Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 5:16 - ಕನ್ನಡ ಸತ್ಯವೇದವು J.V. (BSI)

16 ಈ ದಿನಗಳು ಕೆಟ್ಟವುಗಳಾಗಿವೆ; ಆದದರಿಂದ ಕಾಲವನ್ನು ಸುಮ್ಮನೆ ಕಳಕೊಳ್ಳದೆ ಅದನ್ನು ಬೆಲೆಯುಳ್ಳದ್ದೆಂದು ಉಪಯೋಗಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಈ ದಿನಗಳು ಕೆಡುಕಿನಿಂದ ಕೂಡಿದವುಗಳಾಗಿರುವುದ್ದರಿಂದ ಕಾಲವನ್ನು ಸದುಪಯೋಗಪಡಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಈ ದಿನಗಳು ಕೆಟ್ಟ ದಿನಗಳಾಗಿರುವುದರಿಂದ ನಿಮಗಿರುವ ಸದವಕಾಶಗಳನ್ನು ಸದ್ವಿನಿಯೋಗಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಈ ದಿನಗಳು ಕೆಟ್ಟವುಗಳಾಗಿವೆ. ಆದ್ದರಿಂದ ನಿಮಗಿರುವ ಪ್ರತಿಯೊಂದು ಅವಕಾಶವನ್ನು ಒಳ್ಳೆಯದಕ್ಕಾಗಿ ಉಪಯೋಗಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಈ ದಿನಗಳು ಕೆಟ್ಟವುಗಳಾಗಿರುವುದರಿಂದ, ಸರ್ವ ಸದಾವಕಾಶಗಳನ್ನೂ ಸದ್ವಿನಿಯೋಗಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಹಿ ದಿಸಾ ಲೈ ಬುರ್ಶಿ ಹೊವ್ನ್ ಹಾತ್ ತಸೆ ಹೊವ್ನ್, ತುಮ್ಕಾ ಗಾವಲೊ ಹರ್ ಎಕ್ ಅವಕಾಸ್‍ಬಿ ಬರ್‍ಯಾ ಕಾಮಾಕ್ ವಾಪ್ರುನ್ ಘೆವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 5:16
18 ತಿಳಿವುಗಳ ಹೋಲಿಕೆ  

ಸಮಯವನ್ನು ಸುಮ್ಮನೆ ಕಳಕೊಳ್ಳದೆ ಅದನ್ನು ಬೆಲೆಯುಳ್ಳದ್ದೆಂದು ಉಪಯೋಗಿಸಿ ಹೊರಗಿನವರ ಮುಂದೆ ಜ್ಞಾನವುಳ್ಳವರಾಗಿ ನಡೆದುಕೊಳ್ಳಿರಿ.


ಇಂಥ ಕಾಲದಲ್ಲಿ ವಿವೇಕಿಯು ಸುಮ್ಮನಿರುವನು; ಇದು ದುಷ್ಕಾಲವೇ ಸರಿ.


ಯೇಸು ಅವರಿಗೆ - ಇನ್ನು ಸ್ವಲ್ಪ ಕಾಲವೇ ಬೆಳಕು ನಿಮ್ಮಲ್ಲಿ ಇರುತ್ತದೆ; ಕತ್ತಲೆಯು ನಿಮ್ಮನ್ನು ಮುಸುಕಿಕೊಳ್ಳದಂತೆ ಬೆಳಕು ನಿಮಗೆ ಇರುವಾಗಲೇ ಸಂಚಾರಮಾಡಿರಿ. ಕತ್ತಲೆಯಲ್ಲಿ ಸಂಚಾರಮಾಡುವವನಿಗೆ ತಾನು ಎಲ್ಲಿ ಹೋಗುತ್ತೇನೆಂದು ತಿಳಿಯದು.


ಆದದರಿಂದ ಕಠಿನ ಯುದ್ಧವು ನಡೆಯುವ ದಿವಸದಲ್ಲಿ ಆ ವೈರಿಗಳನ್ನು ಎದುರಿಸುವದಕ್ಕೂ ಮಾಡಬೇಕಾದದ್ದೆಲ್ಲವನ್ನು ಮಾಡಿ ಜಯಶಾಲಿಗಳಾಗಿ ನಿಲ್ಲುವದಕ್ಕೂ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ತೆಗೆದುಕೊಳ್ಳಿರಿ.


ಆದದರಿಂದ ಸಮಯವಿರಲಾಗಿ ಎಲ್ಲರಿಗೆ ಒಳ್ಳೇದನ್ನು ಮಾಡೋಣ; ಮುಖ್ಯವಾಗಿ ಒಂದೇ ಮನೆಯವರಂತಿರುವ ಕ್ರಿಸ್ತನಂಬಿಕೆಯುಳ್ಳವರಿಗೆ ಮಾಡೋಣ.


ಕಷ್ಟದ ದಿನಗಳೂ ಸಂತೋಷವಿಲ್ಲವೆಂದು ನೀನು ಹೇಳುವ ವರುಷಗಳೂ ಸಮೀಪಿಸುವದರೊಳಗಾಗಿ ಯೌವನದಲ್ಲಿಯೇ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸು .


ಈಗಿನ ಕಾಲವು ನಿದ್ದೆಯಿಂದ ಎಚ್ಚರವಾಗತಕ್ಕ ಕಾಲವೆಂದು ಅರಿತು ಇದನ್ನೆಲ್ಲಾ ಮಾಡಿರಿ. ನಾವು ಕ್ರಿಸ್ತನನ್ನು ಮೊದಲು ನಂಬಿದ ಕಾಲದಲ್ಲಿ ಇದ್ದದ್ದಕ್ಕಿಂತ ಈಗ ನಮ್ಮ ವಿಮೋಚನೆಯು ಹತ್ತಿರವಾಯಿತು.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು; ನೀನು ಸೇರಬೇಕಾದ ಪಾತಾಳದಲ್ಲಿ ಯಾವ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.


ಈತನು ನಮ್ಮನ್ನು ಕೆಟ್ಟದ್ದಾಗಿರುವ ಈಗಿನ ದುಷ್ಟಯುಗದೊಳಗಿಂದ ಬಿಡಿಸಬೇಕೆಂದು ನಮ್ಮ ತಂದೆಯಾದ ದೇವರ ಚಿತ್ತಕ್ಕೆ ಅನುಸಾರವಾಗಿ ನಮ್ಮ ಪಾಪಗಳ ದೆಸೆಯಿಂದ ತನ್ನನ್ನು ಮರಣಕ್ಕೆ ಒಪ್ಪಿಸಿದನು.


ಈಗಿನ ಕಷ್ಟಕಾಲದ ನಿವಿುತ್ತ ಜನರು ಇದ್ದ ಹಾಗೇ ಇರುವದು ಒಳ್ಳೇದೆಂದು ಭಾವಿಸುತ್ತೇನೆ.


ಅವರಿಗೆ ವಿಪತ್ಕಾಲದಲ್ಲಿಯೂ ಆಶಾಭಂಗವಾಗುವದಿಲ್ಲ; ಬರಗಾಲದಲ್ಲಿಯೂ ಅವರಿಗೆ ಕೊರತೆಯಿಲ್ಲ.


ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ.


ಏಳು ಮಂದಿಗೆ, ಹೌದು, ಎಂಟು ಮಂದಿಗೆ ಹಂಚಿಬಿಡು; ಲೋಕದಲ್ಲಿ ಮುಂದೆ ಸಂಭವಿಸುವ ಕೇಡು ನಿನಗೆ ಗೊತ್ತಿಲ್ಲ.


ಯಾಕೋಬನು - ಇನ್ನೂ ಬಹಳ ಹೊತ್ತು ಇದೆ; ಕುರಿಗಳನ್ನು ಕೂಡಿಸುವ ಸಮಯವಾಗಿಲ್ಲ; ನೀರು ಕುಡಿಸಿ ಅವುಗಳನ್ನು ಮೇಯಿಸಿರಿ ಅನ್ನಲು


ಅದಕ್ಕೆ ರಾಜನು - ನೀವು ಆ ಕನಸನ್ನು ನನಗೆ ತಿಳಿಸದಿದ್ದರೆ [ಮರಣದಂಡನೆಯ] ನಿಯಮವೇ ನಿಮಗೆ ಗತಿಯಾಗುವದು ಎಂಬ ನನ್ನ ಮಾತು ಖಂಡಿತವೆಂದು ನೀವು ತಿಳಿದುಕೊಂಡು ಕಾಲಹರಣ ಮಾಡಿತ್ತಿದ್ದೀರಿ, ಇದು ನನಗೆ ಚೆನ್ನಾಗಿ ಗೊತ್ತು;


ಹಾಗೆಯೇ ಎರಡು ತಲಾಂತು ಹೊಂದಿದವನು ಇನ್ನೂ ಎರಡು ಸಂಪಾದಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು