Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 5:17 - ಕನ್ನಡ ಸತ್ಯವೇದವು J.V. (BSI)

17 ಮತ್ತು ಬುದ್ಧಿಹೀನರಾಗಿ ನಡೆಯದೆ ಕರ್ತನ ಚಿತ್ತವೇನೆಂಬದನ್ನು ವಿಚಾರಿಸಿ ತಿಳಿದವರಾಗಿರ್ರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಮತ್ತು ಬುದ್ಧಿಹೀನರಾಗಿ ನಡೆಯದೆ ಕರ್ತನ ಚಿತ್ತವೇನೆಂಬುದನ್ನು ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಬುದ್ಧಿಹೀನರಾಗಿರದೆ ಪ್ರಭುವಿನ ಚಿತ್ತವೇನೆಂದು ಗ್ರಹಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಿಮ್ಮ ಜೀವಿತಗಳ ಬಗ್ಗೆ ಮೂರ್ಖರಾಗಿರದೆ ದೇವರ ಚಿತ್ತವೇನೆಂಬುದನ್ನು ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದಕಾರಣ ಬುದ್ಧಿಹೀನರಾಗಿರದೆ ಕರ್ತನ ಚಿತ್ತವೇನೆಂಬುದನ್ನು ತಿಳಿದವರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತುಮಿ ಬುದ್ದ್ ನಸಲ್ಲೆ ಹೊವ್ನ್ ರಾಯ್‍ನಸ್ತನಾ ದೆವಾಚಿ ಇಚ್ಚ್ಯಾ ಕಾಯ್ ಮನ್ತಲೆ ಕಳ್ವುನ್ ಘೆವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 5:17
17 ತಿಳಿವುಗಳ ಹೋಲಿಕೆ  

ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತಕ್ಕನುಸಾರವಾದದ್ದು ಅಂದರೆ ಉತ್ತಮವಾದದ್ದೂ ಮೆಚ್ಚಿಕೆಯಾದದ್ದೂ ದೋಷವಿಲ್ಲದ್ದೂ ಯಾವ ಯಾವದೆಂದು ವಿವೇಚಿಸಿ ತಿಳುಕೊಳ್ಳುವಿರಿ.


ಎಲ್ಲಾದರಲ್ಲಿಯೂ ಕೃತಜ್ಞತಾಸ್ತುತಿಮಾಡಿರಿ; ಇದೇ ನಿಮ್ಮ ವಿಷಯವಾಗಿ ಕ್ರಿಸ್ತ ಯೇಸುವಿನಲ್ಲಿ ತೋರಿ ಬಂದ ದೇವರ ಚಿತ್ತ.


ಆದಕಾರಣ ನಾವು ನಿಮ್ಮ ಸುದ್ದಿಯನ್ನು ಕೇಳಿದ ದಿವಸದಿಂದ ನಿಮಗೋಸ್ಕರ ಪ್ರಾರ್ಥಿಸುವದನ್ನು ಬಿಡದೆ ನೀವು ಸಕಲ ಆತ್ಮೀಯ ಜ್ಞಾನವನ್ನೂ ಗ್ರಹಿಕೆಯನ್ನೂ ಹೊಂದಿ


ಆದಕಾರಣ ನೀವು ನಡಕೊಳ್ಳುವ ರೀತಿಯನ್ನು ಕುರಿತು ಚೆನ್ನಾಗಿ ನೋಡಿಕೊಳ್ಳಿರಿ. ಜ್ಞಾನವಿಲ್ಲದರಾಗಿರದೆ ಜ್ಞಾನವಂತರಾಗಿರ್ರಿ.


ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು; ಮೂಢಸಂತತಿಯವರು, ಅವಿವೇಕಿಗಳು; ದುಷ್ಕಾರ್ಯದಲ್ಲಿ ನಿಪುಣರು, ಸತ್ಕಾರ್ಯವನ್ನು ಮಾಡಲರಿಯರು.


ಯಾಕಂದರೆ ಶರೀರದಲ್ಲಿ ಬಾಧೆಪಟ್ಟವನು ಪಾಪದ ವಶದಿಂದ ತಪ್ಪಿಸಿಕೊಂಡವನಾಗಿ ಉಳಿದಿರುವ ತನ್ನ ಜೀವಮಾನಕಾಲದಲ್ಲಿ ಇನ್ನೂ ಮನುಷ್ಯರ ಅಭಿಲಾಷೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವದಕ್ಕೆ ಪ್ರಯತ್ನಮಾಡುವನು.


ಸಮಯವನ್ನು ಸುಮ್ಮನೆ ಕಳಕೊಳ್ಳದೆ ಅದನ್ನು ಬೆಲೆಯುಳ್ಳದ್ದೆಂದು ಉಪಯೋಗಿಸಿ ಹೊರಗಿನವರ ಮುಂದೆ ಜ್ಞಾನವುಳ್ಳವರಾಗಿ ನಡೆದುಕೊಳ್ಳಿರಿ.


ಆತನ ಚಿತ್ತದಂತೆ ನಡೆಯುವದಕ್ಕೆ ಯಾರಿಗೆ ಮನಸ್ಸದೆಯೋ ಅವರಿಗೆ ಈ ಬೋಧನೆಯು ದೇವರಿಂದ ಬಂದದ್ದೋ ನಾನೇ ಕಲ್ಪಿಸಿ ಹೇಳಿದ್ದೋ ಗೊತ್ತಾಗುವದು.


ಯೆಹೋವನ ಭಯವೇ ಜ್ಞಾನಕ್ಕೆ ಮೂಲವು; ಆತನ ಕಟ್ಟಳೆಗಳನ್ನು ನಡಿಸುವವರು ಪೂರ್ಣ ವಿವೇಕಿಗಳು. ಆತನ ಸ್ತುತಿಯು ನಿರಂತರವಾದದ್ದು.


ಆಮೇಲೆ ಮನುಷ್ಯರಿಗೆ - ಇಗೋ, ಕರ್ತನ ಭಯವೇ ಜ್ಞಾನವು ದುಷ್ಟತನವನ್ನು ಬಿಡುವದೇ ವಿವೇಕವು ಎಂದು ಹೇಳಿದನು.


ಮಾರ್ಗವನ್ನು ಗ್ರಹಿಸಿಕೊಳ್ಳುವದೇ ಜಾಣನ ಜ್ಞಾನ; ಮೂಢರ ಮೂರ್ಖತನ ಮೋಸಕರ.


ಆಗ ನೀನು ಯೆಹೋವನ ಭಯವನ್ನು ಅರಿತು ದೈವಜ್ಞಾನವನ್ನು ಪಡೆದುಕೊಳ್ಳುವಿ.


ಇವುಗಳನ್ನು ಕೈಕೊಂಡು ಅನುಸರಿಸಿರಿ. ಅನುಸರಿಸಿದರೇ ಅನ್ಯಜನಗಳು ನಿಮ್ಮನ್ನು ಜ್ಞಾನಿಗಳೂ ವಿವೇಕಿಗಳೂ ಎಂದು ತಿಳಿಯುವರು. ಅವರು ಈ ಆಜ್ಞೆಗಳ ವಿಷಯದಲ್ಲಿ ವರ್ತಮಾನವನ್ನು ಕೇಳಿ - ಈ ದೊಡ್ಡ ಜನಾಂಗವು ಜ್ಞಾನ ವಿವೇಕವುಳ್ಳ ಜನಾಂಗ ಎಂದು ಮಾತಾಡಿಕೊಳ್ಳುವರು.


ಸತ್ಯವನ್ನು ಎಂದರೆ ಜ್ಞಾನ ಸುಶಿಕ್ಷೆ ವಿವೇಕಗಳನ್ನು ಕೊಂಡುಕೋ; ಮಾರಿ ಬಿಡಬೇಡ.


ನಿನ್ನ ನೇಮಗಳ ದಾರಿಯನ್ನು ತಿಳಿಯಪಡಿಸು; ಆಗ ನಿನ್ನ ಅದ್ಭುತಕೃತ್ಯಗಳನ್ನು ಧ್ಯಾನಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು