Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 1:20 - ಕನ್ನಡ ಸತ್ಯವೇದವು J.V. (BSI)

20 ಈ ರಾಜನಿರ್ಣಯವು ಬಹು ವಿಸ್ತಾರವಾದ ಅವನ ರಾಜ್ಯದಲ್ಲೆಲ್ಲಾ ಗೊತ್ತಾದಾಗ ಶ್ರೇಷ್ಠರೂ ಕನಿಷ್ಠರೂ ಆದ ಎಲ್ಲಾ ಸ್ತ್ರೀಯರು ತಮ್ಮ ಗಂಡಂದಿರಿಗೆ ಮಾನ ಸಲ್ಲಿಸುವರು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಈ ರಾಜನಿರ್ಣಯವು ಬಹು ವಿಸ್ತಾರವಾದ ಅವನ ರಾಜ್ಯದಲ್ಲೆಲ್ಲಾ ಗೊತ್ತಾದಾಗ ಶ್ರೇಷ್ಠರೂ, ಕನಿಷ್ಠರೂ ಆದ ಎಲ್ಲಾ ಸ್ತ್ರೀಯರು ತಮ್ಮ ಗಂಡಂದಿರಿಗೆ ಗೌರವ ಸಲ್ಲಿಸುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅರಸರ ಈ ನಿರ್ಣಯವು ತಮ್ಮ ಹಿರಿಯರಿಂದ ಹಿಡಿದು ಕಿರಿಯರವರೆಗೂ ಎಲ್ಲಾ ಮಹಿಳೆಯರು ತಮ್ಮ ಗಂಡಂದಿರೊಂದಿಗೆ ಗೌರವದಿಂದ ವರ್ತಿಸುವರು,” ಎಂದು ಸಲಹೆ ನೀಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಈ ರಾಜಶಾಸನವು ವಿಶಾಲ ಸಾಮ್ರಾಜ್ಯದ ಎಲ್ಲಾ ಕಡೆಗಳಲ್ಲಿ ಪ್ರಕಟಿಸಲ್ಪಟ್ಟಾಗ ಎಲ್ಲಾ ಹೆಂಡತಿಯರು ತಮ್ಮ ಗಂಡಂದಿರಿಗೆ ಗೌರವವನ್ನು ಸಲ್ಲಿಸುವರು. ಶ್ರೇಷ್ಠರೂ ಕನಿಷ್ಠರೂ ಆದ ಎಲ್ಲಾ ಸ್ತ್ರೀಯರು ತಮ್ಮ ಗಂಡಂದಿರಿಗೆ ಗೌರವವನ್ನು ಸಲ್ಲಿಸುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಈ ಪ್ರಕಾರ ಅರಸನು ಮಾಡಿದ ಆಜ್ಞೆಯು ತನ್ನ ವಿಸ್ತಾರವಾದ ರಾಜ್ಯವೆಲ್ಲ ಗೊತ್ತಾದಾಗ ಸ್ತ್ರೀಯರೆಲ್ಲರೂ ಹಿರಿಯರಿಂದ ಚಿಕ್ಕವರವರೆಗೂ ತಮ್ಮ ಗಂಡಂದಿರಿಗೆ ಗೌರವಕೊಡುವರು,” ಎಂದು ಸಲಹೆ ನೀಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 1:20
8 ತಿಳಿವುಗಳ ಹೋಲಿಕೆ  

ಸ್ತ್ರೀಯರೇ, ನಿಮ್ಮ ಗಂಡಂದಿರಿಗೆ ಅಧೀನರಾಗಿರಿ; ಇದು ಕರ್ತನಲ್ಲಿರುವವರಿಗೆ ಯೋಗ್ಯವಾಗಿದೆ.


ಅದಿರಲಿ; ನಿಮ್ಮಲ್ಲಿ ಪ್ರತಿಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು; ಪ್ರತಿ ಹೆಂಡತಿಯು ತನ್ನ ಗಂಡನಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕು.


ಸ್ತ್ರೀಯರೇ, ನೀವು ಕರ್ತನಿಗೆ ಹೇಗೋ ಹಾಗೆಯೇ ನಿಮ್ಮನಿಮ್ಮ ಗಂಡಂದಿರಿಗೆ ಅಧೀನರಾಗಿರ್ರಿ.


ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕಿಬಿಡಬೇಕು. ಇಸ್ರಾಯೇಲ್ಯರೆಲ್ಲರೂ ಕೇಳಿ ಭಯಪಡುವರು.


ಜನರೆಲ್ಲರೂ ಕೇಳಿ ಭಯಪಟ್ಟು ಇನ್ನು ಅಹಂಕಾರದಿಂದ ನಡೆಯದೆ ಇರುವರು.


ಈ ಮಾತು ಅರಸನಿಗೂ ಅವನ ಸರದಾರರಿಗೂ - ಒಳ್ಳೇದೆಂದು ಕಂಡದರಿಂದ ಅರಸನು ಮೆಮೂಕಾನನ ಮಾತಿನಂತೆಯೇ ಮಾಡಿದನು.


ಇದಾದನಂತರ ಅರಸನಾದ ಅಹಷ್ವೇರೋಷನು ಕೋಪವನ್ನು ಬಿಟ್ಟು ವಷ್ಟಿಯನ್ನೂ ಆಕೆ ಮಾಡಿದ್ದನ್ನೂ ಆಕೆಯ ವಿಷಯವಾದ ತೀರ್ಪನ್ನೂ ನೆನಪುಮಾಡಿಕೊಳ್ಳುತ್ತಿರಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು