Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 4:26 - ಕನ್ನಡ ಸತ್ಯವೇದವು J.V. (BSI)

26 ಕೋಪಮಾಡಬೇಕಾದರೂ ಪಾಪಮಾಡಬೇಡಿರಿ; ಸೂರ್ಯನು ಮುಳುಗುವದಕ್ಕಿಂತ ಮುಂಚೆ ನಿಮ್ಮ ಸಿಟ್ಟು ತೀರಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 “ಕೋಪಗೊಳ್ಳಬೇಕಾಗಿ ಬಂದರೂ ಪಾಪಮಾಡಬೇಡಿರಿ,” ಸೂರ್ಯನು ಮುಳುಗುವುದಕ್ಕಿಂತ ಮೊದಲೇ ನಿಮ್ಮ ಸಿಟ್ಟು ತೀರಿಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಕೋಪಮಾಡಬೇಕಾಗಿ ಬಂದರೂ ಪಾಪಮಾಡಬೇಡಿರಿ; ಸೂರ್ಯನು ಮುಳುಗುವ ಮುನ್ನ ನಿಮ್ಮ ಕೋಪವು ಇಳಿಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಕೋಪಗೊಂಡರೂ ಪಾಪ ಮಾಡಬೇಡಿ ಮತ್ತು ದಿನವೆಲ್ಲಾ ಕೋಪದಿಂದಿರಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 “ಕೋಪ ಮಾಡಬೇಕಾಗಿ ಬಂದರೂ ಪಾಪಮಾಡಬೇಡಿರಿ,” ಸೂರ್ಯನು ಮುಳುಗುವುದಕ್ಕಿಂತ ಮುಂಚೆ ನಿಮ್ಮ ಕೋಪವು ಇಳಿಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ರಾಗ್ ಕಲ್ಯಾರ್ಬಿ ಪಾಪ್ ಕರುನಕಾಸಿ, ಅನಿ ಪುರಾ ದಿಸ್ ರಾಗಾನುಚ್ ರಾವ್ನಕಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 4:26
22 ತಿಳಿವುಗಳ ಹೋಲಿಕೆ  

ನನ್ನ ಪ್ರಿಯ ಸಹೋದರರೇ, ನೀವು ಬಲ್ಲವರು. ಆದರೆ ಪ್ರತಿಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತಾಡುವದರಲ್ಲಿ ನಿಧಾನವಾಗಿಯೂ ಇರಲಿ. ಕೋಪಿಸುವದರಲ್ಲಿಯೂ ನಿಧಾನವಾಗಿರಲಿ;


ಭಯಪಡಿರಿ, ಪಾಪಮಾಡಬೇಡಿರಿ, ಮೌನವಾಗಿರಿ; ಹಾಸಿಗೆಯ ಮೇಲೆ ಇರುವಾಗ ಹೃದಯದಲ್ಲೇ ಆಲೋಚಿಸಿಕೊಳ್ಳಿರಿ. ಸೆಲಾ.


ಕೋಪವನ್ನು ಅಣಗಿಸಿಕೋ; ರೋಷವನ್ನು ಬಿಡು. ಉರಿಗೊಳ್ಳಬೇಡ; ಕೆಡುಕಿಗೆ ಕಾರಣವಾದೀತು.


ನಿನ್ನ ಮನಸ್ಸು ಕೋಪಕ್ಕೆ ಆತುರಪಡದಿರಲಿ; ಕೋಪಕ್ಕೆ ಮೂಢರ ಎದೆಯೇ ನೆಲೆ.


ದೀರ್ಘಶಾಂತನು ಕೇವಲ ಬುದ್ಧಿವಂತನು; ಮುಂಗೋಪಿಯು ಮೂರ್ಖತನವನ್ನು [ಧ್ವಜವಾಗಿ] ಎತ್ತುವನು.


ಮನುಷ್ಯನ ವಿವೇಕವು ಅವನ ಸಿಟ್ಟಿಗೆ ಅಡ್ಡಿ; [ಪರರ] ದೋಷವನ್ನು ಲಕ್ಷಿಸದಿರುವದು ಅವನಿಗೆ ಭೂಷಣ.


ಆದರೆ ನಾನು ನಿಮಗೆ ಹೇಳುವದೇನಂದರೆ - ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿ ಮನುಷ್ಯನು ನ್ಯಾಯವಿಚಾರಣೆಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ - ಛೀ ನೀಚಾ ಅನ್ನುವವನು ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು; ಮೂರ್ಖಾ ಅನ್ನುವವನು ಅಗ್ನಿನರಕಕ್ಕೆ ಗುರಿಯಾಗುವನು.


ಆಗ ಆತನು ಅವರ ಮನಸ್ಸು ಕಲ್ಲಾಗಿರುವದನ್ನು ಕಂಡು ದುಃಖಪಟ್ಟು ಕೋಪದಿಂದ ಸುತ್ತಲೂ ಅವರನ್ನು ನೋಡಿ ಆ ಮನುಷ್ಯನಿಗೆ - ನಿನ್ನ ಕೈಚಾಚು ಎಂದು ಹೇಳಿದನು. ಅವನು ಚಾಚಿದನು; ಕೈ ವಾಸಿಯಾಯಿತು.


ಆರೋನನು ದೇಹವನ್ನು ಬಿಟ್ಟು ತನ್ನ ಪಿತೃಗಳ ಬಳಿಗೆ ಸೇರಬೇಕು. ನೀವಿಬ್ಬರೂ ಮೆರೀಬಾ ಪ್ರವಾಹದ ಹತ್ತಿರ ನನ್ನ ಮಾತಿಗೆ ವಿರೋಧವಾಗಿ ತಿರುಗಿಬಿದ್ದದರಿಂದ ನಾನು ಇಸ್ರಾಯೇಲ್ಯರಿಗೆ ವಾಗ್ದಾನಮಾಡಿದ ದೇಶದೊಳಗೆ ಆರೋನನು ಸೇರಕೂಡದು.


ಆದರೆ ಯೇಸು ಅದನ್ನು ಕಂಡು ಕೋಪಗೊಂಡು ಅವರಿಗೆ - ಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡಬೇಡಿರಿ; ದೇವರ ರಾಜ್ಯವು ಇಂಥವರದೇ.


ಬಡಗಣಗಾಳಿ ಮಳೆ ಬರಮಾಡುವದು; ಚಾಡಿಯ ನಾಲಿಗೆ ಕೋಪದ ಮುಖ ಮಾಡುವದು.


ಆಗ ನಿನ್ನ ಪರಿವಾರದವರಾದ ಇವರೆಲ್ಲರೂ ನನ್ನ ಬಳಿಗೆ ಬಂದು ಅಡ್ಡಬಿದ್ದು - ನೀನೂ ನಿನ್ನ ಅಧೀನದಲ್ಲಿರುವ ಜನರೆಲ್ಲರೂ ನಮ್ಮನ್ನು ಬಿಟ್ಟುಹೋಗಬೇಕೆಂದು ಬೇಡುವರು; ಆಮೇಲೆ ನಾನು ಹೊರಟುಹೋಗುವೆನು ಎಂದು ಹೇಳಿದನು. ಮೋಶೆ ಈ ಮಾತನ್ನು ಹೇಳಿ ಕಿಡಿಕಿಡಿಯಾಗಿ ಫರೋಹನನ್ನು ಬಿಟ್ಟು ಹೊರಟುಹೋದನು.


ದಿನದ ಕೂಲಿಯನ್ನು ಆ ದಿನದಲ್ಲೇ ಹೊತ್ತು ಮುಣುಗುವದಕ್ಕೆ ಮುಂಚಿತವಾಗಿ ಅವನಿಗೆ ಕೊಡಬೇಕು. ಅವನಿಗೆ ಬೇರೆ ಗತಿಯಿಲ್ಲದ್ದರಿಂದ ಅದನ್ನೇ ಎದುರು ನೋಡುತ್ತಾನಲ್ಲಾ. ನೀವು ಕೊಡದಿದ್ದರೆ ಅವನು ಯೆಹೋವನಿಗೆ ಮೊರೆಯಿಟ್ಟಾನು; ಆಗ ನೀವು ದೋಷಿಗಳಾಗಿ ಕಂಡುಬಂದೀರಿ.


ಮನುಷ್ಯನ ಕೋಪವು ದೇವರಿಗೆ ಮೆಚ್ಚಿಕೆಯಾಗಿರುವ ನೀತಿಗೆ ಅನುಕೂಲವಾಗುವದಿಲ್ಲ.


ಅವನು ಬಲು ಸಿಟ್ಟುಗೊಂಡು ಪಂಕ್ತಿಯಿಂದೆದ್ದು ಹೋದನು; ತನ್ನ ತಂದೆಯು ದಾವೀದನನ್ನು ಅಪಮಾನಪಡಿಸಿದದರಿಂದ ಯೋನಾತಾನನಿಗೆ ಬಹಳ ದುಃಖವುಂಟಾಗಿ ಅವನು ಆ ದಿವಸ ಊಟ ಮಾಡಲೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು