ಎಸ್ತೇರಳು 1:11 - ಕನ್ನಡ ಸತ್ಯವೇದವು J.V. (BSI)11 ಬಹು ಸುಂದರಿಯಾದ ರಾಣಿಯ ಸೌಂದರ್ಯವನ್ನು ಜನರಿಗೂ ಸರದಾರರಿಗೂ ತೋರಿಸಬೇಕೆಂದು ತನ್ನ ಸಾನ್ನಿಧ್ಯಸೇವಕರಾದ ಮೆಹೂಮಾನ್, ಬಿಜೆತಾ, ಹರ್ಬೋನಾ, ಬಿಗೆತಾ, ಅಬಗೆತಾ, ಜೇತರ್, ಕರ್ಕಸ್ ಎಂಬ ಏಳು ಮಂದಿ ಕಂಚುಕಿಗಳಿಗೆ - ವಷ್ಟಿರಾಣಿಯು ರಾಜ ಮುಕುಟವನ್ನು ಧರಿಸಿಕೊಂಡು ರಾಜಸನ್ನಿಧಿಗೆ ಬರಬೇಕೆಂಬದಾಗಿ ಹೇಳಿರಿ ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 “ವಷ್ಟಿ ರಾಣಿಯು ರಾಜಮುಕುಟವನ್ನು ಧರಿಸಿಕೊಂಡು ರಾಜಸನ್ನಿಧಿಗೆ ಬರಬೇಕೆಂಬದಾಗಿ ಹೇಳಿರಿ” ಎಂದು ಆಜ್ಞಾಪಿಸಿದನು. ಅವಳು ಅತಿ ಸೌಂದರ್ಯವತಿಯಾಗಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಪತ್ನಿಯ ರೂಪರಾಶಿಯನ್ನು ತನ್ನ ಪ್ರಜೆಗಳ ಹಾಗೂ ಪದಾಧಿಕಾರಿಗಳ ಮುಂದೆ ಪ್ರದರ್ಶಿಸುವ ಸಲುವಾಗಿ ರಾಜಮುಕುಟವನ್ನು ಧರಿಸಿದ ಆಕೆಯನ್ನು ರಾಜಸನ್ನಿಧಿಗೆ ಕರೆತರುವಂತೆ ಆಸ್ಥಾನ ಸೇವಕರಾದ ಮೆಹೂಮಾನ್, ಬಿಜೆತಾ, ಹರ್ಬೋನಾ, ಬಿಗೆತಾ, ಅಬಗೆತಾ, ಜೇತರ್, ಕರ್ಕಸ್ ಎಂಬ ಏಳುಮಂದಿ ಕಂಚುಕಿಯರಿಗೆ ಅಪ್ಪಣೆಮಾಡಿದನು. ಅಧ್ಯಾಯವನ್ನು ನೋಡಿ |