ಎಸ್ತೇರಳು 1:1 - ಕನ್ನಡ ಸತ್ಯವೇದವು J.V. (BSI)1 ಹಿಂದುಸ್ಥಾನ ಮೊದಲುಗೊಂಡು ಕೂಷಿನವರೆಗೂ ಇರುವ ನೂರಿಪ್ಪತ್ತೇಳು ಸಂಸ್ಥಾನಗಳನ್ನು ಆಳುತ್ತಿದ್ದ ಅಹಷ್ವೇರೋಷನ ಕಾಲದಲ್ಲಿ ನಡೆದ ಚರಿತ್ರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಭಾರತ ಮೊದಲುಗೊಂಡು ಕೂಷಿನ ವರೆಗೂ ಇರುವ ನೂರಿಪ್ಪತ್ತೇಳು ಸಂಸ್ಥಾನಗಳನ್ನು ಆಳುತ್ತಿದ್ದ ಅಹಷ್ವೇರೋಷನ ಕಾಲದಲ್ಲಿ ನಡೆದ ಚರಿತ್ರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಭಾರತ (ಇಂಡಿಯಾ) ದೇಶ ಮೊದಲುಗೊಂಡು ಇಥಿಯೋಪಿಯ ದೇಶದವರೆಗೂ ಇದ್ದ ನೂರಿಪ್ಪತ್ತೇಳು ಸಂಸ್ಥಾನಗಳನ್ನು ಅರಸ ಅಹಷ್ವೇರೋಷನು ಆಳುತ್ತಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಅಹಷ್ವೇರೋಷನು ರಾಜನಾಗಿದ್ದಾಗ ನಡೆದ ಘಟನೆ. ಹಿಂದೂಸ್ಥಾನದಿಂದ ಇಥಿಯೋಪ್ಯದ ತನಕ ನೂರಿಪ್ಪತ್ತೇಳು ಸಂಸ್ಥಾನಗಳನ್ನು ಅವನು ಆಳುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಭಾರತ ದೇಶ ಮೊದಲುಗೊಂಡು ಇಥಿಯೋಪಿಯ ದೇಶದವರೆಗಿನ ನೂರ ಇಪ್ಪತ್ತೇಳು ಸಂಸ್ಥಾನಗಳನ್ನು ಅಹಷ್ವೇರೋಷನು ಆಳುತ್ತಿದ್ದನು. ಅಧ್ಯಾಯವನ್ನು ನೋಡಿ |
ಆಗ ರಾಜಲೇಖಕರು ಕರೆಯಲ್ಪಟ್ಟರು. ಅವರು ಮೂರನೆಯ ತಿಂಗಳಾದ ಜೇಷ್ಠಮಾಸದ ಇಪ್ಪತ್ತ ಮೂರನೆಯ ದಿನದಲ್ಲಿ ಬಂದು ಮೊರ್ದೆಕೈಯ ಆಜ್ಞಾನುಸಾರ ಯೆಹೂದ್ಯರಿಗೂ ಹಿಂದುಸ್ಥಾನ ಮೊದಲುಗೊಂಡು ಕೂಷಿನವರೆಗೂ ಇರುವ ನೂರಿಪ್ಪತ್ತೇಳು ಸಂಸ್ಥಾನಗಳ ಉಪರಾಜರಿಗೂ ದೇಶಾಧಿಪತಿಗಳಿಗೂ ಅಧಿಕಾರಿಗಳಿಗೂ ಪತ್ರಗಳನ್ನು ಬರೆದರು. ಆ ಪತ್ರಗಳು ಆಯಾ ಸಂಸ್ಥಾನಗಳ ಬರಹಗಳಲ್ಲಿಯೂ ಆಯಾ ಜನಾಂಗಗಳ ಭಾಷೆಗಳಲ್ಲಿಯೂ ಇದ್ದವು. ಯೆಹೂದ್ಯರಿಗೆ ಬರೆದ ಪತ್ರಗಳು ಯೆಹೂದ್ಯ ಬರಹದಲ್ಲಿಯೂ ಭಾಷೆಯಲ್ಲಿಯೂ ಲಿಖಿತವಾದವು.