Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 1:6 - ಕನ್ನಡ ಸತ್ಯವೇದವು J.V. (BSI)

6 ಅಲ್ಲಿ ಬಿಳೀ ನೂಲಿನ ಬಟ್ಟೆಗಳೂ ನೀಲಿಬಟ್ಟೆಗಳೂ ಧೂಮ್ರವರ್ಣವುಳ್ಳ ನಾರಿನ ದಾರದಿಂದ ಸಂಗಮೀರ ಕಲ್ಲು ಕಂಬಗಳಲ್ಲಿನ ಬೆಳ್ಳಿಯ ಉಂಗುರಗಳಿಗೆ ಕಟ್ಟಲ್ಪಟ್ಟಿದ್ದವು. ಜರತಾರೆಯ ಕಸೂತಿ ಹಾಕಿರುವ ಲೋಡುಗಳು ಕೆಂಪು ಬಿಳಿ ಹಳದಿ ಕಪ್ಪು ಬಣ್ಣಗಳುಳ್ಳ ಸಂಗಮೀರ ಕಲ್ಲುಗಳಿಂದ ರಚಿತವಾದ ನೆಲಗಟ್ಟಿನ ಮೇಲೆ ಇಡಲ್ಪಟ್ಟಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆ ತೋಟದ ಆವರಣವು ಬಿಳೀ ನೂಲಿನ ಬಟ್ಟೆಗಳೂ, ನೀಲಿಬಟ್ಟೆಗಳೂ, ಧೂಮ್ರವರ್ಣವುಳ್ಳ ನಾರಿನ ದಾರಗಳು ಮತ್ತು ಅಮೃತಶಿಲೆಯ ಕಲ್ಲುಕಂಬಗಳಿಗೆ ಕಟ್ಟಲಾದ ಬೆಳ್ಳಿಯ ಉಂಗುರ ಇವುಗಳಿಂದ ಅಲಂಕೃತವಾಗಿತ್ತು. ಜರತಾರಿ ಕಸೂತಿ ಹಾಕಿರುವ ಬೆಳ್ಳಿ ಬಂಗಾರದ ಸುಖಾಸನಗಳು, ಅವುಗಳನ್ನು ಕೆಂಪು, ಬಿಳಿ, ಹಳದಿ ಮತ್ತು ಕಪ್ಪು ಬಣ್ಣಗಳುಳ್ಳ ಅಮೃತಶಿಲೆಗಳ ಕಲ್ಲುಗಳಿಂದ ರಚಿತವಾದ ನೆಲಗಟ್ಟಿನ ಮೇಲೆ ಇಡಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅಂಗಳದಲ್ಲಿ ಬಿಳಿ, ಹಸಿರು, ನೀಲಿವರ್ಣದ ಪರದೆಗಳು ರಕ್ತವರ್ಣದ ನಾರಿನ ಹಗ್ಗಗಳಿಂದ ಅಮೃತಶಿಲೆಯ ಬೆಳ್ಳಿಯ ಉಂಗುರಗಳಿಗೆ ತೂಗುಹಾಕಲಾಗಿದ್ದವು. ಜರತಾರಿ ಎಳೆಗಳಿಂದ ಕಸೂತಿಮಾಡಿದ ಸುಖಾಸನ ಪೀಠಗಳು, ಕೆಂಪು, ಬಿಳಿ, ಹಳದಿ ಹಾಗೂ ಕಪ್ಪು ವರ್ಣದ ಅಮೃತಶಿಲೆಯ ಹಾಸುಗಲ್ಲುಗಳಿಂದ ರಚಿತವಾದ ನೆಲದ ಮೇಲೆ ಇಡಲಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆ ಒಳ ಉದ್ಯಾನವನವು ಬಿಳಿ ಮತು ನೀಲಿಬಣ್ಣಗಳ ಬಟ್ಟೆಗಳಿಂದ ಶೃಂಗರಿಸಲ್ಪಟ್ಟಿತ್ತು. ಅವುಗಳನ್ನು ಬಿಳಿ ಮತ್ತು ನೇರಳೆ ಬಣ್ಣದ ದಾರಗಳಿಂದ ಬೆಳ್ಳಿಯ ಉಂಗುರಗಳಲ್ಲಿ ಕಟ್ಟಲ್ಪಟ್ಟ ಅಮೃತಶಿಲೆಯ ಕಂಬಗಳಿಗೆ ತೂಗುಹಾಕಿದ್ದರು. ಬೆಲೆಬಾಳುವ ಕಲ್ಲುಗಳಿಂದಲೂ ಮುತ್ತು ಚಿಪ್ಪು, ರತ್ನಶಿಲೆಗಳಿಂದಲೂ ಅಲಂಕೃತವಾದ ನೆಲದ ಮೇಲೆ ಬೆಳ್ಳಿಬಂಗಾರಗಳಿಂದ ಮಾಡಿದ್ದ ಆಸನಗಳನ್ನಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅಲ್ಲಿ ಬಿಳಿ ಕಲ್ಲಿನ ಕಂಬಗಳಿಗೆ ಬೆಳ್ಳಿಯ ಉಂಗುರಗಳಿಂದಲೂ ರಕ್ತವರ್ಣದ ನಯವಾದ ನಾರು ಹಗ್ಗಗಳಿಂದಲೂ ತೂಗು ಹಾಕಲಾಗಿದ್ದವು. ಬಿಳಿ ಹಸಿರೂ ನೀಲವರ್ಣವೂ ಆದ ತೆರೆಗಳಿದ್ದವು. ಮಂಚಗಳು ಬೆಳ್ಳಿ ಬಂಗಾರದವುಗಳಾಗಿ ಕೆಂಪು, ನೀಲಿ, ಬಿಳಿ, ಕಪ್ಪು ಬಣ್ಣಗಳ ಅಮೃತಶಿಲೆಗಳಿಂದ ರಚಿತವಾದ ನೆಲದ ಮೇಲೆ ಇಡಲಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 1:6
10 ತಿಳಿವುಗಳ ಹೋಲಿಕೆ  

ದಂತದ ಮಂಚಗಳ ಮೇಲೆ ಮಲಗುತ್ತಾರೆ, ತಮ್ಮ ಗದ್ದುಗೆಗಳಲ್ಲಿ ಹಾಯಾಗಿ ಒರಗಿಕೊಳ್ಳುತ್ತಾರೆ; ಹಿಂಡಿನ ಮರಿಗಳನ್ನೂ ಕೊಟ್ಟಿಗೆಯ ಕರುಗಳನ್ನೂ ತಿನ್ನುತ್ತಾರೆ;


ನಿನ್ನನ್ನು ಆಭರಣಗಳಿಂದ ಸಿಂಗರಿಸಿಕೊಂಡು ವೈಭವದ ಮಂಚದ ಮೇಲೆ ಕೂತಿದ್ದಿ; ಅದರ ಮುಂದೆ ಔತಣಕ್ಕೆ ಸಿದ್ಧವಾಗಿದ್ದ ಮೇಜಿನ ಮೇಲೆ ನನ್ನ ಧೂಪತೈಲಗಳನ್ನು ಇಟ್ಟಿದ್ದಿ.


ಒಂದೊಂದು ಯಜ್ಞವೇದಿಯ ಹತ್ತಿರದಲ್ಲಿಯೂ ಅಡವಾಗಿ ಇಟ್ಟುಕೊಂಡ ಬಟ್ಟೆಗಳ ಮೇಲೆ ಮಲಗಿಕೊಳ್ಳುತ್ತಾರೆ; ದಂಡಹಾಕಿಸಿಕೊಂಡವರ ದ್ರಾಕ್ಷಾರಸವನ್ನು ತಮ್ಮ ದೇವರ ಮಂದಿರದಲ್ಲಿಯೂ ಕುಡಿಯುತ್ತಾರೆ.


ಅರಸನು ಅರಮನೆಯ ತೋಟದಿಂದ ತಾನು ದ್ರಾಕ್ಷಾರಸಪಾನ ಮಾಡಿದ ಗೃಹಕ್ಕೆ ತಿರಿಗಿ ಬಂದು ಎಸ್ತೇರಳು ಒರಗಿಕೊಳ್ಳುವ ಲೋಡಿನ ಮೇಲೆ ಹಾಮಾನನು ಬಿದ್ದುಕೊಂಡಿರುವದನ್ನು ಕಂಡು - ಇವನು ರಾಣಿಯನ್ನು ನನ್ನ ಮುಂದೆಯೇ ಅರಮನೆಯಲ್ಲಿ ಭಂಗಪಡಿಸಲೂ ಬೇಕೆಂದಿರುತ್ತಾನೋ ಅಂದನು. ಅರಸನ ಬಾಯಿಂದ ಈ ಮಾತು ಹೊರಟ ಕೂಡಲೇ ಸೇವಕರು ಹಾಮಾನನ ಮೋರೆಗೆ ಮುಸುಕು ಹಾಕಿದರು.


ಮೊರ್ದೆಕೈಯಾದರೋ ನೀಲ ಶುಭ್ರವರ್ಣಗಳುಳ್ಳ ರಾಜವಸ್ತ್ರಗಳನ್ನು ಧರಿಸಿ ಬಂಗಾರದ ದೊಡ್ಡ ಪಟ್ಟಿಯನ್ನು ಹಣೆಗೆ ಕಟ್ಟಿಕೊಂಡು ರಕ್ತವರ್ಣದ ನಾರಿನ ಶಾಲನ್ನು ಹೊದ್ದು ರಾಜಸನ್ನಿಧಿಯಿಂದ ಹೊರಟನು. ಶೂಷನ್ ಪಟ್ಟಣದಲ್ಲಿ ಸಂತೋಷದ ಆರ್ಭಟವು ಕೇಳಿಸಿತು.


[ನನ್ನ ನಿವಾಸಕ್ಕಾಗಿ] ಒಂದು ಗುಡಾರವನ್ನು ಹತ್ತು ತಾನು ಬಟ್ಟೆಗಳಿಂದ ಮಾಡಿಸಬೇಕು. ಅವು ಹೊಸೆದ ನಾರಿನ ಬಟ್ಟೆಗಳಾಗಿರಬೇಕು. ಅವುಗಳಲ್ಲಿ ನೀಲಿ ಧೂಮ್ರ ರಕ್ತವರ್ಣಗಳ ದಾರದಿಂದ ಕೆರೂಬಿಗಳನ್ನು ಚಮತ್ಕಾರವಾಗಿ ಕಸೂತಿಹಾಕಿಸಬೇಕು.


ಅವನು - ಒಲ್ಲೆನು; ಊಟಮಾಡುವದಿಲ್ಲ ಅಂದನು. ಆದರೆ ಅವನ ಸೇವಕರೂ ಆ ಸ್ತ್ರೀಯೂ ಬಹಳವಾಗಿ ಬೇಡಿಕೊಂಡದರಿಂದ ಅವನು ಕಡೆಗೆ ಅವರ ಮಾತಿಗೆ ಒಪ್ಪಿ ನೆಲದಿಂದೆದ್ದು ಮಂಚದ ಮೇಲೆ ಕೂತುಕೊಂಡನು.


ಯೆಹೋವನು ಇಂತೆನ್ನುತ್ತಾನೆ - ಸಿಂಹದ ಬಾಯೊಳಗಿಂದ ಎರಡು ಕಾಲುಗಳಾಗಲಿ ಕಿವಿಯ ತುಂಡಾಗಲಿ ಹೇಗೆ ಕುರುಬನಿಂದ ರಕ್ಷಿಸಲ್ಪಡುವದೋ ಹಾಗೆಯೇ ಸಮಾರ್ಯದೊಳಗೆ ಗದ್ದುಗೆಯ ಮೂಲೆಯಲ್ಲಿಯೂ ಮಂಚದ ಪಟ್ಟೇದಿಂಬುಗಳಲ್ಲಿಯೂ ಒರಗಿಕೊಳ್ಳುವ ಇಸ್ರಾಯೇಲ್ಯರ [ಸ್ವಲ್ಪಭಾಗ ಮಾತ್ರ] ರಕ್ಷಿಸಲ್ಪಡುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು