ಎಫೆಸದವರಿಗೆ 5:33 - ಕನ್ನಡ ಸತ್ಯವೇದವು J.V. (BSI)33 ಅದಿರಲಿ; ನಿಮ್ಮಲ್ಲಿ ಪ್ರತಿಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು; ಪ್ರತಿ ಹೆಂಡತಿಯು ತನ್ನ ಗಂಡನಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಆದರೆ ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು. ಪ್ರತಿ ಹೆಂಡತಿಯೂ ತನ್ನ ಗಂಡನಿಗೆ ಗೌರವದಿಂದ ನಡೆದುಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಆದರೆ ಇದು ನಿಮಗೂ ಅನ್ವಯಿಸುತ್ತದೆ. ಪ್ರತಿಯೊಬ್ಬ ಪುರುಷನು ತನ್ನನ್ನು ಪ್ರೀತಿಸುವಂತೆ ತನ್ನ ಪತ್ನಿಯನ್ನೂ ಪ್ರೀತಿಸಲಿ ಮತ್ತು ಪ್ರತಿಯೊಬ್ಬ ಸ್ತ್ರೀಯು ತನ್ನ ಪತಿಯ ವಿಷಯದಲ್ಲಿ ಗೌರವದಿಂದ ನಡೆದುಕೊಳ್ಳಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಆದರೆ ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ತಾನು ಪ್ರೀತಿಸುವಂತೆ ತನ್ನ ಹೆಂಡತಿಯನ್ನು ಪ್ರೀತಿಸಬೇಕು ಮತ್ತು ಸ್ತ್ರೀಯು ತನ್ನ ಗಂಡನಿಗೆ ಭಯಭಕ್ತಿಯಿಂದರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಆದರೂ ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನನ್ನು ಪ್ರೀತಿಸುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು. ಹೆಂಡತಿಯು ತನ್ನ ಗಂಡನನ್ನು ಗೌರವಿಸುವವಳಾಗಿರಬೇಕು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 ಹೆ ಸಗ್ಳೆ ತುಮ್ಕಾಬಿ ಲಾಗು ಹೊತಾ, ತುಮ್ಚ್ಯಾತ್ ಹರ್ ಎಕ್ ಘವ್ ಮಾನುಸ್ ಬಿ ಅಪ್ನಾಕ್ ಅಪ್ನಿ ಪ್ರೆಮ್ ಕರುನ್ ಘೆಟಲ್ಯಾ ಸಾರ್ಕೆ ಅಪ್ಲ್ಯಾ ಬಾಯ್ಕೊಕ್‍ಬಿ ಪ್ರೆಮ್ ಕರುಚೆ, ಅನಿ ಬಾಯ್ಕೊ ಅಪ್ಲ್ಯಾ ಘವಾಕ್ ಮಾನುನ್ ಘೆವ್ನ್ ಅನಿ ದೆವಸ್ಪಾನಾನ್ ಚಲುಚಿ. ಅಧ್ಯಾಯವನ್ನು ನೋಡಿ |