Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 6:3 - ಕನ್ನಡ ಸತ್ಯವೇದವು J.V. (BSI)

3 ಸನ್ಮಾನಿಸಿದರೆ ನಿನಗೆ ಮೇಲಾಗುವದು, ನೀನು ಭೂವಿುಯ ಮೇಲೆ ಬಹುಕಾಲ ಬದುಕುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಗೌರವಿಸಿದರೆ ನಿನಗೆ ಶುಭವಾಗುವುದು, ನೀನು ಭೂಮಿಯ ಮೇಲೆ ಬಹುಕಾಲ ಬದುಕುವಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇದನ್ನು ಪಾಲಿಸಿದರೆ ನಿನಗೆ ಶುಭವಾಗುವುದು; ನೀನು ಬಹುಕಾಲ ಬಾಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆ ವಾಗ್ದಾನವು ಇಂತಿದೆ: “ಆಗ ನಿಮಗೆ ಒಳ್ಳೆಯದಾಗುವುದು ಮತ್ತು ನೀವು ಭೂಮಿಯ ಮೇಲೆ ಬಹುಕಾಲ ಬದುಕುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ಸನ್ಮಾನಿಸಿದರೆ ನಿನಗೆ ಶುಭವಾಗುವುದು. ನೀನು ಭೂಮಿಯ ಮೇಲೆ ಬಹುಕಾಲ ಬದುಕುವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತಿ ಗೊಸ್ಟ್ ಅಸಿ ಹಾಯ್; “ತನ್ನಾ ತುಮ್ಕಾ ಬರೆ ಹೊತಾ ಅನಿ ತುಮಿ ಹ್ಯಾ ಜಿಮ್ನಿವರ್ತಿ ಲೈ ಯೆಳ್ ಜಿವನ್ ಕರ್ತ್ಯಾಸಿ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 6:3
15 ತಿಳಿವುಗಳ ಹೋಲಿಕೆ  

ನಿನ್ನ ದೇವರಾದ ಯೆಹೋವನು ಆಜ್ಞಾಪಿಸಿದಂತೆ ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸಬೇಕು; ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಇರುವಿ, ಮತ್ತು ನಿನಗೆ ಮೇಲಾಗುವದು.


ನಿಮಗೂ ನಿಮ್ಮ ಸಂತತಿಯವರಿಗೂ ಶುಭವುಂಟಾಗುವಂತೆಯೂ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ಸದಾಕಾಲ ಬಾಳುವಂತೆಯೂ ನಾನು ನಿಮಗೆ ಈಗ ತಿಳಿಸಿದ ಆತನ ಆಜ್ಞಾವಿಧಿಗಳನ್ನು ನೀವು ಅನುಸರಿಸಿ ನಡೆಯಬೇಕು.


ನಾನು ಬೋಧಿಸುವ ಈ ಎಲ್ಲಾ ಆಜ್ಞೆಗಳಿಗೆ ನೀವು ಚೆನ್ನಾಗಿ ಕಿವಿಗೊಟ್ಟು ಅವುಗಳನ್ನು ಅನುಸರಿಸಿ ನಿಮ್ಮ ದೇವರಾದ ಯೆಹೋವನಿಗೆ ಒಳ್ಳೇದೂ ಯುಕ್ತವೂ ಆಗಿರುವದನ್ನು ಮಾಡಿದರೆ ನಿಮಗೂ ನಿಮ್ಮ ಸಂತತಿಯವರಿಗೂ ಸದಾಕಾಲ ಶುಭವುಂಟಾಗುವದು.


ನೀವು ಅದನ್ನು ಭುಜಿಸದೆ ಯೆಹೋವನಿಗೆ ಮೆಚ್ಚಿಗೆಯಾಗಿರುವದನ್ನು ನಡಿಸಿದರೆ ನಿಮಗೂ ನಿಮ್ಮ ಸಂತತಿಯವರಿಗೂ ಶುಭವುಂಟಾಗುವದು.


ಆದದರಿಂದ ಇಸ್ರಾಯೇಲ್ಯರೇ, ನಿಮ್ಮ ಪಿತೃಗಳ ದೇವರಾದ ಯೆಹೋವನು ವಾಗ್ದಾನಮಾಡಿದ ಪ್ರಕಾರ ಹಾಲೂ ಜೇನೂ ಹರಿಯುವ ಆ ದೇಶದಲ್ಲಿ ನಿಮಗೆ ಶುಭವುಂಟಾಗುವದಕ್ಕೂ ನೀವು ಬಹಳವಾಗಿ ಹೆಚ್ಚುವದಕ್ಕೂ ಈ ಆಜ್ಞೆಗಳನ್ನು ಲಕ್ಷ್ಯವಿಟ್ಟು ಕೇಳಿ ಅನುಸರಿಸಲೇಬೇಕು.


ನೀವು ಹೀಗೆ ನಡೆದುಕೊಂಡರೆ ನಿಮಗೆ ಶ್ರೇಯಸ್ಸುಂಟಾಗುವದು. ಮತ್ತು ಬಹುಕಾಲ ಬಾಳುವಿರಿ.


ನಮ್ಮ ದೇವರಾದ ಯೆಹೋವನ ಮಾತು ಹಿತವಾಗಲಿ ಅಹಿತವಾಗಲಿ ಆತನ ಸನ್ನಿಧಿಯಲ್ಲಿ ವಿಚಾರಿಸುವದಕ್ಕೆ ನಿನ್ನನ್ನು ಕಳುಹಿಸುವ ನಾವು ಅದನ್ನು ಕೈಕೊಳ್ಳುವೆವು; ನಮ್ಮ ದೇವರಾದ ಯೆಹೋವನ ಮಾತನ್ನು ನಾವು ಕೇಳಿದರೆ ನಮಗೆ ಶುಭವಾಗುವದಷ್ಟೆ ಎಂಬದಾಗಿ ಹೇಳಿದರು.


ಶಿಷ್ಟರಿಗೆ ಶುಭವೇ ಎಂದು ಹೇಳಿರಿ, ಅವರು ತಮ್ಮ ಸುಕೃತಫಲವನ್ನು ಅನುಭವಿಸುವರಷ್ಟೆ.


ನೊವೊವಿುಯು ಸೊಸೆಗೆ - ನನ್ನ ಮಗಳೇ, ನೀನು ಗೃಹಿಣಿಯಾಗಿ ಸುಖದಿಂದಿರುವದಕ್ಕೋಸ್ಕರ ನಾನು ಪ್ರಯತ್ನಿಸಬೇಕಲ್ಲವೇ.


ಯೆಹೋವನ ದೃಷ್ಟಿಗೆ ಯಾವದು ನ್ಯಾಯವೂ ಯೋಗ್ಯವೂ ಆಗಿದೆಯೋ ಅದನ್ನೇ ಮಾಡಬೇಕು. ಹೀಗೆ ನಡೆದರೆ ನಿಮಗೆ ಶುಭವುಂಟಾಗುವದು, ಮತ್ತು ಯೆಹೋವನು ನಿಮ್ಮ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ಉತ್ತಮದೇಶವನ್ನು ನೀವು ಸೇರಿ ಸ್ವಾಧೀನಮಾಡಿಕೊಳ್ಳುವಿರಿ.


ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಬಹುಕಾಲ ಶುಭವುಳ್ಳವರಾಗಿ ಬದುಕಿಕೊಳ್ಳುವಂತೆ ನಿಮ್ಮ ದೇವರಾದ ಯೆಹೋವನು ಆಜ್ಞಾಪಿಸಿದ ಮಾರ್ಗದಲ್ಲೇ ನಡೆಯಬೇಕು.


ಮನೆಕಟ್ಟಬಾರದು, ಬೀಜ ಬಿತ್ತಬಾರದು, ತೋಟ ಮಾಡಬಾರದು, ಅನುಭವಿಸಲೂ ಬಾರದು; ನಿಮ್ಮ ಜೀವಮಾನವೆಲ್ಲಾ ಗುಡಾರಗಳಲ್ಲೇ ವಾಸಿಸಬೇಕು; ಇದರಿಂದ ನೀವು ತಂಗುವ ದೇಶದಲ್ಲಿ ನಿಮಗೆ ದೀರ್ಘಾಯುಷ್ಯವಾಗುವದು ಎಂದು ಅಪ್ಪಣೆಕೊಟ್ಟಿದ್ದಾನೆ.


ವಾಗ್ದಾನ ಸಹಿತವಾದ ಮೊದಲನೆಯ ಆಜ್ಞೆಯನ್ನು ಕೇಳಿರಿ - ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು;


ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ ಕರ್ತನಿಗೆ ಮೆಚ್ಚಿಗೆಯಾಗಿರುವ ಬಾಲಶಿಕ್ಷೆಯನ್ನೂ ಬಾಲೋಪದೇಶವನ್ನೂ ಮಾಡುತ್ತಾ ಅವರನ್ನು ಸಾಕಿ ಸಲಹಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು