Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 4:6 - ಕನ್ನಡ ಸತ್ಯವೇದವು J.V. (BSI)

6 ಎಲ್ಲರಿಗೂ ತಂದೆಯಾಗಿರುವ ದೇವರು ಒಬ್ಬನೇ; ಆತನು ಎಲ್ಲರ ಮೇಲಿರುವವನೂ ಎಲ್ಲರ ಮುಖಾಂತರ ಕಾರ್ಯನಡಿಸುವವನೂ ಎಲ್ಲರಲ್ಲಿ ವಾಸಿಸುವವನೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಎಲ್ಲರಿಗೂ ತಂದೆಯಾಗಿರುವ ದೇವರು ಒಬ್ಬನೇ. ಆತನು ಎಲ್ಲರ ಮೇಲಿರುವವನೂ, ಎಲ್ಲರ ಮುಖಾಂತರ ಕಾರ್ಯ ನಡಿಸುವವನೂ, ಎಲ್ಲರಲ್ಲಿ ವಾಸಿಸುವವನೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ದೇವರು ಒಬ್ಬರೇ, ಸರ್ವರ ತಂದೆಯು ಅವರೇ; ಸರ್ವಶ್ರೇಷ್ಠರೂ ಅವರೇ; ಸರ್ವರ ಮೂಲಕ ಕಾರ್ಯ ನಿರ್ವಹಿಸುವವರೂ ಅವರೇ ಮತ್ತು ಸಮಸ್ತರಲ್ಲಿ ವಾಸಿಸುವವರೂ ಅವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಎಲ್ಲರಿಗೂ ತಂದೆಯಾಗಿರುವ ದೇವರು ಒಬ್ಬನೇ. ಆತನು ಸಮಸ್ತವನ್ನೂ ಆಳುತ್ತಾನೆ. ಆತನು ಸರ್ವವ್ಯಾಪಿಯಾಗಿದ್ದಾನೆ ಮತ್ತು ಎಲ್ಲರಲ್ಲಿ ವಾಸಿಸುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಎಲ್ಲರಿಗೂ ತಂದೆಯಾಗಿರುವ ದೇವರು ಒಬ್ಬರೇ; ಅವರೇ ಎಲ್ಲರ ಮೇಲಿರುವರೂ ಎಲ್ಲರ ಮೂಲಕ ಕಾರ್ಯನಡಿಸುವವರೂ ಎಲ್ಲರಲ್ಲಿ ವಾಸಿಸುವವರೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಸಗ್ಳ್ಯಾಂಚೊ ಬಾಬಾ ಹೊವ್ನ್ ಹೊತ್ತೊ ಸಗ್ಳ್ಯಾಕ್ನಿ ತೊ ಎಕ್ಲೊಚ್ ದೆವ್ ಸಗ್ಳಾಂಚೊ ಧನಿ ಅನಿ ಸಗ್ಳಾಂಚ್ಯಾ ವೈನಾ ಕಾಮ್ ಕರ್ತಾ ಅನಿ ಸಗ್ಳ್ಯಾಂಚ್ಯಾ ಮದ್ದಿ ವಸ್ತಿ ಕರ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 4:6
31 ತಿಳಿವುಗಳ ಹೋಲಿಕೆ  

ಸಮಸ್ತವು ಆತನಿಂದ ಉತ್ಪತ್ತಿಯಾಗಿ ಆತನಿಂದ ನಡೆಯುತ್ತಾ ಆತನಿಗಾಗಿ ಇರುತ್ತದೆ; ಆತನಿಗೇ ಸದಾಕಾಲವೂ ಸ್ತೋತ್ರ. ಆಮೆನ್.


ನಮಗಾದರೋ ಒಬ್ಬನೇ ದೇವರಿದ್ದಾನೆ; ಆತನು ತಂದೆಯೆಂಬಾತನೇ; ಆತನು ಸಮಸ್ತಕ್ಕೂ ಮೂಲಕಾರಣನು; ನಾವು ಆತನಿಗಾಗಿ ಉಂಟಾದೆವು. ಮತ್ತು ನಮಗೆ ಒಬ್ಬನೇ ಕರ್ತ; ಆತನು ಯೇಸು ಕ್ರಿಸ್ತನೇ; ಆತನ ಮುಖಾಂತರ ಸಮಸ್ತವೂ ಉಂಟಾಯಿತು, ನಾವೂ ಆತನ ಮುಖಾಂತರ ಉಂಟಾದೆವು.


ನಮ್ಮೆಲ್ಲರಿಗೂ ಒಬ್ಬನೇ ತಂದೆಯಷ್ಟೆ; ಒಬ್ಬನೇ ದೇವರು ನಮ್ಮನ್ನು ಸೃಷ್ಟಿಸಿದನಲ್ಲಾ; ಹೀಗಿರಲು ನಾವು ಒಬ್ಬರಿಗೊಬ್ಬರು ದ್ರೋಹಮಾಡಿ ದೇವರು ನಮ್ಮ ಪಿತೃಗಳೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಭಂಗಪಡಿಸುವದೇಕೆ?


ಯೇಸು ಆಕೆಗೆ - ನನ್ನನ್ನು ಹಿಡಿಯಬೇಡ; ಯಾಕಂದರೆ ನಾನು ಇನ್ನೂ ತಂದೆಯ ಬಳಿಗೆ ಏರಿಹೋದವನಲ್ಲ. ನೀನು ನನ್ನ ಸಹೋದರರ ಬಳಿಗೆ ಹೋಗಿ - ನಾನು ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ಏರಿಹೋಗುತ್ತೇನೆ ಎಂದು ಅವರಿಗೆ ಹೇಳು ಅಂದನು.


ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ನೆಲೆಗೊಂಡಿರುತ್ತಾನೆ, ಆತನು ಇವನಲ್ಲಿ ನೆಲೆಗೊಂಡಿರುತ್ತಾನೆ. ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿದ ಆತ್ಮನಿಂದಲೇ ಬಲ್ಲೆವು.


ಆದದರಿಂದ ನೀವು ಹೀಗೆ ಪ್ರಾರ್ಥನೆಮಾಡತಕ್ಕದ್ದು -


ದೇವರ ಮಂದಿರಕ್ಕೂ ವಿಗ್ರಹಗಳಿಗೂ ಒಪ್ಪಿಗೆ ಏನು? ನಾವು ಜೀವಸ್ವರೂಪನಾದ ದೇವರ ಮಂದಿರವಾಗಿದ್ದೇವಲ್ಲಾ. ಇದರ ಸಂಬಂಧವಾಗಿ ದೇವರು ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.


ಕಾರ್ಯಗಳಲ್ಲಿ ಬೇರೆ ಬೇರೆ ವಿಧಗಳುಂಟು, ಸರ್ವರಲ್ಲಿಯೂ ಸರ್ವಕಾರ್ಯಗಳನ್ನು ಸಾಧಿಸುವ ದೇವರು ಒಬ್ಬನೇ.


ಅವರು ಅಡ್ಡಬಿದ್ದು - ದೇವರೇ, ಎಲ್ಲಾ ಮನುಷ್ಯರ ಆತ್ಮಗಳಿಗೆ ದೇವರಾಗಿರುವವನೇ,


ಭೂಮ್ಯಾಕಾಶಗಳನ್ನು ನಿರ್ಮಾಣಮಾಡಿದ ಪರಾತ್ಪರನಾದ ದೇವರ ಆಶೀರ್ವಾದವು ಅಬ್ರಾಮನಿಗೆ ಆಗಲಿ;


ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ಶಾಂತಿಯೂ ನಂಬಿಕೆಯಿಂದ ಕೂಡಿದ ಪ್ರೀತಿಯೂ ಸಹೋದರರಿಗೆ ಆಗಲಿ.


ಕ್ರಿಸ್ತನು ನಿಮ್ಮ ನಂಬಿಕೆಯ ಮೂಲಕ ನಿಮ್ಮ ಹೃದಯಗಳಲ್ಲಿ ವಾಸಮಾಡುವ ಹಾಗೆಯೂ ಆತನು ತನ್ನ ಮಹಿಮಾತಿಶಯದ ಪ್ರಕಾರ ಅನುಗ್ರಹಿಸಲಿ;


ಆತನಲ್ಲಿ ನೀವು ಸಹ ಪವಿತ್ರಾತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವದಕ್ಕಾಗಿ ನಮ್ಮ ಸಂಗಡ ಕಟ್ಟಲ್ಪಡುತ್ತಾ ಇದ್ದೀರಿ.


ನಾನು ಅವರಿಗೆ ನಿನ್ನ ಹೆಸರನ್ನು ತಿಳಿಸಿದ್ದೇನೆ, ಇನ್ನೂ ತಿಳಿಸುವೆನು. ನೀನು ನನ್ನ ಮೇಲೆ ಇಟ್ಟಂಥ ಪ್ರೀತಿಯು ಅವರಲ್ಲಿ ಇರಬೇಕೆಂದೂ ನಾನೂ ಅವರಲ್ಲಿ ಇರಬೇಕೆಂದೂ ಪ್ರಾರ್ಥಿಸುತ್ತೇನೆ ಅಂದನು.


ಯೇಸು ಅವನಿಗೆ - ಯಾರಾದರೂ ನನ್ನನ್ನು ಪ್ರೀತಿಸುವವನಾದರೆ ನನ್ನ ಮಾತನ್ನು ಕೈಕೊಂಡು ನಡೆಯುವನು; ಅವನನ್ನು ನನ್ನ ತಂದೆಯು ಪ್ರೀತಿಸುವನು, ಮತ್ತು ನಾವಿಬ್ಬರೂ ಅವನ ಬಳಿಗೆ ಬಂದು ಅವನ ಬಳಿಯಲ್ಲಿ ಬಿಡಾರವನ್ನು ಮಾಡಿಕೊಳ್ಳುವೆವು.


ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೇಡಿನಿಂದ ನಮ್ಮನ್ನು ತಪ್ಪಿಸು.


ನೀನೇ ನಮ್ಮ ಪಿತೃವಾಗಿದ್ದೀಯಲ್ಲಾ; ಅಬ್ರಹಾಮನು ನಮ್ಮನ್ನರಿಯನು, ಇಸ್ರಾಯೇಲನು ನಮ್ಮನ್ನು ಗುರುತಿಸನು; ಯೆಹೋವಾ, ನೀನೇ ನಮ್ಮ ಪಿತೃ; ಆದಿಯಿಂದಲೂ ನಮ್ಮ ವಿಮೋಚಕನು ಅನ್ನಿಸಿಕೊಂಡಿದ್ದೀ.


ಯೆಹೋವನು ಮಹಾದೇವರೂ ಎಲ್ಲಾ ದೇವರುಗಳಲ್ಲಿ ಮಹಾರಾಜನೂ ಆಗಿದ್ದಾನೆ.


ಪರಲೋಕದೊಳಗೆ ಸಕಲ ರಾಜ್ಯತ್ವ ಅಧಿಕಾರ ಮಹತ್ವ ಪ್ರಭುತ್ವಾದಿಗಳ ಮೇಲೆಯೂ ಈ ಲೋಕದಲ್ಲಿ ಮಾತ್ರವಲ್ಲದೆ ಬರುವ ಲೋಕದಲ್ಲಿ ಸಹ ಹೆಸರುಗೊಂಡವರೆಲ್ಲರ ಮೇಲೆಯೂ ತನ್ನ ಬಲಗಡೆಯಲ್ಲಿ ಕೂಡ್ರಿಸಿಕೊಂಡನು.


ಇಸ್ರಾಯೇಲ್ಯರೇ, ಕೇಳಿರಿ; ನಮ್ಮ ದೇವರಾದ ಯೆಹೋವನು ಒಬ್ಬನೇ ದೇವರು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು