Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 6:6 - ಕನ್ನಡ ಸತ್ಯವೇದವು J.V. (BSI)

6 ಮನುಷ್ಯರನ್ನು ಮೆಚ್ಚಿಸುವವರು ಮಾಡುವ ಪ್ರಕಾರ ಯಜಮಾನರು ನೋಡುತ್ತಿರುವಾಗ ಮಾತ್ರ ಸೇವೆಮಾಡದೆ ಕ್ರಿಸ್ತನ ದಾಸರಿಗೆ ತಕ್ಕ ಹಾಗೆ ದೇವರ ಚಿತ್ತವನ್ನು ಮನಃಪೂರ್ವಕವಾಗಿ ನಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಮನುಷ್ಯರನ್ನು ಮೆಚ್ಚಿಸುವವರಂತೆ ತೋರಿಕೆಗೆ ಯಜಮಾನರು ನೋಡುತ್ತಿರುವಾಗ ಮಾತ್ರ ಸೇವೆಮಾಡದೇ, ಕ್ರಿಸ್ತನ ದಾಸರಿಗೆ ತಕ್ಕ ಹಾಗೆ ದೇವರ ಚಿತ್ತವನ್ನು ಮನಃಪೂರ್ವಕವಾಗಿ ನಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಧಣಿಗಳನ್ನು ಮೆಚ್ಚಿಸುವ ಸಲುವಾಗಿ ಮುಖದಾಕ್ಷಿಣ್ಯದ ಸೇವೆಯನ್ನು ಮಾಡದಿರಿ. ಕ್ರಿಸ್ತಯೇಸುವಿನ ದಾಸರಂತೆ ದೈವೇಚ್ಛೆಯನ್ನು ಹೃದಯಪೂರ್ವಕವಾಗಿ ಈಡೇರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅವರ ಮೆಚ್ಚಿಕೆಯನ್ನು ಗಳಿಸಿಕೊಳ್ಳಬೇಕೆಂದು ಅವರು ಗಮನಿಸುತ್ತಿರುವಾಗ ಮಾತ್ರ ಸೇವೆ ಮಾಡದೆ ನೀವು ಕ್ರಿಸ್ತನಿಗೆ ವಿಧೇಯರಾಗಿರುವಂತೆ ಅವರಿಗೆ ವಿಧೇಯರಾಗಿರಬೇಕು. ದೇವರಿಗೆ ಇಷ್ಟವಾದದ್ದನ್ನು ನೀವು ಪೂರ್ಣಹೃದಯದಿಂದ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯಜಮಾನರನ್ನು ಮೆಚ್ಚಿಸುವವರಂತೆ ಕಣ್ಣಿಗೆ ಕಾಣುವಾಗ ಮಾತ್ರ ಅವರಿಗೆ ಸೇವೆಮಾಡದೆ, ಕ್ರಿಸ್ತನ ದಾಸರಿಗೆ ತಕ್ಕಂತೆ ಮನಃಪೂರ್ವಕವಾಗಿ ದೇವರ ಚಿತ್ತವನ್ನು ನೆರವೇರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತೆಂಚ್ಯಾಕ್ನಾ ಹೊಗ್ಳಾಪ್ ಘೆವ್ಚೆ ಮನುನ್ ತೆನಿ ತುಮ್ಕಾ ಬಗಿತ್ ರಾತಾನಾ ತವ್ಡೆಚ್ ಕಾಮ್ ಕರುನ್ ದಾಕ್ವುನಕಾಸಿ, ತುಮಿ ಕ್ರಿಸ್ತಾಕ್ ಖಾಲ್ತಿ ಹೊವ್ನ್ ಹೊತ್ತ್ಯಾ ಸಾರ್ಕೆ ತೆಂಕಾಬಿ ಖಾಲ್ತಿ ಹೊವ್ನ್ ರ್‍ಹಾವ್ಚೆ, ದೆವಾಕ್ ಬರೆ ದಿಸ್ತಲೆ ಕಾಮ್ ತುಮಿ ಫುರಾ ಮನಾನ್ ಕರುಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 6:6
20 ತಿಳಿವುಗಳ ಹೋಲಿಕೆ  

ಸುವಾರ್ತೆಯನ್ನು ನಮ್ಮ ವಶಕ್ಕೆ ಒಪ್ಪಿಸಿದನಲ್ಲಾ ಎಂದು ಯೋಚಿಸುವವರಾಗಿ ಮನುಷ್ಯರನ್ನು ಮೆಚ್ಚಿಸಬೇಕೆನ್ನದೆ ಹೃದಯವನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತಾಡುತ್ತೇವೆ.


ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸುವದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ದಾಸನಲ್ಲ.


ಮತ್ತು ಬುದ್ಧಿಹೀನರಾಗಿ ನಡೆಯದೆ ಕರ್ತನ ಚಿತ್ತವೇನೆಂಬದನ್ನು ವಿಚಾರಿಸಿ ತಿಳಿದವರಾಗಿರ್ರಿ.


ಯಾಕಂದರೆ ಶರೀರದಲ್ಲಿ ಬಾಧೆಪಟ್ಟವನು ಪಾಪದ ವಶದಿಂದ ತಪ್ಪಿಸಿಕೊಂಡವನಾಗಿ ಉಳಿದಿರುವ ತನ್ನ ಜೀವಮಾನಕಾಲದಲ್ಲಿ ಇನ್ನೂ ಮನುಷ್ಯರ ಅಭಿಲಾಷೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವದಕ್ಕೆ ಪ್ರಯತ್ನಮಾಡುವನು.


ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ನನ್ನ ಮಾತನ್ನು ಯಾವಾಗಲೂ ಕೇಳಿದಂತೆ ಈಗಲೂ ಕೇಳಿರಿ. ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರುವಾಗಲೂ ಬಹು ಹೆಚ್ಚಾಗಿ ಮನೋಭೀತಿಯಿಂದ ನಡುಗುವವರಾಗಿ ನಿಮ್ಮ ನಿಮ್ಮ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.


ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನೇ ನನಗೆ ತಮ್ಮನೂ ತಂಗಿಯೂ ತಾಯಿಯೂ ಆಗಬೇಕು ಅಂದನು.


ನೀವು ತನ್ನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಯನ್ನು ನಿಮಗೆ ಅನುಗ್ರಹಿಸಲಿ. ಆತನು ಯೇಸು ಕ್ರಿಸ್ತನ ಮೂಲಕ ತನಗೆ ಸಮರ್ಪಕವಾದದ್ದನ್ನು ನಮ್ಮಲ್ಲಿ ನಡಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಸ್ತೋತ್ರ. ಆಮೆನ್.


ದೇವರ ಚಿತ್ತವನ್ನು ನೆರವೇರಿಸಿ ವಾಗ್ದಾನದ ಫಲವನ್ನು ಹೊಂದಬೇಕಾದರೆ ನಿಮಗೆ ತಾಳ್ಮೆಬೇಕು.


ಆದಕಾರಣ ನಾವು ನಿಮ್ಮ ಸುದ್ದಿಯನ್ನು ಕೇಳಿದ ದಿವಸದಿಂದ ನಿಮಗೋಸ್ಕರ ಪ್ರಾರ್ಥಿಸುವದನ್ನು ಬಿಡದೆ ನೀವು ಸಕಲ ಆತ್ಮೀಯ ಜ್ಞಾನವನ್ನೂ ಗ್ರಹಿಕೆಯನ್ನೂ ಹೊಂದಿ


ನನ್ನನ್ನು ಸ್ವಾಮೀ, ಸ್ವಾಮೀ ಅನ್ನುವವರೆಲ್ಲರು ಪರಲೋಕರಾಜ್ಯದಲ್ಲಿ ಸೇರುವರೆಂದು ನೆನಸಬೇಡಿರಿ; ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನೇ ಪರಲೋಕರಾಜ್ಯಕ್ಕೆ ಸೇರುವನು.


ಲೋಕವೂ ಅದರ ಆಶೆಯೂ ಗತಿಸಿ ಹೋಗುತ್ತವೆ; ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಎಂದೆಂದಿಗೂ ಇರುವನು.


ಆದರೆ ನೀವು ಮುಂಚೆ ಪಾಪಕ್ಕೆ ದಾಸರಾಗಿದ್ದರೂ ನಿಮಗೆ ಕಲಿಸಲ್ಪಟ್ಟ ಬೋಧನೆಗೆ ನೀವು ಮನಃಪೂರ್ವಕವಾಗಿ ಅಧೀನರಾದದರಿಂದಲೂ


ಕ್ರಿಸ್ತ ಯೇಸುವಿನ ದಾಸನಾಗಿರುವ ನಿಮ್ಮ ಊರಿನ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ; ಇವನು ಪ್ರಾರ್ಥನೆ ಮಾಡುವಾಗೆಲ್ಲಾ ನಿಮಗೋಸ್ಕರ ಹೋರಾಡಿ ನೀವು ಪ್ರವೀಣರಾಗಿಯೂ ಎಲ್ಲಾ ವಿಷಯಗಳಲ್ಲಿ ದೇವರ ಚಿತ್ತವನ್ನು ಕುರಿತು ಪೂರ್ಣ ನಿಶ್ಚಯವುಳ್ಳವರಾಗಿಯೂ ನಿಂತಿರಬೇಕೆಂದು ವಿಜ್ಞಾಪನೆ ಮಾಡುತ್ತಾನೆ.


ಅವರು ನನ್ನನ್ನು ಯೆಹೋವನೆಂದು ಗ್ರಹಿಸತಕ್ಕ ಹೃದಯವನ್ನು ಅವರಿಗೆ ಅನುಗ್ರಹಿಸುವೆನು; ಅವರು ನನ್ನ ಜನರಾಗಿರುವರು, ನಾನು ಅವರ ದೇವರಾಗಿರುವೆನು; ಅವರು ನನ್ನ ಕಡೆಗೆ ಮನಃಪೂರ್ವಕವಾಗಿ ಹಿಂದಿರುಗಿ ಬರುವರು.


ತಿಳಿಯದೆ ಮಾತಾಡುವ ಮೂಢಜನರ ಬಾಯನ್ನು ನೀವು ಒಳ್ಳೇ ನಡತೆಯಿಂದ ಕಟ್ಟಬೇಕೆಂಬದೇ ದೇವರ ಚಿತ್ತ.


ಇಸ್ರಾಯೇಲಿಗೆ ಇಷ್ಟು ದಂಡನೆ ಆದರೂ ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ನನ್ನ ಕಡೆಗೆ ಪೂರ್ಣಮನದಿಂದಲ್ಲ, ಕಪಟದಿಂದಲೇ ತಿರುಗಿಕೊಂಡಿದ್ದಾಳೆ ಎಂಬದು ಯೆಹೋವನಾದ ನನ್ನ ನುಡಿ.


ದೇವರ ಚಿತ್ತವೇನಂದರೆ ನೀವು ಶುದ್ಧರಾಗಿ ಇರಬೇಕೆಂಬದೇ. ಆದದರಿಂದ ಹಾದರಕ್ಕೆ ದೂರವಾಗಿರಬೇಕು.


ದೇವರ ಚಿತ್ತದಂತೆ ನಡೆಯುವವನೇ ನನಗೆ ತಮ್ಮನೂ ತಂಗಿಯೂ ತಾಯಿಯೂ ಆಗಬೇಕು ಅಂದನು.


ಯಾವನು ಮತ್ತೊಬ್ಬನ ದಾಸನಾಗಿದ್ದು ಕರ್ತನ ಸೇವೆಗೆ ಕರೆಯಲ್ಪಟ್ಟಿರುವನೋ ಅವನು ಕರ್ತನ ಮೂಲಕ ಬಿಡುಗಡೆ ಹೊಂದಿರುವ ಸ್ವತಂತ್ರನು. ಅದೇ ಪ್ರಕಾರ ಯಾವನು ಸ್ವತಂತ್ರನಾಗಿದ್ದು ಕರೆಯಲ್ಪಟ್ಟಿರುವನೋ ಅವನು ಕ್ರಿಸ್ತನಿಗೆ ದಾಸನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು