Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 5:14 - ಕನ್ನಡ ಸತ್ಯವೇದವು J.V. (BSI)

14 ಆದದರಿಂದ - ನಿದ್ರೆ ಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಏಳು! ಕ್ರಿಸ್ತನು ನಿನಗೆ ಪ್ರಕಾಶ ಕೊಡುವನು ಎಂದು ಹೇಳಿಯದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆದ್ದರಿಂದ, “ನಿದ್ರೆ ಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಏಳು! ಆಗ ಕ್ರಿಸ್ತನು ನಿನ್ನಲ್ಲಿ ಪ್ರಕಾಶಿಸುವನು” ಎಂದು ಹೇಳಿಯದೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆದ್ದರಿಂದ: ನಿದ್ದೆಮಾಡುವವನೇ ಎದ್ದೇಳು ಸತ್ತವರನು ಬಿಟ್ಟು ಬಾ ಎಚ್ಚೆತ್ತು ನನಗೀವನು ಬೆಳಕನು ಕ್ರಿಸ್ತನು.” ಎಂದು ಬರೆಯಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಪ್ರತಿಯೊಂದನ್ನು ಸ್ಪಷ್ಟವಾಗಿ ತೋರಿಸುವಂಥದ್ದೇ ಬೆಳಕು. ಆದ್ದರಿಂದಲೇ ಹೀಗೆ ಬರೆದದೆ: “ನಿದ್ರೆಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಎದ್ದೇಳು, ಕ್ರಿಸ್ತನು ನಿನ್ನ ಮೇಲೆ ಪ್ರಕಾಶಿಸುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದ್ದರಿಂದ ಹೀಗೆ ಹೇಳಲಾಗಿದೆ: “ನಿದ್ರೆ ಮಾಡುವವನೇ, ಎಚ್ಚರವಾಗು, ಸತ್ತವರಿಂದ ಎದ್ದೇಳು, ಕ್ರಿಸ್ತನು ನಿನ್ನ ಮೇಲೆ ಪ್ರಕಾಶಿಸುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಕಶ್ಯಾಕ್ ಮಟ್ಲ್ಯಾರ್, ಹರ್ ಎಕ್ ಚುಕೆಚಿ ಕಾಮಾ ದಾಕ್ವುತಲೊಚ್ ಉಜ್ವೊಡ್, ತೆಚ್ಯಾ ಸಾಟ್ನಿ ಅಸೆ ಸಾಂಗಲ್ಲೆ ಹಾಯ್; “ನಿಜು ಲಾಗಲ್ಯಾ ಮಾನ್ಸಾ ಜಾಗೊ ಹೊ! ಮರಲ್ಯಾಕ್ನಿ ಸೊಡುನ್ ಉಟ್, ಕ್ರಿಸ್ತ್ ತುಜ್ಯಾ ವೈರ್ ಉಜ್ವೊಡ್ ದಿತಾ,”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 5:14
23 ತಿಳಿವುಗಳ ಹೋಲಿಕೆ  

ಏಳು, ಪ್ರಕಾಶಿಸು, ನಿನಗೆ ಬೆಳಕು ಬಂತು, ಯೆಹೋವನ ತೇಜಸ್ಸು ನಿನ್ನ ಮೇಲೆ ಉದಯಿಸಿದೆ.


ಮೃತರಾದ ನಿನ್ನ ಜನರು ಬದುಕುವರು, ನನ್ನವರ ಹೆಣಗಳು ಜೀವದಿಂದೇಳುವವು, ಮಣ್ಣಿನಲ್ಲಿ ಪವಳಿಸಿರುವವರೇ, ಎಚ್ಚತ್ತು ಹರ್ಷಧ್ವನಿಗೈಯಿರಿ! [ಯೆಹೋವನೇ,] ನೀನು ಸುರಿಯುವ ಇಬ್ಬನಿಯು ಜ್ಯೋತಿರ್ಮಯವಾದದ್ದು, ಭೂವಿುಯು ಸತ್ತವರನ್ನು ಹೊರಪಡಿಸುವದು.


ಆದಕಾರಣ ನಾವು ಇತರರಂತೆ ನಿದ್ದೆಮಾಡದೆ ಎಚ್ಚರವಾಗಿರೋಣ, ಸ್ವಸ್ಥಚಿತ್ತರಾಗಿರೋಣ.


ಚೀಯೋನೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ನಿನ್ನ ಪ್ರತಾಪವನ್ನು ಧರಿಸಿಕೋ! ಯೆರೂಸಲೇಮೇ, ಪರಿಶುದ್ಧ ಪಟ್ಟಣವೇ, ನಿನ್ನ ಚಂದದ ಉಡುಪನ್ನು ಹಾಕಿಕೋ! ಇಂದಿನಿಂದ ಅಶುದ್ಧರೂ ಸುನ್ನತಿಯಿಲ್ಲದವರೂ ನಿನ್ನೊಳಗೆ ಪ್ರವೇಶಮಾಡರು.


ಯಾಕಂದರೆ ಕತ್ತಲೆಯೊಳಗಿಂದ ಬೆಳಕು ಹೊಳೆಯಲಿ ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.


ಆದಕಾರಣ ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟಿರುವದರಿಂದ ಮೇಲಿರುವವುಗಳನ್ನು ಹುಡುಕಿರಿ; ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಆಸನಾರೂಢನಾಗಿದ್ದಾನೆ.


ಯೆಹೋವನು ತನ್ನ ರೋಷವನ್ನು ತುಂಬಿಕೊಟ್ಟ ಪಾತ್ರೆಯಿಂದ ಕುಡಿದ ಯೆರೂಸಲೇಮೇ, ಎಚ್ಚತ್ತುಕೋ, ಎಚ್ಚತ್ತುಕೋ, ಎದ್ದು ನಿಲ್ಲು! ಭ್ರಮಣಗೊಳಿಸುವ ಆ ಪಾನದ ಪಾತ್ರೆಯಲ್ಲಿ ಒಂದು ತೊಟ್ಟನ್ನೂ ಉಳಿಸದೆ ಕುಡಿದು ಬಿಟ್ಟಿದ್ದೀ.


ಇದು ಮಾತ್ರವಲ್ಲದೆ ನೀವು ನಿಮ್ಮ ಅಂಗಗಳನ್ನು ಪಾಪಕ್ಕೆ ಒಪ್ಪಿಸುವವರಾಗಿದ್ದು ದುಷ್ಟತ್ವವನ್ನು ನಡಿಸುವ ಸಾಧನಗಳಾಗಮಾಡಬೇಡಿರಿ; ಆದರೆ ಸತ್ತವರೊಳಗಿಂದ ಜೀವಿತರಾಗಿರಲಾಗಿ ನಿಮ್ಮನ್ನು ದೇವರಿಗೆ ಒಪ್ಪಿಸಿಕೊಟ್ಟು ನಿಮ್ಮ ಅಂಗಗಳನ್ನು ನೀತಿ ಕೃತ್ಯಗಳನ್ನು ನಡಿಸುವ ಸಾಧನಗಳನ್ನಾಗಿ ಆತನಿಗೆ ಸಮರ್ಪಿಸಿರಿ.


ನಾನು ಲೋಕದಲ್ಲಿರುವಾಗ ಲೋಕಕ್ಕೆ ಬೆಳಕಾಗಿದ್ದೇನೆ ಅಂದನು.


ಯೇಸು ತಿರಿಗಿ ಅವರ ಸಂಗಡ ಮಾತಾಡಲಾರಂಭಿಸಿ - ನಾನೇ ಲೋಕಕ್ಕೆ ಬೆಳಕು; ನನ್ನನ್ನು ಅನುಸರಿಸುವವನು ಕತ್ತಲೆಯಲ್ಲಿ ನಡೆಯದೆ ಜೀವಕೊಡುವ ಬೆಳಕನ್ನು ಹೊಂದಿದವನಾಗಿರುವನು ಎಂದು ಹೇಳಿದನು.


ಅಪರಾಧಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ.)


ಇಂಥ ಅಮಲಿನಿಂದೆಚ್ಚತ್ತು ನೀತಿವಂತರಾಗಿರಿ, ಪಾಪವನ್ನು ಬಿಟ್ಟುಬಿಡಿರಿ. ಕೆಲವರಿಗೆ ದೇವರ ವಿಷಯದಲ್ಲಿ ಜ್ಞಾನವೇ ಇಲ್ಲ; ನಿಮಗೆ ನಾಚಿಕೆ ಹುಟ್ಟಬೇಕೆಂದು ಇದನ್ನು ಹೇಳುತ್ತೇನೆ.


ಆತನು ಅನಾದಿಕಾಲದಲ್ಲಿ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿ ಈಗ ನಮ್ಮ ರಕ್ಷಕನಾದ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯ ಮೂಲಕ ಅದನ್ನು ಪ್ರಕಾಶಪಡಿಸಿದ್ದಾನೆ. ಈತನು ಮರಣವನ್ನು ನಿವೃತ್ತಿಮಾಡಿ ಸುವಾರ್ತೆಯ ಮೂಲಕ ಜೀವವನ್ನೂ ನಿರ್ಲಯತ್ವವನ್ನೂ ಪ್ರಕಾಶಗೊಳಿಸಿದನು.


ಸೈತಾನನ ಉರ್ಲಿಗೆ ಬಿದ್ದವರಾದ ಇವರು ಒಂದು ವೇಳೆ ತಪ್ಪಿಸಿಕೊಂಡು ದೇವರ ಚಿತ್ತವನ್ನು ಅನುಸರಿಸುವದಕ್ಕೆ ಸ್ವಸ್ಥಚಿತ್ತರಾದಾರು.


ಹಾಗೆಯೇ ಕರ್ತನು ನಮಗೆ ಅಪ್ಪಣೆಕೊಟ್ಟಿದ್ದಾನೆ; ಹೇಗಂದರೆ - ನೀನು ಲೋಕದ ಕಟ್ಟಕಡೆಯವರೆಗೆ ರಕ್ಷಕನಾಗಿರುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇವಿುಸಿದ್ದೇನೆ ಎಂದು ದೇವರು ಹೇಳಿದ್ದಾನೆ ಅಂದರು.


ಈ ನನ್ನ ಮಗನು ಸತ್ತವನಾಗಿದ್ದನು, ತಿರಿಗಿ ಬದುಕಿ ಬಂದನು; ಪೋಲಿಹೋಗಿದ್ದನು, ಸಿಕ್ಕಿದನು ಎಂದು ಹೇಳಿದನು. ಆಗ ಅವರು ಉಲ್ಲಾಸಪಡುವದಕ್ಕೆ ತೊಡಗಿದರು.


ಆತನು ಅಪರಾಧಗಳ ಮತ್ತು ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಿಮ್ಮನ್ನು ಸಹ ಬದುಕಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು