Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 1:14 - ಕನ್ನಡ ಸತ್ಯವೇದವು J.V. (BSI)

14 ಅರಸನಾದ ಅಹಷ್ವೇರೋಷನ ಒಡ್ಡೋಲಗದಲ್ಲಿ ರಾಜಸಾನಿಧ್ಯಸೇವಕರೂ ರಾಜಸಭಾಪ್ರಧಾನರೂ ಆಗಿದ್ದ ಕರ್ಷೆನಾ, ಶೇತಾರ್, ಅದ್ಮಾತಾ, ತರ್ಷೀಷ್, ಮೆರೆಸ್, ಮರ್ಸೆನಾ, ಮೆಮೂಕಾನ್ ಎಂಬ ಏಳು ಮಂದಿ ಪಾರಸಿಯ ಮತ್ತು ಮೇದ್ಯ ಪ್ರಭುಗಳಿದ್ದರು. ಅವನು ಸಮಯೋಚಿತಜ್ಞಾನವುಳ್ಳವರಾದ ಇವರನ್ನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅರಸನಾದ ಅಹಷ್ವೇರೋಷನ ಆಸ್ಥಾನದಲ್ಲಿ ರಾಜಸಾನ್ನಿಧ್ಯ ಸೇವಕರೂ ಮತ್ತು ರಾಜಸಭಾಪ್ರಧಾನರೂ ಆಗಿದ್ದ ಕರ್ಷೆನಾ, ಶೇತಾರ್, ಅದ್ಮಾತಾ, ತರ್ಷೀಷ್, ಮೆರೆಸ್, ಮರ್ಸೆನಾ, ಮೆಮೂಕಾನ್ ಎಂಬ ಏಳು ಪಾರಸಿಯ ಮತ್ತು ಮೇದ್ಯ ದೇಶಗಳ ರಾಜ ಪ್ರಮುಖರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅರಸ ಅಹಷ್ವೇರೋಷನ ಆಸ್ಥಾನದಲ್ಲಿ ರಾಜಸಾನ್ನಿಧ್ಯ ಸೇವಕರೂ ಪದಾಧಿಕಾರಿಗಳೂ ಆಗಿದ್ದ ಕರ್ಷೆನಾ, ಶೇತಾರ್, ಅದ್ಮಾತಾ, ತರ್ಷೀಷ್, ಮೆರೆಸ್, ಮರ್ಸೆನಾ, ಮೆಮೂಕಾನ್ ಎಂಬ ಏಳು ಮಂದಿ ಪರ್ಷಿಯ ಮತ್ತು ಮೇದ್ಯ ದೇಶಗಳ ರಾಜಪ್ರಮುಖರು ಇದ್ದರು. ಸಮಯೋಚಿತ ವ್ಯವಹಾರ ಜ್ಞಾನಹೊಂದಿದವರಾದ ಇವರನ್ನು ಅರಸನು, ಈ ವಿಷಯವಾಗಿ ವಿಚಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅರಸನಿಗೆ ಬಹು ಹತ್ತಿರವಾಗಿದ್ದ ಪಾರಸಿಯ ಮತ್ತು ಮೇದ್ಯ ದೇಶಗಳ ಏಳುಮಂದಿ ಪ್ರಧಾನರಾದ ಕರ್ಷೇನಾ, ಶೆತಾರ್, ಅದ್ಮಾತಾ, ತಾರ್ಷೀಷ್, ಮೆರೆಸ್, ಮರ್ಸೆನಾ, ಮೆಮೂಕಾನ್ ಇವರ ಸಂಗಡ ಮಾತನಾಡಿದನು. ರಾಜ್ಯದಲ್ಲಿ ಇವರು ಅರಸನ ಬಳಿಗೆ ಹೋಗಲು ವಿಶೇಷ ಅನುಮತಿಪಡೆದ ಅತ್ಯಂತ ಶ್ರೇಷ್ಠರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 1:14
6 ತಿಳಿವುಗಳ ಹೋಲಿಕೆ  

ಮೂರು ಮಂದಿ ದ್ವಾರಪಾಲಕರು, ಸೈನ್ಯ ಸಂಬಂಧವಾದ ಎಲ್ಲಾ ವ್ಯವಸ್ಥೆಯನ್ನು ಮಾಡುವ ಕಂಚುಕಿ, ಪಟ್ಟಣದಲ್ಲಿ ಉಳಿದಿದ್ದ ಅರಸನಿಗೆ ಆಪ್ತರಾಗಿದ್ದ ಐದು ಮಂದಿ ಮಂತ್ರಿಗಳು, ಯುದ್ಧಕ್ಕೆ ಹೋಗತಕ್ಕವರ ಪಟ್ಟಿಯನ್ನು ಮಾಡುವ ಸೇನಾಪತಿಯ ಲೇಖಕನು, ಪಟ್ಟಣದಲ್ಲಿದ್ದ ಅರುವತ್ತು ಮಂದಿ ರೈತರು ಇದ್ದರು.


ನೀನು ಹೋಗಿ ಯೆಹೂದದವರ ಮತ್ತು ಯೆರೂಸಲೇವಿುನವರ ಆಚರಣೆಯು ನಿನ್ನ ಕೈಯಲ್ಲಿರುವ ನಿನ್ನ ದೇವರ ಧರ್ಮೋಪದೇಶ ಗ್ರಂಥಕ್ಕೆ ಅನುಸಾರವಾಗಿದೆಯೋ ಇಲ್ಲವೋ ವಿಮರ್ಶೆ ಮಾಡಬೇಕು.


ಈ ಚಿಕ್ಕವರಲ್ಲಿ ಒಬ್ಬನನ್ನಾದರೂ ತಾತ್ಸಾರಮಾಡಬಾರದು ನೋಡಿರಿ; ಪರಲೋಕದಲ್ಲಿ ಅವರ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಲಿದ್ದಾರೆ ಎಂದು ನಿಮಗೆ ಹೇಳುತ್ತೇನೆ.


ಆತನ ದಾಸರು ಆತನಿಗೆ ಯಾಜಕಸೇವೆ ಮಾಡುವರು; ಅವರಿಗೆ ಆತನ ಮುಖದರ್ಶನವಾಗುವದು; ಅವರ ಹಣೆಗಳ ಮೇಲೆ ಆತನ ಹೆಸರು ಇರುವದು.


ಕಂಚುಕಿಗಳ ಮುಖಾಂತರ ತನಗುಂಟಾದ ರಾಜಾಜ್ಞೆಯನ್ನು ಕೈಕೊಳ್ಳದೆಹೋದ ವಷ್ಟಿರಾಣಿಗೆ ನಿಯಮದ ಪ್ರಕಾರ ಮಾಡತಕ್ಕದ್ದೇನು ಎಂದು ಕೇಳಲು ಮೆಮೂಕಾನನು ಅರಸನ ಮತ್ತು ಸರದಾರರ ಮುಂದೆ -


ಸೈನ್ಯಸಂಬಂಧವಾದ ಎಲ್ಲಾ ವ್ಯವಸ್ಥೆಯನ್ನು ಮಾಡುವ ಕಂಚುಕಿ, ಪಟ್ಟಣದಲ್ಲಿ ಉಳಿದು ಅರಸನಿಗೆ ಆಪ್ತರಾಗಿದ್ದ ಏಳು ಮಂದಿ ಮಂತ್ರಿಗಳು, ಯುದ್ಧಕ್ಕೆ ಹೋಗತಕ್ಕವರ ಪಟ್ಟಿಯನ್ನು ಮಾಡುವ ಸೇನಾಪತಿಯ ಲೇಖಕನು, ಪಟ್ಟಣದಲ್ಲಿದ್ದ ಅರುವತ್ತು ಮಂದಿ ರೈತರು ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು