Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 5:27 - ಕನ್ನಡ ಸತ್ಯವೇದವು J.V. (BSI)

27 ಅದನ್ನು ಕಳಂಕ ಸುಕ್ಕು ಮುಂತಾದ್ದೊಂದೂ ಇಲ್ಲದ ಕನ್ನಿಕೆಯೋ ಎಂಬಂತೆ ಪರಿಶುದ್ಧವೂ ನಿರ್ದೋಷವೂ ಮಹಿಮೆಯುಳ್ಳದ್ದೂ ಆಗಿರುವ ಸಭೆಯನ್ನಾಗಿ ತನ್ನೆದುರಿನಲ್ಲಿ ನಿಲ್ಲಿಸಿಕೊಳ್ಳಬೇಕೆಂದು ವಾಕ್ಯೋಪದೇಶ ಸಹಿತವಾದ ಜಲಸ್ನಾನವನ್ನು ಮಾಡಿಸಿ ಶುದ್ಧಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅದನ್ನು ಕಳಂಕ ಸುಕ್ಕು ಮುಂತಾದದ್ದೊಂದೂ ಇಲ್ಲದಂತೆ ಪರಿಶುದ್ಧವೂ, ನಿರ್ದೋಷವೂ, ಮಹಿಮೆಯುಳ್ಳದ್ದೂ ಆಗಿರುವ ಸಭೆಯನ್ನಾಗಿ ತನ್ನೆದುರಿನಲ್ಲಿ ನಿಲ್ಲಿಸಿಕೊಳ್ಳಬೇಕೆಂದು ವಾಕ್ಯೋಪದೇಶ ಸಹಿತವಾದ ಜಲಸ್ನಾನವನ್ನು ಮಾಡಿಸಿ ಶುದ್ಧಿಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಧರ್ಮಸಭೆ ಕಳಂಕಕಲ್ಮಷವಾಗಲಿ, ಸುಕ್ಕುಬೊಕ್ಕೆಯಾಗಲಿ ಇಲ್ಲದ ಸೌಂದರ್ಯವತಿಯಾಗಿ ತಮಗೆ ಅರ್ಪಿಸಿಕೊಳ್ಳುವಂತೆ ಹೀಗೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಮಹಿಮಾಪೂರ್ಣಳಾದ ಕನ್ನಿಕೆಯೋ ಎಂಬಂತಿರುವ ಸಭೆಯನ್ನು ತನಗೇ ಕೊಡಬೇಕೆಂದು ಆತನು ಪ್ರಾಣಕೊಟ್ಟನು. ಸಭೆಯು ದೋಷವಿಲ್ಲದೆ ಶುದ್ಧವಾಗಿರಬೇಕೆಂದು ಮತ್ತು ದುಷ್ಟತ್ವವಾಗಲಿ ಪಾಪವಾಗಲಿ ಅಥವಾ ಬೇರೆ ಯಾವುದೇ ತಪ್ಪಾಗಲಿ ಸಭೆಯಲ್ಲಿರಕೂಡದೆಂದು ಆತನು ಪ್ರಾಣಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅದನ್ನು ಕಳಂಕ, ಸುಕ್ಕು ಇಂಥದ್ದು ಯಾವುದೂ ಇಲ್ಲದೆ ಪರಿಶುದ್ಧವೂ ದೋಷವಿಲ್ಲದ್ದೂ ಆಗಿರುವ ಮಹಿಮೆಯುಳ್ಳ ಸಭೆಯನ್ನಾಗಿ ತಮ್ಮ ಮುಂದೆ ನಿಲ್ಲಿಸಿಕೊಳ್ಳಬೇಕೆಂದು ತಮ್ಮನ್ನೇ ಒಪ್ಪಿಸಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಮಹಿಮೆನ್ ಭರಲ್ಲೆ ನಿಂಬೆಚೆಡು ಸಾರ್ಕೆ ಹೊತ್ತ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ ಅಪ್ನಾಕ್ ದಿವ್ಚೆ ಮನುನ್ ತೆನಿ ಅಪ್ಲೊ ಜಿವ್ ದಿಲ್ಯಾನ್, ತಾಂಡೊ ದೊಶ್ ನಸ್ತಾನಾ ಪವಿತ್ರ್ ಹೊವ್ನ್ ರ್‍ಹಾವ್ಚೆ ಮನುನ್ ಅನಿ ಬುರ್ಶ್ಯೆಪಾನ್ ಹೊಂವ್ದಿ ಚುಕ್ ಹೊಂವ್ದಿ ತಾಂಡ್ಯಾತ್ ರಾವ್ ನ್ಹಯ್ ಮನುನ್ ತೆನಿ ಅಪ್ಲೊ ಜಿವ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 5:27
21 ತಿಳಿವುಗಳ ಹೋಲಿಕೆ  

ಆತನು ನಿಮ್ಮನ್ನು ಸಹ ತನ್ನ ಕುಮಾರನ ಸ್ಥೂಲ ದೇಹದಲ್ಲಿ ಉಂಟಾದ ಮರಣದ ಮೂಲಕ ಈಗ ಸಂಧಾನಪಡಿಸಿಕೊಂಡಿದ್ದಾನೆ; ಮತ್ತು ನಿಮ್ಮನ್ನು ಪರಿಶುದ್ಧರನ್ನಾಗಿಯೂ ನಿರ್ದೋಷಿಗಳನ್ನಾಗಿಯೂ ನಿರಪರಾಧಿಗಳನ್ನಾಗಿಯೂ ತನ್ನ ಸನ್ನಿಧಿಯಲ್ಲಿ ನಿಲ್ಲಿಸಬೇಕೆಂದಿದ್ದಾನೆ.


ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಮ್ಮನ್ನು ನಿರ್ಜೀವಕರ್ಮಗಳಿಂದ ಬಿಡಿಸಿ ನಾವು ಜೀವವುಳ್ಳ ದೇವರನ್ನು ಆರಾಧಿಸುವವರಾಗುವಂತೆ ನಮ್ಮ ಮನಸ್ಸನ್ನು ಶುದ್ಧೀಕರಿಸುವದಲ್ಲವೇ.


ಪೂರ್ಣಾಂಗವಾದ ನಿಷ್ಕಳಂಕ ಯಜ್ಞದ ಕುರಿಯ ರಕ್ತದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ಬಲ್ಲಿರಲ್ಲವೇ.


ಹೇಗಂದರೆ ನಾವು ಪ್ರೀತಿಯಲ್ಲಿ ನಡೆದು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ದೋಷವಿಲ್ಲದವರೂ ಆಗಿರಬೇಕೆಂದು ನಮ್ಮನ್ನು ಜಗದುತ್ಪತ್ತಿಗೆ ಮುಂಚೆ ಕ್ರಿಸ್ತನಲ್ಲಿ ಆರಿಸಿಕೊಂಡನು.


ಯಾಕಂದರೆ ದೇವರಲ್ಲಿರುವಂಥ ಚಿಂತೆಯಿಂದಲೇ ನಾನು ನಿಮ್ಮ ವಿಷಯದಲ್ಲಿ ಚಿಂತಿಸುತ್ತೇನೆ. ನಿಮ್ಮನ್ನು ಕ್ರಿಸ್ತನೆಂಬ ಒಬ್ಬನೇ ಪುರುಷನಿಗೆ ಶುದ್ಧ ಕನ್ಯೆಯಂತೆ ಒಪ್ಪಿಸಬೇಕೆಂದು ನಿಮ್ಮನ್ನು ಆತನಿಗೆ ನಿಶ್ಚಯಮಾಡಿದೆನಲ್ಲಾ.


ನಾವು ಆತನನ್ನು ಪ್ರಸಿದ್ಧಿಪಡಿಸುವವರಾಗಿ ಸಕಲರಿಗೂ ಬುದ್ಧಿಹೇಳುತ್ತಾ ಸರ್ವರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ ದೇವರ ಮುಂದೆ ಎಲ್ಲರನ್ನು ಕ್ರಿಸ್ತನಲ್ಲಿ ಪ್ರವೀಣರನ್ನಾಗಿ ನಿಲ್ಲಿಸುವದಕ್ಕೆ ಪ್ರಯತ್ನಿಸುತ್ತಿದ್ದೇವೆ.


ಕರ್ತನಾದ ಯೇಸುವನ್ನು ಎಬ್ಬಿಸಿದಾತನು ನಮ್ಮನ್ನು ಸಹ ಯೇಸುವಿನೊಂದಿಗೆ ಎಬ್ಬಿಸಿ ನಿಮ್ಮ ಜೊತೆಯಲ್ಲಿ ತನ್ನ ಮುಂದೆ ನಿಲ್ಲಿಸುವನೆಂದು ತಿಳಿದವರಾಗಿದ್ದೇವೆ.


ನನ್ನ ಪ್ರಿಯಳೇ, ನೀನು ಸರ್ವಾಂಗಸುಂದರಿ, ನಿನ್ನಲ್ಲಿ ಯಾವ ದೋಷವೂ ಇಲ್ಲ.


ಎಡವಿಬೀಳದಂತೆ ನಿಮ್ಮನ್ನು ಕಾಪಾಡುವದಕ್ಕೂ ತನ್ನ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿ ಹರ್ಷದೊಡನೆ ನಿಲ್ಲಿಸುವದಕ್ಕೂ


ಆದಕಾರಣ ಪ್ರಿಯರೇ, ನೀವು ಇವುಗಳನ್ನು ಎದುರು ನೋಡುವವರಾಗಿರುವದರಿಂದ ಶಾಂತರಾಗಿದ್ದು ಆತನೆದುರಿನಲ್ಲಿ ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಕಾಣಿಸಿಕೊಳ್ಳುವದಕ್ಕೆ ಪ್ರಯಾಸಪಡಿರಿ.


ನಿತ್ಯಜೀವಕ್ಕಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಕರುಣೆಯನ್ನು ಎದುರುನೋಡುತ್ತಾ ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ.


ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರಮಾಡಲಿ. ನಮ್ಮ ಕರ್ತನಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ ನಿಮ್ಮ ಆತ್ಮಪ್ರಾಣಶರೀರಗಳು ದೋಷವಿಲ್ಲದೆ ಸಂಪೂರ್ಣವಾಗಿ ಕಾಣಿಸುವಂತೆ ಕಾಪಾಡಲ್ಪಡಲಿ.


ಅಂತಃಪುರದಲ್ಲಿ ರಾಜಕುಮಾರಿಯು ಎಷ್ಟೋ ವೈಭವದಿಂದಿದ್ದಾಳೆ; ಆಕೆಯು ಜರತಾರಿಯ ವಸ್ತ್ರವನ್ನು ಧರಿಸಿಕೊಂಡಿದ್ದಾಳೆ.


ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಮೇಲುಗಳ ಸುದ್ದಿಯನ್ನು ಕೇಳಿ ನಾನು ಈ ಪಟ್ಟಣಕ್ಕೆ ಉಂಟುಮಾಡುವ ಸುಖಸಮಾಧಾನಗಳನ್ನು ನೋಡಿ ಹೆದರಿ ನಡುಗುವ ಸಕಲ ಭೂರಾಜ್ಯಗಳ ಮುಂದೆ ಈ ಪಟ್ಟಣವು ನನ್ನ ಕೀರ್ತಿಯೂ ಮಹಿಮೆಯೂ ಆನಂದದ ಬಿರುದೂ ಆಗುವದು.


ನೀನು ಯೆಹೋವನ ಕೈಯಲ್ಲಿ ಸುಂದರ ಕಿರೀಟವಾಗಿಯೂ ನಿನ್ನ ದೇವರ ಹಸ್ತದಲ್ಲಿ ರಾಜಶಿರೋವೇಷ್ಟನವಾಗಿಯೂ ಇರುವಿ.


ದೇವನಗರವೇ, ನಿನ್ನ ವಿಷಯವಾದ ಗೌರವೋಕ್ತಿಯೇನಂದರೆ - ಸೆಲಾ.


ಸ್ತ್ರೀ ಸಹವಾಸದಿಂದ ಮಲಿನರಾಗದವರು ಇವರೇ; ಇವರು ಕನ್ಯೆಯರಂತೆ ನಿಷ್ಕಳಂಕರು. ಯಜ್ಞದ ಕುರಿಯಾದಾತನು ಎಲ್ಲಿ ಹೋದರೂ ಇವರು ಆತನ ಹಿಂದೆ ಹೋಗುವರು. ಇವರು ಮನುಷ್ಯರೊಳಗಿಂದ ಸ್ವಕೀಯ ಜನರಾಗಿ ಕೊಂಡುಕೊಳ್ಳಲ್ಪಟ್ಟು ದೇವರಿಗೂ ಯಜ್ಞದ ಕುರಿಯಾದಾತನಿಗೂ ಪ್ರಥಮಫಲದಂತಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು