Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 4:4 - ಕನ್ನಡ ಸತ್ಯವೇದವು J.V. (BSI)

4 ನೀವೆಲ್ಲರೂ ಒಂದೇ ದೇಹಕ್ಕೆ ಸೇರಿದವರು, ಒಬ್ಬನೇ ಆತ್ಮನನ್ನು ಹೊಂದಿದವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೀವು ಕರೆಯಲ್ಪಟ್ಟಾಗ ಒಂದೇ ನಿರೀಕ್ಷೆಗಾಗಿ ಕರೆಯಲ್ಪಟ್ಟವರಂತೆಯೇ, ನೀವೆಲ್ಲರೂ ಒಂದೇ ದೇಹಕ್ಕೆ ಸೇರಿದವರು, ಒಬ್ಬನೇ ಆತ್ಮನನ್ನು ಹೊಂದಿದವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನೀವೆಲ್ಲರೂ ಒಂದೇ ಶರೀರಕ್ಕೆ ಸೇರಿದವರು; ಒಬ್ಬರೇ ಪವಿತ್ರಾತ್ಮರನ್ನು ಪಡೆದವರು; ಒಂದೇ ನಿರೀಕ್ಷೆಗಾಗಿ ಕರೆಹೊಂದಿದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದೇಹವು ಒಂದೇ ಮತ್ತು ಆತ್ಮನು ಒಬ್ಬನೇ. ನೀವೆಲ್ಲರೂ ಒಂದೇ ನಿರೀಕ್ಷೆಯನ್ನು ಹೊಂದಿರಬೇಕೆಂದು ದೇವರು ನಿಮ್ಮನ್ನು ಕರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಒಂದೇ ನಿರೀಕ್ಷೆಗೆ ನೀವು ಕರೆಹೊಂದಿದಂತೆಯೇ ದೇಹವು ಒಂದೇ, ಪವಿತ್ರಾತ್ಮರು ಒಬ್ಬರೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತುಮ್ಕಾ ಎಕುಚ್ ಬರೊಸೊ ದೆವಾಕ್ನಾ ಬಲ್ವಲ್ಲ್ಯಾ ತನ್ನಾ ಹೊತ್ತ್ಯಾ ಸಾರ್ಕೆ ಎಕುಚ್ ಆಂಗ್ ಅನಿ ಎಕುಚ್ ಪವಿತ್ರ್ ಆತ್ಮೊ ಹಾಯ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 4:4
28 ತಿಳಿವುಗಳ ಹೋಲಿಕೆ  

ಆತನ ಮೂಲಕ ನಾವೂ ನೀವೂ ಒಬ್ಬ ಆತ್ಮನನ್ನೇ ಹೊಂದಿದವರಾಗಿ ತಂದೆಯ ಬಳಿಗೆ ಪ್ರವೇಶಿಸುವದಕ್ಕೆ ಮಾರ್ಗವಾಯಿತು.


ನೀವು ದೇವರಿಂದ ಕರೆಯಲ್ಪಟ್ಟವರಾದ ಕಾರಣ ಯೋಗ್ಯರಾಗಿ ನಡೆದುಕೊಳ್ಳಬೇಕೆಂದು ಕರ್ತನ ಸೇವೆಯಲ್ಲಿ ಸೆರೆಯವನಾದ ನಾನು ನಿಮ್ಮನ್ನು ಪ್ರಬೋಧಿಸುತ್ತೇನೆ.


ಆತನು ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ ಆತನಿಂದ ಕರಿಸಿಕೊಂಡವರು ನಿರೀಕ್ಷಿಸುವ ಪದವಿ ಎಂಥದೆಂಬದನ್ನೂ ದೇವಜನರೆಂಬ ಆತನ ಸ್ವಾಸ್ಥ್ಯದ ಮಹಿಮಾತಿಶಯವು ಎಂಥದೆಂಬದನ್ನೂ


ಆದರೆ ಅಂಗಗಳೇನೋ ಅನೇಕ, ದೇಹವು ಒಂದೇ.


ಯಾವ ದೇಹಕ್ಕೆ ನಾವು ಅಂಗಗಳಾಗಿದ್ದೇವೋ ಸಭೆಯೆಂಬ ಆ ದೇಹವನ್ನು ಕ್ರಿಸ್ತನು ಹಾಗೆಯೇ ಪೋಷಿಸಿ ಸಂರಕ್ಷಿಸುತ್ತಾನಲ್ಲಾ.


ಯಾಕಂದರೆ ಆತನಿರುವ ಪ್ರಕಾರವೇ ಆತನನ್ನು ನೋಡುವೆವು. ಆತನ ಮೇಲೆ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನು ಕ್ರಿಸ್ತನು ಶುದ್ಧನಾಗಿರುವಂತೆಯೇ ತನ್ನನ್ನು ಶುದ್ಧಮಾಡಿಕೊಳ್ಳುತ್ತಾನೆ.


ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಪ್ರಭಾವವನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾದಿರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡವೆ.


ಮತ್ತು ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರಹಿಸಿದ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ನಿಮ್ಮ ಹೃದಯಗಳನ್ನು ಸಂತೈಸಿ


ಕ್ರಿಸ್ತನಿಂದಾದ ಸಮಾಧಾನವು ನಿಮ್ಮ ಹೃದಯಗಳಲ್ಲಿ ಯಜಮಾನನಂತಿದ್ದು ತೀರ್ಪುಹೇಳಲಿ; ನೀವು ಒಂದೇ ದೇಹಕ್ಕೆ ಸೇರಿದವರಾದದರಿಂದ ಸಮಾಧಾನದಿಂದಿರುವದಕ್ಕಾಗಿ ಕರೆಯಲ್ಪಟ್ಟಿರಿ. ಇದಲ್ಲದೆ ಕೃತಜ್ಞತೆಯುಳ್ಳವರಾಗಿರ್ರಿ.


ಆತನಲ್ಲಿ ನೀವು ಸಹ ಪವಿತ್ರಾತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವದಕ್ಕಾಗಿ ನಮ್ಮ ಸಂಗಡ ಕಟ್ಟಲ್ಪಡುತ್ತಾ ಇದ್ದೀರಿ.


ಇದ್ದ ದ್ವೇಷವನ್ನು ತನ್ನ ಶಿಲುಬೆಯ ಮೇಲೆ ಕೊಂದು ಆ ಶಿಲುಬೆಯ ಮೂಲಕ ಉಭಯರನ್ನೂ ಒಂದೇ ದೇಹದಂತಾಗ ಮಾಡಿ ದೇವರೊಂದಿಗೆ ಸಮಾಧಾನಪಡಿಸಿದ್ದಾನೆ.


ಆದ್ದರಿಂದ ನೀವು ಹೊರಟುಹೋಗಿ ಎಲ್ಲಾ ದೇಶಗಳ ಜನರನ್ನು ಶಿಷ್ಯರನ್ನಾಗಿ ಮಾಡಿರಿ; ಅವರಿಗೆ ತಂದೆಯ, ಮಗನ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿ


ಇಸ್ರಾಯೇಲ್ಯರ ನಿರೀಕ್ಷೆಯೇ, ಇಕ್ಕಟ್ಟಿನಲ್ಲಿ ಅವರಿಗೆ ರಕ್ಷಕನೇ, ಏಕೆ ದೇಶದಲ್ಲಿ ಪರದೇಶಿಯಂತೆಯೂ ಇಳಿದುಕೊಳ್ಳುವದಕ್ಕೆ ಗುಡಾರಹಾಕಿಕೊಳ್ಳುವ ಪ್ರಯಾಣಿಕನ ಹಾಗೆಯೂ ಇದ್ದೀ?


ನಮ್ಮ ರಕ್ಷಕನಾದ ದೇವರಿಂದಲೂ ನಮ್ಮ ನಿರೀಕ್ಷೆಗೆ ಆಧಾರನಾಗಿರುವ ಕ್ರಿಸ್ತ ಯೇಸುವಿನಿಂದಲೂ ನೇವಿುಸಲ್ಪಟ್ಟ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು


ರೊಟ್ಟಿಯು ಒಂದೇಯಾಗಿರುವದರಿಂದ ಅನೇಕರಾಗಿರುವ ನಾವು ಒಂದೇ ದೇಹದಂತಿದ್ದೇವೆ; ಯಾಕಂದರೆ ನಾವೆಲ್ಲರೂ ಆ ಒಂದೇ ರೊಟ್ಟಿಯಲ್ಲಿ ಪಾಲುತಕ್ಕೊಂಡು ತಿನ್ನುತ್ತೇವೆ.


ಯಾಕಂದರೆ ನಾವು ಪ್ರಸಿದ್ಧಿಪಡಿಸದಿದ್ದ ಮತ್ತೊಬ್ಬ ಯೇಸುವನ್ನು ನಿಮ್ಮ ಬಳಿಗೆ ಬರುವವರು ಪ್ರಕಟಿಸುವಾಗಲೂ ನೀವು ಹೊಂದದೆ ಇದ್ದ ಬೇರೆ ವಿಧವಾದ ಆತ್ಮಪ್ರೇರಣೆಯನ್ನು ಹೊಂದುವಾಗಲೂ ಅವಲಂಬಿಸದೆಯಿದ್ದ ಬೇರೊಂದು ಸುವಾರ್ತೆಯನ್ನು ಕೇಳುವಾಗಲೂ ನೀವು ಸಹಿಸಿಕೊಳ್ಳುತ್ತಿರುವದು ಬಹು ಆಶ್ಚರ್ಯ.


ಕರ್ತನಾದ ಯೇಸುವಿನ ಕೃಪೆಯಿಂದಲೇ ನಾವು ರಕ್ಷಣೆ ಹೊಂದುವೆವೆಂಬದಾಗಿ ನಂಬುತ್ತೇವಲ್ಲಾ; ಹಾಗೆಯೇ ಅವರೂ ಹೊಂದುವರು ಎಂದು ಹೇಳಿದನು.


ಯಾವನು ಯೆಹೋವನಲ್ಲಿ ನಂಬಿಕೆಯಿಟ್ಟಿದ್ದಾನೋ ಯಾವನಿಗೆ ಯೆಹೋವನು ಭರವಸವಾಗಿದ್ದಾನೋ ಅವನು ಧನ್ಯನು.


ದೇವರು ವರಗಳನ್ನು ಅನುಗ್ರಹಿಸಿದ್ದಕ್ಕೂ ಜನರನ್ನು ಕರೆದದ್ದಕ್ಕೂ ಪಶ್ಚಾತ್ತಾಪಪಡುವವನಲ್ಲ.


ನನ್ನ ಬಂಧುವಿುತ್ರರ ನಿವಿುತ್ತವಾಗಿ ನಿನಗೆ ಶುಭವಾಗಲೆಂದು ಹೇಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು