Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 6:4 - ಕನ್ನಡ ಸತ್ಯವೇದವು J.V. (BSI)

4 ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ ಕರ್ತನಿಗೆ ಮೆಚ್ಚಿಗೆಯಾಗಿರುವ ಬಾಲಶಿಕ್ಷೆಯನ್ನೂ ಬಾಲೋಪದೇಶವನ್ನೂ ಮಾಡುತ್ತಾ ಅವರನ್ನು ಸಾಕಿ ಸಲಹಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ, ಕರ್ತನಿಗೆ ಮೆಚ್ಚಿಗೆಯಾಗುವ ರೀತಿಯಲ್ಲಿ ಅವರನ್ನು ಶಿಸ್ತಿನಲ್ಲಿಯೂ ಉಪದೇಶದಲ್ಲಿಯೂ ಸಾಕಿ ಸಲಹಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ತಂದೆತಾಯಿಗಳೇ, ನಿಮ್ಮ ಮಕ್ಕಳನ್ನು ಕೆಣಕಿ ಕೆರಳಿಸಬೇಡಿ. ಪ್ರತಿಯಾಗಿ ಪ್ರಭುವಿಗೆ ಮೆಚ್ಚುಗೆಯಾಗುವ ರೀತಿಯಲ್ಲಿ ಅವರಿಗೆ ಶಿಕ್ಷಣವನ್ನು ಕೊಟ್ಟು ಶಿಸ್ತಿನಿಂದ ಸಾಕಿಸಲಹಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ತಂದೆಗಳೇ, ನಿಮ್ಮ ಮಕ್ಕಳನ್ನು ಸಿಟ್ಟಿಗೆಬ್ಬಿಸದೆ ಪ್ರಭುವಿನ ಉಪದೇಶದಿಂದಲೂ ಬಾಲಶಿಕ್ಷೆಯಿಂದಲೂ ಬೆಳೆಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ತಂದೆಗಳೇ, ನಿಮ್ಮ ಮಕ್ಕಳನ್ನು ಸಿಟ್ಟಿಗೆಬ್ಬಿಸಬೇಡಿರಿ; ಕರ್ತನ ಶಿಸ್ತಿನಲ್ಲಿಯೂ ಉಪದೇಶದಲ್ಲಿಯೂ ಮಕ್ಕಳನ್ನು ಬೆಳೆಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಬಾಯ್ ಬಾಬಾನು ತುಮ್ಚ್ಯಾ ಪೊರಾಕ್ನಿ ರಾಗ್ ಯೆಯ್ ಸಾರ್ಕೆ ಕರಿನಸ್ತಾನಾ ಧನಿಯಾಚ್ಯಾ ಶಿಕಾಪಾನಿ, ಅನಿ ಬಾರಿಕ್ ಪೊರಾಕ್ನಿ ದಿತಲಿ ಶಿಕ್ಷಾ ದಿವ್ನ್ ಬಾಳ್ಗಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 6:4
32 ತಿಳಿವುಗಳ ಹೋಲಿಕೆ  

ಇದು ಕರ್ತನ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿದೆ. ತಂದೆಗಳೇ, ನಿಮ್ಮ ಮಕ್ಕಳನ್ನು ಕೆಣಕಿ ಅವರಿಗೆ ಮನಗುಂದಿಸಬೇಡಿರಿ.


ನಡೆಯಬೇಕಾದ ಮಾರ್ಗಕ್ಕೆ ತಕ್ಕಂತೆ ಹುಡುಗನನ್ನು ಶಿಕ್ಷಿಸು; ಮುಪ್ಪಿನಲ್ಲಿಯೂ ಓರೆಯಾಗನು.


ಬೆತ್ತಬೆದರಿಕೆಗಳಿಂದ ಜ್ಞಾನವುಂಟಾಗುವದು; ಶಿಕ್ಷಿಸದೆ ಬಿಟ್ಟ ಹುಡುಗನು ತಾಯಿಯ ಮಾನವನ್ನು ಕಳೆಯುವನು.


ಬುದ್ಧಿ ಬರುವದೆಂದು ಮಗನನ್ನು ಶಿಕ್ಷಿಸು; ಹಾಳುಮಾಡಲು ಮನಸ್ಸುಮಾಡಬೇಡ.


ಇವುಗಳನ್ನು ನಿಮ್ಮ ಮಕ್ಕಳಿಗೆ ಅಭ್ಯಾಸಮಾಡಿಸಿ ಮನೆಯಲ್ಲಿ ಕೂತಿರುವಾಗಲೂ ದಾರಿನಡೆಯುವಾಗಲೂ ಮಲಗುವಾಗಲೂ ಏಳುವಾಗಲೂ ಇವುಗಳ ವಿಷಯದಲ್ಲಿ ಮಾತಾಡಬೇಕು.


ಮಗನನ್ನು ಶಿಕ್ಷಿಸು; ನಿನ್ನನ್ನು ಸುಧಾರಿಸುವನು; ಅವನೇ ನಿನ್ನ ಆತ್ಮಕ್ಕೆ ಮೃಷ್ಟಾನ್ನವಾಗುವನು.


ಆ ಗ್ರಂಥಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.


ಅವನು ತನ್ನ ಪುತ್ರಪೌತ್ರರಿಗೆ - ನೀವು ನ್ಯಾಯನೀತಿಗಳನ್ನು ನಡಿಸಿ ಯೆಹೋವನ ಮಾರ್ಗವನ್ನು ಅನುಸರಿಸಬೇಕೆಂದು ಬೋಧಿಸುವಂತೆ ಅವನನ್ನು ನಾನು ಆದುಕೊಂಡೆನಲ್ಲಾ; ಅವನು ಹೀಗೆ ಮಾಡುವದರಿಂದ ಯೆಹೋವನಾದ ನನ್ನ ವಾಗ್ದಾನವು ನೆರವೇರುವದು ಅಂದುಕೊಂಡನು.


ಹೀಗಿರುವದರಿಂದ ನೀವು ಬಹು ಜಾಗರೂಕತೆಯಿಂದ ನಿಮ್ಮನಿಮ್ಮ ಮನಸ್ಸುಗಳನ್ನು ಕಾಪಾಡಿಕೊಳ್ಳುವವರಾಗಿ ನೀವು ನೋಡಿದ ಸಂಗತಿಗಳನ್ನು ಎಷ್ಟು ಮಾತ್ರವೂ ಮರೆಯದೆ ಜೀವದಿಂದಿರುವವರೆಗೂ ಅವುಗಳನ್ನು ನೆನಪಿನಲ್ಲಿಟ್ಟುಕೊಂಡು ನಿಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಬೇಕು.


ನಿನ್ನಲ್ಲಿರುವ ನಿಷ್ಕಪಟವಾದ ನಂಬಿಕೆಯು ನನ್ನ ನೆನಪಿಗೆ ಬಂತು. ಆ ನಂಬಿಕೆಯು ನಿನ್ನ ಅಜ್ಜಿಯಾದ ಲೋವಿಯಲ್ಲಿಯೂ ನಿನ್ನ ತಾಯಿಯಾದ ಯೂನೀಕೆಯಲ್ಲಿಯೂ ವಾಸವಾಗಿತ್ತು; ಹಾಗೆಯೇ ನಿನ್ನಲ್ಲಿಯೂ ವಾಸವಾಗಿದೆ ಎಂದು ದೃಢವಾಗಿ ನಂಬಿದ್ದೇನೆ.


ಮೂರ್ಖತನವು ಹುಡುಗನ ಮನಸ್ಸಿಗೆ ಸಹಜ, ಆದರೆ ಶಿಕ್ಷಕನ ಬೆತ್ತವು ಅದನ್ನು ತೊಲಗಿಸುವದು.


ಆಮೇಲೆ ದಾವೀದನು ತನ್ನ ಮಗನಾದ ಸೊಲೊಮೋನನಿಗೆ - ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಕೆಲಸಕ್ಕೆ ಕೈಹಾಕು; ಅಂಜಬೇಡ, ಕಳವಳಗೊಳ್ಳಬೇಡ. ನನ್ನ ದೇವರಾಗಿರುವ ಯೆಹೋವದೇವರು ನಿನ್ನ ಸಂಗಡ ಇರುತ್ತಾನೆ; ಆತನು ತನ್ನ ಆಲಯದ ಎಲ್ಲಾ ಕೆಲಸವು ತೀರುವವರೆಗೂ ನಿನ್ನನ್ನು ಕೈ ಬಿಡುವದಿಲ್ಲ, ತೊರೆಯುವದಿಲ್ಲ.


ಜೀವಂತನು ಜೀವಂತನೇ ನಿನ್ನನ್ನು ಸ್ತುತಿಸುವನು, ಹೌದು, ಜೀವಂತನಾದ ನಾನೇ ಈ ಹೊತ್ತು ನಿನ್ನನ್ನು ಹೊಗಳುವೆನು. ತಂದೆಯು ಮಕ್ಕಳಿಗೆ ನಿನ್ನ ಸತ್ಯಸಂಧತೆಯನ್ನು ಬೋಧಿಸುವನು.


ಯೆಹೋವನನ್ನು ಸೇವಿಸುವದು ನಿಮಗೆ ಸರಿಕಾಣದಿದ್ದರೆ ಯಾರನ್ನು ಸೇವಿಸಬೇಕೆಂದಿದ್ದೀರಿ? ಈ ಹೊತ್ತೇ ಆರಿಸಿಕೊಳ್ಳಿರಿ. ನಿಮ್ಮ ಪೂರ್ವಿಕರು [ಯೂಫ್ರೇಟೀಸ್] ನದಿಯ ಆಚೆಯಲ್ಲಿ ಸೇವಿಸುತ್ತಿದ್ದ ದೇವತೆಗಳೋ ಈ ದೇಶದ ಮೂಲನಿವಾಸಿಗಳಾದ ಅಮೋರಿಯರ ದೇವತೆಗಳೋ, ಹೇಳಿರಿ. ನಾನೂ ನನ್ನ ಮನೆಯವರೂ ಯೆಹೋವನನ್ನೇ ಸೇವಿಸುವೆವು ಅಂದನು.


ನನ್ನ ಮಗನಾದ ಸೊಲೊಮೋನನು ನಿನ್ನ ಆಜ್ಞಾನಿಯಮವಿಧಿಗಳನ್ನು ಕೈಕೊಳ್ಳುತ್ತಿರುವಂತೆಯೂ ನಾನು ಯಾವ ಮಂದಿರಕ್ಕೋಸ್ಕರ ಇಷ್ಟನ್ನೆಲ್ಲಾ ಸಿದ್ಧಪಡಿಸಿರುತ್ತೇನೋ ಆ ನಿನ್ನ ಮಂದಿರವನ್ನು ಅವನು ಯಥಾರ್ಥಮನಸ್ಸಿನಿಂದ ಕಟ್ಟಿಸಿ ತೀರಿಸುವಂತೆಯೂ ದಯಪಾಲಿಸು ಎಂಬದೇ.


ಸನ್ಮಾನಿಸಿದರೆ ನಿನಗೆ ಮೇಲಾಗುವದು, ನೀನು ಭೂವಿುಯ ಮೇಲೆ ಬಹುಕಾಲ ಬದುಕುವಿ.


ಅವನು - ಹೌದು, ನಾನೇ ಅಂದನು. ಆಗ ಮಾನೋಹನು - ನೀನು ಹೇಳಿದ್ದು ನೆರವೇರಿದಾಗ ನಾವು ಆ ಮಗುವಿಗೋಸ್ಕರ ಮಾಡತಕ್ಕದ್ದೇನು? ಅವನನ್ನು ಹೇಗೆ ನಡಿಸತಕ್ಕದ್ದು ಎಂದು ಕೇಳಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು