Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 5:1 - ಕನ್ನಡ ಸತ್ಯವೇದವು J.V. (BSI)

1 ದೇವರು ನಿಮಗೆ ಕ್ರಿಸ್ತನಲ್ಲಿ ಕ್ಷವಿುಸಿದನಲ್ಲಾ; ಆದದರಿಂದ ದೇವರ ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ ಆತನನ್ನು ಅನುಸರಿಸುವವರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆದುದರಿಂದ ದೇವರ ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ ಆತನನ್ನು ಅನುಸರಿಸುವವರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ದೇವರ ಅಕ್ಕರೆಯ ಮಕ್ಕಳು ನೀವು. ಆದ್ದರಿಂದ ದೇವರನ್ನೇ ಅನುಸರಿಸಿ ಬಾಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನೀವು ದೇವರ ಪ್ರಿಯ ಮಕ್ಕಳಾಗಿದ್ದೀರಿ; ಆದ್ದರಿಂದ ನೀವು ಆತನನ್ನು ಅನುಸರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆದ್ದರಿಂದ ನೀವು ದೇವರ ಪ್ರಿಯರಾದ ಮಕ್ಕಳಂತೆ ದೇವರ ಮಾದರಿಯನ್ನು ಅನುಸರಿಸಿ ಬಾಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ತುಮಿ ದೆವಾಚಿ ಪ್ರೆಮಾಚಿ ಪೊರಾ ಹೊಲ್ಯಾಸಿ, ತಸೆ ಹೊವ್ನ್ ತುಮಿ ತೆಚ್ಯಾ ಸಾರ್ಕೆ ಹೊವ್ಕ್ ಬಗುಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 5:1
13 ತಿಳಿವುಗಳ ಹೋಲಿಕೆ  

ಪ್ರಿಯರೇ, ದೇವರು ನಮ್ಮನ್ನು ಹೀಗೆ ಪ್ರೀತಿಸಿದ ಮೇಲೆ ನಾವು ಒಬ್ಬರನ್ನೊಬ್ಬರು ಪ್ರೀತಿಸುವ ಹಂಗಿನಲ್ಲಿದ್ದೇವೆ.


ಒಬ್ಬರಿಗೊಬ್ಬರು ಉಪಕಾರಿಗಳಾಗಿಯೂ ಕರುಣೆಯುಳ್ಳವರಾಗಿಯೂ ಕ್ಷವಿುಸುವವರಾಗಿಯೂ ಇರ್ರಿ.


ಆದದರಿಂದ ಪರಲೋಕದಲ್ಲಿರುವ ನಿಮ್ಮ ತಂದೆಯು ಯಾವ ದೋಷವೂ ಇಲ್ಲದವನಾಗಿರುವಂತೆ ನೀವೂ ದೋಷವಿಲ್ಲದವರಾಗಿರ್ರಿ.


ಹೀಗಿರಲಾಗಿ ನೀವು ದೇವರಿಂದ ಆರಿಸಿಕೊಂಡವರೂ ಪ್ರತಿಷ್ಠಿತರೂ ಪ್ರಿಯರೂ ಆಗಿರುವದರಿಂದ ಕನಿಕರ ದಯೆ ದೀನಭಾವ ಸಾತ್ವಿಕತ್ವ ದೀರ್ಘಶಾಂತಿ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.


ನಿಮ್ಮ ದೇವರಾಗಿರುವದಕ್ಕೆ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ಯೆಹೋವನೇ ನಾನು; ನಾನು ಪರಿಶುದ್ಧನಾಗಿರುವದರಿಂದ ನೀವೂ ಪರಿಶುದ್ಧರಾಗಿರಬೇಕು.


ಯಾರಾರು ಆತನನ್ನು ಅಂಗೀಕರಿಸಿದರೋ, ಅಂದರೆ ಆತನ ಹೆಸರಿನಲ್ಲಿ ನಂಬಿಕೆಯಿಟ್ಟರೋ, ಅವರಿಗೆ ದೇವರ ಮಕ್ಕಳಾಗುವ ಅಧಿಕಾರ ಕೊಟ್ಟನು.


ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಮೂಡುವಂತೆ ಮಾಡುತ್ತಾನೆ; ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆಸುರಿಸುತ್ತಾನೆ.


ಯೆಹೋವನು ಇಂತೆನ್ನುತ್ತಾನೆ - ಎಫ್ರಾಯೀಮು ನನಗೆ ಪ್ರಿಯಪುತ್ರನೋ, ಮುದ್ದುಮಗುವೋ, ಏನೋ? ಅವನ ಹೆಸರೆತ್ತಿದಾಗೆಲ್ಲಾ ಅವನನ್ನು ಜ್ಞಾಪಿಸಿಕೊಳ್ಳುತ್ತಲೇ ಬರುತ್ತೇನೆ; ಇದರಿಂದ ನನ್ನ ಕರುಳು ಅವನಿಗಾಗಿ ಮರುಗುತ್ತದಲ್ಲಾ; ಅವನನ್ನು ಕರುಣಿಸೇ ಕರುಣಿಸುವೆನು.


ಇಸ್ರಾಯೇಲ್ಯರ ಸಂಖ್ಯೆಯು ಅಳೆಯುವದಕ್ಕೂ ಲೆಕ್ಕಿಸುವದಕ್ಕೂ ಅಸಾಧ್ಯವಾದ ಸಮುದ್ರತೀರದ ಉಸುಬಿನಂತಾಗುವದು; ಆಗ ಅವರು ನನ್ನ ಪ್ರಜೆಯಲ್ಲದವರು ಎನಿಸಿಕೊಳ್ಳುವದಕ್ಕೆ ಬದಲಾಗಿ ಜೀವಸ್ವರೂಪನಾದ ದೇವರ ಮಕ್ಕಳು ಎನಿಸಿಕೊಳ್ಳುವರು.


ಹೀಗೆ ನೀವು ನಿರ್ದೋಷಿಗಳೂ ಯಥಾರ್ಥಮನಸ್ಸುಳ್ಳವರೂ ಆಗಿದ್ದು ವಕ್ರಬುದ್ಧಿಯುಳ್ಳ ಮೂರ್ಖಜಾತಿಯ ಮಧ್ಯದಲ್ಲಿ ದೇವರ ನಿಷ್ಕಳಂಕರಾದ ಮಕ್ಕಳಾಗಿರುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು