ಎಸ್ತೇರಳು 1:16 - ಕನ್ನಡ ಸತ್ಯವೇದವು J.V. (BSI)16 ವಷ್ಟಿರಾಣಿಯ ಅಪರಾಧವು ಅರಸನೊಬ್ಬನಿಗೇ ವಿರುದ್ಧವಾದದ್ದಲ್ಲ; ಅರಸನಾದ ಅಹಷ್ವೇರೋಷನಿಗೆ ಸೇರಿರುವ ಎಲ್ಲಾ ಸಂಸ್ಥಾನಗಳ ಸರದಾರರಿಗೂ ಜನರಿಗೂ ವಿರುದ್ಧವಾದದ್ದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆಗ ಮೆಮೂಕಾನನು ಅರಸನ ಮತ್ತು ಸರದಾರರ ಮುಂದೆ, “ವಷ್ಟಿ ರಾಣಿಯ ಅಪರಾಧವು ಅರಸನೊಬ್ಬನಿಗೇ ವಿರುದ್ಧವಾದುದಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅರಸನ ಮುಂದೆಯೂ ನೆರೆದಿದ್ದ ಪದಾಧಿಕಾರಿಗಳ ಮುಂದೆಯೂ ಇದಕ್ಕೆ ಉತ್ತರ ಈಯುತ್ತ ಮೆಮೂಕನು: “ವಷ್ಟಿರಾಣಿಯು ಬಗೆದಿರುವ ಅವಮಾನ ಅರಸನೊಬ್ಬನ ವಿರುದ್ಧ ಮಾತ್ರವಲ್ಲ, ಅರಸನ ರಾಜ್ಯದಲ್ಲಿರುವ ಎಲ್ಲಾ ಪದಾಧಿಕಾರಿಗಳ ಹಾಗೂ ಪ್ರಜೆಗಳ ವಿರುದ್ಧವೂ ಆಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಇತರ ಅಧಿಕಾರಿಗಳು ಆಲಿಸುತ್ತಿದ್ದಾಗ ಮೆಮೂಕಾನ್ ಎದ್ದುನಿಂತು, “ರಾಣಿ ವಷ್ಟಿಯು ತಪ್ಪು ಮಾಡಿದಳು. ಇದು ರಾಜನಿಗೆ ವಿರುದ್ಧವಾಗಿ ಮಾತ್ರವೇ ಅಲ್ಲ, ರಾಜ್ಯದ ಸಕಲ ನಾಯಕರಿಗೂ ಸಂಸ್ಥಾನಗಳ ಎಲ್ಲಾ ಜನರಿಗೂ ವಿರುದ್ಧವಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಮೆಮೂಕಾನನು ಅರಸನ ಮುಂದೆಯೂ ಪ್ರಧಾನರ ಮುಂದೆಯೂ, “ವಷ್ಟಿ ರಾಣಿಯು ಅರಸನಿಗೆ ಮಾತ್ರವಲ್ಲ ಅರಸನಾದ ಅಹಷ್ವೇರೋಷನ ಸಮಸ್ತ ಪ್ರಾಂತಗಳಲ್ಲಿರುವ ಸಮಸ್ತ ಶ್ರೇಷ್ಠರಿಗೂ ಸಮಸ್ತ ಜನರಿಗೂ ಅಪರಾಧಮಾಡಿದ್ದಾಳೆ. ಅಧ್ಯಾಯವನ್ನು ನೋಡಿ |