Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 6:8 - ಕನ್ನಡ ಸತ್ಯವೇದವು J.V. (BSI)

8 ಯಾಕಂದರೆ ಒಬ್ಬನು ದಾಸನಾಗಲಿ ಸ್ವತಂತ್ರನಾಗಲಿ ತಾನು ಯಾವ ಸತ್ಕಾರ್ಯವನ್ನು ಮಾಡುತ್ತಾನೋ ಅದರ ಪ್ರತಿಫಲವನ್ನು ಕರ್ತನಿಂದ ಹೊಂದುವನೆಂಬದನ್ನು ನೀವು ತಿಳಿದವರಾಗಿಯೇ ಇದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯಾಕೆಂದರೆ ಒಬ್ಬನು ದಾಸನಾಗಲಿ ಸ್ವತಂತ್ರನಾಗಲಿ ತಾನು ಯಾವ ಸತ್ಕಾರ್ಯವನ್ನು ಮಾಡುತ್ತಾನೋ ಅದರ ಪ್ರತಿಫಲವನ್ನು ಕರ್ತನಿಂದ ಹೊಂದುವನೆಂಬುದನ್ನು ನೀವು ತಿಳಿದವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ದಾಸ್ಯದಲ್ಲಿರುವವನಾಗಲಿ, ಸ್ವತಂತ್ರವುಳ್ಳವನಾಗಿರಲಿ ಸತ್ಕಾರ್ಯವನ್ನು ಮಾಡುವವನು ಪ್ರಭುವಿನಿಂದ ತಕ್ಕ ಪ್ರತಿಫಲವನ್ನು ಪಡೆದೇ ತೀರುವನೆಂದು ನೀವು ಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಒಳ್ಳೆಯದನ್ನು ಮಾಡುವ ಪ್ರತಿಯೊಬ್ಬನಿಗೂ ದೇವರು ಪ್ರತಿಫಲವನ್ನು ಕೊಡುತ್ತಾನೆಂಬುದನ್ನು ಜ್ಞಾಪಕದಲ್ಲಿಟ್ಟುಕೊಳ್ಳಿರಿ. ಪ್ರತಿಯೊಬ್ಬ ವ್ಯಕ್ತಿಯು ಅವನು ಸೇವಕನಾಗಿರಲಿ ಅಥವಾ ಸ್ವತಂತ್ರನಾಗಿರಲಿ ತಾನು ಮಾಡುವ ಒಳ್ಳೆಯ ಕಾರ್ಯಗಳಿಗೆ ಪ್ರತಿಫಲವನ್ನು ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ದಾಸನಾಗಲಿ, ಸ್ವತಂತ್ರನಾಗಲಿ ತಾನು ಯಾವ ಸತ್ಕಾರ್ಯವನ್ನು ಮಾಡುತ್ತಾನೋ ಅದರ ಪ್ರತಿಫಲವನ್ನು ಕರ್ತ ಯೇಸುವಿನಿಂದ ಹೊಂದುವನೆಂದು ನೀವು ತಿಳಿದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಕಶ್ಯಾಕ್ ಮಟ್ಲ್ಯಾರ್, ಗುಲಾಮಾಕ್ನಿ ಹೊಂವ್ದಿತ್, ಯಜಮಾನಾಕ್ನಿ ಹೊಂವ್ದಿತ್, ಧನಿ ತೆನಿ ಕರಲ್ಲ್ಯಾ ಬರ್‍ಯಾ ಕಾಮಾಕ್ನಿ ಪ್ರತಿ ಫಳ್ ದಿತಾ ಮನ್ತಲೆ ತುಮ್ಕಾ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 6:8
20 ತಿಳಿವುಗಳ ಹೋಲಿಕೆ  

ಕರ್ತನಿಂದ ಪರಲೋಕ ಬಾಧ್ಯತೆಯೆಂಬ ಪ್ರತಿಫಲವನ್ನು ಹೊಂದುವೆವೆಂದು ತಿಳಿದಿದ್ದೀರಲ್ಲಾ. ನೀವು ಕರ್ತನಾದ ಕ್ರಿಸ್ತನಿಗೇ ದಾಸರಾಗಿದ್ದೀರಿ.


ಅವರು ನಿನಗೆ ಮುಯ್ಯಿಗೆಮುಯ್ಯಿಮಾಡುವದಕ್ಕೆ ಏನೂ ಇಲ್ಲದವರಾಗಿದ್ದರೂ ನೀತಿವಂತರು ಜೀವಿತರಾಗಿ ಎದ್ದು ಬರುವಲ್ಲಿ ನಿನಗೆ ಮುಯ್ಯಿಗೆಮುಯ್ಯಾಗುವದರಿಂದ ನೀನು ಧನ್ಯನಾಗುವಿ ಅಂದನು.


ಇದನ್ನು ಧರಿಸಿಕೊಂಡಿರುವದರಲ್ಲಿ ಗ್ರೀಕನು ಯೆಹೂದ್ಯನು ಎಂಬ ಭೇದವಿಲ್ಲ; ಸುನ್ನತಿ ಮಾಡಿಸಿಕೊಂಡವರು ಸುನ್ನತಿಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ; ಮ್ಲೇಚ್ಫ ಹೂಣ ಎಂಬ ಹೆಸರುಗಳಿಲ್ಲ; ಆಳು ಒಡೆಯ ಎಂಬ ಭೇದವಿಲ್ಲ. ಆದರೆ ಕ್ರಿಸ್ತನೇ ಸಮಸ್ತರಲ್ಲಿಯೂ ಸಮಸ್ತವೂ ಆಗಿರುವನು.


ಯಾಕಂದರೆ ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡಿಸಿದ ಒಳ್ಳೇದಕ್ಕಾಗಲಿ ಕೆಟ್ಟದ್ದಕ್ಕಾಗಲಿ ಸರಿಯಾಗಿ ಪ್ರತಿಫಲವನ್ನು ಹೊಂದುವದಕ್ಕೋಸ್ಕರ ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ಯಥಾಸ್ಥಿತಿಯಲ್ಲಿ ಕಾಣಿಸಿಕೊಳ್ಳಬೇಕು.


ಮನುಷ್ಯಕುಮಾರನು ತನ್ನ ತಂದೆಯ ಪ್ರಭಾವದೊಡನೆ ತನ್ನ ದೂತರ ಸಮೇತವಾಗಿ ಬರುವನು; ಆವಾಗ ಆತನು ಒಬ್ಬೊಬ್ಬನಿಗೆ ಅವನವನ ನಡತೆಗೆ ತಕ್ಕ ಫಲವನ್ನು ಕೊಡುವನು.


ಅಂತರಂಗದಲ್ಲಿ ನಡೆಯುವದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು.


ಅಧರ್ಮಿಯ ಸಂಬಳವು ಜೊಳ್ಳು; ಧರ್ಮವನ್ನು ಬಿತ್ತುವವನ ಲಾಭವು ಗಟ್ಟಿ.


ಹಾಗಾದರೆ ನಿಮ್ಮ ಧೈರ್ಯವನ್ನು ಬಿಟ್ಟುಬಿಡಬೇಡಿರಿ; ಅದಕ್ಕೆ ಮಹಾ ಪ್ರತಿಫಲ ಉಂಟು.


ಒಂದು ಕಾಲ ಉಂಟು, ನಿನ್ನ ನಿರೀಕ್ಷೆಯು ನಿರರ್ಥಕವಾಗದು.


ಐಗುಪ್ತದೇಶದ ಸರ್ವೈಶ್ವರ್ಯಕ್ಕಿಂತಲೂ ಕ್ರಿಸ್ತನ ನಿವಿುತ್ತವಾಗಿ ಉಂಟಾಗುವ ನಿಂದೆಯೇ ಶ್ರೇಷ್ಠ ಭಾಗ್ಯವೆಂದೆಣಿಸಿಕೊಂಡನು; ಯಾಕಂದರೆ ಬರುವ ಪ್ರತಿಫಲದ ಮೇಲೆ ಕಣ್ಣಿಟ್ಟಿದ್ದನು.


ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ, ಆಳು ಒಡೆಯ ಎಂದೂ, ಗಂಡು ಹೆಣ್ಣು ಎಂದೂ ಭೇದವಿಲ್ಲ.


ಜನರು ನೋಡಲಿ ಎಂದು ನಿಮ್ಮ ಧರ್ಮಕಾರ್ಯಗಳನ್ನು ಅವರ ಮುಂದೆ ಮಾಡಬಾರದು, ನೋಡಿರಿ; ಹಾಗೆ ಮಾಡಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯ ಹತ್ತಿರ ನಿಮಗೆ ಫಲದೊರೆಯದು.


ಸಂತೋಷಪಡಿರಿ, ಉಲ್ಲಾಸಪಡಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವದು; ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನೂ ಹೀಗೆಯೇ ಹಿಂಸೆಪಡಿಸಿದರಲ್ಲಾ.


ದುಷ್ಟರ ಗತಿಯನ್ನು ಏನು ಹೇಳಲಿ! ಅವರ ಕಾರ್ಯಗಳಿಗೆ ತಕ್ಕ ಪ್ರತಿಫಲವು ಅವರಿಗೆ ಲಭಿಸುವದಲ್ಲವೆ.


ನೀವಾದರೋ ನಿಮ್ಮ ವೈರಿಗಳನ್ನು ಪ್ರೀತಿಸಿ ಅವರಿಗೆ ಉಪಕಾರಮಾಡಿರಿ. ಧೈರ್ಯವನ್ನು ಬಿಡದೆ ಸಾಲಕೊಡಿರಿ; ಹೀಗೆ ಮಾಡಿದರೆ, ನಿಮಗೆ ಬಹಳ ಫಲ ಸಿಕ್ಕುವದು, ಮತ್ತು ನೀವು ಪರಾತ್ಪರನ ಮಕ್ಕಳಾಗುವಿರಿ. ಆತನಂತೂ ಉಪಕಾರ ನೆನಸದವರಿಗೂ ಕೆಟ್ಟವರಿಗೂ ಉಪಕಾರಿಯಾಗಿದ್ದಾನೆ.


ಯೆಹೂದ್ಯರಾಗಲಿ ಗ್ರೀಕರಾಗಲಿ ದಾಸರಾಗಲಿ ಸ್ವತಂತ್ರರಾಗಲಿ ನಾವೆಲ್ಲರು ಒಂದೇ ದೇಹವಾಗುವದಕ್ಕಾಗಿ ಒಂದೇ ಆತ್ಮನಲ್ಲಿ ದೀಕ್ಷಾಸ್ನಾನಮಾಡಿಸಿಕೊಂಡೆವು; ಒಂದೇ ಆತ್ಮ ನಮ್ಮೆಲ್ಲರಿಗೂ ಪಾನವಾಗಿ ಕೊಡಲ್ಪಟ್ಟಿತು.


ಅನ್ಯಾಯಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕ ಪ್ರತಿಫಲವನ್ನು ಹೊಂದುವನಷ್ಟೆ; ಪಕ್ಷಪಾತವಿರುವದಿಲ್ಲ.


ಅವರು - ಯಾರೂ ನಮ್ಮನ್ನು ಕೂಲಿಗೆ ಕರೆಯಲಿಲ್ಲ ಅಂದಾಗ ಅವನು - ನೀವು ಸಹ ನನ್ನ ದ್ರಾಕ್ಷೇತೋಟಕ್ಕೆ ಹೋಗಿರಿ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು