Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 1:12 - ಕನ್ನಡ ಸತ್ಯವೇದವು J.V. (BSI)

12 ಕಂಚುಕಿಗಳು ತಿಳಿಸಿದ ರಾಜಾಜ್ಞೆಗೆ ವಷ್ಟಿರಾಣಿಯು - ಬರುವದಿಲ್ಲ ಎಂದು ಉತ್ತರಕೊಟ್ಟಳು. ಇದರಿಂದ ಅರಸನು ಬಹುಕೋಪಗೊಂಡು ರೌದ್ರಾವೇಶನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಕಂಚುಕಿಗಳು ತಿಳಿಸಿದ ರಾಜಾಜ್ಞೆಗೆ ವಷ್ಟಿ ರಾಣಿಯು, “ಬರುವುದಿಲ್ಲ” ಎಂದು ಉತ್ತರಕೊಟ್ಟಳು. ಇದರಿಂದ ಅರಸನು ಬಹುಕೋಪಗೊಂಡು ರೌದ್ರಾವೇಶವುಳ್ಳವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆದರೆ, ಕಂಚುಕಿಗಳು ರಾಜಾಜ್ಞೆಯನ್ನು ವಷ್ಟಿರಾಣಿಗೆ ತಿಳಿಸಿದಾಗ, ಆಕೆ ಬರಲು ನಿರಾಕರಿಸಿದಳು. ಇದನ್ನು ಕೇಳಿದಾಗ ಅರಸನು ಕುಪಿತಗೊಂಡು, ರೌದ್ರಾವೇಶನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆಸ್ಥಾನಸೇವಕರು ವಷ್ಟಿರಾಣಿಗೆ ರಾಜಾಜ್ಞೆಯನ್ನು ತಿಳಿಸಿದಾಗ ಆಕೆಯು ಬರಲು ನಿರಾಕರಿಸಿದಳು. ಇದರಿಂದ ರಾಜನು ಕೋಪೋದ್ರಿಕ್ತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದರೆ ಅರಸನು ಅವರಿಂದ ಹೇಳಿ ಕಳುಹಿಸಿದ ಮಾತಿಗೆ ವಷ್ಟಿ ರಾಣಿಯು, “ನಾನು ಬರುವುದಿಲ್ಲ,” ಎಂದು ಹೇಳಿದಳು. ಆದ್ದರಿಂದ ಅರಸನು ಬಹುಕೋಪಗೊಂಡು, ರೋಷಾವೇಶನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 1:12
19 ತಿಳಿವುಗಳ ಹೋಲಿಕೆ  

ರಾಜನ ರೋಷವು ಸಿಂಹದ ಗರ್ಜನೆ; ಅವನ ದಯೆಯು ಪೈರಿನ ಇಬ್ಬನಿ.


ಅದೇ ರೀತಿಯಾಗಿ ಸ್ತ್ರೀಯರೇ, ನಿಮ್ಮ ಗಂಡಂದಿರಿಗೆ ಅಧೀನರಾಗಿರಿ.


ಅದಿರಲಿ; ಸಭೆಯು ಕ್ರಿಸ್ತನಿಗೆ ಹೇಗೆ ಅಧೀನವಾಗಿದೆಯೋ ಹಾಗೆಯೇ ಸ್ತ್ರೀಯರು ತಮ್ಮತಮ್ಮ ಗಂಡಂದಿರಿಗೆ ಎಲ್ಲಾ ವಿಷಯಗಳಲ್ಲಿ ಅಧೀನರಾಗಿರಬೇಕು.


ಸ್ತ್ರೀಯರೇ, ನೀವು ಕರ್ತನಿಗೆ ಹೇಗೋ ಹಾಗೆಯೇ ನಿಮ್ಮನಿಮ್ಮ ಗಂಡಂದಿರಿಗೆ ಅಧೀನರಾಗಿರ್ರಿ.


ಆತನ ಸಿಟ್ಟಿಗೆ ಯಾರು ತಡೆದಾರು? ಆತನ ರೋಷಾಗ್ನಿಗೆ ಯಾರು ನಿಂತಾರು? ಆತನ ರೌದ್ರವು ಜ್ವಾಲಾಪ್ರವಾಹದಂತೆ ಹರಿಯುತ್ತದೆ, ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.


ನೆಬೂಕದ್ನೆಚ್ಚರನು ಉಗ್ರಕೋಪವುಳ್ಳವನಾಗಿ ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರನ್ನು ಹಿಡತರಬೇಕೆಂದು ಆಜ್ಞಾಪಿಸಿದನು.


ಇದನ್ನು ಕೇಳಿ ರಾಜನು ಉಗ್ರರೋಷವುಳ್ಳವನಾಗಿ ಬಾಬೆಲಿನ ಸಕಲವಿದ್ವಾಂಸರನ್ನು ಕೊಲ್ಲಬೇಕೆಂದು ಆಜ್ಞಾಪಿಸಿದನು.


ರಾಜನು ಗರ್ಜಿಸುವ ಸಿಂಹದಂತೆ ಭಯಂಕರನು, ಅವನನ್ನು ಕೆಣಕುವವನು ತನಗೇ ಕೆಡುಕುಮಾಡಿಕೊಳ್ಳುವನು.


ಯೆಹೋವನೇ, ಇನ್ನೆಷ್ಟರವರೆಗೆ ಕೋಪವುಳ್ಳವನಾಗಿರುವಿ? ನಿನ್ನ ರೋಷಾಗ್ನಿಯು ಸದಾಕಾಲವೂ ಉರಿಯುತ್ತಲೇ ಇರಬೇಕೋ?


ದೇವರೇ, ನೀನು ನಮ್ಮನ್ನು ಸಂಪೂರ್ಣವಾಗಿ ತಳ್ಳಿಬಿಟ್ಟದ್ದೇಕೆ? ನೀನು ಪಾಲಿಸುವ ಹಿಂಡಿನ ಮೇಲೆ ನಿನ್ನ ಕೋಪಾಗ್ನಿಯು ಹೊಗೆ ಆಡುವದೇನು?


ಯೆಹೋವನು ಅಂಥವನನ್ನು ಎಂದಿಗೂ ಕ್ಷವಿುಸದೆ ಬಹಳ ಸಿಟ್ಟುಮಾಡಿಕೊಂಡು ತನ್ನ ಗೌರವವನ್ನು ಕಾಪಾಡಿಕೊಳ್ಳುವವನಾಗಿ ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸಿ ಅವನ ಹೆಸರನ್ನು ಭೂವಿುಯ ಮೇಲೆ ಇಲ್ಲದಂತೆ ಮಾಡುವನು.


ಆರೋನನು - ಸ್ವಾವಿುಯವರು ರೋಷಗೊಳ್ಳಬಾರದು; ಈ ಜನರು ದುಷ್ಟಸ್ವಭಾವಿಗಳೆಂಬದನ್ನು ಬಲ್ಲಿರಷ್ಟೆ.


ಅವನು ಪಾಳೆಯದ ಹತ್ತಿರಕ್ಕೆ ಬಂದು ಆ ಬಸವನನ್ನೂ ಜನರು ಕುಣಿದಾಡುವದನ್ನೂ ಕಂಡಾಗ ಬಹು ಕೋಪಗೊಂಡು ಕೈಯಲ್ಲಿದ್ದ ಶಿಲಾಶಾಸನಗಳನ್ನು ಬೆಟ್ಟದ ಬುಡದಲ್ಲಿ ನೆಲಕ್ಕೆ ಹಾಕಿ ಒಡೆದುಬಿಟ್ಟನು.


ಆಮೇಲೆ ಸ್ತ್ರೀಗೆ - ನೀನು ಗರ್ಭಿಣಿಯಾಗಿರುವ ಕಾಲದಲ್ಲಿ ಬಹು ಸಂಕಟಪಡಬೇಕೆಂದು ನಾನು ನೇವಿುಸಿದ್ದೇನೆ; ಕಷ್ಟದಿಂದಲೇ ಮಕ್ಕಳನ್ನು ಹೆರುವಿ; ಗಂಡನ ಮೇಲೆ ನಿನಗೆ ಆಶೆಯಿರುವದು; ಅವನು ನಿನಗೆ ಒಡೆಯನಾಗುವನು. ಎಂದು ಹೇಳಿದನು.


ಆಗ ನೆಬೂಕದ್ನೆಚ್ಚರನು ಕೋಪೋದ್ರೇಕದಿಂದ ಮುಖಭಾವವನ್ನು ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರ ಕಡೆಗೆ ಬೇರೆಮಾಡಿಕೊಂಡು ಆವಿಗೆಯನ್ನು ನಿತ್ಯಕ್ಕಿಂತ ಏಳರಷ್ಟು ಹೆಚ್ಚಾಗಿ ಉರಿಸಬೇಕೆಂದು ಆಜ್ಞಾಪಿಸಿದನು.


ಬಹು ಸುಂದರಿಯಾದ ರಾಣಿಯ ಸೌಂದರ್ಯವನ್ನು ಜನರಿಗೂ ಸರದಾರರಿಗೂ ತೋರಿಸಬೇಕೆಂದು ತನ್ನ ಸಾನ್ನಿಧ್ಯಸೇವಕರಾದ ಮೆಹೂಮಾನ್, ಬಿಜೆತಾ, ಹರ್ಬೋನಾ, ಬಿಗೆತಾ, ಅಬಗೆತಾ, ಜೇತರ್, ಕರ್ಕಸ್ ಎಂಬ ಏಳು ಮಂದಿ ಕಂಚುಕಿಗಳಿಗೆ - ವಷ್ಟಿರಾಣಿಯು ರಾಜ ಮುಕುಟವನ್ನು ಧರಿಸಿಕೊಂಡು ರಾಜಸನ್ನಿಧಿಗೆ ಬರಬೇಕೆಂಬದಾಗಿ ಹೇಳಿರಿ ಎಂದು ಆಜ್ಞಾಪಿಸಿದನು.


ವಿಧಿನ್ಯಾಯಗಳನ್ನು ಬಲ್ಲವರೆಲ್ಲರ ಮುಂದೆ ಅರಮನೆಯ ಸಂಗತಿಗಳನ್ನು ಇಡುವ ಪದ್ಧತಿಯಿತ್ತು.


ಅರಸನು ರೌದ್ರಾವೇಶನಾಗಿ ದ್ರಾಕ್ಷಾರಸಪಾನಮಾಡುವದನ್ನು ಬಿಟ್ಟೆದ್ದು ಅರಮನೆಯ ತೋಟಕ್ಕೆ ಹೋದನು. ಹಾಮಾನನಾದರೋ ಅರಸನಿಂದ ತನಗೆ ಕೇಡು ಸಿದ್ಧವಾಯಿತೆಂದು ತಿಳಿದು ಎಸ್ತೇರಳ ಹತ್ತಿರ ತನ್ನ ಪ್ರಾಣ ರಕ್ಷಣೆಯ ನಿವಿುತ್ತವಾಗಿ ಬಿನ್ನಹಮಾಡಲು ನಿಂತುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು