Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 5:13 - ಕನ್ನಡ ಸತ್ಯವೇದವು J.V. (BSI)

13 ಬೆಳಕಿನಿಂದ ಎಲ್ಲಾ ಕೃತ್ಯಗಳ ನಿಜಗುಣ ತೋರಿಬರುತ್ತದೆ; ಅದರಿಂದ ಕೆಟ್ಟದ್ದು ಕೆಟ್ಟದ್ದೇ ಎಂದು ಕಾಣಿಸುವದು. ಪ್ರಕಟವಾಗಿರುವದೆಲ್ಲಾ ಬೆಳಕಿಗೆ ಸಂಬಂಧವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಬೆಳಕಿನಿಂದ ಎಲ್ಲಾ ಕೃತ್ಯಗಳ ನಿಜಗುಣ ಬಹಿರಂಗವಾಗುತ್ತದೆ. ಯಾಕೆಂದರೆ ಎಲ್ಲಾವನ್ನೂ ಬಹಿರಂಗಪಡಿಸುವಂಥದ್ದು ಬೆಳಕೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಬೆಳಕು ಬೆಳಗಿಸುವ ವಸ್ತುಗಳೆಲ್ಲವೂ ಕಂಗೊಳಿಸುವುವು. ಹೀಗೆ ಕಂಗೊಳಿಸುವುದೆಲ್ಲವೂ ಬೆಳಕಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದರೆ ಆ ಕಾರ್ಯಗಳು ತಪ್ಪಾದವುಗಳೆಂದು ನಾವು ತೋರಿಸುವಾಗ ಬೆಳಕಿನಿಂದ ಆ ಕಾರ್ಯಗಳು ಸ್ಪಷ್ಟವಾಗಿ ಕಾಣಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದರೆ, ಬಹಿರಂಗವಾದವುಗಳೆಲ್ಲವೂ ಬೆಳಕಿನಿಂದ ಪ್ರಕಟವಾಗುತ್ತವೆ. ಎಲ್ಲವನ್ನೂ ಪ್ರಕಾಶಪಡಿಸುವಂಥದ್ದು ಬೆಳಕೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಖರೆ ತಿ ಕಾಮಾ ಚುಕೆಚಿ ಮನುನ್ ಅಮಿ ದಾಕ್ವುತಾನಾ ಉಜ್ವೊಡಾನ್ ತಿ ಕಾಮಾ ಸ್ಪಸ್ಟ್ ಹೊವ್ನ್ ದಿಸ್ತಾತ್. ಮರಲ್ಯಾಕ್ನಿ ಸೊಡುನ್ ಉಟ್, ಕ್ರಿಸ್ತ್ ತುಜ್ಯಾ ವೈರ್ ಉಜ್ವೊಡ್ ದಿತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 5:13
8 ತಿಳಿವುಗಳ ಹೋಲಿಕೆ  

ಆದದರಿಂದ ಕಾಲಕ್ಕೆ ಮೊದಲು ಯಾವದನ್ನು ಕುರಿತೂ ತೀರ್ಪುಮಾಡಬೇಡಿರಿ; ಕರ್ತನು ಬರುವ ತನಕ ತಡೆಯಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು, ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ಬರುವದು.


ಈಗ ಅವಳ ವಿುಂಡರ ಕಣ್ಣೆದುರಿಗೆ ಅವಳ ನಾಚಿಕೆಗೇಡಿತನವನ್ನು ಬೈಲಿಗೆ ತರುವೆನು; ಅವಳನ್ನು ನನ್ನ ಕೈಯಿಂದ ಯಾರೂ ಬಿಡಿಸರು.


ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸಿ ಇಸ್ರಾಯೇಲನ್ನು ಸ್ವಸ್ಥಮಾಡಬೇಕೆಂದಿರುವಾಗ ಎಫ್ರಾಯೀವಿುನ ಅಧರ್ಮವೂ ಸಮಾರ್ಯದ ದುಷ್ಟತನವೂ ವ್ಯಕ್ತವಾಗುತ್ತವೆ; ಎಲ್ಲರೂ ಮೋಸಮಾಡುತ್ತಾರೆ, ಒಳಗೆ ಕಳ್ಳರು ನುಗ್ಗುತ್ತಾರೆ, ಹೊರಗೆ ಡಕಾಯಿತಿಯವರು ಸುಲಿಯುತ್ತಾರೆ.


ನಾನು ಯೆಹೋವನಿಗೆ ಪಾಪಮಾಡಿದ್ದರಿಂದ ಆತನ ರೋಷವನ್ನು ತಾಳಿಕೊಂಡಿರುವೆನು; ಕಾಲಾನುಕಾಲಕ್ಕೆ ಆತನು ತನ್ನ ವ್ಯಾಜ್ಯವನ್ನು ನಿರ್ವಹಿಸಿ ನನಗೆ ನ್ಯಾಯವನ್ನು ತೀರಿಸುವನು; ನನ್ನನ್ನು ಬೆಳಕಿಗೆ ತರುವನು, ಆತನ ರಕ್ಷಣಧರ್ಮವನ್ನು ನೋಡುವೆನು.


ನಿನ್ನ ಪ್ರವಾದಿಗಳು ಕಂಡುಹೇಳಿದ ಕಣಿಗಳು ವ್ಯರ್ಥ, ನಿಸ್ಸಾರ; ಅವರು ನಿನ್ನ ದೋಷವನ್ನು ಬೈಲಿಗೆ ತಾರದಕಾರಣ ನಿನ್ನ ದುರವಸ್ಥೆಯು ನೀಗಲಿಲ್ಲ; ನಿನ್ನ ವಿಷಯವಾಗಿ ಅವರಿಗೆ ಕಂಡುಬಂದ ವ್ಯರ್ಥ ದೈವೋಕ್ತಿಗಳು ನೀನು ಗಡೀಪಾರಾಗಿ ಒಯ್ಯಲ್ಪಡುವದಕ್ಕೆ ಆಸ್ಪದವಾದವು.


ಆದರೆ ದೇವದೂತರಲ್ಲಿ ಯಾವ ವಿಷಯದಲ್ಲಿಯಾದರೂ - ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವಾಗ ಮಾಡುವತನಕ ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂಬದಾಗಿ ಎಂದಾದರೂ ಹೇಳಿದ್ದಾನೋ?


ಆ ಜನರು ರಹಸ್ಯವಾಗಿ ನಡಿಸುವ ಕೆಲಸಗಳನ್ನು ಕುರಿತು ಮಾತಾಡುವದಾದರೂ ನಾಚಿಕೆಗೆ ಕಾರಣವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು