Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 4:30 - ಕನ್ನಡ ಸತ್ಯವೇದವು J.V. (BSI)

30 ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ; ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ. ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ದೇವರ ಪವಿತ್ರಾತ್ಮರನ್ನು ನೋಯಿಸದಿರಿ; ವಿಮೋಚನೆಯ ದಿನದಂದು ನೀವು ದೇವರಿಗೆ ಸೇರಿದವರು ಎಂಬುದನ್ನು ತೋರಿಸಲು ನಿಮ್ಮ ಮೇಲೆ ಒತ್ತಲಾಗಿರುವ ಮುದ್ರೆಯು ಅವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಪವಿತ್ರಾತ್ಮನನ್ನು ದುಃಖಪಡಿಸಬೇಡಿ. ನೀವು ದೇವರಿಗೆ ಸೇರಿದವರೆಂಬುದಕ್ಕೆ ಆತನೇ ದೇವರ ಪ್ರಮಾಣವಾಗಿದ್ದಾನೆ. ಸೂಕ್ತ ಸಮಯದಲ್ಲಿ ನಿಮ್ಮನ್ನು ಬಿಡುಗಡೆ ಮಾಡುತ್ತೇನೆ ಎಂಬುದನ್ನು ತೋರಿಸುವುದಕ್ಕಾಗಿಯೇ ದೇವರು ನಿಮಗೆ ಆತನನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ದೇವರ ಪವಿತ್ರಾತ್ಮರನ್ನು ದುಃಖ ಪಡಿಸಬೇಡಿರಿ. ಆ ಆತ್ಮನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ದೆವಾಚ್ಯಾ ಪವಿತ್ರ್ ಆತ್ಮ್ಯಾಕ್ ಮನ್ ದುಖ್ವು ನಕಾಸಿ, ತುಮಿ ದೆವಾಚಿ ಲೊಕಾ ಮನ್ತಲ್ಯಾಕ್ ತೊಚ್ ದೆವಾಚಿ ಗೊಸ್ಟ್ ಹೊವ್ನ್ ಹಾಯ್, ಸಮಾ ಎಳಾರ್ ಸುಟ್ಕಾ ಕರ್ತಾ ಮನ್ತಲೆ ದಾಕ್ವು ಸಾಟ್ನಿ ದೆವಾನ್ ತುಮ್ಕಾ ತೆಕಾ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 4:30
23 ತಿಳಿವುಗಳ ಹೋಲಿಕೆ  

ಪವಿತ್ರಾತ್ಮನನ್ನು ನಂದಿಸಬೇಡಿರಿ; ಪ್ರವಾದನೆಗಳನ್ನು ಹೀನೈಸಬೇಡಿರಿ;


ಅವರಾದರೋ ಎದುರುಬಿದ್ದು ಆತನ ಪವಿತ್ರಾತ್ಮನನ್ನು ದುಃಖಪಡಿಸಿದರು; ಆದದರಿಂದ ಆತನು ಮಾರ್ಪಟ್ಟು ಅವರಿಗೆ ಶತ್ರುವಾಗಿ ತಾನೇ ಅವರೊಡನೆ ಹೋರಾಡಿದನು.


ಯೆಹೋವನು ನೋಡಿ ತಾನು ಭೂವಿುಯ ಮೇಲೆ ಮನುಷ್ಯರನ್ನು ಉಂಟುಮಾಡಿದ್ದಕ್ಕೆ ಪಶ್ಚಾತ್ತಾಪಪಟ್ಟು ತನ್ನ ಹೃದಯದಲ್ಲಿ ನೊಂದುಕೊಂಡನು.


ಚಂಡಿಗಳೇ, ಮನಶ್ಶುದ್ಧಿಯೂ ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.


ಇದು ಮಾತ್ರವಲ್ಲದೆ ಪ್ರಥಮ ಫಲವಾಗಿರುವ ಪವಿತ್ರಾತ್ಮವರವನ್ನು ಹೊಂದಿದ ನಾವಾದರೂ ದೇವಪುತ್ರರ ಪದವಿಯನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೋಡುತ್ತಾ ನಮ್ಮೊಳಗೆ ನರಳುತ್ತೇವೆ.


ಯೇಸುವನ್ನು ಸತ್ತವರೊಳಗಿಂದ ಜೀವಿತನಾಗಿ ಎಬ್ಬಿಸಿದಾತನ ಆತ್ಮನು ನಿಮ್ಮಲ್ಲಿ ವಾಸವಾಗಿದ್ದರೆ ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನು ನಿಮ್ಮಲ್ಲಿ ವಾಸವಾಗಿರುವ ತನ್ನ ಆತ್ಮನ ಮೂಲಕ ನಿಮ್ಮ ಮರ್ತ್ಯದೇಹಗಳನ್ನು ಸಹ ಬದುಕಿಸುವನು.


ಆಗ ಆತನು ಅವರ ಮನಸ್ಸು ಕಲ್ಲಾಗಿರುವದನ್ನು ಕಂಡು ದುಃಖಪಟ್ಟು ಕೋಪದಿಂದ ಸುತ್ತಲೂ ಅವರನ್ನು ನೋಡಿ ಆ ಮನುಷ್ಯನಿಗೆ - ನಿನ್ನ ಕೈಚಾಚು ಎಂದು ಹೇಳಿದನು. ಅವನು ಚಾಚಿದನು; ಕೈ ವಾಸಿಯಾಯಿತು.


ನೀನು ನನಗೋಸ್ಕರ ಹಣಕೊಟ್ಟು ಬಜೆಯನ್ನು ತರಲಿಲ್ಲ, ಯಜ್ಞಪಶುಗಳ ವಪೆಯಿಂದ ನನ್ನನ್ನು ತೃಪ್ತಿಪಡಿಸಲಿಲ್ಲ; ಆದರೆ ನಿನ್ನ ಪಾಪಗಳಿಂದ ನನ್ನನ್ನು ನೀನು ತೊಂದರೆಪಡಿಸಿದ್ದೀ, ನಿನ್ನ ದೋಷಗಳಿಂದ ನನ್ನನ್ನು ಬೇಸರಗೊಳಿಸಿದ್ದೀ.


ಅರಣ್ಯದಲ್ಲಿ ಅವರು ಎಷ್ಟೋ ಸಾರಿ ಅವಿಧೇಯರಾಗಿ ಅಲ್ಲಿ ಆತನನ್ನು ನೋಯಿಸಿದರು.


ಆಗ ಯೆಹೋವನು - ನನ್ನ ಆತ್ಮವು ಮನುಷ್ಯರಲ್ಲಿ ಶಾಶ್ವತವಾಗಿರುವದಿಲ್ಲ; ಅವರು ಭ್ರಷ್ಟರಾದದರಿಂದ ಮರ್ತ್ಯರೇ. ಅವರ ಆಯುಷ್ಯವು ನೂರ ಇಪ್ಪತ್ತು ವರುಷವಾಗಿರಲಿ ಅಂದನು.


ಅದಕ್ಕೆ [ಯೆಶಾಯನು] ಹೀಗೆ ಹೇಳಿದನು - ದಾವೀದನ ಮನೆತನದವರೇ, ಕೇಳಿರಿ! ಮನುಷ್ಯರನ್ನು ಬೇಸರಗೊಳಿಸುವದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವರನ್ನೂ ಬೇಸರಗೊಳಿಸುವಿರಾ?


ನೀನು ನಿನ್ನ ಯೌವನಕಾಲವನ್ನು ಜ್ಞಾಪಕಮಾಡಿಕೊಳ್ಳದೆ ಈ ದುಷ್ಕೃತ್ಯಗಳನ್ನೆಲ್ಲಾ ನಡಿಸಿ ನನ್ನನ್ನು ರೇಗಿಸಿದ್ದರಿಂದ ಇಗೋ, ನಾನು ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು; ನೀನು ಲೆಕ್ಕವಿಲ್ಲದ ದುರಾಚಾರಗಳನ್ನು ನಡಿಸಿದ್ದಲ್ಲದೆ ಈ ಅಸಹ್ಯ ಕಾರ್ಯವನ್ನೂ ಮಾಡಿದ್ದೀಯಲ್ಲಾ. ಇದು ಕರ್ತನಾದ ಯೆಹೋವನ ನುಡಿ.


ನಾನು ನಾಲ್ವತ್ತು ವರುಷ ಆ ಸಂತತಿಯವರ ವಿಷಯದಲ್ಲಿ ಬೇಸರಗೊಂಡೆನು; ಈ ಜನರು ಹೃದಯದಲ್ಲಿ ತಪ್ಪಿಹೋಗುವವರು, ನನ್ನ ಮಾರ್ಗವನ್ನು ತಿಳಿಯದವರು, ಎಂದು ಹೇಳಿದೆನು.


ಆದದರಿಂದ ನಾನು ಆ ಸಂತತಿಯವರ ಮೇಲೆ ಬಹಳವಾಗಿ ಕೋಪಿಸಿಕೊಂಡು - ಅವರು ಯಾವಾಗಲೂ ಹೃದಯದಲ್ಲಿ ತಪ್ಪಿಹೋಗುವವರು ಎಂದು ಹೇಳಿದೆನು. ಆದರೆ ಅವರು ನನ್ನ ಮಾರ್ಗವನ್ನು ತಿಳುಕೊಳ್ಳಲಿಲ್ಲ.


ನೀವು ಕ್ರಿಸ್ತ ಯೇಸುವಿನಲ್ಲಿರುವದು ಆತನಿಂದಲೇ. ಕ್ರಿಸ್ತ ಯೇಸು ನಮಗೆ ದೇವರ ಕಡೆಯಿಂದ ಜ್ಞಾನವೂ ನೀತಿ ಶುದ್ಧೀಕರಣ ವಿಮೋಚನೆಗಳಿಗೆ ಕಾರಣನೂ ಆದನು.


ಮತ್ತು ನಾಲ್ವತ್ತು ವರುಷ ಆತನು ಯಾರ ಮೇಲೆ ಬಹಳವಾಗಿ ಕೋಪಿಸಿಕೊಂಡನು? ಪಾಪ ಮಾಡಿದವರ ಮೇಲೆ ಅಲ್ಲವೇ.


ಲಯವಾಗುವ ಈ ದೇಹವು ನಿರ್ಲಯತ್ವವನ್ನು ಧರಿಸಿಕೊಂಡಾಗ ಮರಣಾಧೀನವಾಗಿರುವ ಈ ದೇಹವು ಅಮರತ್ವವನ್ನು ಧರಿಸಿಕೊಂಡಾಗ ಬರೆದಿರುವ ಮಾತು ನೆರವೇರುವದು. ಆ ಮಾತು ಏನಂದರೆ - ಮರಣವು ನುಂಗಿಯೇ ಹೋಯಿತು, ಜಯವಾಯಿತು ಎಂಬದೇ.


ನಾನು ಅದನ್ನು ಪಾತಾಳದ ಅಧಿಕಾರದಿಂದ ಬಿಡಿಸಲೋ? ಮರಣದಿಂದ ಉದ್ಧರಿಸಲೋ? ಮರಣವೇ, ನಿನ್ನ ಉಪದ್ರವಗಳೆಲ್ಲಿ? ಪಾತಾಳವೇ, ನೀನು ಮಾಡುವ ನಾಶನವೆಲ್ಲಿ? ಕನಿಕರವು ನನಗೆ ಕಾಣಿಸದು.


ಆಗ ಆತನ ಮನಸ್ಸು ಇಸ್ರಾಯೇಲ್ಯರ ಸಂಕಟದ ನಿವಿುತ್ತ ಬಲು ನೊಂದಿತು.


ಆದರೆ ಇವು ಸಂಭವಿಸುವದಕ್ಕೆ ತೊಡಗುವಾಗ ಮೇಲಕ್ಕೆ ನೋಡಿರಿ, ನಿಮ್ಮ ತಲೆ ಎತ್ತಿರಿ; ನಿಮ್ಮ ಬಿಡುಗಡೆಯು ಸಮೀಪವಾಗಿದೆ ಅಂದನು.


ಆತನ ಸಾಕ್ಷಿಯನ್ನು ಒಪ್ಪಿದವನು ದೇವರು ಸತ್ಯವಂತನೆಂಬ ಮಾತಿಗೆ ಮುದ್ರೆ ಹಾಕಿದವನಾಗಿದ್ದಾನೆ.


ಯಾವನು ದೇವಕುಮಾರನನ್ನು ತುಳಿದು ಒಡಂಬಡಿಕೆಯನ್ನು ಸ್ಥಿರಪಡಿಸಿದಂಥ ತನ್ನನ್ನು ಪವಿತ್ರಮಾಡಿದಂಥ ರಕ್ತವನ್ನು ಅಶುದ್ಧವೆಂದೆಣಿಸಿ ದೇವರ ಕೃಪಾವರವಾಗಿರುವ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬದನ್ನು ಯೋಚಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು