Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 5:6 - ಕನ್ನಡ ಸತ್ಯವೇದವು J.V. (BSI)

6 ಹುರುಳಿಲ್ಲದ ಮಾತುಗಳನ್ನಾಡುವವರಿಗೆ ಕಿವಿಗೊಟ್ಟು ಮೋಸಹೋಗಬೇಡಿರಿ; ಅಂಥ ಕೃತ್ಯಗಳ ನಿವಿುತ್ತದಿಂದ ದೇವರ ಕೋಪವು ಆತನಿಗೆ ಅವಿಧೇಯರಾಗಿರುವವರ ಮೇಲೆ ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಹುರುಳಿಲ್ಲದ ಮಾತುಗಳಿಂದ ಯಾರು ನಿಮ್ಮನ್ನು ವಂಚಿಸದಿರಲಿ, ಇಂಥ ಕೃತ್ಯಗಳ ನಿಮಿತ್ತ ದೇವರ ಕೋಪವು ಆತನಿಗೆ ಅವಿಧೇಯರಾಗಿರುವವರ ಮೇಲೆ ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಹುರುಳಿಲ್ಲದ ಮಾತುಗಳನ್ನು ಆಡುವವರಿಗೆ ಮರುಳಾಗದಿರಿ. ಇಂಥ ಕೃತ್ಯಗಳನ್ನು ಮಾಡುವ ದುಷ್ಕರ್ಮಿಗಳ ಮೇಲೆ ದೇವರ ಕೋಪ ಎರಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅಸತ್ಯವಾದ ಸಂಗತಿಗಳನ್ನು ಹೇಳಿ ನಿಮ್ಮನ್ನು ಮೋಸಪಡಿಸಲು ಯಾರಿಗೂ ಅವಕಾಶ ಕೊಡಬೇಡಿ. ಆ ಕೆಟ್ಟಸಂಗತಿಗಳ ನಿಮಿತ್ತ ದೇವರ ಕೋಪವು ಆತನಿಗೆ ವಿಧೇಯರಾಗದ ಜನರ ಮೇಲೆ ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಪ್ರಯೋಜನವಿಲ್ಲದ ಮಾತುಗಳಿಂದ ಯಾರೂ ನಿಮ್ಮನ್ನು ವಂಚಿಸದಿರಲಿ. ಏಕೆಂದರೆ ಇಂಥವುಗಳ ದೆಸೆಯಿಂದ ದೇವರ ಕೋಪಾಗ್ನಿಯು ಅವರಿಗೆ ಅವಿಧೇಯರಾದ ಮಕ್ಕಳ ಮೇಲೆ ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಝುಟಿ ಸಂಗ್ತಿಯಾ ಸಾಂಗುನ್ ತುಮ್ಕಾ ಪಸ್ವುಕ್ ಕೊನಾಕ್ಬಿ ಅವಕಾಸ್ ದಿವ್ ನಕಾಸಿ ತ್ಯಾ ಬುರ್ಶ್ಯಾ ಸಂಗ್ತಿಯಾಂಚ್ಯಾ ಸಾಟ್ನಿ ದೆವಾಚೊ ರಾಗ್ ತೆಜಿ ಗೊಸ್ಟ್ ಅಯ್ಕಿನಸಲ್ಯಾ ಲೊಕಾಂಚ್ಯಾ ವೈರ್ ಯೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 5:6
28 ತಿಳಿವುಗಳ ಹೋಲಿಕೆ  

ದುಷ್ಟತನವನ್ನು ನಡಿಸಿ ಸತ್ಯವನ್ನು ಅಣಗಿಸುವವರಾದ ಮನುಷ್ಯರ ಎಲ್ಲಾ ವಿಧವಾದ ಭಕ್ತಿಹೀನತೆಯ ಮೇಲೆಯೂ ದುಷ್ಟತನದ ಮೇಲೆಯೂ ದೇವರ ಕೋಪವು ಪರಲೋಕದಿಂದ ತೋರಿಬರುತ್ತದೆ.


ಯೇಸು ಅವರಿಗೆ ಉತ್ತರವಾಗಿ ಹೇಳಿದ್ದೇನಂದರೆ - ಯಾರಾದರೂ ನಿಮ್ಮನ್ನು ಮೋಸಗೊಳಿಸಾರು ನೋಡಿಕೊಳ್ಳಿರಿ.


ಕ್ರಿಸ್ತನನ್ನು ಅನುಸರಿಸದೆ ಮನುಷ್ಯರ ಸಂಪ್ರದಾಯಗಳನ್ನೂ ಪ್ರಾಪಂಚಿಕ ಬಾಲಬೋಧೆಯನ್ನೂ ಅನುಸರಿಸುವವರು ನಿಮ್ಮಲ್ಲಿ ಬಂದು ಮೋಸವಾದ ನಿರರ್ಥಕ ತತ್ವಜ್ಞಾನಬೋಧೆಯಿಂದ ನಿಮ್ಮ ಮನಸ್ಸನ್ನು ಕೆಡಿಸಿ ನಿಮ್ಮನ್ನು ವಶಮಾಡಿಕೊಂಡಾರು, ಎಚ್ಚರಿಕೆಯಾಗಿರ್ರಿ.


ಪ್ರಿಯರೇ, ಅನೇಕ ಮಂದಿ ಸುಳ್ಳು ಪ್ರವಾದಿಗಳು ಲೋಕದೊಳಗೆ ಬಂದಿರುವದರಿಂದ ನೀವು ಆತ್ಮದ ಎಲ್ಲಾ ನುಡಿಗಳನ್ನು ನಂಬದೆ ಆಯಾ ನುಡಿಗಳು ದೇವರಿಂದ ಪ್ರೇರಿತವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.


ಇವುಗಳ ನಿವಿುತ್ತ ದೇವರ ಕೋಪವು ಉಂಟಾಗುತ್ತದೆ.


ಯೇಸು ಅವರಿಗೆ ಹೇಳಿದ್ದೇನಂದರೆ - ಯಾರಾದರೂ ನಿಮ್ಮನ್ನು ಮೋಸಗೊಳಿಸಾರು ನೋಡಿಕೊಳ್ಳಿರಿ.


ಸುಳ್ಳುಕ್ರಿಸ್ತರೂ ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರಾದುಕೊಂಡವರನ್ನು ಸಹ ಮೋಸಗೊಳಿಸುವದಕ್ಕೋಸ್ಕರ ದೊಡ್ಡ ದೊಡ್ಡ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.


ಅದು ಎಡವುವ ಕಲ್ಲು ಮುಗ್ಗರಿಸುವ ಬಂಡೆ ಎಂತಲೂ ಬರೆದಿರುವ ಮಾತು ಸರಿಬೀಳುತ್ತದೆ. ಅವರು ದೇವರ ವಾಕ್ಯವನ್ನು ನಂಬಲೊಲ್ಲದೆ ಇರುವದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ; ಅದಕ್ಕಾಗಿಯೇ ಅವರು ನೇಮಕವಾದರು.


ಯಾರೂ ಯಾವ ವಿಧದಲ್ಲಿಯೂ ನಿಮ್ಮನ್ನು ಮೋಸಗೊಳಿಸದಂತೆ ನೋಡಿಕೊಳ್ಳಿರಿ; ಯಾಕಂದರೆ ಮೊದಲು ಮತಭ್ರಷ್ಟತೆಯು ಉಂಟಾಗಿ ಅಧರ್ಮಸ್ವರೂಪನು ಬೈಲಿಗೆ ಬಂದ ಹೊರತು ಆ ದಿನವು ಬರುವದಿಲ್ಲ.


ಯಾರಾದರೂ ರಂಜನೆಯಾದ ಮಾತುಗಳಿಂದ ನಿಮ್ಮನ್ನು ಮೋಸಗೊಳಿಸಿಯಾರೆಂಬ ಭಯ ನನಗಿರುವದರಿಂದ ಇದನ್ನು ಹೇಳಿದ್ದೇನೆ.


ಸುಳ್ಳು ಕ್ರಿಸ್ತರೂ ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರಾದುಕೊಂಡವರನ್ನು ಮೋಸಗೊಳಿಸುವದಕ್ಕೋಸ್ಕರ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.


ಕೆಲವರು ಅತಿ ವಿನಯದಲ್ಲಿಯೂ ದೇವದೂತರ ಪೂಜೆಯಲ್ಲಿಯೂ ಆಸಕ್ತರಾಗಿದ್ದಾರೆ,


ದೇವರ ಕೋಪವು ಅವರಿಗೆ ವಿರೋಧವಾಗಿ ಎದ್ದು ಅವರಲ್ಲಿ ಕೊಬ್ಬಿದವರನ್ನು ವಧಿಸಿ ಇಸ್ರಾಯೇಲ್ಯಪ್ರಾಯಸ್ಥರನ್ನು ನೆಲಕ್ಕುರುಳಿಸಿತು.


ಅವರು ಸೇರಲಾರದೆ ಹೋದದ್ದು ಅಪನಂಬಿಕೆಯಿಂದಲೇ ಎಂದು ತಿಳಿದುಕೊಳ್ಳುತ್ತೇವೆ.


ನನ್ನ ಜನರನ್ನು ಸನ್ಮಾರ್ಗದಿಂದ ತಪ್ಪಿಸುವವರೂ ಹಲ್ಲುಗಳಿಗೆ ಕುರುಕುವದೇನಾದರೂ ಸಿಕ್ಕಿರುವ ತನಕ ಶುಭವನ್ನು ಪ್ರಕಟಿಸುವವರೂ ತಮ್ಮ ಬಾಯಿಗೆ ಕವಳಕೊಡದವನ ಮೇಲೆ ಯುದ್ಧನಿರ್ಧರಿಸುವವರೂ ಆಗಿರುವ ಪ್ರವಾದಿಗಳ ವಿಷಯವಾಗಿ ಯೆಹೋವನು ಇಂತೆನ್ನುತ್ತಾನೆ -


ಸೆರೆಯವರೆಲ್ಲರಿಗೆ ಹೀಗೆ ಹೇಳಿ ಕಳುಹಿಸು - ನೆಹೆಲಾಮ್ಯನಾದ ಶೆಮಾಯನ ವಿಷಯದಲ್ಲಿ ಯೆಹೋವನು ಇಂತೆನ್ನುತ್ತಾನೆ - ನಾನು ಕಳುಹಿಸದೆ ಹೋದರೂ ಶೆಮಾಯನು ನಿಮಗೆ ಪ್ರವಾದನೆಮಾಡಿ ಸುಳ್ಳಿನಲ್ಲಿ ನಂಬಿಕೆಯನ್ನು ಹುಟ್ಟಿಸಿದ ಕಾರಣ


ಅವನು - ನಿನ್ನ ಭರವಸಕ್ಕೆ ಯಾವ ಆಧಾರವುಂಟು? ಬರೀ ಒಂದು ಬಾಯಿಮಾತಿನ ಮೇಲೆ ಯುದ್ಧಕ್ಕೆ ಬೇಕಾದ ವಿವೇಕವೂ ಬಲವೂ ಉಂಟೆಂದು ಅಂದುಕೊಳ್ಳುತ್ತೀ; ನೀನು ಯಾರನ್ನು ನಂಬಿಕೊಂಡು ನನಗೆ ವಿರೋಧವಾಗಿ ತಿರುಗಿ ಬಿದ್ದಿದ್ದೀ?


ನೀವು ಬಾಬೆಲಿನ ಅರಸನ ಅಡಿಯಾಳಾಗುವದಿಲ್ಲ ಎಂದು ನಿಮಗೆ ನುಡಿಯುವ ನಿಮ್ಮ ಪ್ರವಾದಿಗಳು, ಶಕುನದವರು, ಕನಸಿನವರು, ಕಣಿಯವರು, ಮಾಟದವರು, ಇವರಿಗೆ ಕಿವಿಗೊಡಲೇಬಾರದು;


ಯೆಹೋವನು ಇಂತೆನ್ನುತ್ತಾನೆ - ಕಸ್ದೀಯರು ನಮ್ಮಿಂದ ತೊಲಗಿ ಹೋಗುವದು ಖಂಡಿತ ಎಂದು ನಿಮ್ಮನ್ನು ನೀವೇ ಮೋಸಪಡಿಸಿಕೊಳ್ಳಬೇಡಿರಿ; ಅವರು ತೊಲಗುವದೇ ಇಲ್ಲ.


ನಾನಾವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಬೇಡಿರಿ. ದೇವರ ಕೃಪೆಯನ್ನು ಆತುಕೊಂಡು ಮನಸ್ಸನ್ನು ದೃಢಮಾಡಿಕೊಳ್ಳುವದು ಉತ್ತಮವೇ; ಭೋಜನಪದಾರ್ಥಗಳನ್ನು ವಿಶೇಷಿಸುವದರಿಂದ ಅದು ಆಗುವದಿಲ್ಲ. ಭೋಜನಪದಾರ್ಥಗಳನ್ನು ವಿಶೇಷಿಸಿ ನಡೆದವರು ಏನೂ ಪ್ರಯೋಜನ ಹೊಂದಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು