Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 5:29 - ಕನ್ನಡ ಸತ್ಯವೇದವು J.V. (BSI)

29 ಯಾರೂ ಎಂದೂ ಸ್ವಶರೀರವನ್ನು ಹಗೆಮಾಡಿದ್ದಿಲ್ಲ; ಎಲ್ಲರೂ ತಮ್ಮ ಶರೀರಗಳನ್ನು ಪೋಷಿಸಿ ಸಂರಕ್ಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಯಾರೂ ಎಂದೂ ಸ್ವಂತ ಶರೀರವನ್ನು ಹಗೆಮಾಡಿದ್ದಿಲ್ಲವಲ್ಲ, ಎಲ್ಲರೂ ತಮ್ಮ ಶರೀರಗಳನ್ನು ಪೋಷಿಸಿ ಪಾಲನೆ ಮಾಡುತ್ತಾರಷ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಸ್ವಂತ ಶರೀರವನ್ನು ಯಾರೂ ಎಂದೂ ದ್ವೇಷಿಸುವುದಿಲ್ಲ, ಬದಲಿಗೆ ಅದನ್ನು ಪೋಷಿಸಿ ಪಾಲನೆ ಮಾಡುತ್ತಾನೆ. ಧರ್ಮಸಭೆಯನ್ನು ಸಹ ಕ್ರಿಸ್ತಯೇಸು ಹೀಗೆಯೇ ಕಾಪಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಏಕೆಂದರೆ ಯಾವನೂ ತನ್ನ ದೇಹವನ್ನು ದ್ವೇಷಿಸುವುದಿಲ್ಲ. ಪ್ರತಿಯೊಬ್ಬನು ತನ್ನ ದೇಹವನ್ನು ಪೋಷಿಸಿ ಜಾಗ್ರತೆಯಿಂದ ನೋಡಿಕೊಳ್ಳುತ್ತಾನೆ. ಕ್ರಿಸ್ತನು ಸಭೆಗೋಸ್ಕರ ಮಾಡುವಂಥದ್ದು ಅದೇ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಏಕೆಂದರೆ, ಯಾರೂ ಸ್ವಂತ ಶರೀರವನ್ನು ಎಂದೂ ದ್ವೇಷಿಸುವುದಿಲ್ಲ, ಬದಲಿಗೆ ತಮ್ಮ ಶರೀರವನ್ನು ಪೋಷಿಸಿ ಸಂರಕ್ಷಿಸುತ್ತಾರೆ. ಅದೇ ಪ್ರಕಾರ ಕರ್ತ ಯೇಸು ಸಭೆಯನ್ನು ಪೋಷಿಸಿ, ಸಂರಕ್ಷಿಸುವವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಕಶ್ಯಾಕ್ ಮಟ್ಲ್ಯಾರ್, ಕೊನ್‍ಬಿ ಅಪ್ಲ್ಯಾ ಸ್ವತಾಚ್ಯಾ ಆಂಗಾಕ್ ಕನ್ನಾಬಿ ಕುಸ್ಡೆ ಕರಿನಾ, ಹರ್ ಎಕ್ಲೊಬಿ ಅಪ್ಲ್ಯಾ ಆಂಗಾಕ್ ಬಾಳ್ಗುನ್ ಹುಶ್ಯಾರ್ಕಿನ್ ಬಗುನ್ ಘೆತಾ ಕ್ರಿಸ್ತ್ ಅಪ್ನಾಚ್ಯಾ ಲೊಕಾಂಚ್ಯಾಸಾಟ್ನಿ ಕರ್ತಲೆಬಿ ಹೆಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 5:29
13 ತಿಳಿವುಗಳ ಹೋಲಿಕೆ  

ಇದರ ನಿವಿುತ್ತದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರಿಬ್ಬರೂ ಒಂದೇ ಶರೀರವಾಗಿರುವರು ಎಂದು ಬರೆದದೆ.


ಮೂಢನು ಅಪ್ಪುಗೈ ಮಾಡಿಕೊಂಡು ತನ್ನ ಮಾಂಸವನ್ನು ತಾನೇ ತಿನ್ನುವನು.


ಪರೋಪಕಾರವು ತನಗೂ ಉಪಕಾರ; ಕ್ರೂರನು ತನ್ನ ಶರೀರವನ್ನೂ ಹಿಂಸಿಸುವನು.


ಆತನು ಕುರುಬನಂತೆ ತನ್ನ ಮಂದೆಯನ್ನು ಮೇಯಿಸುವನು, ಮರಿಗಳನ್ನು ಕೈಯಿಂದ ಕೂಡಿಸಿ ಎದೆಗೆತ್ತಿಕೊಳ್ಳುವನು. ಹಾಲುಕುಡಿಸುವ ಕುರಿಗಳನ್ನು ಮೆಲ್ಲಗೆ ನಡಿಸುವನು ಎಂದು ಸಾರು.


ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಕೂಡಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಕೂಡಿಸಿಕೊಳ್ಳುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿಮಗೆ ಮನಸ್ಸಿಲ್ಲದೆ ಹೋಯಿತು.


ತಂದೆತಾಯಿಗಳ ಮಾತನ್ನು ಕೇಳದವರೂ ವಿವೇಕವಿಲ್ಲದವರೂ ಮಾತಿಗೆ ತಪ್ಪುವವರೂ ಮಮತೆಯಿಲ್ಲದವರೂ ಕರುಣೆಯಿಲ್ಲದವರೂ ಆದರು.


ತೋಟದ ಮರಗಳು ಹಣ್ಣುಬಿಡುವವು; ಹೊಲಗಳು ಒಳ್ಳೆಯ ಬೆಳೆಕೊಡುವವು; ಜನರು ಸ್ವದೇಶದಲ್ಲಿ ನೆಮ್ಮದಿಯಾಗಿರುವರು; ಅವರ ಮೇಲೆ ಹೇರಿದ ನೊಗದ ಗೂಟಗಳನ್ನು ನಾನು ಮುರಿದುಹಾಕಿ ಅವರನ್ನು ಅಡಿಯಾಳಾಗಿ ಮಾಡಿಕೊಂಡವರ ಅಧೀನದಿಂದ ಬಿಡಿಸಿದಾಗ ನಾನೇ ಯೆಹೋವನು ಎಂದು ಅವರಿಗೆ ದೃಢವಾಗುವದು.


ಅವನು ಆಕೆಯನ್ನು ನೋಡಿ- ಈಗ ಸರಿ; ಈಕೆಯು ನನ್ನ ಎಲುಬುಗಳಿಂದ ಬಂದ ಎಲುಬೂ ನನ್ನ ಮಾಂಸದಿಂದ ಬಂದ ಮಾಂಸವೂ ಆಗಿದ್ದಾಳೆ; ಈಕೆಯು ನರನಿಂದ ಉತ್ಪತ್ತಿಯಾದ ಕಾರಣ ನಾರೀ ಎನ್ನಿಸಿಕೊಳ್ಳುವಳು ಅಂದನು.


ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ನೋಡಿರಿ; ಅವು ಬಿತ್ತುವದಿಲ್ಲ, ಕೊಯ್ಯುವದಿಲ್ಲ, ಕಣಜಗಳಲ್ಲಿ ತುಂಬಿಟ್ಟುಕೊಳ್ಳುವದಿಲ್ಲ; ಆದಾಗ್ಯೂ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳನ್ನು ಸಾಕಿ ಸಲಹುತ್ತಾನೆ; ಅವುಗಳಿಗಿಂತ ನೀವು ಹೆಚ್ಚಿನವರಲ್ಲವೋ?


ಹಾಗೆಯೇ ಪುರುಷರು ಸಹ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವ ಪ್ರಕಾರವೇ ತಮ್ಮ ಹೆಂಡತಿಯರನ್ನು ಪ್ರೀತಿಸುವ ಹಂಗಿನವರಾಗಿದ್ದಾರೆ. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸಿಕೊಳ್ಳುವವನಾಗಿದ್ದಾನೆ.


ಯಾವ ದೇಹಕ್ಕೆ ನಾವು ಅಂಗಗಳಾಗಿದ್ದೇವೋ ಸಭೆಯೆಂಬ ಆ ದೇಹವನ್ನು ಕ್ರಿಸ್ತನು ಹಾಗೆಯೇ ಪೋಷಿಸಿ ಸಂರಕ್ಷಿಸುತ್ತಾನಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು