Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 6:17 - ಕನ್ನಡ ಸತ್ಯವೇದವು J.V. (BSI)

17 ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣವನ್ನು ಇಟ್ಟುಕೊಂಡು ಪವಿತ್ರಾತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣವನ್ನು ಇಟ್ಟುಕೊಂಡು ಪವಿತ್ರಾತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ರಕ್ಷಣೆಯೆಂಬ ಶಿರಸ್ತ್ರಾಣವನ್ನು ಧರಿಸಿಕೊಳ್ಳಿ; ಪವಿತ್ರಾತ್ಮರ ಕೊಡುಗೆಯಾದ ದೇವರ ವಾಕ್ಯವು ನಿಮಗೆ ಖಡ್ಗವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ದೇವರ ರಕ್ಷಣೆಯನ್ನು ಶಿರಸ್ತ್ರಾಣವನ್ನಾಗಿ ಧರಿಸಿಕೊಳ್ಳಿರಿ. ಪವಿತ್ರಾತ್ಮನ ಖಡ್ಗವನ್ನು ಅಂದರೆ ದೇವರ ವಾಕ್ಯವನ್ನು ತೆಗೆದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣವನ್ನು ಧರಿಸಿಕೊಳ್ಳಿರಿ. ದೇವರ ವಾಕ್ಯವೆಂಬ ಪವಿತ್ರಾತ್ಮರ ಖಡ್ಗವನ್ನು ಎತ್ತಿ ಹಿಡಿಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ದೆವಾಚಿ ರಾಕ್ವನ್ ಟಕ್ಲ್ಯಾಕ್ ಕವಚ್ ಕರುನ್ ನೆಸುನ್ ಘೆವಾ, ಪವಿತ್ರ್ ಆತ್ಮೊ ದಿತಲೊ ದೆವಾಚಿ ಗೊಸ್ಟಿಯಾ ಮನ್ತಲೊ ಮೊಟೊ ಚಾಕು ಧರುನ್ ಘೆವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 6:17
20 ತಿಳಿವುಗಳ ಹೋಲಿಕೆ  

ಯಾಕಂದರೆ ದೇವರ ವಾಕ್ಯವು ಸಜೀವವಾದದ್ದು, ಕಾರ್ಯಸಾಧಕವಾದದ್ದು, ಯಾವ ಇಬ್ಬಾಯಿಕತ್ತಿಗಿಂತಲೂ ಹದವಾದದ್ದು, ಪ್ರಾಣಆತ್ಮಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುವಷ್ಟು ಮಟ್ಟಿಗೂ ತೂರಿಹೋಗುವಂಥದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದು ಆಗಿದೆ.


ಧರ್ಮವನ್ನು ವಜ್ರ ಕವಚವನ್ನಾಗಿ ತೊಟ್ಟು ರಕ್ಷಣೆಯೆಂಬ ಶಿರಸ್ತ್ರಾಣವನ್ನು ಧರಿಸಿಕೊಂಡನು; ರೋಷವೆಂಬ ವಸ್ತ್ರವನ್ನು ಉಡುಪುಮಾಡಿಕೊಂಡು ಆಗ್ರಹವನ್ನು ನಿಲುವಂಗಿಯನ್ನಾಗಿ ಹಾಕಿಕೊಂಡನು.


ಜನಾಂಗಗಳನ್ನು ಹೊಡೆಯುವದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಬರುತ್ತದೆ. ಆತನು ಅವರನ್ನು ಕಬ್ಬಿಣದ ಕೋಲಿನಿಂದ ಆಳುವನು. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷೆಯ ತೊಟ್ಟಿಯಲ್ಲಿರುವದನ್ನು ತುಳಿಯುತ್ತಾನೆ.


ನಾವಾದರೋ ಹಗಲಿನವರಾಗಿರಲಾಗಿ ವಿಶ್ವಾಸಪ್ರೀತಿಗಳೆಂಬ ವಜ್ರಕವಚವನ್ನೂ ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥಚಿತ್ತರಾಗಿರೋಣ.


ನನ್ನ ಬಾಯನ್ನು ಹದವಾದ ಖಡ್ಗವನ್ನಾಗಿ ಮಾಡಿ ತನ್ನ ಕೈಯ ನೆರಳಿನಲ್ಲಿ ನನ್ನನ್ನು ಹುದುಗಿಸಿದ್ದಾನೆ; ನನ್ನನ್ನು ಚೂಪಾದ ಬಾಣವನ್ನಾಗಿ ರೂಪಿಸಿ ತನ್ನ ಬತ್ತಳಿಕೆಯಲ್ಲಿ ಮುಚ್ಚಿಟ್ಟಿದ್ದಾನೆ.


ಆದದರಿಂದ ದೇವರ ಕಡೆಗೆ ತಿರುಗಿಕೋ, ತಿರುಗಿಕೊಳ್ಳದಿದ್ದರೆ ನಾನು ಬೇಗನೆ ನಿನ್ನ ಬಳಿಗೆ ಬಂದು ನನ್ನ ಬಾಯಕತ್ತಿಯಿಂದ ಅವರ ಮೇಲೆ ಯುದ್ಧಮಾಡುವೆನು.


ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಮರಣಕ್ಕೆ ಹಿಂತೆಗೆಯದೆ ಯಜ್ಞದ ಕುರಿಯಾದಾತನ ರಕ್ತದ ಬಲದಿಂದಲೂ ತಮ್ಮ ವಾಕ್ಯದ ಬಲದಿಂದಲೂ ಅವನನ್ನು ಜಯಿಸಿದರು.


ಆದಕಾರಣ ನಾನು ನಿಮ್ಮ ಜನರನ್ನು ಪ್ರವಾದಿಗಳ ಮೂಲಕ ಹತಿಸಿದ್ದೇನೆ, ನನ್ನ ಬಾಯಿ ಮಾತುಗಳಿಂದ ಸಂಹರಿಸಿದ್ದೇನೆ; ನನ್ನ ನ್ಯಾಯದಂಡನೆಯು ವಿುಂಚಿನಂತೆ ಹೊರಡುವದು.


ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು; ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಡುತ್ತಿತ್ತು. ಆತನ ಮುಖವು ಮಧ್ಯಾಹ್ನದಲ್ಲಿ ಪ್ರಕಾಶಿಸುವ ಸೂರ್ಯನಂತಿತ್ತು.


ಮನುಷ್ಯನು ರೊಟ್ಟಿತಿಂದ ಮಾತ್ರದಿಂದ ಬದುಕುವದಿಲ್ಲ, ದೇವರ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೂ ಬದುಕುವನು ಎಂದು ಬರೆದದೆ ಅಂದನು.


ಅದಕ್ಕೆ ಯೇಸು - ನಿನ್ನ ದೇವರಾಗಿರುವ ಕರ್ತನನ್ನು ಪರೀಕ್ಷಿಸಬಾರದು ಎಂಬದಾಗಿ ಸಹ ಬರೆದದೆ ಅಂದನು.


ಅವನ ಶಿರಸ್ತ್ರಾಣವು ತಾಮ್ರದ್ದು; ಅದೇ ಲೋಹದ ಬಿಲ್ಲೆಗಳಿಂದ ಪರೆಪರೆಯಾಗಿ ಜೋಡಿಸಲ್ಪಟ್ಟ ಅವನ ಕವಚವು ಐದು ಸಾವಿರ ರೂಪಾಯಿ ತೂಕವಾಗಿತ್ತು.


ಸೌಲನು ಅವನನ್ನು - ಹುಡುಗನೇ, ನೀನು ಯಾರ ಮಗನೆಂದು ಕೇಳಿದ್ದಕ್ಕೆ ಅವನು - ನಾನು ಬೇತ್ಲೆಹೇವಿುನವನೂ ನಿನ್ನ ಸೇವಕನೂ ಆದ ಇಷಯನ ಮಗನು ಎಂದು ಉತ್ತರಕೊಟ್ಟನು.


ನೀನೇ ನನಗೋಸ್ಕರ ಗುರಾಣಿಯನ್ನು ಹಿಡಿದು ರಕ್ಷಿಸಿದ್ದೀ; ನಿನ್ನ ಕೃಪಾಕಟಾಕ್ಷವು ನನಗೆ ದೊಡ್ಡಸ್ತಿಕೆಯನ್ನು ಉಂಟುಮಾಡಿದೆ.


ಆಗ ಅವನು ನನಗೆ ಪ್ರತ್ಯುತ್ತರವಾಗಿ ಹೀಗೆ ಹೇಳಿದನು - ಪರಾಕ್ರಮದಿಂದಲ್ಲ, ಬಲದಿಂದಲ್ಲ, ನನ್ನ ಆತ್ಮದಿಂದಲೇ ಎಂಬದು ಸೇನಾಧೀಶ್ವರ ಯೆಹೋವನ ನುಡಿ


ಆತನು ಅದನ್ನು ಪ್ರತಿಷ್ಠೆಪಡಿಸುವದಕ್ಕಾಗಿ ತನ್ನನ್ನು ಒಪ್ಪಿಸಿಕೊಟ್ಟನು.


ಪವಿತ್ರಾತ್ಮವರದಲ್ಲಿ ಪಾಲುಗಾರರಾಗಿ ದೇವರ ವಾಕ್ಯದ ಶ್ರೇಷ್ಠತೆಯನ್ನೂ ಮುಂದಣ ಯುಗದ ಮಹತ್ವವನ್ನೂ ಅನುಭವಿಸಿದವರು ಭ್ರಷ್ಟರಾದರೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು