Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 5:18 - ಕನ್ನಡ ಸತ್ಯವೇದವು J.V. (BSI)

18 ಮದ್ಯಪಾನ ಮಾಡಿ ಮತ್ತರಾಗಬೇಡಿರಿ; ಅದರಿಂದ ಪಟಿಂಗತನವು ಹುಟ್ಟುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಮದ್ಯಪಾನ ಮಾಡಿ ಮತ್ತರಾಗಬೇಡಿರಿ. ಅದರಿಂದ ಪಟಿಂಗತನವು ಹುಟ್ಟುತ್ತದೆ. ಆದರೆ ಪವಿತ್ರಾತ್ಮಭರಿತರಾಗಿದ್ದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಮದ್ಯಪಾನಮಾಡಿ ಮತ್ತರಾಗಬೇಡಿ. ಅದು ಪಾಪಕೃತ್ಯಗಳಿಗೆ ಎಡೆಮಾಡುತ್ತದೆ. ಬದಲಿಗೆ ಪವಿತ್ರಾತ್ಮಭರಿತರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಮದ್ಯಪಾನಮಾಡಿ ಮತ್ತರಾಗಬೇಡಿ, ಅದು ಪಾಪಕೃತ್ಯಗಳಿಗೆ ನಡೆಸುತ್ತದೆ, ಆದರೆ ಯಾವಾಗಲೂ ಪವಿತ್ರಾತ್ಮಭರಿತರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಮದ್ಯಪಾನ ಮಾಡಿ ಮತ್ತರಾಗಬೇಡಿರಿ. ಅದು ದುಷ್ಟತನಕ್ಕೆ ಎಡೆಮಾಡುತ್ತದೆ. ಆದರೆ ಪವಿತ್ರಾತ್ಮರಿಂದ ತುಂಬಿದವರಾಗಿದ್ದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ವಾಯ್ನ್ ಫಿವ್ನ್ ಫಿದುಡೆ ಹೊವ್ನ್ ರಾವ್‍ನಕಾಸಿ ತೆ ತುಮ್ಕಾ ಚುಕೆಚ್ಯಾ ಕಾಮಾಕ್ನಿ ಚಲ್ವುತಾ ಖರೆ ಕನ್ನಾಬಿ ಪವಿತ್ರ್ ಆತ್ಮ್ಯಾನ್ ಭರುನ್ ರಾವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 5:18
33 ತಿಳಿವುಗಳ ಹೋಲಿಕೆ  

ದ್ರಾಕ್ಷಾರಸವು ಪರಿಹಾಸ್ಯ, ಮದ್ಯವು ಕೂಗಾಟ; ಇವುಗಳಿಂದ ಓಲಾಡುವವನು ಜ್ಞಾನಿಯಲ್ಲ.


ದುಂದೌತಣ ಕುಡಿಕತನಗಳಲ್ಲಿಯಾಗಲಿ ಕಾಮ ವಿಲಾಸ ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೇಕಿಚ್ಚುಗಳಲ್ಲಿಯಾಗಲಿ ಕಾಲಕಳೆಯದೆ ಹಗಲು ಹೊತ್ತಿಗೆ ತಕ್ಕಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.


ಅವನು ಕರ್ತನ ದೃಷ್ಟಿಯಲ್ಲಿ ಮಹಾಪುರುಷನಾಗಿರುವನು; ದ್ರಾಕ್ಷಾರಸವನ್ನಾಗಲಿ ಯಾವ ಮದ್ಯವನ್ನಾಗಲಿ ಕುಡಿಯದವನಾಗಿರುವನು; ಅವನು ಹುಟ್ಟಿದಂದಿನಿಂದಲೂ ಪವಿತ್ರಾತ್ಮಭರಿತನಾಗಿರುವನು.


ಅಯ್ಯೋ, ಸುರಾಪಾನದಲ್ಲಿ ಶೂರರೂ ಮದ್ಯವಿುಶ್ರಣದಲ್ಲಿ ಸಾಹಸಿಗಳೂ ಆಗಿ


ಆದರೆ ಕ್ರೈಸ್ತ ಸಹೋದರನೆನಿಸಿಕೊಂಡವನು ಜಾರನಾದರೂ ಲೋಭಿಯಾದರೂ ವಿಗ್ರಹಾರಾಧಕನಾದರೂ ಬೈಯುವವನಾದರೂ ಕುಡಿಕನಾದರೂ ಸುಲುಕೊಳ್ಳುವವನಾದರೂ ಆಗಿದ್ದ ಪಕ್ಷದಲ್ಲಿ ಅವನ ಸಹವಾಸ ಮಾಡಬಾರದು, ಅಂಥವನ ಸಂಗಡ ಊಟಮಾಡಲೂಬಾರದು ಎಂದು ಬರೆದಿದ್ದೆನು.


ನಿದ್ದೆಮಾಡುವವರು ರಾತ್ರಿಯಲ್ಲಿ ನಿದ್ದೆಮಾಡುತ್ತಾರೆ, ಅಮಲೇರುವವರು ರಾತ್ರಿಯಲ್ಲಿ ಅಮಲೇರುತ್ತಾರಷ್ಟೆ.


ಆದರೆ ಆ ಆಳು - ನನ್ನ ಯಜಮಾನನು ಬರುವದಕ್ಕೆ ತಡಮಾಡುತ್ತಾನೆ ಅಂತ ತನ್ನ ಮನಸ್ಸಿನಲ್ಲಿ ಅಂದುಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆಯುವದಕ್ಕೂ ತಿಂದು ಕುಡಿದು ಅಮಲೇರುವದಕ್ಕೂ ತೊಡಗಿದರೆ


ಹಾಗಾದರೆ ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೇ ಪದಾರ್ಥಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಪವಿತ್ರಾತ್ಮವರವನ್ನು ಕೊಡುವನಲ್ಲವೇ ಅಂದನು.


ಕಳ್ಳರು ಲೋಭಿಗಳು ಕುಡಿಕರು ಬೈಯುವವರು ಸುಲುಕೊಳ್ಳುವವರು ಇವರೊಳಗೆ ಒಬ್ಬರಾದರೂ ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲ.


ಸಭೆಯ ಹಿರಿಯನು ನಿಂದಾರಹಿತನೂ ಏಕಪತ್ನಿಯುಳ್ಳವನೂ ಆಗಿರಬೇಕು. ಅವನ ಮಕ್ಕಳು ಕರ್ತನನ್ನು ನಂಬಿದವರಾಗಿರಬೇಕು; ಅವರು ದುರ್ಮಾರ್ಗಸ್ಥರೆನಿಸಿಕೊಂಡವರಾಗಲಿ ಅಧಿಕಾರಕ್ಕೆ ಒಳಗಾಗದವರಾಗಲಿ ಆಗಿರಬಾರದು.


ನಿಮ್ಮ ವಿಷಯದಲ್ಲಿ ಜಾಗರೂಕರಾಗಿರ್ರಿ. ಅತಿಭೋಜನದ ಮದಡಿನಿಂದಲೂ ಅಮಲಿನಿಂದಲೂ ಪ್ರಪಂಚದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿವಸವು ನಿಮ್ಮ ಮೇಲೆ ಉರ್ಲಿನಂತೆ ಫಕ್ಕನೆ ಬಂದೀತು.


ಎಲೈ, ಬಾಯಾರಿದ ಸಕಲ ಜನರೇ, ನೀರಿನ ಬಳಿಗೆ ಬನ್ನಿರಿ, ಹಣವಿಲ್ಲದವನು ಸಹ ಬರಲಿ! ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ! ಬಂದು ದ್ರಾಕ್ಷಾರಸವನ್ನೂ ಹಾಲನ್ನೂ ಹಣಕೊಡದೆ ಕ್ರಯವಿಲ್ಲದೆ ತೆಗೆದುಕೊಳ್ಳಿರಿ.


ಈ ನಮ್ಮ ಮಗನು ನಮ್ಮ ಮಾತನ್ನು ಕೇಳುವದೇ ಇಲ್ಲ. ಆಜ್ಞೆಗೆ ಒಳಗಾಗುವದಿಲ್ಲ; ಇವನು ಮೊಂಡ ಕುಡಿಕ ತುಂಟ ಎಂದು ಸಾಕ್ಷಿ ಹೇಳಬೇಕು. ಆಗ ಊರಿನವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು.


ಭೋಜನವಾಗುವಲ್ಲಿ ಪ್ರತಿಯೊಬ್ಬನು ತಾನು ತಂದದ್ದನ್ನು ಮತ್ತೊಬ್ಬರಿಗಿಂತ ಮುಂದಾಗಿ ಊಟಮಾಡುತ್ತಾನೆ; ಹೀಗೆ ಒಬ್ಬನು ಹಸಿದಿರುತ್ತಾನೆ, ಮತ್ತೊಬ್ಬನು ಕುಡಿದು ಮತ್ತನಾಗಿರುತ್ತಾನೆ.


ನನ್ನನ್ನು ತುಸು ಎಳೆ; ನಿನ್ನ ಹಿಂದೆ ಓಡಿ ಬರುವೆವು; ರಾಜನು ನನ್ನನ್ನು ಅಂತಃಪುರಕ್ಕೆ ಬರಮಾಡಿದ್ದಾನೆ; ನಿನ್ನಲ್ಲಿ ಹರ್ಷಿಸಿ ಉಲ್ಲಾಸಿಸುವೆವು, ದ್ರಾಕ್ಷಾರಸಕ್ಕಿಂತಲೂ ನಿನ್ನ ಲಾಲನೆಯನ್ನು ಹೆಚ್ಚಾಗಿ ಕೊಂಡಾಡುವೆವು; ನಿನ್ನನ್ನು ಯಥಾರ್ಥವಾಗಿ ಪ್ರೀತಿಸುವರು.


ಅವನು ದ್ರಾಕ್ಷಾರಸವನ್ನು ಕುಡಿಯಲು ಅಮಲೇರಿದ್ದರಿಂದ ಗುಡಾರದಲ್ಲಿ ಬೆತ್ತಲೆಯಾಗಿ ಬಿದ್ದಿದ್ದನು.


ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪಂಚಪಾತ್ರೆ ಬಟ್ಟಲು ಇವುಗಳ ಹೊರಭಾಗವನ್ನು ಶುಚಿಮಾಡುತ್ತೀರಿ; ಆದರೆ ಅವು ಒಳಗೆ ಸುಲುಕೊಂಡವುಗಳಿಂದಲೂ ಇಹಭೋಗ ಪದಾರ್ಥಗಳಿಂದಲೂ ತುಂಬಿರುತ್ತವೆ.


ಇದಲ್ಲದೆ ಸೇನಾಧೀಶ್ವರನಾದ ಯೆಹೋವನು ಈ ಪರ್ವತದಲ್ಲಿ ಸಕಲಜನಾಂಗಗಳಿಗೂ ಸಾರವತ್ತಾದ ಮೃಷ್ಟಾನ್ನದಿಂದಲೂ ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾರಸದಿಂದಲೂ ಕೂಡಿದ ಔತಣವನ್ನು ಅಣಿಮಾಡುವನು.


ಊರುಬಾಗಲಲ್ಲಿ ಕೂತುಕೊಳ್ಳುವವರ ಆಡಿಕೆಗೆ ಗುರಿಯಾಗಿದ್ದೇನೆ. ಕುಡಿಕರು ನನ್ನ ವಿಷಯ ಹಾಡಿ ಗೇಲಿಮಾಡುತ್ತಾರೆ.


ತನ್ನ ಜೊತೆ ಆಳುಗಳನ್ನು ಹೊಡೆಯುವದಕ್ಕೆ ತೊಡಗಿ ಕುಡಿಕರ ಸಂಗಡ ತಿನ್ನುತ್ತಾ ಕುಡಿಯುತ್ತಾ ಇರುವದಾದರೆ,


ನಿನ್ನ ಮುದ್ದುಗಳು ಉತ್ತಮದ್ರಾಕ್ಷಾರಸದ ಹಾಗಿರಲಿ; ನಿದ್ರಿಸುವವರ ತುಟಿಗಳಲ್ಲಿ ಸರಾಗವಾಗಿ ಹರಿಯುವ ಈ ರಸವು ನನ್ನ ನಲ್ಲೆಯಾದ ನಿನ್ನಲ್ಲಿಯೂ ಮೆಲ್ಲನೆ ಇಳಿದು ಬರುವದು.


ಮದಲಿಂಗನನ್ನು ಕರೆದು - ಎಲ್ಲರು ಹಿರಿದಿನ ದ್ರಾಕ್ಷಾರಸವನ್ನು ಮೊದಲುಕೊಟ್ಟು ಅಮಲೇರಿದ ಮೇಲೆ ಕಿರಿದಿನ ದ್ರಾಕ್ಷಾರಸವನ್ನು ಕೊಡುತ್ತಾರೆ; ನೀನು ಹಿರಿದಿನ ದ್ರಾಕ್ಷಾರಸವನ್ನು ಇದುವರೆಗೂ ಇಟ್ಟುಕೊಂಡಿದ್ದೀ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು