Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 1:15 - ಕನ್ನಡ ಸತ್ಯವೇದವು J.V. (BSI)

15 ಕಂಚುಕಿಗಳ ಮುಖಾಂತರ ತನಗುಂಟಾದ ರಾಜಾಜ್ಞೆಯನ್ನು ಕೈಕೊಳ್ಳದೆಹೋದ ವಷ್ಟಿರಾಣಿಗೆ ನಿಯಮದ ಪ್ರಕಾರ ಮಾಡತಕ್ಕದ್ದೇನು ಎಂದು ಕೇಳಲು ಮೆಮೂಕಾನನು ಅರಸನ ಮತ್ತು ಸರದಾರರ ಮುಂದೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವನು ಸಮುಯೋಚಿತ ಜ್ಞಾನವುಳ್ಳವರಾದ ಇವರನ್ನು, “ಕಂಚುಕಿಗಳ ಮುಖಾಂತರ ತನಗುಂಟಾದ ರಾಜಾಜ್ಞೆಯನ್ನು ಕೈಗೊಳ್ಳದೆ ಹೋದ ವಷ್ಟಿ ರಾಣಿಗೆ ನಿಯಮದ ಪ್ರಕಾರ ಮಾಡತಕ್ಕದ್ದೇನು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 “ಕಂಚುಕಿಗಳ ಮುಖಾಂತರ ತಿಳಿಯಪಡಿಸಿದ ರಾಜಾಜ್ಞೆಯನ್ನು ಉಲ್ಲಂಘಿಸಿದ ವಷ್ಟಿರಾಣಿಯ ವಿರುದ್ಧ ಯಾವ ನ್ಯಾಯಬದ್ಧವಾದ ಕ್ರಮ ತೆಗೆದುಕೊಳ್ಳಬೇಕು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ಆಸ್ಥಾನ ಸೇವಕರ ಮೂಲಕ ಹೇಳಿ ಕಳುಹಿಸಿದ ರಾಜಾಜ್ಞೆಯನ್ನು ವಷ್ಟಿ ರಾಣಿಯು ನಿರಾಕರಿಸಿದ್ದಾಳೆ. ಇಂಥಾ ತಪ್ಪಿಗೆ ಯಾವ ಶಿಕ್ಷೆಯನ್ನು ವಿಧಿಸಬೇಕು?” ಎಂದು ವಿಚಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅಹಷ್ವೇರೋಷನು, “ಅರಸನ ಅಧಿಕಾರಿಗಳ ಮುಖಾಂತರ ಹೇಳಿ ಕಳುಹಿಸಿದ ರಾಜಾಜ್ಞೆಯನ್ನು ಉಲ್ಲಂಘಿಸಿದ ವಷ್ಟಿ ರಾಣಿಯ ವಿರುದ್ಧ ನ್ಯಾಯದ ಪ್ರಕಾರ ಅವಳಿಗೆ ಮಾಡಬೇಕಾದ ಕ್ರಮವೇನು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 1:15
4 ತಿಳಿವುಗಳ ಹೋಲಿಕೆ  

ಹಾಮಾನನು ಬಂದಾಗ - ಅರಸನು ಯಾವನನ್ನು ಸನ್ಮಾನಿಸಬೇಕೆಂದು ಇಷ್ಟವುಳ್ಳವನಾಗಿರುತ್ತಾನೋ ಅಂಥವನಿಗೆ ಮಾಡತಕ್ಕದ್ದೇನು ಎಂದು ಅವನನ್ನು ಕೇಳಿದನು. ಹಾಮಾನನು - ಅರಸನು ನನ್ನನ್ನಲ್ಲದೆ ಇನ್ನಾರನ್ನು ಸನ್ಮಾನಿಸುವದಕ್ಕೆ ಇಷ್ಟವುಳ್ಳವನಾಗಿರುವನು ಅಂದುಕೊಂಡು


ಅಹಷ್ವೇರೋಷನ ಆಳಿಕೆಯ ಪ್ರಾರಂಭದಲ್ಲಿ ಅವರು ಯೆಹೂದದಲ್ಲಿಯೂ ಯೆರೂಸಲೇವಿುನಲ್ಲಿಯೂ ವಾಸಿಸುವವರಿಗೆ ವಿರೋಧವಾಗಿ ಆಪಾದನ ಪತ್ರವನ್ನು ಬರೆದರು.


ಅರಸನಾದ ಅಹಷ್ವೇರೋಷನ ಒಡ್ಡೋಲಗದಲ್ಲಿ ರಾಜಸಾನಿಧ್ಯಸೇವಕರೂ ರಾಜಸಭಾಪ್ರಧಾನರೂ ಆಗಿದ್ದ ಕರ್ಷೆನಾ, ಶೇತಾರ್, ಅದ್ಮಾತಾ, ತರ್ಷೀಷ್, ಮೆರೆಸ್, ಮರ್ಸೆನಾ, ಮೆಮೂಕಾನ್ ಎಂಬ ಏಳು ಮಂದಿ ಪಾರಸಿಯ ಮತ್ತು ಮೇದ್ಯ ಪ್ರಭುಗಳಿದ್ದರು. ಅವನು ಸಮಯೋಚಿತಜ್ಞಾನವುಳ್ಳವರಾದ ಇವರನ್ನು -


ವಷ್ಟಿರಾಣಿಯ ಅಪರಾಧವು ಅರಸನೊಬ್ಬನಿಗೇ ವಿರುದ್ಧವಾದದ್ದಲ್ಲ; ಅರಸನಾದ ಅಹಷ್ವೇರೋಷನಿಗೆ ಸೇರಿರುವ ಎಲ್ಲಾ ಸಂಸ್ಥಾನಗಳ ಸರದಾರರಿಗೂ ಜನರಿಗೂ ವಿರುದ್ಧವಾದದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು