Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 2:11 - ಕನ್ನಡ ಸತ್ಯವೇದವು J.V. (BSI)

11 ಅವನು ಆಕೆಯ ಈಗಿನ ಸ್ಥಿತಿಯನ್ನೂ ಮುಂದಿನ ಗತಿಯನ್ನೂ ವಿಚಾರಿಸುವದಕ್ಕಾಗಿ ಪ್ರತಿದಿನವೂ ಅಂತಃಪುರದ ಪ್ರಾಕಾರದ ಮುಂದೆ ತಿರುಗಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವನು ಆಕೆಯ ಕ್ಷೇಮವನ್ನು ಮತ್ತು ಆಕೆ ಮುಂದೆ ಏನು ಮಾಡಬೇಕು ಎಂದು ವಿಚಾರಿಸುವುದಕ್ಕಾಗಿ ಪ್ರತಿದಿನವೂ ಅಂತಃಪುರದ ಪ್ರಾಕಾರದ ಮುಂದೆ ತಿರುಗಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಎಸ್ತೇರಳ ಯೋಗಕ್ಷೇಮವನ್ನು ವಿಚಾರಿಸಿಕೊಳ್ಳಲು ಮೊರ್ದೆಕೈ ಪ್ರತಿದಿನ ಅಂತಃಪುರದ ಅಂಗಳದ ಬಳಿ ಬಂದು ಹೋಗುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಪ್ರತಿದಿನ ಮೊರ್ದೆಕೈ ಅಂತಃಪುರದ ಎದುರಿನಿಂದ ಹೋಗುತ್ತಾ ಬರುತ್ತಾ ಎಸ್ತೇರಳು ಹೇಗಿದ್ದಾಳೆಂದೂ ಅವಳಿಗೆ ಮುಂದೆ ಸಂಭವಿಸುವುದನ್ನೂ ವಿಚಾರಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದರೆ ಎಸ್ತೇರಳ ಕ್ಷೇಮವನ್ನೂ, ಅವಳಿಗೆ ಆಗುವಂಥಾದ್ದನ್ನೂ ತಿಳಿದುಕೊಳ್ಳುವುದಕ್ಕೆ ಮೊರ್ದೆಕೈ ಪ್ರತಿದಿನವೂ ಸ್ತ್ರೀಯರಿದ್ದ ಮನೆಯ ಅಂಗಳದ ಮುಂದೆ ತಿರುಗಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 2:11
6 ತಿಳಿವುಗಳ ಹೋಲಿಕೆ  

ಇದಲ್ಲದೆ ಇಲ್ಲಿ ಹತ್ತು ಗಿಣ್ಣಿನ ಗಡ್ಡೆಗಳಿರುತ್ತವೆ; ಇವುಗಳನ್ನು ಅವರ ಸಹಸ್ರಾಧಿಪತಿಗೆ ಕೊಡು. ಬರುವಾಗ ನಿನ್ನ ಅಣ್ಣಂದಿರ ಕ್ಷೇಮಸಮಾಚಾರವನ್ನು ವಿಚಾರಿಸಿಕೊಂಡು ಅವರಿಂದ ಒಂದು ಗುರುತನ್ನು ತೆಗೆದುಕೊಂಡು ಬಾ.


ಇಸ್ರಾಯೇಲನು ಅವನಿಗೆ - ನೀನು ಹೋಗಿ ನಿನ್ನ ಅಣ್ಣಂದಿರ ಯೋಗಕ್ಷೇಮವನ್ನೂ ಆಡುಕುರಿಗಳ ಯೋಗಕ್ಷೇಮವನ್ನೂ ವಿಚಾರಿಸಿಕೊಂಡು ಬಾ ಎಂದು ಅಪ್ಪಣೆಕೊಟ್ಟು ಅವನನ್ನು ಹೆಬ್ರೋನಿರುವ ತಗ್ಗಿನಿಂದ ಕಳುಹಿಸಲು ಯೋಸೇಫನು ಹೊರಟನು.


ಕೆಲವು ದಿವಸಗಳಾದ ಮೇಲೆ ಪೌಲನು ಬಾರ್ನಬನಿಗೆ - ನಾವು ಕರ್ತನ ವಾಕ್ಯವನ್ನು ಸಾರಿದ ಎಲ್ಲಾ ಊರುಗಳಿಗೆ ತಿರಿಗಿ ಹೋಗಿ ಅಲ್ಲಿರುವ ಸಹೋದರರು ಹೇಗಿದ್ದಾರೆಂದು ನೋಡೋಣ ಬಾ ಎಂದು ಹೇಳಿದನು.


ಎಸ್ತೇರಳು ತಾನು ಇಂಥ ಜನಾಂಗದವಳು, ಇಂಥ ಕುಲದವಳು ಎಂಬದನ್ನು ತೋರ್ಪಡಿಸಿಕೊಳ್ಳಲಿಲ್ಲ; ಮೊರ್ದೆಕೈಯು ಹೀಗೆ ಅಪ್ಪಣೆಕೊಟ್ಟಿದ್ದನು.


ಕನ್ಯೆಯರ ಲೇಪನಕಾಲವು ಪೂರೈಸುವದಕ್ಕೆ ಗಂಧರಸಪ್ರಯೋಗದಲ್ಲಿ ಆರು ತಿಂಗಳೂ ಪರಿಮಳ ದ್ರವ್ಯ ಕಾಂತಿವರ್ಧಕ ದ್ರವ್ಯಗಳ ಪ್ರಯೋಗದಲ್ಲಿ ಆರು ತಿಂಗಳೂ ಅಂತೂ ಹನ್ನೆರಡು ತಿಂಗಳು ಕಳೆದವು. ಈ ಕಾಲ ಮುಗಿದನಂತರ ರಾಜಸ್ತ್ರೀಯರ ವಿಷಯವಾದ ನಿಯಮದ ಮೇರೆಗೆ ತನ್ನನ್ನು ಸಿದ್ಧಪಡಿಸಿಕೊಂಡ ಪ್ರತಿಯೊಬ್ಬ ಕನ್ಯೆಯು ಅರಸನಾದ ಅಹಷ್ವೇರೋಷನ ಬಳಿಗೆ ಹೋಗುವಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು