Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 1:21 - ಕನ್ನಡ ಸತ್ಯವೇದವು J.V. (BSI)

21 ಈ ಮಾತು ಅರಸನಿಗೂ ಅವನ ಸರದಾರರಿಗೂ - ಒಳ್ಳೇದೆಂದು ಕಂಡದರಿಂದ ಅರಸನು ಮೆಮೂಕಾನನ ಮಾತಿನಂತೆಯೇ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಈ ಮಾತು ಅರಸನಿಗೂ, ಅವನ ಸರದಾರರಿಗೂ ಒಳ್ಳೆಯದೆಂದು ತೋರಿದಾಗ ಅರಸನು ಮೆಮೂಕಾನನ ಮಾತಿನಂತೆಯೇ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಮೆಮೂಕನು ನೀಡಿದ ಈ ಸಲಹೆ ಅರಸನಿಗೂ ಪದಾಧಿಕಾರಿಗಳಿಗೂ ಸರಿಕಂಡುಬಂತು. ಅರಸನು ಅದರಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅರಸನೂ ಅವನ ಪ್ರಮುಖ ಅಧಿಕಾರಿಗಳೂ ಈ ಸಲಹೆಯನ್ನು ಕೇಳಿ ಸಂತೋಷಪಟ್ಟರು ಮತ್ತು ಅಹಷ್ವೇರೋಷ ರಾಜನು ಮೆಮೂಕಾನ್ ಹೇಳಿದ ಹಾಗೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಈ ಮಾತು ಅರಸನಿಗೂ ಶ್ರೇಷ್ಠರಿಗೂ ಸರಿಯೆಂದು ತೋರಿತು. ಆದುದರಿಂದ ಅರಸನು ಮೆಮೂಕಾನ್ ಮಾತಿನಂತೆಯೇ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 1:21
5 ತಿಳಿವುಗಳ ಹೋಲಿಕೆ  

ಮತ್ತು ಅರಸನಿಗೆ ಇಷ್ಟಳಾಗಿ ಕಾಣುವ ಕನ್ಯೆಯು ವಷ್ಟಿಗೆ ಬದಲಾಗಿ ರಾಣಿಯಾಗಲಿ ಎಂದು ಹೇಳಿದರು. ಅರಸನು ಈ ಅಭಿಪ್ರಾಯಕ್ಕೆ ಸಮ್ಮತಿಸಿ ಅದರಂತೆಯೇ ಮಾಡಿದನು.


ಆ ಮಾತು ಫರೋಹನಿಗೂ ಅವನ ಪರಿವಾರದವರಿಗೂ ಒಳ್ಳೇದಾಗಿ ತೋಚಿದ್ದರಿಂದ


ಅರಸನು ಸಮ್ಮತಿಸುವದಾದರೆ ವಷ್ಟಿಯು ತಿರಿಗಿ ಅಹಷ್ವೇರೋಷ್‍ರಾಜನ ಸನ್ನಿಧಿಗೆ ಬರಲೇಬಾರದೆಂಬ ರಾಜಾಜ್ಞೆಯು ಪ್ರಕಟವಾಗಿ ಅದು ಎಂದಿಗೂ ರದ್ದಾಗದ ಹಾಗೆ ಪಾರಸಿಯ ಮತ್ತು ಮೇದ್ಯಶಾಸನಗಳಲ್ಲಿ ಲಿಖಿತವಾಗಲಿ; ಅರಸನು ಆಕೆಯ ಪಟ್ಟವನ್ನು ಆಕೆಗಿಂತ ಉತ್ತಮಳಾದ ಇನ್ನೊಬ್ಬಾಕೆಗೆ ಕೊಡಲಿ.


ಈ ರಾಜನಿರ್ಣಯವು ಬಹು ವಿಸ್ತಾರವಾದ ಅವನ ರಾಜ್ಯದಲ್ಲೆಲ್ಲಾ ಗೊತ್ತಾದಾಗ ಶ್ರೇಷ್ಠರೂ ಕನಿಷ್ಠರೂ ಆದ ಎಲ್ಲಾ ಸ್ತ್ರೀಯರು ತಮ್ಮ ಗಂಡಂದಿರಿಗೆ ಮಾನ ಸಲ್ಲಿಸುವರು ಅಂದನು.


ಅವನು - ಪ್ರತಿಯೊಂದು ಕುಟುಂಬದಲ್ಲಿ ಪುರುಷನೇ ಒಡೆಯನಾಗಿದ್ದು ಅವನ ಸ್ವಜನರ ಭಾಷೆಯೇ ಉಪಯೋಗವಾಗಬೇಕೆಂಬದಾಗಿ ಎಲ್ಲಾ ರಾಜಸಂಸ್ಥಾನಗಳಲ್ಲಿ ಪತ್ರಗಳ ಮೂಲಕ ಪ್ರಕಟಿಸಿದನು. ಈ ಪತ್ರಗಳು ಆಯಾ ಸಂಸ್ಥಾನಗಳ ಬರಹಗಳಲ್ಲಿಯೂ ಆಯಾ ಜನಾಂಗಗಳ ಭಾಷೆಗಳಲ್ಲಿಯೂ ಬರೆಯಲ್ಪಟ್ಟವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು