ಎಫೆಸದವರಿಗೆ 5:19 - ಕನ್ನಡ ಸತ್ಯವೇದವು J.V. (BSI)19 ಆದರೆ ಪವಿತ್ರಾತ್ಮಭರಿತರಾಗಿದ್ದು ಕೀರ್ತನೆಗಳಿಂದಲೂ ಆತ್ಮಸಂಬಂಧವಾದ ಪದಗಳಿಂದಲೂ ಒಬ್ಬರಿಗೊಬ್ಬರು ಮಾತಾಡಿಕೊಳ್ಳುತ್ತಾ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಗಾನಮಾಡುತ್ತಾ ಕೀರ್ತನೆ ಹಾಡುತ್ತಾ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ, ಆತ್ಮೀಕ ಹಾಡುಗಳಿಂದಲೂ ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯಗಳಲ್ಲಿ ಕರ್ತನನ್ನು ಹಾಡಿ ಕೊಂಡಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಕೀರ್ತನೆ, ಹಾಡು, ಭಕ್ತಿಗೀತೆ ಇವುಗಳಿಂದ ನಿಮ್ಮ ಭಾವಗಳನ್ನು ಪರಸ್ಪರ ವ್ಯಕ್ತಪಡಿಸಿರಿ. ಹೃದಯಾಂತರಾಳದಿಂದ ಹಾಡಿ ಪ್ರಭುವಿಗೆ ಸ್ತುತಿಸಲ್ಲಿಸಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮಿಕ ಹಾಡುಗಳಿಂದಲೂ ಒಬ್ಬರಿಗೊಬ್ಬರು ಮಾತಾಡಿರಿ. ನಿಮ್ಮ ಹೃದಯಗಳಲ್ಲಿ ಪ್ರಭುವಿಗೆ ವಾದ್ಯ ನುಡಿಸುತ್ತಾ ಹಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮನಿಂದಾದ ಹಾಡುಗಳಿಂದಲೂ ಪರಸ್ಪರ ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯಾಂತರಾಳದಿಂದ ಕರ್ತನಿಗೆ ಹಾಡಿ ಹರಸಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಕಿರ್ತನ್ಯಾನಿ, ಗಿತಾನಿ, ಅನಿ ಆತ್ಮಿಕ್ ಗಿತಾನಿ ಎಕಾಮೆಕಾಕ್ ಬೊಲುನ್ಗೆತ್ ರಾವಾ ತುಮ್ಚ್ಯಾ ಮನಾತ್ನಿ ಧನಿಯಾಕ್ ವಾಜಾಪಾ ವಾಜ್ವುನ್ಗೆತ್ ಗಿತಾ ಸಾಂಗಾ. ಅಧ್ಯಾಯವನ್ನು ನೋಡಿ |