ಎಸ್ತೇರಳು 1:5 - ಕನ್ನಡ ಸತ್ಯವೇದವು J.V. (BSI)5 ಈ ದಿನಗಳಾದನಂತರ ಅರಸನು ಶೂಷನ್ ಕೋಟೆಯಲ್ಲಿದ್ದ ಎಲ್ಲಾ ಶ್ರೇಷ್ಠರಿಗೂ ಕನಿಷ್ಠರಿಗೂ ಅರಮನೆಯ ತೋಟದ ಬೈಲಿನಲ್ಲಿ ಏಳು ದಿನಗಳವರೆಗೂ ಔತಣಮಾಡಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆ ನಂತರ ಅರಸನು ಶೂಷನ್ ಕೋಟೆಯಲ್ಲಿದ್ದ ಎಲ್ಲಾ ಶ್ರೇಷ್ಠರಿಗೂ ಮತ್ತು ಕನಿಷ್ಠರಿಗೂ ಅರಮನೆಯ ತೋಟದ ಆವರಣದಲ್ಲಿ ಏಳು ದಿನಗಳವರೆಗೂ ಔತಣಮಾಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆ ದಿನಗಳು ಕಳೆದ ನಂತರ ಅರಸನು ಶೂಷನ್ ನಗರದ ನಿವಾಸಿಗಳಿಗೆ ಶ್ರೀಮಂತ-ಬಡವ ಎಂಬ ಯಾವ ಭೇದಭಾವ ಮಾಡದೆ ಎಲ್ಲರಿಗೂ ಅರಮನೆಯ ತೋಟದ ಅಂಗಳದಲ್ಲಿ ಏಳು ದಿನಗಳ ಪರಿಯಂತರ ದೊಡ್ಡ ಔತಣವನ್ನೇರ್ಪಡಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆ ನೂರೆಂಭತ್ತು ದಿವಸಗಳು ಕಳೆದ ಬಳಿಕ ಅಹಷ್ವೇರೋಷನು ಮತ್ತೆ ಇನ್ನೊಂದು ಔತಣವನ್ನು ಒಂದು ವಾರದ ತನಕ ಮುಂದುವರಿಸಿದನು. ಇದು ಅರಮನೆಯ ಒಳ ಉದ್ಯಾನವನದಲ್ಲಿ ನಡೆಯಿತು. ಇದಕ್ಕೆ ಶೂಷನ್ ನಗರದಿಂದ ಗಣ್ಯರು, ಸಾಮಾನ್ಯರು ಎಂಬ ಭೇದಭಾವವಿಲ್ಲದೆ ಎಲ್ಲರೂ ಆಮಂತ್ರಿಸಲ್ಪಟ್ಟಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆ ದಿವಸಗಳು ತೀರಿದ ತರುವಾಯ ಅರಸನು ಶೂಷನಿನ ಅರಮನೆಯಲ್ಲಿರುವ ಹಿರಿಕಿರಿಯರಾದ ಸಮಸ್ತ ಜನರಿಗೂ ಏಳು ದಿವಸಗಳವರೆಗೆ ಅರಸನ ಅರಮನೆಯ ತೋಟದ ಅಂಗಳದಲ್ಲಿ ಔತಣವನ್ನು ಮಾಡಿಸಿದನು. ಅಧ್ಯಾಯವನ್ನು ನೋಡಿ |