Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 6:13 - ಕನ್ನಡ ಸತ್ಯವೇದವು J.V. (BSI)

13 ಆದದರಿಂದ ಕಠಿನ ಯುದ್ಧವು ನಡೆಯುವ ದಿವಸದಲ್ಲಿ ಆ ವೈರಿಗಳನ್ನು ಎದುರಿಸುವದಕ್ಕೂ ಮಾಡಬೇಕಾದದ್ದೆಲ್ಲವನ್ನು ಮಾಡಿ ಜಯಶಾಲಿಗಳಾಗಿ ನಿಲ್ಲುವದಕ್ಕೂ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ತೆಗೆದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದ್ದರಿಂದ ಆ ದುಷ್ಟ ದಿನದಲ್ಲಿ ವೈರಿಗಳನ್ನು ಎದುರಿಸುವುದಕ್ಕೂ ಮಾಡಬೇಕಾದದ್ದೆಲ್ಲವನ್ನು ಮಾಡಿ ದೃಢವಾಗಿ ನಿಲ್ಲುವುದಕ್ಕೂ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಎಂದೇ, ದೇವರು ಕೊಡುವ ಸಕಲ ಶಸ್ತ್ರಾಸ್ತ್ರಗಳೊಂದಿಗೆ ಸುಸಜ್ಜಿತರಾಗಿರಿ. ಆ ದುರ್ದಿನದಂದು ವೈರಿಗಳನ್ನು ಎದುರಿಸಲು ಆಗ ನೀವು ಶಕ್ತರಾಗುತ್ತೀರಿ. ಮಾತ್ರವಲ್ಲ, ಕಟ್ಟಕಡೆಯವರೆಗೆ ಹಿಮ್ಮೆಟ್ಟದೆ ನಿಲ್ಲುತ್ತೀರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದಕಾರಣವೇ ನೀವು ದೇವರ ಸರ್ವಾಯುಧಗಳನ್ನು ಧರಿಸಿಕೊಳ್ಳಬೇಕು. ಆಗ ಯುದ್ಧದ ದಿನದಲ್ಲಿಯೂ ಹೋರಾಟವು ಸಂಪೂರ್ಣವಾಗಿ ಮುಗಿದಾದ ಮೇಲೆಯೂ ದೃಢವಾಗಿನಿಂತುಕೊಳ್ಳಲು ನಿಮಗೆ ಸಾಧ್ಯವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದುದರಿಂದ ವೈರಿಯು ದಾಳಿಮಾಡುವ ದಿನವು ಬರುವಾಗ ನೀವು ಅವನನ್ನು ಎದುರಿಸಿ ನಿಲ್ಲುವಂತೆಯು, ಎಲ್ಲವನ್ನು ಜಯಿಸಿ ಮುಗಿಸಿದ ಮೇಲೆ ನಿಲ್ಲಲು ಶಕ್ತರಾಗುವಂತೆ, ದೇವರ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತಸೆ ಹೊವ್ನ್ ತುಮಿ ದೆವಾಚಿ ಸಗ್ಳಿ ಹಾತಿಯಾರಾ ನೆಸುನ್ ಘೆವ್ಚೆ, ತನ್ನಾ ಝಗ್ಡ್ಯಾಂಚ್ಯಾ ದಿಸಾಂತ್ಲೊ ಝಗ್ಡೊ ಫುರಾ ಸರ್ಲ್ಯಾ ಮಾನಾ ಆಕ್ರಿಪತರ್ಬಿ ಘಟ್ ಇಬೆ ರಾವ್ಕ್ ತುಮ್ಕಾ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 6:13
15 ತಿಳಿವುಗಳ ಹೋಲಿಕೆ  

ನಾವು ಉಪಯೋಗಿಸುವ ಆಯುಧಗಳು ಲೋಕಸಂಬಂಧವಾದ ಆಯುಧಗಳಲ್ಲ; ಅವು ದೇವರ ಎಣಿಕೆಯಲ್ಲಿ ಬಲವಾಗಿದ್ದು ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ.


ಆದರೆ ಬರುವದಕ್ಕಿರುವ ಇವೆಲ್ಲವುಗಳೊಳಗಿಂದ ತಪ್ಪಿಸಿಕೊಳ್ಳುವದಕ್ಕೂ ಮನುಷ್ಯಕುಮಾರನ ಮುಂದೆ ನಿಂತುಕೊಳ್ಳುವದಕ್ಕೂ ನೀವು ಪೂರ್ಣ ಶಕ್ತರಾಗುವಂತೆ ಎಲ್ಲಾ ಕಾಲದಲ್ಲಿಯೂ ದೇವರಿಗೆ ವಿಜ್ಞಾಪನೆ ಮಾಡಿಕೊಳ್ಳುತ್ತಾ ಎಚ್ಚರವಾಗಿರ್ರಿ ಅಂದನು.


ಈ ದಿನಗಳು ಕೆಟ್ಟವುಗಳಾಗಿವೆ; ಆದದರಿಂದ ಕಾಲವನ್ನು ಸುಮ್ಮನೆ ಕಳಕೊಳ್ಳದೆ ಅದನ್ನು ಬೆಲೆಯುಳ್ಳದ್ದೆಂದು ಉಪಯೋಗಿಸಿಕೊಳ್ಳಿರಿ.


ಕೆಲವರು ವಾಕ್ಯವನ್ನು ಕೇಳಿದಾಗಲೇ ಅದನ್ನು ಸಂತೋಷದಿಂದ ಅಂಗೀಕರಿಸುತ್ತಾರೆ; ಇವರಿಗೆ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರವೇ ನಂಬಿಕೊಂಡಿದ್ದು ಶೋಧನೆಯ ಕಾಲದಲ್ಲಿ ಬಿದ್ದುಹೋಗುತ್ತಾರೆ; ಇವರೇ ಬಂಡೆಯ ನೆಲವಾಗಿರುವವರು.


ನೀನು ನನ್ನ ಸಹನವಾಕ್ಯವನ್ನು ಕಾಪಾಡಿದ್ದರಿಂದ ಭೂನಿವಾಸಿಗಳನ್ನು ಪರೀಕ್ಷಿಸುವದಕ್ಕಾಗಿ ಲೋಕದ ಮೇಲೆಲ್ಲಾ ಬರುವದಕ್ಕಿರುವ ಶೋಧನೆಯ ಸಮಯದಲ್ಲಿ ನಿನ್ನನ್ನು ತಪ್ಪಿಸಿ ಕಾಪಾಡುವೆನು.


ಕ್ರಿಸ್ತ ಯೇಸುವಿನ ದಾಸನಾಗಿರುವ ನಿಮ್ಮ ಊರಿನ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ; ಇವನು ಪ್ರಾರ್ಥನೆ ಮಾಡುವಾಗೆಲ್ಲಾ ನಿಮಗೋಸ್ಕರ ಹೋರಾಡಿ ನೀವು ಪ್ರವೀಣರಾಗಿಯೂ ಎಲ್ಲಾ ವಿಷಯಗಳಲ್ಲಿ ದೇವರ ಚಿತ್ತವನ್ನು ಕುರಿತು ಪೂರ್ಣ ನಿಶ್ಚಯವುಳ್ಳವರಾಗಿಯೂ ನಿಂತಿರಬೇಕೆಂದು ವಿಜ್ಞಾಪನೆ ಮಾಡುತ್ತಾನೆ.


ಆತನು ಬರುವ ದಿನವನ್ನು ಯಾರು ತಾಳಾರು? ಆತನು ಕಾಣಿಸಿಕೊಳ್ಳುವಾಗ ಯಾರು ನಿಂತಾರು? ಆತನು ಅಕ್ಕಸಾಲಿಗನ ಬೆಂಕಿಗೂ ಅಗಸನ ಚೌಳಿಗೂ ಸಮಾನನಾಗಿದ್ದಾನೆ;


ಕಷ್ಟದ ದಿನಗಳೂ ಸಂತೋಷವಿಲ್ಲವೆಂದು ನೀನು ಹೇಳುವ ವರುಷಗಳೂ ಸಮೀಪಿಸುವದರೊಳಗಾಗಿ ಯೌವನದಲ್ಲಿಯೇ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸು .


ಹುರುಳಿಲ್ಲದ ಮಾತುಗಳನ್ನಾಡುವವರಿಗೆ ಕಿವಿಗೊಟ್ಟು ಮೋಸಹೋಗಬೇಡಿರಿ; ಅಂಥ ಕೃತ್ಯಗಳ ನಿವಿುತ್ತದಿಂದ ದೇವರ ಕೋಪವು ಆತನಿಗೆ ಅವಿಧೇಯರಾಗಿರುವವರ ಮೇಲೆ ಬರುತ್ತದೆ.


ಅವರ ಕೋಪವು ಕಾಣಿಸುವ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು.


ಆಹಾ, ಆ ಮುಖಂಡರು ಆಪತ್ತಿನ ದಿನದ ಯೋಚನೆಯನ್ನು ದೂರಕ್ಕೆ ತಳ್ಳುತ್ತಾರೆ, ಅನ್ಯಾಯದ ಪೀಠವನ್ನು ಹತ್ತಿರಕ್ಕೆ ತಂದುಕೊಳ್ಳುತ್ತಾರೆ;


ಇರುಳು ಬಹಳ ಮಟ್ಟಿಗೆ ಕಳೆಯಿತು; ಹಗಲು ಸಮೀಪವಾಯಿತು. ಕತ್ತಲೆಗೆ ಅನುಗುಣವಾದ ಕೃತ್ಯಗಳನ್ನು ಬಿಟ್ಟು ಬೆಳಕಿಗೆ ಅನುಗುಣವಾದ ಆಯುಧಗಳನ್ನು ಧರಿಸಿಕೊಳ್ಳೋಣ.


ಹೀಗಿರಲಾಗಿ ದೇವರಿಗೆ ಒಳಗಾಗಿರಿ. ಸೈತಾನನನ್ನು ಎದುರಿಸಿರಿ, ಅವನು ನಿಮ್ಮನ್ನು ಬಿಟ್ಟು ಓಡಿಹೋಗುವನು.


ಕ್ರಿಸ್ತನು ಶರೀರದಲ್ಲಿ ಬಾಧೆಪಟ್ಟದ್ದರಿಂದ ನೀವು ಸಹ ಆತನಿಗಿದ್ದ ಭಾವವನ್ನೇ ಹಿಡಿದುಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು