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವದೂ ಅವಶ್ಯ.


ನಾನು ಧರ್ಮವನ್ನು ಧರಿಸಿಕೊಂಡೆನು, ಧರ್ಮವು ನನ್ನನ್ನು ಧರಿಸಿತು, ನನ್ನ ನ್ಯಾಯವೇ ನನಗೆ ನಿಲುವಂಗಿಯೂ ಮುಂಡಾಸವೂ ಆಗಿತ್ತು.


ಆತನು ಸಮಾಧಾನಮಾಡುವವನಾಗಿ ಉಭಯರನ್ನೂ ತನ್ನಲ್ಲಿ ಒಬ್ಬ ನೂತನಪುರುಷನನ್ನಾಗಿ ನಿರ್ಮಿಸಿದ್ದಾನೆ;


ಧರ್ಮವನ್ನು ವಜ್ರ ಕವಚವನ್ನಾಗಿ ತೊಟ್ಟು ರಕ್ಷಣೆಯೆಂಬ ಶಿರಸ್ತ್ರಾಣವನ್ನು ಧರಿಸಿಕೊಂಡನು; ರೋಷವೆಂಬ ವಸ್ತ್ರವನ್ನು ಉಡುಪುಮಾಡಿಕೊಂಡು ಆಗ್ರಹವನ್ನು ನಿಲುವಂಗಿಯನ್ನಾಗಿ ಹಾಕಿಕೊಂಡನು.


ಎಲ್ಲರ ಸಂಗಡ ಸಮಾಧಾನದಿಂದಿರುವದಕ್ಕೂ ಪರಿಶುದ್ಧತೆಯನ್ನು ಹೊಂದುವದಕ್ಕೂ ಪ್ರಯತ್ನಮಾಡಿರಿ;


ಮಗನ ವಿಷಯದಲ್ಲಿಯಾದರೋ - ದೇವರೇ, ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವದು; ನ್ಯಾಯದಂಡವೇ ನಿನ್ನ ರಾಜದಂಡವಾಗಿದೆ;


ಆದಾಮನ ವಂಶದವರ ಚರಿತ್ರೆಯು - ದೇವರು ಸೃಷ್ಟಿಕಾಲದಲ್ಲಿ ಮನುಷ್ಯನನ್ನು ತನ್ನ ಹೋಲಿಕೆಗೆ ಸರಿಯಾಗಿ ಉಂಟುಮಾಡಿದನು.


ಈಗಲಾದರೋ ನಮ್ಮನ್ನು ವಶಮಾಡಿಕೊಂಡಿದ್ದ ಧರ್ಮಶಾಸ್ತ್ರದ ಪಾಲಿಗೆ ನಾವು ಸತ್ತಕಾರಣ ಆ ಧರ್ಮಶಾಸ್ತ್ರದಿಂದ ವಿಮುಕ್ತರಾಗಿದ್ದೇವೆ. ಹೀಗಿರಲಾಗಿ ಶಾಸ್ತ್ರದ ಹೊರಗಣ ಅರ್ಥಕ್ಕೆ ಅನುಕೂಲವಾದ ಹಳೇ ರೀತಿಯಲ್ಲಿ ನಾವು ದೇವರನ್ನು ಸೇವಿಸುವವರಲ್ಲ. ಪವಿತ್ರಾತ್ಮಪ್ರೇರಿತವಾದ ಹೊಸ ರೀತಿಯಲ್ಲಿ ಆತನನ್ನು ಸೇವಿಸುವವರಾಗಿದ್ದೇವೆ.


ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತಕ್ಕನುಸಾರವಾದದ್ದು ಅಂದರೆ ಉತ್ತಮವಾದದ್ದೂ ಮೆಚ್ಚಿಕೆಯಾದದ್ದೂ ದೋಷವಿಲ್ಲದ್ದೂ ಯಾವ ಯಾವದೆಂದು ವಿವೇಚಿಸಿ ತಿಳುಕೊಳ್ಳುವಿರಿ.


ನೀವು ಲೋಕದಲ್ಲಿ ದುರಾಶೆಯಿಂದುಂಟಾದ ಕೆಟ್ಟತನಕ್ಕೆ ತಪ್ಪಿಸಿಕೊಂಡು ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂಬ ಉದ್ದೇಶದಿಂದ ದೇವರು ತನ್ನ ಪ್ರಭಾವ ಗುಣಾತಿಶಯಗಳಿಂದ ಅಮೂಲ್ಯವಾಗಿಯೂ ಉತ್ಕೃಷ್ಟವಾಗಿಯೂ ಇರುವ ವಾಗ್ದಾನಗಳನ್ನು ನಮಗೆ ದಯಪಾಲಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು